LATEST NEWS
ಬಳ್ಳಾರಿ ನ್ಯಾಯಾಲಯದ ಆವರಣದಲ್ಲೇ ವಕೀಲನ ಬರ್ಬರ ಹತ್ಯೆ..!
ಬಳ್ಳಾರಿ ನ್ಯಾಯಾಲಯದ ಆವರಣದಲ್ಲೇ ವಕೀಲನ ಬರ್ಬರ ಹತ್ಯೆ..!
ಬಳ್ಳಾರಿ: ನ್ಯಾಯಾಲಯದ ಆವರಣದಲ್ಲೇ ವಕೀಲರೊಬ್ಬರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಇಂದು ನಡೆದಿದೆ. ವಕೀಲ ಡಾ. ತಾರಿಹಳ್ಳಿ ವೆಂಕಟೇಶ್ (48) ಮೃತ ವ್ಯಕ್ತಿಯಾಗಿದ್ದಾನೆ,
ತಾರಿಹಳ್ಳಿ ಮನೋಜ್ (22) ಕೊಲೆ ಮಾಡಿದ ವ್ಯಕ್ತಿಯಾಗಿದ್ದು ಪೊಲೀಸರು ಬಂಧಿಸಿದ್ದಾರೆ.
ಘಟನೆಗೆ ಕೌಟುಂಬಿಕ ಕಲಹ ಕಾರಣ ಎಂದು ಊಹಿಸಲಾಗಿದೆ. ಆದರೆ ಕೊಲೆಗೆ ಸ್ಪಷ್ಟ ಕಾರಣ ಏನು ಎಂಬುದು ಗೊತ್ತಾಗಿಲ್ಲ.
ಈ ಸಂಬಂಧ ಹೊಸಪೇಟೆ ನಗರದ ‘ಪಟ್ಟಣ ಪೊಲೀಸ್ ಠಾಣೆ’ಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಪ್ರತಿದಿನದಂತೆ ಇಂದು ವಕೀಲ ವೃತ್ತಿಗಾಗಿ ವೆಂಕಟೇಶ್ ನ್ಯಾಯಾಲಯಕ್ಕೆ ಬಂದಿದ್ದರು. ಈ ವೇಳೆ ಸಹೋದ್ಯೋಗಿಗಳ ಜತೆ ಮಾತನಾಡುತ್ತಾ ಚೇರ್ನಲ್ಲಿ ಕುಳಿತಿದ್ದರು.
ಈ ವೇಳೆ ಹಿಂದಿನಿಂದ ಬಂದ ಮನೋಜ್ ಮಚ್ಚಿನಿಂದ ತಲೆ ಭಾಗ ಸೇರಿ ಎಲ್ಲೆಡೆ ಮನಸೋ ಇಚ್ಛೆ ಕೊಚ್ಚಿದ್ದಾನೆ.
ಇದರಿಂದ ಡಾ. ತಾರಿಹಳ್ಳಿ ವೆಂಕಟೇಶ್ ಸಾವನ್ನಪ್ಪಿದ್ದಾರೆ. ಕೊಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದು ತನಿಖೆ ಮುಂದುವರಿಸಿದ್ದಾರೆ.
ಮೃತರಿಗೆ ಪತ್ನಿ, ಮೂರು ಜನ ಹೆಣ್ಣು, ಒಬ್ಬನು ಗಂಡು ಮಗನಾಗಿದ್ದಾನೆ. ಮೃತನ ಸಹೋದರ ತಾರಿಹಳ್ಳಿ ಆನಂದ್ ಮಾತನಾಡಿ, ಕೊಲೆಯ ಹಿಂದೆ ಯಾವುದೇ ದ್ವೇಷ ಇಲ್ಲ. ಯಾಕೆ ಕೊಲೆ ಮಾಡಿದ್ದಾರೆ ಎಂಬುದು ಗೊತ್ತಿಲ್ಲ.
ನಮ್ಮ ಅಣ್ಣನ ಕೊಲೆ ಮಾಡಿದ ವ್ಯಕ್ತಿ ಹಾಗೂ ಅವರ ಹಿಂದೆ ಯಾರು ಇದಾರೋ ಅವರಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದ್ದಾರೆ.
DAKSHINA KANNADA
ಹೊತ್ತಿ ಉರಿದು ಭಸ್ಮ*ವಾದ ಸ್ವೀಟ್ ಕಾರ್ನ್ ಸ್ಟಾಲ್..!! ಓಡಿ ಜೀವ ಉಳಿಸಿಕೊಂಡ ಸ್ಟಾಲ್ ಮಾಲೀಕ, ಗ್ರಾಹಕರು
ಉಳ್ಳಾಲ: ರಸ್ತೆಯ ಬದಿಯಲ್ಲಿ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಸ್ಟಾಲ್ ಒಂದರಲ್ಲಿ ಆಕಸ್ಮಿ*ಕ ಬೆಂಕಿಯಿಂದಾಗಿ ಸ್ಟಾಲ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಉಳ್ಳಾಲದ ದೇರಳಕಟ್ಟೆಯಲ್ಲಿ ನಡೆದಿದೆ.
ಗ್ಯಾಸ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದೆ. ರಸ್ತೆಯ ಬದಿಯಲ್ಲೇ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಅಂಗಡಿ ಮಾಲೀಕ ಕಾರ್ನ್ ತಯಾರಿಸುವಾಗ ಈ ಅವಘಡ ಸಂಭವಿಸಿದೆ. ತಕ್ಷಣ ಅಂಗಡಿ ಮಾಲೀಕ ಹಾಗೂ ಸ್ವೀಟ್ ಕಾರ್ನ ತಿನ್ನಲು ಬಂದಿದ್ದ ಗ್ರಾಹಕರು ಓಡಿ ತಪ್ಪಿಸಿಕೊಂಡಿದ್ದಾರೆ. ಸ್ಥಳೀಯರು ತಕ್ಷಣ ಮರಳು ಹಾಗೂ ನೀರನ್ನ ಹಾಕಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದ್ರೆ ಅಷ್ಟರಲ್ಲಾಗಲೇ ಸ್ಟಾಲ್ ಉರಿದು ಭಸ್ಮವಾಗಿ ಹೋಗಿದೆ.
Read More..; ಬೆಂಕಿ ಹಚ್ಚಿ ಯುವತಿಯ ಬರ್ಬ*ರ ಹ*ತ್ಯೆ..!! ಕತ್ತು ಕೊಯ್ದು ಸು*ಟ್ಟು ಹಾಕಿರುವ ಶಂಕೆ
LATEST NEWS
ಬೆಂಕಿ ಹಚ್ಚಿ ಯುವತಿಯ ಬರ್ಬ*ರ ಹ*ತ್ಯೆ..!! ಕತ್ತು ಕೊಯ್ದು ಸು*ಟ್ಟು ಹಾಕಿರುವ ಶಂಕೆ
ಬೆಳಗಾವಿ: 25 ರಿಂದ 30 ವರ್ಷದ ಯುವತಿಯೊಬ್ಬಳನ್ನು ಬರ್ಬರವಾಗಿ ಹ*ತ್ಯೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕದಲ್ಲಿ ನಡೆದಿದೆ. ಇಲ್ಲಿನ ಗ್ರಾಮೀಣ ಪೊಲೀಸ್ ಠಾಣ ವ್ಯಾಪ್ತಿಯ ಮಮದಾಪುರ ಗ್ರಾಮದಲ್ಲಿ ಈ ಕೃತ್ಯ ನಡೆದಿದ್ದು ಕೊ*ಲೆ ಮಾಡಿದವರಾರು? ಹ*ತ್ಯೆ ಆದವಳು ಯಾರು? ಎಂಬುದಾಗಲಿ ಗೊತ್ತಾಗಿಲ್ಲ. ನಿನ್ನೆ(ಎ.18) ಮಧ್ಯಾಹ್ನ 2 ಗಂಟೆ ಸುಮಾರಿಗೆ ಕಾಲುವೆ ಪಕ್ಕದಲ್ಲಿ ಹೊಗೆಯಾಡುತ್ತಿರುವುದನ್ನು ಜನರು ಗಮನಿಸಿದ್ದಾರೆ. ಬಿಸಿಲಿನ ತಾಪಕ್ಕೆ ಹುಲ್ಲು ಇರುವ ಜಾಗಕ್ಕೆ ಬೆಂಕಿ ಬಿದ್ದಿರಬಹುದು ಎಂದು ಕೆಲವರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದಾಗ ಯುವತಿಯ ಮೃತದೇಹ ಕಂಡು ಬಂದಿದೆ.
ಯುವತಿಯ ಕತ್ತು ಕೊಯ್ದು ಬಳಿಕ ಆಕೆಯ ಗುರುತು ಪತ್ತೆಯಾಗದಂತೆ ಸುಟ್ಟು ಹಾಕಿರಬೇಕು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ವಿಧಿ ವಿಜ್ಞಾನ ತಂಡ ಹಾಗೂ ಪೊಲೀಸರು ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ಯುವತಿಯನ್ನು ಬೇರೆಡೆ ಕೊಲೆ ಮಾಡಿ ಇಲ್ಲಿ ತಂದು ಸುಟ್ಟು ಹಾಕುವ ಪ್ರಯತ್ನ ನಡೆದಿರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಆದರೆ ಈ ಯುವತಿ ಯಾರು ಹಾಗೂ ಯಾರು ಕೊಲೆ ಮಾಡಿದ್ದಾರೆ ಅನ್ನೋದು ತನಿಖೆಯಿಂದ ಗೊತ್ತಾಗಬೇಕಾಗಿದೆ.
Read More..: ಉಡುಪಿಯಲ್ಲಿ ಭೀಕರ ಅಪಘಾ*ತ; ಲಾರಿಯಡಿ ಸಿಲುಕಿ ಬೈಕ್ ಸವಾರ ಸಾ*ವು
LATEST NEWS
ಉಡುಪಿಯಲ್ಲಿ ಭೀಕರ ಅಪಘಾ*ತ; ಲಾರಿಯಡಿ ಸಿಲುಕಿ ಬೈಕ್ ಸವಾರ ಸಾ*ವು
ಉಡುಪಿ : ಲಾರಿಯಡಿ ಸಿಲುಕಿ ಬೈಕ್ ಸವಾರ ಸಾ*ವನ್ನಪ್ಪಿರುವ ಘಟನೆ ಉಡುಪಿಯ ಹೇರೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಕೃಷ್ಣ ಗಾಣಿಗ ಮೃ*ತ ದುರ್ದೈವಿ. ಉಡುಪಿ ನಗರ ಸಭೆಯಲ್ಲಿ ಎಲೆಕ್ಟ್ರಿಷನ್ ಆಗಿ ಕೃಷ್ಣ ಕೆಲಸ ಮಾಡುತ್ತಿದ್ದರು. ಸಂತೆಕಟ್ಟೆ ಮಾರ್ಗವಾಗಿ ಬ್ರಹ್ಮಾವರದ ಕಡೆಗೆ ಸಾಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಲಾರಿ ಅಡಿಗೆ ಸಿಲುಕಿ ಸ್ಥಳದಲ್ಲೇ ಸಾ*ವನ್ನಪ್ಪಿದ್ದಾರೆ.
ಲಾರಿ ಕೃಷ್ಣ ಅವನ್ನು ಕೆಲ ದೂರ ಎಳೆದೊಯ್ದಿದೆ ಎಂದು ತಿಳಿದು ಬಂದಿದೆ. ಘಟನೆ ಬಳಿಕ ರಸ್ತೆಯಲ್ಲಿ ಕೆಲ ಕಾಲ ಸಂಚಾರ ದಟ್ಟನೆ ಉಂಟಾಗಿತ್ತು.
ಬ್ರಹ್ಮಾವರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.