Connect with us

    LATEST NEWS

    ಕಾರವಾರ: ತಮ್ಮನ ಹೆಂಡತಿ, ಮಗು ಹತ್ಯೆ- ಅಪರಾಧಿಗೆ ಜೀವಾವಧಿ ಶಿಕ್ಷೆ

    Published

    on

    ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮನ ಹೆಂಡತಿ ಹಾಗೂ ಮಗನನ್ನು ಹತ್ಯೆ ಮಾಡಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ 5.85 ಲಕ್ಷ ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಮಾಡಿದೆ.

    ಕಾರವಾರ: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮನ ಹೆಂಡತಿ ಹಾಗೂ ಮಗನನ್ನು ಹತ್ಯೆ ಮಾಡಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ 5.85 ಲಕ್ಷ ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಮಾಡಿದೆ.

    ಅಂಕೋಲಾದ ಮಠಾಕೇರಿ ವಾರ್ಡ್​ನ ಸುಬ್ರಾಯ್ ಪ್ರಭು ಶಿಕ್ಷೆಗೆ ಒಳಗಾದ ಅಪರಾಧಿ.

    ಏನಿದು ಪ್ರಕರಣ: ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಸುಬ್ರಾಯ್ ತಮ್ಮ ಅಮಿತ್, ತಾಯಿ ರುಕ್ಮಿಣಿಬಾಯಿ ಹಾಗೂ ಚಿಕ್ಕಪ್ಪ ಪದ್ಮನಾಭ ಪ್ರಭುವಿನೊಂದಿಗೆ ಜಗಳ ಮಾಡಿಕೊಂಡಿದ್ದ.

    ಆಸ್ತಿ ಪಾಲು ಮಾಡದೇ ಇರಲು ತಮ್ಮನ ಹೆಂಡತಿ ಮೇಧಾ (ಕಾಮಾಕ್ಷಿ) ಕಾರಣ ಎಂದು ಭಾವಿಸಿ 2019ರ ಜು. 27ರಂದು ಬಂದೂಕು ಹಿಡಿದು ಆಕೆಯ ಮನೆಗೆ ಅಕ್ರಮವಾಗಿ ಪ್ರವೇಶಿಸಿದ್ದ.

    ಮನೆಯಲ್ಲಿ ಮೇಧಾ ತನ್ನ ಮಗ ಅನೂಜನಿಗೆ ವಿದ್ಯಾಭ್ಯಾಸ ಮಾಡಿಸುತ್ತಿದ್ದಾಗ ಬಂದೂಕಿನಿಂದ ಗುಂಡು ಹಾರಿಸಿದ್ದ.

    ಆ ಗುಂಡು ಮಗನ ತಲೆಯನ್ನ ಸೀಳಿ ತಾಯಿಯ ತಲೆಯ ಭಾಗಕ್ಕೆ ಹೊಕ್ಕಿತ್ತು.

    ಅನೂಜ್ ಸ್ಥಳದಲ್ಲೇ ಮೃತಪಟ್ಟಿದ್ದರೆ, ಮೇಧಾ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದರು.

    ಈ ಕುರಿತು ಭಾರತೀಯ ದಂಡ ಸಂಹಿತೆ ಕಲಂ 449, 450, 302 ಮತ್ತು ಕಲಂ 3 ಮತ್ತು 25 ಭಾರತೀಯ ಆಯುಧ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಅಂದಿನ ಪಿಎಸ್‌ಐ ಶ್ರೀಧರ್ ಎಸ್.ಆರ್, ತನಿಖೆ ಕೈಗೊಂಡು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

    ಪ್ರಕರಣದ ವಿಚಾರಣೆ ನಡೆಸಿದ ಉತ್ತರ ಕನ್ನಡ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಡಿ. ಎಸ್. ವಿಜಯಕುಮಾರ್, ಭಾರತೀಯ ದಂಡ ಸಂಹಿತೆ ಕಲಂ 302ರ ಅಡಿಯಲ್ಲಿ ಅಪರಾಧಿಗೆ ಜೀವಾವಧಿ ಶಿಕ್ಷೆ, 5 ಲಕ್ಷ ದಂಡ ವಿಧಿಸಿದ್ದಾರೆ. ಜತೆಗೆ, ಕಲಂ 449 ಹಾಗೂ 450ಕ್ಕೆ ತಲಾ 10 ವರ್ಷ ಜೈಲು, 40 ಸಾವಿರ ದಂಡ, ಕಲಂ 25ಕ್ಕೆ 3 ವರ್ಷ ಜೈಲು ಹಾಗೂ 5 ಸಾವಿರ ದಂಡ, ಒಟ್ಟು 5.85 ಲಕ್ಷ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

    ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ವಕೀಲ ರಾಜೇಶ್ ಮಳಗೀಕರ ವಾದಿಸಿದರೆ, ಮೃತ ಮೇಧಾಳ ಪತಿ ಅಮಿತ್ ಪರವಾಗಿ ವಕೀಲ ನಾಗರಾಜ ನಾಯಕ ವಕಾಲತ್ತು ವಹಿಸಿ ಅಪರಾಧಿಗೆ ಶಿಕ್ಷೆ ಕೊಡಿಸುವಲ್ಲಿ ನೆರವಾದರು.

    DAKSHINA KANNADA

    ಬಜಪೆ: ಅದ್ಯಪಾಡಿ ಗ್ರಾಮದ 30ಕ್ಕೂ ಹೆಚ್ಚು ಮನೆಗಳು ಜಲಾವೃತ

    Published

    on

    ಬಜಪೆ ಸಮೀಪದ ಅದ್ಯಪಾಡಿ ಗ್ರಾಮದ ಸುಮಾರು 30ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿದ್ದು, 80 ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪಲ್ಗುಣಿ ನದಿಗೆ ಮರವೂರಿನಲ್ಲಿ ನಿರ್ಮಸಿದ ಕಿಂಡಿ ಅಣೆಕಟ್ಟು ಈ ನೆರೆಗೆ ಕಾರಣವಾಗಿದೆ ಎಂದು ಜನರು ಆರೋಪಿಸಿದ್ದಾರೆ.

    ಕಳೆದ ಹತ್ತು ವರ್ಷದಿಂದ ಈ ಗ್ರಾಮದ ಜನರು ಮಳೆಗಾಲದಲ್ಲಿ ಸಂಕಷ್ಟಕ್ಕೆ ಗುರಿಯಾಗುತ್ತಿದ್ದು, ಸಮಸ್ಯೆಗೆ ಇನ್ನೂ ಪರಿಹಾರ ಸಿಕ್ಕಿಲ್ಲ. ಅವೈಜ್ಞಾನಿಕವಾಗಿ ನಿರ್ಮಿಸಿದ ಕಿಂಡಿ ಅಣೆಕಟ್ಟಿನಿಂದ ಇಲ್ಲಿನ ರೈತರು ಈಗಾಗಲೇ ತಮ್ಮ ಕೃಷಿ ಕಳೆದುಕೊಂಡಿದ್ದಾರೆ. ಪ್ರತಿ ವರ್ಷ ಉಂಟಾಗುವ ನೆರೆಯಿಂದ ಮನೆಗಳೂ ಕುಸಿಯುವ ಭೀತಿ ಎದುರಾಗಿದೆ.

    ಈ ಗ್ರಾಮಕ್ಕೆ ಇಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಭೇಟಿ ನೀಡಿ ಜನರ ಸಂಕಷ್ಟ ಕೇಳಿದ್ದಾರೆ. ದೋಣಿಯ ಮೂಲಕ ಇಲ್ಲಿನ ಮನೆಗಳಿಗೆ ತೆರಳಿದ ಜಿಲ್ಲಾದಿಕಾರಿ ಮನೆಯಲ್ಲಿದ್ದ ವೃದ್ಧರಿಗೆ ಸಾಂತ್ವಾನ ಹೇಳಿದ್ದಾರೆ. ಸುಮಾರು 80 ಜನರು ಇಲ್ಲಿ ವಾಸವಾಗಿದ್ದು, ಜನರನ್ನು ಸ್ಥಳಾಂತರ ಮಾಡಿ ಸುರಕ್ಷಿತ ಜಾಗಕ್ಕೆ ಕಳುಹಿಸಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

    ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಸ್ಥಳೀಯ ಜನರ ಬಳಿ ಮಾತನಾಡಿದ್ದು, ಅವರು ಪ್ರಮುಖ ಸಮಸ್ಯೆಯ ಬಗ್ಗೆ ಗಮನಕ್ಕೆ ತಂದಿದ್ದಾರೆ. ಆ ಬಗ್ಗೆ ಗಮನ ಹರಿಸಲಾಗುವುದು ಆದ್ರೆ ಅದಕ್ಕೂ ಮೊದಲು ಈಗ ಇವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುವುದು ಎಂದು ಹೇಳಿದ್ದಾರೆ.

    Continue Reading

    LATEST NEWS

    ಮಂಗಳೂರು: ಬೆಂಗ್ರೆ ಪರಿಸರದ ಶಾಲೆ ಹಾಗೂ ಮನೆಗಳಿಗೆ ನುಗ್ಗಿದ ನೀರು

    Published

    on

    ಮಂಗಳೂರು: ಕರಾವಳಿಯ ಮಳೆಯ ಸರಿಯಾದ ಮಾಹಿತಿ ಇಲ್ಲದೆ ನಡೆಸುವ ಕಾಮಗಾರಿಗಳು ಇಲ್ಲಿನ ಜನರಿಗೆ ಶಾಪವಾಗಿ ಪರಿಣಮಿಸಿದೆ. ಮಂಗಳೂರಿನ ಬೆಂಗ್ರೆಯ ಜನರೂ ಕೂಡಾ ಅಂತಹದೇ ಪರಿಸ್ಥಿತಿ ಎದುರಿಸುತ್ತಿದ್ದು, ಇಲ್ಲಿನ ಕೋಸ್ಟಲ್‌ ಬರ್ತ್‌ ಕಾಮಗಾರಿಯಿಂದ ಉಂಟಾಗಿರುವ ಕೃತಕ ನೆರೆಯಿಂದ ಜನರು ಸಂಕಷ್ಟಕ್ಕೆ ಗುರಿಯಾಗಿದ್ದಾರೆ.

    ಕೋಸ್ಟಲ್‌ ಬರ್ತ್‌ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ನದಿ ನೀರು ಸರಿಯಾಗಿ ಹರಿದು ಹೋಗಲು ವ್ಯವಸ್ಥೆ ಮಾಡಿಲ್ಲ. ಹೀಗಾಗಿ ಕಳೆದ ಕೆಲ ದಿನದಿಂದ ಸುರಿಯುತ್ತಿರುವ ಮಳೆಗೆ ಬೆಂಗ್ರೆಯ ಹಲವು ಮನೆಗಳು ಜಲಾವೃತಗೊಂಡಿದೆ. ಶಾಲೆಗಳಿಗೂ ನದಿ ನೀರು ನುಗ್ಗಿದ್ದು, ತೀರದಲ್ಲಿದ್ದ ಮೀನುಗಾರರ ದೋಣಿಗಳನ್ನು ಕಟ್ಟಿ ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ.

    ಕೆಲ ದಿನಗಳ ಹಿಂದೆ ಇಲ್ಲಿಗೆ ಭೇಟಿ ನೀಡಿದ ಅಧಿಕಾರಿ ಶೀಘೃ ಸಮಸ್ಯೆ ಬಗೆ ಹರಿಸುವ ಬರವಸೆ ನೀಡಿದ್ದರು. ಶಾಲೆಯ ಆವರಣಕ್ಕೆ ಮರಳು ಹಾಕಿ ನೀರು ಬಾರದಂತೆ ತಡೆಯುವುದಾಗಿ ಹೇಳಿದ್ದರು. ಆದ್ರೆ ನಿನ್ನೆ ತುಂಬೆ ಅಣೆಕಟ್ಟು ತುಂಬಿದ ಕಾರಣ ಎಲ್ಲಾ ಗೇಟ್‌ಗಳನ್ನು ತೆಗೆದಿರುವ ಕಾರಣ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ಇದರಿಂದ ಕೋಸ್ಟಲ್‌ ಬರ್ತ್‌ ನಿರ್ಮಾಣದ ಪ್ರದೇಶದಲ್ಲಿ ನೀರು ಸರಾಗವಾಗಿ ಹರಿಯದೇ ಬೆಂಗ್ರೆ ಪರಿಸರದ ಮನೆಗಳಿಗೆ ಹಾಗೂ ಶಾಲೆಗಳಿಗೆ ನುಗ್ಗಿದೆ. ಹೀಗಾಗಿ ತಕ್ಷಣ ಬರ್ತ್ ನಿರ್ಮಾಣ ಕಾಮಗಾರಿಯನ್ನು ತಡೆಹಿಡಿಯುವಂತೆ ಸ್ಥಳಿಯರು ಆಗ್ರಹಿಸಿದ್ದಾರೆ.

    Continue Reading

    LATEST NEWS

    ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಸೇರಿದಂತೆ 13 ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ

    Published

    on

    ಮಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದ ಪಟ್ಟಂತೆ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಸಿಎಲ್ ಆನಂದ್ ಸೇರಿದಂತೆ 13 ಮಂದಿ ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ(ಜು.19) ದಾಳಿ ನಡೆಸಿದ್ದಾರೆ. ಒಟ್ಟು ಕರ್ನಾಟಕದ 55 ಕಡೆಗಳಲ್ಲಿ ದಾಳಿ ನಡೆದಿದೆ.
    ಆನಂದ್ ಅವರ ಮನೆ, ಕಚೇರಿಗಳ ಮೇಲೂ ಲೋಕಾಯುಕ್ತ ಅಧಿಕಾರಿಗಳೂ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

    ಆನಂದ್ ಅವರು ಹಿರಿಯ ದರ್ಜೆಯ ಕರ್ನಾಟಕ ಆಡಳಿತ ಸೇವೆಗಳ (ಕೆಎಎಸ್) ಅಧಿಕಾರಿಯಾಗಿದ್ದು, ಜೂನ್, 2023 ರಲ್ಲಿ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾಗಿ ನೇಮಕಗೊಂಡಿದ್ದರು. ಸರ್ಕಾರ ಜುಲೈ 4 ರಂದು ಅವರನ್ನು ವರ್ಗಾವಣೆ ಮಾಡಿತ್ತು. ಇದರ ವಿರುದ್ಧ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ ಬಳಿಕ ಜುಲೈ 9 ರಂದು ಅವರ ವರ್ಗಾವಣೆಯನ್ನು ರದ್ದುಗೊಳಿಸಲಾಗಿತ್ತು.

    ಇನ್ನು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಬ್ಬಗೋಡಿ ನಗರ ಪಾಲಿಕೆ ಆಯುಕ್ತರು ಮತ್ತು ಕೆಎಎಸ್ ಅಧಿಕಾರಿ ಕೆ.ನರಸಿಂಹಮೂರ್ತಿ ಅವರ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತುಮಕೂರಿನ ಕೆಐಎಡಿಬಿ ಅಪರ ನಿರ್ದೇಶಕ ಸಿ.ಟಿ ಮುದ್ದುಕುಮಾರ್ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಸಿ.ಟಿ ಮುದ್ದುಕುಮಾರ್ ಅವರಿಗೆ ಸೇರಿದ ಒಟ್ಟು ಏಳು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಸಿ.ಟಿ ಮುದ್ದುಕುಮಾರ್ ಬೆಂಗಳೂರಿನ ನಾಗರಭಾವಿಯ ಎರಡನೇ ಹಂತದಲ್ಲಿ ವಾಸವಾಗಿದ್ದಾರೆ. ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಖನಿಜ ಭವನದಲ್ಲಿ ಕಚೇರಿ ಇದೆ.

    ಇದನ್ನೂ ಓದಿ : Watch : ಸರ್ಕಾರಿ ಬಸ್ ಚಾಲಕನ ರೀಲ್ಸ್ ಹುಚ್ಚಾಟ; ಮೂಕ ಜೀವಿಗಳು ಬ*ಲಿ

    ಯಾದಗಿರಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಬಲವಂತ ರಾಠೋಡ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹಿರಿಯ ಪಶು ವೈದ್ಯಾಧಿಕಾರಿ ಆರ್ ಸಿದ್ದಪ್ಪ, ವಾಣಿಜ್ಯ ತೆರಿಗೆ ಜಂಟಿ ಆಯುಕ್ತ ರಮೇಶ್ ಕುಮಾರ್, ಕಾನೂನು ಮಾಪನ ಶಾಸ್ತ್ರ ಉಪ ನಿಯಂತ್ರಕ ಅಥರ್ ಅಲಿ, ಅಂತರಗಂಗೆ ಗ್ರಾಮ ಪಂಚಾಯತ್ ಅಧ್ಯಕ್ಷ ನಾಗೇಶ್ ಬಿ ಗೌಡ, ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಪ್ರಕಾಶ್ ಮತ್ತು ಮಂಡ್ಯ ಕಾರ್ಮಿಕ ಅಧಿಕಾರಿ ಚೇತನ್ ಕುಮಾರ್ ಶುಕ್ರವಾರ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಬೆಂಗಳೂರು, ತುಮಕೂರು, ಶಿವಮೊಗ್ಗ, ಯಾದಗಿರಿ ಮತ್ತು ಕಲಬುರ್ಗಿಯಲ್ಲಿ ಕೂಡ ದಾಳಿ ನಡೆಸಲಾಗಿದೆ.

    Continue Reading

    LATEST NEWS

    Trending