Thursday, September 29, 2022

ಉತ್ತರಾಖಂಡ: ಅರ್ಧದಿಂದ ಕುಸಿದ ಸೇತುವೆ- ಕೆಲವು ವಾಹನಗಳು ನಾಪತ್ತೆ

ಉತ್ತರಾಖಂಡ: ಡೆಹ್ರಾಡೂನ್ ನಿಂದ ರಿಷಿಕೇಶಕ್ಕೆ ಸಂಪರ್ಕಿಸುವ ಪ್ರಮುಖ ರಾಣಿಪೋಖಾರಿ ಅರ್ಧದಿಂದ ಸೇತುವೆ ಕುಸಿದು ಬಿದ್ದಿದೆ.

ಇದರಿಂದಾಗಿ ಡೆಹ್ರಾಡೂನ್-ರಿಷಿಕೇಶದ ಸಂಚಾರ ಅಸ್ತವ್ಯಸ್ತಗೊಂಡಿದೆ. ವಾಹನಗಳು ಸೇತುವೆಯ ಮೂಲಕ ಹಾದು ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತದಿಂದ ಕೆಲವು ವಾಹನಗಳು ನಾಪತ್ತೆಯಾಗಿವೆ.


ರಾಷ್ಟ್ರೀಯ ಹೆದ್ದಾರಿಯಲ್ಲಿರುವ ರಾಣಿಪೋಖರಿ ಸೇತುವೆ ಹೆಚ್ಚು ಪ್ರಸಿದ್ಧಿ ಪಡೆದಿದೆ.

ಡೆಹ್ರಾಡೂನ್‌ನಿಂದ ರಿಷಿಕೇಶಕ್ಕೆ ಸಂಪರ್ಕಿಸುವ ಈ ಸೇತುವೆ ಮೇಲೆ ಸದಾ ಸಂಚಾರ ದಟ್ಟಣೆಯಿರುತ್ತದೆ. ಉತ್ತರಾಖಂಡದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ.

ನದಿಗಳು ತುಂಬಿ ಹರಿಯುತ್ತಿವೆ. ಅನೇಕ ಸೇತುವೆಗಳು ಮುಳುಗುವ ಹಂತದಲ್ಲಿದೆ. ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಡೆಹ್ರಾಡೂನ್ ನಲ್ಲಿ ವಿನಾಶದ ದೃಶ್ಯ ಕಾಣ್ತಿದೆ. ಸೇತುವೆ ಕುಸಿತದಿಂದ ಕೆಲವು ವಾಹನಗಳು ಕೊಚ್ಚಿ ಹೋಗಿವೆ ಎನ್ನಲಾಗ್ತಿದೆ. ರಕ್ಷಣಾ ಕಾರ್ಯ ಶುರುವಾಗಿದ್ದು, ವಾಹನಗಳ ಹುಡುಕಾಟ ಶುರುವಾಗಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಗುರುವಾರ ರಾತ್ರಿಯಿಂದ ಸುರಿಯುತ್ತಿರುವ ಮಳೆಗೆ ರಾಷ್ಟ್ರೀಯ ಹೆದ್ದಾರಿಗಳು ಮತ್ತು ಗ್ರಾಮೀಣ ರಸ್ತೆಗಳನ್ನು ಮುಚ್ಚಿವೆ. ಅಪಾಯದಲ್ಲಿರುವ ಜನರನ್ನು ರಕ್ಷಿಸಲಾಗ್ತಿದೆ.

LEAVE A REPLY

Please enter your comment!
Please enter your name here

Hot Topics

ಉಡುಪಿ: ಗಿರಿಜಾ ಹೆಲ್ತ್‌ಕೇರ್ & ಸರ್ಜಿಕಲ್ಸ್‌ನಲ್ಲಿ ‘ಫಾರ್ಮಾಸಿಸ್ಟ್‌ ಡೇ’ ಆಚರಣೆ

ಉಡುಪಿ: ಗಿರಿಜಾ ಹೆಲ್ತ್‌ಕೇರ್ ಆ್ಯಂಡ್ ಸರ್ಜಿಕಲ್ಸ್‌ನಲ್ಲಿ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ಸ್‌ ವತಿಯಿಂದ ಫಾರ್ಮಾಸಿಸ್ಟ್‌ ದಿನವನ್ನು ಉಡುಪಿಯಲ್ಲಿ ಆಚರಿಸಲಾಯಿತು.ಉಡುಪಿಯ ಸೀನಿಯರ್ ಸಿಟಿ ಲೀಗನ್ ಸಹಕಾರದೊಂದಿಗೆ ಉಡುಪಿ ಭಾಗದ ಕೆಲ ಹಿರಿಯ ಫಾರ್ಮಸಿಸ್ಟ್ ಗಳನ್ನು...

‘ಪುರಾಣ ಜ್ಞಾನ ನೀಡುವ ಅದ್ಭುತವಾದ ಕಲೆ ಯಕ್ಷಗಾನ’

ಮಂಗಳೂರು: ಶ್ರೀ ವಾಗೀಶ್ವರಿ ಯಕ್ಷಗಾನ ಕಲಾವರ್ಧಕ ಸಂಘದ ಶತಮಾನೋತ್ಸವದ 29 ನೆಯ ಸರಣಿ ಕಾರ್ಯಕ್ರಮದಲ್ಲಿ ಲೆಕ್ಕ ಪರಿಶೋಧಕ CA ಗಿರಿಧರ ಕಾಮತ್ ಯಕ್ಷಗಾನ ಕಲೆಯು ಪುರಾಣ ಜ್ಞಾನ ನೀಡುವಷ್ಟು ಬೇರೆ ಯಾವ ಮಾಧ್ಯಮವೂ...

ಸುಳ್ಯ: ಮಾಡರ್ನ್‌ಯುಗಕ್ಕೆ ಹೊಂದಿಕೊಂಡ ಕಾಗೆ ತನ್ನ ಗೂಡು ಹೆಣೆದಿದ್ದು ಕಬ್ಬಿಣದ ತಂತಿಯಲ್ಲಿ..!

ಸುಳ್ಯ: ಕಾಗೆಯೊಂದು ಕಬ್ಬಿಣದ ತಂತಿಗಳನ್ನೇ ಬಳಸಿ ಗೂಡು ಹೆಣೆದಿರುವ ಅದ್ಭುತ ಘಟನೆ ಸುಳ್ಯದ ಚೊಕ್ಕಾಡಿಯಲ್ಲಿ ನಡೆದಿದೆ.ಚೊಕ್ಕಾಡಿಯ ಭಗವಾನ್ ಶ್ರೀ ಸತ್ಯಸಾಯಿ ವಿದ್ಯಾಕೇಂದ್ರದ ಆವರಣದಲ್ಲಿ ಸ್ವಚ್ಚತೆ ಕಾರ್ಯ ಕೈಗೊಂಡ ವೇಳೆ ಮರವೊಂದರ ಕೊಂಬೆಯಲ್ಲಿ ಈ...