LATEST NEWS
ಲಂಚ ಪ್ರಕರಣ: ಬೆಂಗಳೂರಿನ ಮಾಜಿ ಜಿಲ್ಲಾಧಿಕಾರಿಗೆ ಡಿಫಾಲ್ಟ್ ಜಾಮೀನು
Published
2 years agoon
By
Adminಬೆಂಗಳೂರು: ಲಂಚ ಪ್ರಕರಣದಲ್ಲಿ ಬಂಧಿತರಾದ ಬೆಂಗಳೂರು ನಗರದ ಹಿಂದಿನ ಜಿಲ್ಲಾಧಿಕಾರಿ ಜೆ ಮಂಜುನಾಥ್‌ಗೆ ವಿಶೇಷ ನ್ಯಾಯಾಲಯವು ಶನಿವಾರ ಡಿಫಾಲ್ಟ್ ಜಾಮೀನು ಮಂಜೂರು ಮಾಡಿದೆ.
ಮಂಜುನಾಥ್ ಅವರ ಅರ್ಜಿ ವಿಚಾರಣೆ ನಡೆಸಿದ ಭ್ರಷ್ಟಾಚಾರ ನಿರ್ಮೂಲನೆ ಕಾಯಿದೆ ಅಡಿ ಸ್ಥಾಪಿಸಲಾಗಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಕೆ ಲಕ್ಷ್ಮಿನಾರಾಯಣ್ ಭಟ್ ಅವರು ಷರತ್ತು ಬದ್ದ ಜಾಮೀನು ಮಂಜೂರು ಮಾಡಿದರು.
ತನಿಖಾಧಿಕಾರಿಯ ಅನುಮತಿ ಪಡೆಯದೇ ಆರು ತಿಂಗಳು ರಾಜ್ಯ ತೊರೆಯುವಂತಿಲ್ಲ. ನ್ಯಾಯಾಲಯದ ಅನುಮತಿ ಪಡೆಯದೇ ಆರು ತಿಂಗಳು ದೇಶ ತೊರೆಯುವಂತಿಲ್ಲ ಎಂಬ ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿದೆ.
ಭ್ರಷ್ಟಾಚಾರ ನಿಯಂತ್ರಣ ಸಂಸ್ಥೆಯು (ಎಸಿಬಿ) ನಿಗದಿತ 60 ದಿನಗಳಲ್ಲಿ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಪಟ್ಟಿ ಸಲ್ಲಿಸದ ಹಿನ್ನೆಲೆಯಲ್ಲಿ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.
ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಮಂಜುನಾಥ್ ಅವರನ್ನು ಎಸಿಬಿ ಜುಲೈ 4ರಂದು ಬಂಧಿಸಿತ್ತು. ಸೆಪ್ಟೆಂಬರ್ 3ಕ್ಕೆ ಮಂಜುನಾಥ್ ಅವರ ಬಂಧನವಾಗಿ 60 ದಿನಗಳು ತುಂಬಿದ್ದವು. ಎಸಿಬಿ ನಿಯಮಗಳ ಪ್ರಕಾರ 60 ದಿನಗಳ ಒಳಗೆ ಆರೋಪ ಪಟ್ಟಿ ಸಲ್ಲಿಕೆಯಾಗದಿದ್ದರೆ ಆರೋಪಿಗೆ ಡಿಫಾಲ್ಟ್ ಜಾಮೀನು ದೊರೆಯಲಿದೆ. ಇದೇ ರೀತಿ, ಪ್ರಕರಣದಲ್ಲಿ ಮೊದಲ ಆರೋಪಿಯಾಗಿದ್ದ ಉಪ ತಹಶೀಲ್ದಾರ್ ಪಿ ಎಸ್ ಮಹೇಶ್ ಅವರಿಗೆ ಡೀಫಾಲ್ಟ್ ಜಾಮೀನು ದೊರೆತಿದೆ.
ಆನೇಕಲ್ ತಾಲ್ಲೂಕಿನ ಕೂಡ್ಲು ಗ್ರಾಮದ 38 ಗುಂಟೆ ಜಮೀನು ಒಡೆತನಕ್ಕೆ ಸಂಬಂಧಿಸಿದಂತೆ ಅನುಕೂಲಕರ ಆದೇಶ ಮಾಡಲು ಅಜಂ ಪಾಷಾ ಎಂಬುವರಿಂದ 5 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಪ ತಹಶೀಲ್ದಾರ್ ಆಗಿದ್ದ ಪಿ ಎಸ್ ಮಹೇಶ್ ಮತ್ತು ನ್ಯಾಯಾಲಯ ವಿಭಾಗದ ಸಹಾಯಕ ಚೇತನ್ ಕುಮಾರ್ ಅಲಿಯಾಸ್ ಚಂದ್ರ ಅವರನ್ನು ಮೇ 21ರಂದು ಎಸಿಬಿ ಬಂಧಿಸಿತ್ತು. ಈ ಇಬ್ಬರೂ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.
KADABA
ನಿಯಂತ್ರಣ ತಪ್ಪಿ ಮೋರಿಗೆ ಗುದ್ದಿದ ಬೈಕ್: ಸವಾರ ಸಾವು
Published
19 minutes agoon
17/01/2025By
NEWS DESK3ಕಡಬ : ಅತಿ ವೇಗದಿಂದ ಚಾಲನೆ ಮಾಡಿದ ಬೈಕ್ ಸವಾರನೊಬ್ಬ ನಿಯಂತ್ರಣ ತಪ್ಪಿ ಮೋರಿಗೆ ಗುದ್ದಿದ ಪರಿಣಾಮ ಬೈಕ್ ಸವಾರ ಕಲ್ಲುಗುಡ್ಡೆ ವಿಶ್ವನಾಥ ಎಂಬವರ ಏಕೈಕ ಪುತ್ರ ಆಶೀಶ್(16) ಎಂಬಾತ ಸಾವನ್ನಪ್ಪಿದ್ದಾನೆ.
ಕಡಬದ ಪೇರಡ್ಕ ಬಳಿ ಈ ದುರಂತ ನಡೆದಿದ್ದು, ಗಂಭೀರ ಗಾಯಗೊಂಡ ಆತನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಆಶೀಶ್ ಪೇರಡ್ಕ ಸಾಂತೋಮ್ ಶಾಲೆಯ 10ನೇ ತರಗತಿ ವಿದ್ಯಾರ್ಥಿಯಾಗಿದ್ದ.
ಈತ ಶಾಲೆಗೆ ಬರುವಾಗಲೂ ಬೈಕ್ ಹಿಡಿದುಕೊಂಡೇ ಬರುತ್ತಿದ್ದು, ಅದರಂತೆ ಇಂದು ಕೂಡಾ ಶಾಲೆಗೆ ಬರುವಾಗ ಕುಕ್ಕೆ ಸುಬ್ರಹ್ಮಣ್ಯ- ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ಬಂದಾಗ ನಿಯಂತ್ರಣ ತಪ್ಪಿದ ಬೈಕ್ ಮೋರಿಗೆ ಬಡಿದು ದುರಂತ ಸಂಭವಿಸಿದೆ.
ಇದನ್ನೂ ಓದಿ: ರಾಷ್ಟ್ರಿಯ ಹೆದ್ದಾರಿ 66ರ ಕಿನ್ನಿಮುಲ್ಕಿಯಲ್ಲಿ ಟ್ಯಾಂಕರ್ ವಾಹನ ಪಲ್ಟಿ
ಕಡಬದಲ್ಲಿ ಮಿತಿಮೀರಿದ ವಿದ್ಯಾರ್ಥಿಗಳ ಅತಿ ವೇಗದ ಬೈಕ್ ಸವಾರಿಯಿಂದ ನಿರಂತರ ದುರಂತಗಳಾಗುತ್ತಿವೆ. ವಿದ್ಯಾರ್ಥಿಗಳ ವಾಹನ ತಪಾಸಣೆ ಮಾಡದಿರುವ ಪೊಲೀಸರ ವಿರುದ್ಧ ಇಲ್ಲಿನ ಸಾರ್ವಜನಿಕರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
LATEST NEWS
ರಾಷ್ಟ್ರಿಯ ಹೆದ್ದಾರಿ 66ರ ಕಿನ್ನಿಮುಲ್ಕಿಯಲ್ಲಿ ಟ್ಯಾಂಕರ್ ವಾಹನ ಪಲ್ಟಿ
Published
41 minutes agoon
17/01/2025By
NEWS DESK3ಉಡುಪಿ : ಗುಜರಾತ್ ನಿಂದ ಮಂಗಳೂರು ಕಡೆ ಹೋಗುತ್ತಿದ್ದ ಟ್ಯಾಂಕರ್ವೊಂದು ಉಡುಪಿ ಕಿನ್ನಿ ಮುಲ್ಕಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಲ್ಟಿಯಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟ್ಯಾಂಕರ್‌ನಿಂದ ಚಾಲಕ ಪ್ರಾಣಾಪಾಯದಿಂದ ಪಾರು ಆಗಿದ್ದಾನೆ. ಉಡುಪಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಎಕ ಆಗಮಿಸಿ ವಾಹನ ತೆರವು ಕಾರ್ಯಾಚರಣೆ ನಡೆಸಿದರು.
ಇದನ್ನೂ ಓದಿ: ತಣ್ಣೀರುಬಾವಿ ಬೀಚ್: ನಾಳೆ, ನಾಡಿದ್ದು ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ
ವಾಹನ ಪಲ್ಟಿಯಾದ ಪರಿಣಾಮ ಸರ್ವಿಸ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡಲಾಯಿತು.
DAKSHINA KANNADA
ತಣ್ಣೀರುಬಾವಿ ಬೀಚ್: ನಾಳೆ, ನಾಡಿದ್ದು ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ
Published
1 hour agoon
17/01/2025By
NEWS DESK3ಮಂಗಳೂರು : ಟೀಮ್ ಮಂಗಳೂರು ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತದ ಸಹಕಾರದೊಂದಿಗೆ ಜನವರಿ 18 ಮತ್ತು 19ರಂದು ತಣ್ಣೀರುಬಾವಿ ಬೀಚ್‌ನಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಆಯೋಜಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ ಈ ಗಾಳಿ ಪಟ ಉತ್ಸವದಲ್ಲಿ ಭಾಗವಹಿಸಲು ವಿದೇಶದ ಕೆಲವು ತಂಡಗಳು ಈಗಾಗಲೇ ಆಗಮಿಸಿದ್ದು, ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿವೆ.
ಮಂಗಳೂರಿನಲ್ಲಿ ನಡೆಯುವ 8ನೇ ವರ್ಷದ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಇದಾಗಿದ್ದು ನೆದರ್‌ಲ್ಯಾಂಡ್, ಸ್ಲೋವೆನಿಯಾ, ಇಟಲಿ, ಇನ್ಪೊನಿಯ, ಸ್ವೀಡನ್, ಇಂಡೋನೇಶಿಯಾ, ಪೋರ್ಚುಗಲ್ ಮುಂತಾದ ದೇಶಗಳ ತಂಡಗಳು, ಒಡಿಸ್ಸಾ, ರಾಜಸ್ಥಾನ, ಮಹಾರಾಷ್ಟ್ರ, ತೆಲಂಗಾಣ, ಕೇರಳ, ಗುಜರಾತ್ ಮುಂತಾದ ರಾಜ್ಯ ಮಟ್ಟದ ತಂಡಗಳು ಭಾಗವಹಿಸಲಿವೆ ಎಂದು ತಿಳಿಸಿದರು.
ಇದನ್ನೂ ಓದಿ: ಕರಾವಳಿ ಉತ್ಸವ : ಸಂಗೀತ ರಸಮಂಜರಿ, ಮುಖ್ಯಮಂತ್ರಿ ಆಗಮನ
ನಾಳೆ ಸಂಜೆ 4 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉಪಸ್ಥಿತಿಯಲ್ಲಿ ಈ ಉತ್ಸವಕ್ಕೆ ಚಾಲನೆ ಸಿಗಲಿದೆ. ಎರಡು ದಿನ ಅಪರಾಹ್ನ 3ರಿಂದ ರಾತ್ರಿ 9ರ ವರೆಗೆ ಉತ್ಸವ ನಡೆಯಲಿದೆ ಎಂದರು.
ಟೀಂ ಮಂಗಳೂರಿನ ಪ್ರಶಾಂತ್ ಉಪಾಧ್ಯಾಯ ಮಾತನಾಡಿ, ‘ಒಂದೇ ಆಕಾಶ, ಒಂದೇ ಭೂಮಿ, ಒಂದೇ ಕುಟುಂಬ’ ಎಂಬ ಧ್ಯೇಯ ವಾಕ್ಯದಲ್ಲಿ ಉತ್ಸವ ಜರಗಲಿದ್ದು, ದೇಶ-ದೇಶಗಳ ನಡುವಿನ ಸಂಸ್ಕೃತಿಯನ್ನು ಬೆಸೆಯುವ ಉದ್ದೇಶ ಹೊಂದಲಾಗಿದೆ. ಬಾನಿನಲ್ಲಿ ಜಿಗಿದಾಡುವ ಸ್ಟಂಟ್ ಗಾಳಿಪಟಗಳು, ಗಾಳಿ ತುಂಬಿ ಬಲೂನ್ ರೀತಿಯಲ್ಲಿ ಹಾರಾಡುವ ಬೃಹತ್ ಏರೋ ಫಾಯ್ಸ ಗಾಳಿಪಟಗಳು, ಏಕದಾರದಲ್ಲಿ ನೂರಾರು ಗಾಳಿಪಟಗಳು, ರೆಕ್ಕೆ ಬಿಚ್ಚಿ ಹಕ್ಕಿಯಂತೆ ಹಾರಾಡುವ ಗಾಳಿಪಟಗಳು ಈ ಉತ್ಸವದಲ್ಲಿ ಜನರಿಗೆ ಮನರಂಜನೆ ನೀಡಲಿವೆ.
ಮಹಾರಾಷ್ಟ್ರ ಗಾಳಿಪಟ ತಂಡದ ಪ್ರತಿನಿಧಿ ಅಶೋಕ್ ಶಾ, ಟೀಂ ಮಂಗಳೂರಿನ ಸರ್ವೇಶ್ ರಾವ್, ಪ್ರಾಣ್ ಹೆಗ್ಡೆ, ಗಿರಿಧರ್, ಯತೀಶ್ ಬೈಕಂಪಾಡಿ, ನಿತೇಶ್, ಗ್ರೀಸ್ ದೇಶದ ಪ್ರತಿನಿಧಿ ಕೋಸ್ತಾ, ಥಿಯೋ ಸುದ್ದಿಗೋಷ್ಠಿಯಲ್ಲಿ ಇದ್ದರು.
LATEST NEWS
14 ವರ್ಷಗಳ ಬಳಿಕ ಪೊಲೀಸರ ಬಲೆಗೆ ಬಿದ್ದ ಕಳ್ಳ
ಕಾರು ಪಲ್ಟಿ; ಇಬ್ಬರಿಗೆ ಸಣ್ಣ-ಪುಟ್ಟ ಗಾಯ, ಓರ್ವ ಗಂಭೀರ
ಗೋಪಾನ್ ಸ್ವಾಮಿ ಅವರ ದೇಹದಲ್ಲಿ ಯಾವುದೇ ಗಾಯಗಳಿಲ್ಲ: ಪ್ರಾಥಮಿಕ ವರದಿ
ಮಾವನ ದೈ*ಹಿಕ ಕಿರುಕುಳ ಸಹಿಸಲಾಗದೆ ಆ*ತ್ಮಹ*ತ್ಯೆಗೆ ಶರಣಾದ ಸೊಸೆ
ಕೋಟಿ ಬೆಲೆಯ ಕಾರಿದ್ರೂ ಆಟೋದಲ್ಲಿ ಆಸ್ಪತ್ರೆಗೆ ಹೋದ್ರಾ ಸೈಫ್? ಈಗ ಹೇಗಿದ್ದಾರೆ ನಟ?
2 ದಿನದ ಕಂದಮ್ಮನನ್ನು ತೋಟದಲ್ಲಿ ಬಿಟ್ಟು ಹೋದ ಹೆತ್ತಮ್ಮ
Trending
- BIG BOSS6 days ago
BBK11: ಐವರು ನಾಮಿನೇಟ್, ಕಿಚ್ಚನ ಪಂಚಾಯ್ತಿಯಲ್ಲಿ ಗೇಟ್ಪಾಸ್ ಯಾರಿಗೆ..?
- LATEST NEWS7 days ago
ಹಲ್ಲು ಹುಳುಕಾಗಿದ್ಯಾ.? ಈ ಮನೆಮದ್ದು ಪ್ರಯತ್ನಿಸಿ, ತಕ್ಷಣ ಎಲ್ಲಾ ಹಲ್ಲಲ್ಲಿರುವ ಹುಳುಗಳು ಹೊರ ಬರುತ್ತವೆ.!
- BIG BOSS4 days ago
ಕಣ್ಣೀರು ಒರೆಸಿದ ಸುದೀಪ್.. ಕಿಚ್ಚನ ಈ ದೊಡ್ಡ ಗುಣಕ್ಕೆ ಸೆಲ್ಯೂಟ್ ಹೊಡೆದ ಫ್ಯಾನ್ಸ್..!
- BIG BOSS3 days ago
ಮಿಡ್ ವೀಕ್ ಎಲಿಮಿನೇಷನ್ ನಿಂದ ಬಚಾವ್ ಆಗುವವರು ಯಾರು ?