ಬ್ರಿಟನ್ ವೈರಸ್ : ಮಹಾರಾಷ್ಟ್ರದಲ್ಲಿ ಲಾಕ್ ಡೌನ್ ವಿಸ್ತರಣೆ..!
ಮುಂಬೈ: ಬ್ರಿಟನ್ ಕೊರೊನಾ ವೈರಸ್ ಹರಡುವುದನ್ನ ತಡೆಯುವ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮಹಾರಾಷ್ಟ್ರದಲ್ಲಿ ಲಾಕ್ ಡೌನ್ ನಿರ್ಬಂಧ ವಿಸ್ತರಣೆ ಮಾಡಲಾಗಿದೆ.
ಮುಂಬರುವ 2021, ಜನವರಿ 31ರವರೆಗೆ ಲಾಕ್‍ಡೌನ್ ನಿಬರ್ಂಧ ವಿಸ್ತರಣೆ ಮಾಡಿ ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ.
ಈಗಾಗಲೇ ಕೋವಿಡ್ -19 ಇಡೀ ದೇಶವನ್ನ ನಡುಗಿಸಿದೆ. ಇದರ ಗಾಯವೇ ಇನ್ನೂ ವಾಸಿಯಾಗಿಲ್ಲ. ಇಂತಹ ಸಂದರ್ಭದಲ್ಲಿ ಬ್ರಿಟನ್ ನ ರೂಪಾಂತರಿ ಕೊರೊನಾ ವೈರಸ್ ದೇಶಕ್ಕೆ ವಕ್ಕರಿಸಿಕೊಂಡಿದೆ. ಇದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.
ವರ್ಷಾಚರಣೆ ವೇಳೆ ‘ಸೂಪರ್ ಸ್ಪ್ರೆಡರ್’ ಜನಸಂದಣಿಯನ್ನ ನಿಯಂತ್ರಿಸಿ: ರಾಜ್ಯಗಳಿಗೆ ಕೇಂದ್ರದ ಎಚ್ಚರಿಕೆ..!
ಭಾರತದಲ್ಲಿ ಯುಕೆ ಕೊರೊನಾದ 20 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ದೇಶದ ಎಲ್ಲಾ ರಾಜ್ಯಗಳಿಗೆ ಪತ್ರ ಬರೆದು ಹೊಸ ವರ್ಷದ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ‘ಸೂಪರ್ ಸ್ಪ್ರೆಡ್’ ಘಟನೆಗಳನ್ನ ತಡೆಗಟ್ಟಲು ಕಟ್ಟುನಿಟ್ಟಿನ ನಿಗಾ ವಹಿಸುವಂತೆ ಸೂಚನೆ ನೀಡಿದ್ದಾರೆ.
ಇನ್ನು ಯುಕೆಯಿಂದ ಭಾರತಕ್ಕೆ ಬರುವ ವಿಮಾನಗಳ ನಿಷೇಧವನ್ನ ಜನವರಿ 7ರವರೆಗೆ ಭಾರತ ವಿಸ್ತರಿಸಿದ್ದು, ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಆರೋಗ್ಯ ಸಚಿವಾಲಯ ಬುಧವಾರ ಶಿಫಾರಸ್ಸು ಮಾಡಿದೆ.
ಎಲ್ಲಾ ರಾಜ್ಯಗಳಿಗೆ ಪತ್ರ ಬರೆದ ಆರೋಗ್ಯ ಕಾರ್ಯದರ್ಶಿ..!
ಆರೋಗ್ಯ ಸೇವೆಗಳ ಮಹಾನಿರ್ದೇಶಕ (ಡಿಜಿಎಚ್ ಎಸ್) ಮತ್ತು ರಾಷ್ಟ್ರೀಯ ಕಾರ್ಯಪಡೆ (ಡಿಜಿ, ಐಸಿಎಂಆರ್ ಮತ್ತು ಸದಸ್ಯ) ನೀತಿ ಆಯೋಗ(ಆರೋಗ್ಯ) ನೇತೃತ್ವದ ರಾಷ್ಟ್ರೀಯ ಕಾರ್ಯಪಡೆ (ಡಿಜಿ) ನೇತೃತ್ವದ ಜಂಟಿ ನಿಗಾ ದಳ (ಜೆಎಂಜಿ) ಪಡೆದ ಮಾಹಿತಿಗಳ ಆಧಾರದ ಮೇಲೆ ಈ ಶಿಫಾರಸ್ಸು ಮಾಡಲಾಗಿದೆ ಎಂದು ಸಚಿವಾಲಯ ತನ್ನ ಇತ್ತೀಚಿನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.
ತಮ್ಮ ಪರಿಸ್ಥಿತಿಯ ಮೌಲ್ಯಮಾಪನವನ್ನ ಆಧರಿಸಿದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೂ ರಾತ್ರಿ ಕರ್ಫ್ಯೂ ದಂತಹ ಕೋವಿಡ್-19 ಹರಡುವಿಕೆಯನ್ನ ನಿಯಂತ್ರಿಸುವ ಉದ್ದೇಶದಿಂದ ಸ್ಥಳೀಯ ನಿರ್ಬಂಧಗಳನ್ನು ವಿಧಿಸಬಹುದು ಎಂದು ಸಚಿವಾಲಯ ತನ್ನ ಇತ್ತೀಚಿನ ಸಲಹಾ ಆದೇಶದಲ್ಲಿ ತಿಳಿಸಿದೆ.
ಇದರ ಹೊರತಾಗಿ, ವ್ಯಕ್ತಿ ಮತ್ತು ಸರಕುಗಳ ಅಂತರರಾಜ್ಯ ಮತ್ತು ಅಂತರ್ ರಾಜ್ಯ ಸಂಚಾರಕ್ಕೆ ಯಾವುದೇ ನಿರ್ಬಂಧವಿಲ್ಲ ಎಂದೂ ತಿಳಿಸಿತು. ಈ ವಿಷಯಕ್ಕೆ ಸಂಬಂಧಿಸಿದಂತೆ, ಆರೋಗ್ಯ ಕಾರ್ಯದರ್ಶಿಗಳು ಸ್ಥಳೀಯ ಪರಿಸ್ಥಿತಿಗೆ ತಕ್ಷಣಸಹಾಯ ಮಾಡುವಂತೆ ಮತ್ತು ಡಿಸೆಂಬರ್ 30, 31 ಮತ್ತು ಜನವರಿ 15, 2021 ರಂದು ಸೂಕ್ತ ನಿರ್ಬಂಧಗಳನ್ನು ಹೇರುವ ಬಗ್ಗೆ ಪರಿಶೀಲಿಸುವಂತೆ ರಾಜ್ಯಗಳಿಗೆ ಮನವಿ ಮಾಡಿದ್ದಾರೆ.
ಮಂಗಳೂರು : ಕರಾವಳಿ ಉತ್ಸವ ವಸ್ತುಪ್ರದರ್ಶನ ವೇದಿಕೆಯಲ್ಲಿ ಇಂದು (ಜ.16) ಸಂಜೆ 6 ಗಂಟೆಯಿಂದ ಸ್ಟಾರ್ ಸಿಂಗರ್ಸ್,ಮಂಗಳೂರು ತುಳು ಚಲನಚಿತ್ರ ಕಲಾವಿದರಿಂದ ‘ಸಂಗೀತ ರಸಮಂಜರಿ’ ಕಾರ್ಯಕ್ರಮ ನೆರವೇರಲಿದೆ.
ಮುಖ್ಯಮಂತ್ರಿ ಪ್ರವಾಸ :
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 17 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ. ನಾಳೆ ಬೆಳಗ್ಗೆ 11:30 – ಮಂಗಳೂರು ವಿಮಾನ ನಿಲ್ದಾಣ ಆಗಂಇಸಲಿದ್ದಾರೆ. ನಂತರ ಮೇರಿಹಿಲ್ನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ಮಂಗಳೂರು ಪ್ರಾದೇಶಿಕ ಕಚೇರಿ ಕಟ್ಟಡ ಶಿಲಾನ್ಯಾಸ ಭೇಟಿ ನೀಡಲಿದ್ದು, ಮಧ್ಯಾಹ್ನ 12:15 – ಪುರಭವನದಲ್ಲಿ ಬಹುಸಂಸ್ಕೃತಿ ಉತ್ಸವ – ಕರ್ನಾಟಕ ಸುವರ್ಣ ಸಂಭ್ರಮ 50 ಉದ್ಘಾಟನೆ ಮಾಡಲಿದ್ದಾರೆ.
ಮಂಗಳೂರು/ಮುಂಬಯಿ : ಭೋಜ್‌ಪುರಿ ಚಿತ್ರರಂಗದ ನಟ ಸುದೀಪ್ ಪಾಂಡೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸುದೀಪ್ ಪಾಂಡೆ ತೀವ್ರ ಎದೆನೋವಿನಿಂದ ಬಳಲಿದ್ದ ಕಾರಣ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಸುದೀಪ್ ಪಾಂಡೆ ಭೋಜಪುರಿ ಸಿನಿಮಾರಂಗ ಮಾತ್ರವಲ್ಲದೇ, ಹಿಂದಿ ಸಿನಿಮಾದಲ್ಲೂ ಅಭಿನಯಿಸಿದ್ದಾರೆ. ನಟನಾಗಿ, ನಿರ್ದೇಶಕರಾಗಿ ಕೂಡಾ ಕೆಲಸ ಮಾಡಿದ್ದಾರೆ.
ಖೂನಿದಂಗಲ್, ಭೋಜ್‌ಪುರಿ ಭಯ್ಯಾ, ಬಹಿನಿಯಾ ಸೇರಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಸಿನಿ ರಂಗಕ್ಕೆ ಎಂಟ್ರಿ ನೀಡುವ ಮೊದಲು ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.
ಮಂಗಳೂರು/ತಿರುವನಂತಪುರ : ಸ್ವಯಂ ಘೋಷಿತ ಗುರು ಗೋಪನ್ ಸ್ವಾಮಿಯ “ಸಮಾಧಿ” ವಿಚಾರವಾಗಿ ಕೇರಳ ಹೈಕೋರ್ಟ್ ಬುಧವಾರ ಕಾಂಕ್ರಿಟ್ ಚೇಂಬರ್ ಅನ್ನು ತೆರೆಯಲು ಅನುಮತಿ ನೀಡಿದೆ.
ತಿರುವನಂತಪುರ ಜಿಲ್ಲೆಯ ನೆಯ್ಯತ್ತಿಂಕರದಲ್ಲಿನ ಗೋಪನ್ ಕಳೆದ ಶುಕ್ರವಾರ ಕಾಣೆಯಾಗಿದ್ದಾರೆ ಎನ್ನಲಾಗಿತ್ತು. ಗೋಪನ್ ಸ್ವಾಮಿಗಳ ಮಕ್ಕಳಾದ ಸನಂದನ್ ಮತ್ತು ರಾಜಸೇನನ್ ಅವರು ಸ್ಥಳೀಯ ಸಮುದಾಯ ಅಥವಾ ಸಂಬಂಧಿಕರಿಗೆ ತಿಳಿಸದೆ ತಮ್ಮ ತಂದೆಯನ್ನು ನೆಯ್ಯಟಿಂಕರಾದ ದೇವಸ್ಥಾನದ ಬಳಿ ಸಮಾಧಿ ಮಾಡಿದ ನಂತರ ಈ ವಿವಾದ ಭುಗಿಲೆದ್ದಿತ್ತು.
ಈ ಬಗ್ಗೆ ಗೋಪನ್ ಅವರ ಮಕ್ಕಳು, ‘ತಮ್ಮ ತಂದೆ ಕುಳಿತ ಭಂಗಿಯಲ್ಲಿ ಧ್ಯಾನ ಮಾಡುತ್ತಿದ್ದಾಗ ನಿಧನರಾದರು ಮತ್ತು ಅವರ ಸಾವಿಗೆ ಯಾರಿಗೂ ಕೂಡ ಅವಕಾಶ ನೀಡದಂತೆ ಸೂಚನೆ ನೀಡಿದ್ದರು’ ಎಂದು ಹೇಳಿದ್ದಾರೆ. ನಂತರ ಗೋಪನ್ ಅವರ ಸಮಾಧಿಯ ಕುರಿತ ಪೋಸ್ಟರ್ ಗಳನ್ನು ಕುಟುಂಬದವರು ಹಾಕಿದ್ದರು. ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ನೆರೆಹೊರೆಯವರು ಪೊಲೀಸರಿಗೆ ದೂರು ನೀಡಿದ್ದರಿಂದ ಪೊಲೀಸರು ತನಿಖೆ ಆರಂಭಿಸಿದ್ದರು.
ಹಾಗಾಗಿ ಕಂದಾಯ ಅಧಿಕಾರಿಯ ಆದೇಶ ಪತ್ರದೊಂದಿಗೆ ಪೊಲೀಸರು ತಪಾಸಣೆಗೆ ಮುಂದದಾಗ ಕುಟುಂಬವು ಆಕ್ಷೇಪ ವ್ಯಕ್ತಪಡಿಸಿತ್ತು. ಕೆಲವು ಹಿಂದೂ ಸಂಘಟನೆಗೆಳೂ ಕುಟುಂಬದ ಪರ ನಿಂತಿದ್ದವು.
ಜತೆಗೆ ಪೊಲೀಸರು ತಪಾಸಣೆಗೆ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ ಸಮಾಧಿ ತೆರೆಯಲು ಪೊಲೀಸರಿಗೆ ಅನುಮತಿ ನೀಡಿದೆ.