DAKSHINA KANNADA
ಪ್ರವಾಸೋದ್ಯಮ ಅಭಿವೃದ್ಧಿಗೆ ಬಿೃಜೇಶ್ ಚೌಟ ಮನವಿ
ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬಿೃಜೇಶ್ ಚೌಟ ಭೇಟಿಯಾದರು.
ಬಳಿಕ ಅವರು ಕ್ಷೇತ್ರದ ಪ್ರವಾಸೋಧ್ಯಮ ಅಭಿವೃದ್ದಿಯ ಬಗ್ಗೆ ಚರ್ಚೆ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸೋಧ್ಯಮಕ್ಕೆ ವಿಪುಲ ಅವಕಾಶ ಇದ್ದು, ಅದನ್ನು ಅಭಿವೃದ್ದಿ ಪಡಿಸುವ ಮೂಲಕ ಸಮಪರ್ಕ ಬಳಕೆ ಮಾಡುವ ಕುರಿತಾಗಿ ಚರ್ಚೆ ನಡೆಸಲಾಗಿದೆ.
ಜಿಲ್ಲೆಯ ಪ್ರವಾಸೋಧ್ಯಮ ತಾಣಗಳ ಕುರಿತಾಗಿ ವಿಸ್ತಾರವಾಗಿ ಪತ್ರ ಬರೆದಿರುವ ಚೌಟ ಅದನ್ನು ಸಚಿವರಿಗೆ ನೀಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಪ್ರವಾಸೋಧ್ಯಮ ಸಚಿವರಲ್ಲಿ ವಿನಂತಿಸಿಕೊಂಡಿದ್ದಾರೆ.
DAKSHINA KANNADA
ಕಟಪಾಡಿಯಲ್ಲಿ ವಾಹನಗಳ ಸರಣಿ ಅಪಘಾತ; ವಾಹನಗಳು ಜಖಂ
ಕಟಪಾಡಿ: ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್ನಲ್ಲಿ ಅ.17 ರ ಗುರುವಾರ ಸರಣಿ ಅಪಘಾತ ಸಂಭವಿಸಿದೆ.
ತಾಂತ್ರಿಕ ತೊಂದರೆಯಿಂದ ಟ್ಯಾಂಕ್ವೊಂದು ಕಾರು, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅಪಘಾತದ ಪರಿಣಾಮ ಕಟಪಾಡಿ ಜಂಕ್ಷನ್ನ ಸಿಸಿ ಕ್ಯಾಮರಾ ಸಹಿತ ವಾಹನಗಳು ಜಖಂಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ವಾಹನಗಳು ಉಡುಪಿಯತ್ತ ತೆರಳುತ್ತಿದ್ದವು ಎಂದು ತಿಳಿದು ಬಂದಿದೆ. ಪವಾಡ ಸದೃಶವಾಗಿ ಕಾರಿನಲ್ಲಿದ್ದರೂ, ದ್ವಿಚಕ್ರ ವಾಹನ ಸವಾರ ಅಪಾಯದಿಂದ ಪಾರಾಗಿದ್ದಾರೆ. ಕಾರು ಜಖಂಗೊಂಡಿದ್ದು, ಟ್ಯಾಂಕರ್ ಸುಮಾರು ದೂರ ಚಲಿಸಿ ಮತ್ತೆ ನಿಂತಿದೆ.
ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.
BELTHANGADY
ಅಪ್ರಾಪ್ತ ಬಾಲಕಿಗೆ ಕಿರುಕುಳ; ಆರೋಪಿ ಅರೇಸ್ಟ್
ಬೆಳ್ತಂಗಡಿ: ಶಾಲಾ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಕೊಂಡು ಬಂದು ಮೊಬೈಲ್ ನಂಬರ್ ಕೇಳುವ ಮೂಲಕ ಆಕೆಗೆ ಕಿರುಕುಳ ನೀಡುತ್ತಿದ್ದ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಪುಲ್ಲಾಯಿ ಎನ್ನುವಲ್ಲಿ ಈ ಘಟನೆ ನಡೆದಿದೆ.
ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದ ನಿವಾಸಿ, ಹುಲ್ಲು ಕಟಾವು ಯಂತ್ರದ ಮೆಕ್ಯಾನಿಕ್ ಆಗಿರುವ ಜುಮಾರ್ (24) ಬಂಧಿತ ಆರೋಪಿ. ಸಂಬಂಧಿ ಹಾಗೂ ನೆರೆಯ ವಿದ್ಯಾರ್ಥಿನಿಯೊಂದಿಗೆ ಬಾಲಕಿ ಕಾಲೇಜಿಗೆ ಹೋಗುತ್ತಿರುವ ವೇಳೆ ಕಳೆದ ಐದು ದಿನಗಳಿಂದ ಆರೋಪಿಯು ಬೈಕಿನಲ್ಲಿ ಹಿಂಬಾಲಿಸಿಕೊಂಡು ಹೋಗುತ್ತಿದ್ದ.
ಬೈಕ್ನಲ್ಲಿ ಜೊತೆಯಾಗಿ ಬರುವಂತೆ ಒತ್ತಾಯಿಸಿದ್ದು ಮಾತ್ರವಲ್ಲದೆ, ಮೊಬೈಲ್ ನಂಬರ್ ಕೊಡುವಂತೆ ಕೇಳಿಕೊಳ್ಳುತ್ತಿದ್ದ.
ಅಂತೆಯೇ ಅ. 15ರಂದು ಬೆಳಗ್ಗೆ 7.45 ಗಂಟೆಗೆ ಎಂದಿನಂತೆ ಕಾಲೇಜಿಗೆ ಹೋಗುತ್ತಿದ್ದ ವೇಳೆ ಅತ ಬೈಕ್ ಅನ್ನು ಚಲಾಯಿಸಿಕೊಂಡು ಮುಂದಕ್ಕೆ ಹೋಗಿ ವಾಪಸು ಹಿಂದಕ್ಕೆ ತಿರುಗಿಸಿಕೊಂಡು ಬಂದು ತೊಂದರೆ ನೀಡಿದ್ದಾಗಿ ಆರೋಪಿಸಲಾಗಿದೆ.
ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ವೇಣೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
DAKSHINA KANNADA
ವಿಧಾನ ಪರಿಷತ್ ಉಪ ಚುನಾವಣೆ: ದ.ಕ. ಜಿಲ್ಲಾದ್ಯಂತ ಮದ್ಯ ನಿಷೇಧ
ಮಂಗಳೂರು: ಕರ್ನಾಟಕ ವಿಧಾನ ಪರಿಷತ್ಗೆ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಉಪಚುನಾವಣೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಅ.19ರಂದು ಸಂಜೆ 4ರಿಂದ ಅ.21ರ ಸಂಜೆ 4ರವರೆಗೆ ಹಾಗೂ ಮತ ಎಣಿಕೆಯ ದಿನವಾದ ಅ.24ರಂದು ಬೆಳಗ್ಗೆ 6ರಿಂದ ಸಂಜೆ 6 ರವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ದ.ಕ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
- FILM6 days ago
ಮಾಲ್ಡೀವ್ಸ್ ದ್ವೀಪದಲ್ಲಿ ಹನಿಮೂನ್..! ಜಾಲಿ ಮೂಡ್ನಲ್ಲಿ ತರುಣ್ ಸುಧೀರ್ ದಂಪತಿ
- LATEST NEWS5 days ago
‘ಸೆಕ್ಸ್’ ಗೆ ಅಡ್ಡಿಯಾದ ಇಬ್ಬರು ಮಕ್ಕಳನ್ನೇ ಹತ್ಯೆ ಮಾಡಿದ ಪಾಪಿ ತಾಯಿ.!
- FILM7 days ago
ಮಗುವಿನ ಮುಖ ರಿವೀಲ್ ಮಾಡಿದ ಕವಿತಾ-ಚಂದನ್ ದಂಪತಿ
- BIG BOSS5 days ago
ಯಾರೂ ಊಹಿಸದ ವ್ಯಕ್ತಿಗೆ ಈ ವಾರ ಕಿಚ್ಚನ ಚಪ್ಪಾಳೆ, ಬಿಗ್ಬಾಸ್ ಮನೆಯಲ್ಲಿ ಇದೇ ಮೊದಲು
Pingback: ನೀಟ್ ಬದಲು ಸಿಇಟಿಗೆ ರಾಜ್ಯ ಸರ್ಕಾರ ಒತ್ತು..! ಸದನದಲ್ಲಿ ಪ್ರಸ್ತಾಪ ಅಂಗೀಕಾರ..! - NAMMAKUDLA NEWS - ನಮ್ಮಕುಡ್ಲ ನ್ಯೂಸ್