Connect with us

BELTHANGADY

ಜೈನ ಮುನಿಯ ಅಮಾನುಷ ಹತ್ಯೆ- ಡಾ.ಡಿ ವೀರೇಂದ್ರ ಹೆಗ್ಗಡೆ ಖಂಡನೆ

Published

on

ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಜೈನಮುನಿ ಕಾಮಕುಮಾರ ನಂದಿ ಮಹಾರಾಜ ಅವರನ್ನು ಭೀಕರವಾಗಿ ಹತ್ಯೆ ಮಾಡಿರುವ ಕೃತ್ಯವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಅವರು ಖಂಡಿಸಿದ್ದಾರೆ. 

ಬೆಳ್ತಂಗಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಜೈನಮುನಿ ಕಾಮಕುಮಾರ ನಂದಿ ಮಹಾರಾಜ ಅವರನ್ನು ಭೀಕರವಾಗಿ ಹತ್ಯೆ ಮಾಡಿರುವ ಕೃತ್ಯವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಅವರು ಖಂಡಿಸಿದ್ದಾರೆ.

‘ಈ ಘಟನೆಯಿಂದ ಮನಸ್ಸಿಗೆ ತುಂಬಾ ನೋವಾಗಿದೆ. ದಿಗಂಬರ ಮುನಿಗಳ ಈ ರೀತಿಯ ಹತ್ಯೆ ಇತಿಹಾಸದಲ್ಲಿಯೇ ಪ್ರಥಮ.

ಜೈನ ಧರ್ಮದಲ್ಲಿ ಪೂರ್ವ ಜನ್ಮದ ತಪ್ಪು ಅಥವಾ ಈ ಜನ್ಮದ ತಪ್ಪುಗಳಿಗೆ ಉಪಸರ್ಗಗಳನ್ನು ಅನುಭವಿಸ ಬೇಕಾಗುತ್ತದೆ.

ಮುನಿಗಳಿಗೆ ಯಾವ ಕಾರಣಕ್ಕಾಗಿ ಈ ಉಪಸರ್ಗ ಎಂದು ಗೊತ್ತಿಲ್ಲ. ಕೃತ್ಯ ಎಸಗಿದವರ ಬಂಧನ ಆಗಿರುವ ಬಗ್ಗೆ ತಿಳಿದು ಬಂದಿದೆ.

ಇದಕ್ಕಾಗಿ ಸರಕಾರ ಮತ್ತು ಪೊಲೀಸರಿಗೆ ಅಭಿನಂದನೆ ಸಲ್ಲಿಸುತ್ತೇನೆ. ತಪ್ಪಿತಸ್ಥರಿಗೆ ತಕ್ಷ ಶಿಕ್ಷೆಯಾಗ ಬೇಕು. ಮುನಿಗಳಿಗೆ ಸರಕಾರ ರಕ್ಷಣೆಯನ್ನು ಕೊಡಬೇಕಿದೆ’ ಎಂದು ಡಾ.ಡಿ ವೀರೇಂದ್ರ ಹೆಗ್ಗಡೆ ಅವರು ಒತ್ತಾಯಿಸಿದ್ದಾರೆ.

ಚಿಕ್ಕೋಡಿಯ ನಂದಿ ಪರ್ವತ ಆಶ್ರಮದ ಆಚಾರ್ಯ 108 ಕಾಮ ಕುಮಾರ ನಂದಿ ಮಹಾರಾಜ ಅವರನ್ನು ಕೊಲೆ ಮಾಡಿ ಮೃತ ದೇಹವನ್ನು ತುಂಡರಿಸಿ ಕೊಳವೆ ಬಾವಿಗೆ ಎಸೆದ ಘಟನೆ ನಿನ್ನೆ ಬೆಳಕಿಗೆ ಬಂದಿತ್ತು.

ಜು. 6 ರ ಬೆಳಗ್ಗೆಯಿಂದ ಮುನಿಗಳು ಆಶ್ರಮದಿಂದ ದಿಢೀರ್‌ ಕಾಣೆಯಾಗಿದ್ದರು. ಭಕ್ತರು ಎಲ್ಲೆಡೆ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಹಾಗಾಗಿ ಶುಕ್ರವಾರ ಚಿಕ್ಕೋಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು.

ತನಿಖೆ ಆರಂಭಿಸಿದ ಪೊಲೀಸರು ಅದೇ ದಿನ ರಾತ್ರಿ ಇಬ್ಬರು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.

ಆರೋಪಿಗಳು ಜೈನ ಮುನಿಗಳ ಶವವನ್ನು ರಾಯಬಾಗ ತಾಲೂಕಿನ ಕಟಕಬಾವಿ ಗ್ರಾಮದ ಹೊರ ವಲಯದ ಬಾವಿಗೆ ಎಸೆದಿರುವುದಾಗಿ ಮಾಹಿತಿ ನೀಡಿದ್ದರು.

ಹಾಗಾಗಿ ಪೊಲೀಸರು ರಾತ್ರಿಯಿಂದಲೇ ಕಾರ್ಯಾಚರಣೆ ಆರಂಭಿಸಿದ್ದರು. ಸುಮಾರು 20 ಅಡಿ ಆಳದಲ್ಲಿ ಶವದ ಭಾಗಗಳು ನಿನ್ನೆ ಪತ್ತೆಯಾಗಿವೆ.

ಆರೋಪಿಗಳಾದ ಹಿರೇಕೋಡಿ ಗ್ರಾಮದ ನಾರಾಯಣ ಮಾಳಿ ಮತ್ತು ಹುಸೇನ್‌ ಡಾಲಾಯತ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಹಣಕಾಸಿನ ವ್ಯವಹಾರಕ್ಕಾಗಿ ಜೈನ ಮುನಿಗಳನ್ನು ಕೊಲೆ ಮಾಡಲಾಗಿದೆ. ಆರೋಪಿಗಳು ಮುನಿಗಳಿಂದ ಹಣ ಪಡೆದಿದ್ದು, ಅದನ್ನು ವಾಪಸ್‌ ಕೇಳಿದ್ದಕ್ಕೆ ಮುನಿಗಳನ್ನು ಕೊಲೆ ಗೈಯಲಾಗಿದೆ ಎಂದು ಬೆಳಗಾವಿ ಎಸ್‌ಪಿ ಡಾ. ಸಜೀವ ಪಾಟೀಲ ತಿಳಿಸಿದ್ದಾರೆ.

ಮುನಿಗಳನ್ನು ಆಶ್ರಮದಲ್ಲಿಯೇ ವಿದ್ಯುತ್‌ ಶಾಕ್‌ ನೀಡಿ ಕೊಲೆ ಮಾಡಿದ ಆರೋಪಿಗಳು ಬಳಿಕ ದೇಹವನ್ನು ಕತ್ತರಿಸಿ ತುಂಡುಗಳನ್ನು ಬಟ್ಟೆಯಲ್ಲಿ ಕಟ್ಟಿ ತೆರೆದ ಕೊಳವೆ ಬಾವಿಯಲ್ಲಿ ಎಸೆದಿದ್ದರು ಎಂದು ವಿವರಿಸಿದ್ದಾರೆ.

Click to comment

Leave a Reply

Your email address will not be published. Required fields are marked *

BELTHANGADY

ಧರ್ಮಸ್ಥಳ: ಸರಣಿ ಅಪ*ಘಾತ, 5 ವಾಹನಗಳಿಗೆ ಹಾನಿ

Published

on

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಸರಣಿ ಅಪ*ಘಾತ ಸಂಭವಿಸಿದ್ದು ಹಲವು ವಾಹನಗಳು ಜಖಂಗೊಂಡಿವೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಸೋಮವಾರ 4ರ ಸುಮಾರಿಗೆ ನೇತ್ರಾವತಿಯಿಂದ ಧರ್ಮಸ್ಥಳಕ್ಕೆ ಬರುವ ರಸ್ತೆಯಲ್ಲಿ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿತು. ಅದರ ಹಿಂದೆ ಇದ್ದ ರಿಕ್ಷಾವೊಂದು ಅಪ*ಘಾತ ಸಂಭವಿಸಿದ ರಿಕ್ಷಾಕ್ಕೆ ತಾಗಿ ಜಖಂಗೊಂಡಿತು.

ವೇಗವಾಗಿ ಬರುತ್ತಿದ್ದ ಕಾರು ಮಗುಚಿ ಬಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆಯಿತು. ಅದರ ಹಿಂದಿನಿಂದ ಬರುತ್ತಿದ್ದ ಎರಡು ಕಾರುಗಳು ಒಂದರ ಹಿಂದೆ ಒಂದರಂತೆ ಡಿಕ್ಕಿ ಹೊಡೆದಿವೆ. ಹೀಗೆ ಒಟ್ಟು 2 ರಿಕ್ಷಾಗಳು ಹಾಗೂ 3 ಕಾರುಗಳು ಜಖಂಗೊಂಡಿವೆ. ರಿಕ್ಷಾ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಎಲ್ಲ ಕಾರುಗಳು ಜಖಂಗೊಂಡಿವೆ.

Continue Reading

BELTHANGADY

ಮುಂದಿನ ನಾಲ್ಕು ದಿನ ಕರಾವಳಿಯಲ್ಲಿ ಮಳೆಯ ಸಿಂಚನ..! ಹವಾಮಾನ ಇಲಾಖೆ ಮುನ್ಸೂಚನೆ

Published

on

ಮಂಗಳೂರು: ಕಳೆದ ಕೆಲವು ದಿನಗಳಿಂದ ಸುಡು ಬಿಸಿಲಿಗೆ ಬಸವಳಿದು ಜನರು ಕಂಗಾಲಾಗಿದ್ದು, ಕೆಲವೊಂದು ಕಡೆ ವರುಣನ ಕೃಪೆಗಾಗಿ ಜನರು ದೇವರಿಗೆ ಪ್ರಾರ್ಥನೆ ಸಲ್ಲಿಸಿ ಪೂಜಾ ಕಾರ್ಯಗಳನ್ನು ನೆರವೇರಿಸುತ್ತಿದ್ದಾರೆ.

rain

ಈ ನಡುವೆ ಬಿಸಿ ಶಾಖದಿಂದ ಕಂಗೆಟ್ಟಿದ್ದ ರಾಜಧಾನಿ ಬೆಂಗಳೂರಿನ ಜನರು ನಿನ್ನೆ ಕೆಲವೆಡೆ ಸುರಿದ ಮಳೆಯಿಂದಾಗಿ ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಇನ್ನು ಬೆಂಗಳೂರಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಅಲ್ಲಲ್ಲಿ ಅಲ್ಪಾ ಸ್ವಲ್ಪ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಇದೇ ವೇಳೆ ರಾಜ್ಯದ ​ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ.

ಮುಂದೆ ಓದಿ..; ಈ ಸರ್ವಾಧಿಕಾರಿಗೆ ಬೇಕಂತೆ ವರ್ಷಕ್ಕೆ 25 ಕನ್ಯೆಯರು..!! ಏನಿದು ಕಾಮಕಾಂಡ?

ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಹಗುರ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆಯ ಮೂಲಗಳು ತಿಳಿಸಿವೆ. ಅದರಲ್ಲೂ ಬೆಂಗಳೂರಿನಲ್ಲಿ ಗುಡುಗು, ಮಿಂಚಿನ ಜತೆಗೆ ಅಲ್ಲಲ್ಲಿ ಚದುರಿದ ಮಳೆ ಬೀಳುವ ಸಂಭವವಿದೆ. ಮೇ 6 ಮತ್ತು 7 ರಂದು ಸಾಧಾರಣ ಅಥವಾ ಅದಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಿಜಾಪುರ, ಬಾಗಲಕೋಟೆ, ಕೊಪ್ಪಳ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳವರೆಗೆ ಬಿಸಿಗಾಳಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Continue Reading

BELTHANGADY

ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು

Published

on

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು(59 ವ) ಅವರು ಹೃದಯಾಘಾತದಿಂದ ಮೇ.1ರಂದು ರಾತ್ರಿ ನಿಧನರಾಗಿದ್ದಾರೆ.

gangadhar

ಮುಂದೆ ಓದಿ..;ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ

ಕೋಟದಲ್ಲಿ ಮೇ.1ರಂದು ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಕುಕ್ಕಿತ್ತಾಯನ ವೇಷ ಹಾಕಿದ್ದರು. ಮೇಳದ ಬಳಿಕ ಚೌಕಿಯಲ್ಲಿ ಬಣ್ಣ ತೆಗೆಯುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.

gangadhar

ನಾರಾಯಣ ಮಯ್ಯು ಹಾಗೂ ಲಕ್ಷ್ಮೀ ದಂಪತಿ ಪುತ್ರನಾಗಿದ್ದು 1964ರಲ್ಲಿ ಪುತ್ತೂರಿನ ಸೇಡಿಯಾಪಿನಲ್ಲಿ ಜನಿಸಿದರು. ತನ್ನ 18 ನೇ ವಯಸ್ಸಿನಲ್ಲಿ ಯಕ್ಷಗಾನದಲ್ಲಿ ಬಣ್ಣ ಹಚ್ಚಲು ಆರಂಭಿಸಿದ ಇವರು ಸ್ತ್ರೀ ವೇಷ, ರಾಜ ವೇಷ, ಪುಂಡು ವೇಷಗಳಲ್ಲಿ ನಿಸ್ಸೀಮರಾಗಿದ್ದರು. ಇನ್ನು ಮಾಲಿನಿ, ಚಿತ್ರಾಂಗದೆ, ಮೋಹಿನಿ, ದಾಕ್ಷಾಯಿನಿ, ಪ್ರಮೀಳೆ, ಶ್ರೀ ದೇವಿ, ಸೀತೆ, ದೇವೆಂದ್ರ, ದುಶ್ಯಾಸನ ಮೊದಲಾದ ಪಾತ್ರಗಳ ಅಭಿನಯದಲ್ಲಿಯೂ ಸೈ ಎನಿಸಿಕೊಂಡಿದ್ದರು. ಮೃತರು  ಆರೋಗ್ಯ ಸಹಾಯಕಿಯಾಗಿರುವ ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.

Continue Reading

LATEST NEWS

Trending