Connect with us

LATEST NEWS

ಮೈದಾನ ತೊರೆದ ಬುಮ್ರಾ; ತಂಡದ ಹೊಣೆ ಯಾರ ಹೆಗಲಿಗೆ ?

Published

on

ಮಂಗಳೂರು/ಸಿಡ್ನಿ: ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿಯ ಐದನೇ ಮತ್ತು ಕೊನೆಯ ಟೆಸ್ಟ್ ನಲ್ಲಿ ಭಾರತಕ್ಕೆ ದೊಡ್ಡ ಆಘಾತ ಉಂಟಾಗಿದೆ. ನಾಯಕ ಜಸ್ ಪ್ರೀತ್ ಬುಮ್ರಾ ಮೈದಾನದಿಂದ ನಿರ್ಗಮಿಸಿದ್ದಾರೆ.

ದ್ವಿತೀಯ ದಿನದಾಟದ ಭೋಜನಾ ವಿರಾಮಕ್ಕೂ ಕೆಲ ಹೊತ್ತು ಮುಂಚಿತವಾಗಿ ಜಸ್ ಪ್ರೀತ್ ಬುಮ್ರಾ ಮೈದಾನದಿಂದ ಹೊರ ನಡೆದರು. ಇದಾದ ಬಳಿಕ ಅವರು ಟೀಮ್ ಇಂಡಿಯಾ ವೈದ್ಯಕೀಯ ಸಿಬ್ಬಂದಿಗಳೊಂದಿಗೆ ಆಸ್ಪತ್ರೆಗೆ ತೆರಳುತ್ತಿರುವುದು ಕಂಡುಬಂದಿದೆ.

ಇದನ್ನೂ ಓದಿ: 185 ರನ್ ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿದ ಭಾರತ; ಆಸೀಸ್ ಗೆ ಆರಂಭಿಕ ಆಘಾತ

ಮೇಲ್ನೋಟಕ್ಕೆ ಜಸ್​ಪ್ರೀತ್ ಬುಮ್ರಾ ನೋವಿನ ಸಮಸ್ಯೆಗೆ ಒಳಗಾಗಿದ್ದು, ಹೀಗಾಗಿ ಅರ್ಧದಲ್ಲೇ ಮೈದಾನ ತೊರೆದಿದ್ದಾರೆ. ಅಲ್ಲದೆ ಇದೀಗ ಸ್ಕ್ಯಾನಿಂಗ್ ಮಾಡಲು ಸಿಡ್ನಿಯಲ್ಲಿರುವ ಆಸ್ಪತ್ರೆಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

ತಂಡದ ಹೊಣೆ ಕೊಹ್ಲಿ ಹೆಗಲಿಗೆ
ಇತ್ತ ಜಸ್​ಪ್ರೀತ್ ಬುಮ್ರಾ ಅವರ ಅನುಪಸ್ಥಿತಿಯಲ್ಲಿ ಭಾರತ ತಂಡದ ನಾಯಕರಾಗಿ ವಿರಾಟ್ ಕೊಹ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಮೂಲಕ ವರ್ಷಗಳ ಬಳಿಕ ಕಿಂಗ್ ಕೊಹ್ಲಿ ಟೆಸ್ಟ್ ತಂಡದ ಕ್ಯಾಪ್ಟನ್ ಆಗಿ ಕಾಣಿಸಿಕೊಂಡಿದ್ದಾರೆ.

LATEST NEWS

ಶಿಕ್ಷಕಿಗೆ ನೋಟ್ಸ್ ತೋರಿಸುವಾಗ ಕುಸಿದುಬಿ*ದ್ದು ಮೂರನೇ ತರಗತಿ ವಿದ್ಯಾರ್ಥಿನಿ ಸಾ*ವು

Published

on

ಮಂಗಳೂರು/ಚಾಮರಾಜನಗರ : ಇತ್ತೀಚೆಗೆ ಹೃದಯಾ*ಘಾತ ಪ್ರಕರಣಗಳು ಹೆಚ್ಚುತ್ತಿವೆ. ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರೂ ಹೃದಯಾ*ಘಾತಕ್ಕೆ ಬ*ಲಿಯಾಗುತ್ತಿದ್ದಾರೆ. ಇದೀಗ ಮತ್ತೊಂದು ಪ್ರಕರಣ ನಡೆದಿದೆ.

ಶಿಕ್ಷಕಿಗೆ ನೋಟ್ಸ್ ತೋರಿಸುವಾಗ ಕುಸಿದುಬಿ*ದ್ದು ಮೂರನೇ ತರಗತಿ ವಿದ್ಯಾರ್ಥಿನಿ ಇಹಲೋಕ ತ್ಯಜಿಸಿರುವ ಘಟನೆ ಚಾಮರಾಜನಗರದ ಸೇಂಟ್ ಫ್ರಾನ್ಸಿಸ್ ಶಾಲೆಯಲ್ಲಿ ನಡೆದಿದೆ. ಚಾಮರಾಜನಗರ ತಾಲೂಕಿನ ಬದನಗುಪ್ಪೆ ಗ್ರಾಮದ ನಿವಾಸಿ ಲಿಂಗರಾಜು, ಶ್ರುತಿ ದಂಪತಿಯ ಏಕೈಕ ಪುತ್ರಿ ತೇಜಸ್ವಿನಿ ಮೃ*ತ ಬಾಲಕಿ.

ಇದನ್ನೂ ಓದಿ : ಇಬ್ಬರು ಮಕ್ಕಳನ್ನು ಕೊಂ*ದು ನೇ*ಣಿಗೆ ಶರಣಾದ ದಂಪತಿ

ತೇಜಸ್ವಿನಿ ಎಂದಿನಂತೆ ಶಾಲೆಗೆ ಹೋಗಿದ್ದು, ತರಗತಿಯಲ್ಲಿ ಶಿಕ್ಷಕಿಗೆ ನೋಟ್ಸ್ ತೋರಿಸಲು ನಿಂತಿದ್ದಳು. ಈ ವೇಳೆ ಕುಸಿದುಬಿದ್ದಿದ್ದಾಳೆ. ಅಲ್ಲೇ ಮೂತ್ರ ವಿಸರ್ಜನೆ ಮಾಡಿಕೊಂಡಿದ್ದಾಳೆ. ತಕ್ಷಣ ಆಕೆಯನ್ನು ಶಾಲಾ ಸಿಬ್ಬಂದಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಅಷ್ಟರಲ್ಲಾಗಲೇ ತೇಜಸ್ವಿನಿ ಕೊ*ನೆಯುಸಿರೆಳೆದಿದ್ದಳು ಎಂದು ತಿಳಿದುಬಂದಿದೆ. ಇದ್ದೊಬ್ಬ ಮಗಳನ್ನು ಕಳೆದುಕೊಂಡ ತಂದೆ – ತಾಯಿ ಶೋಕಸಾಗರದಲ್ಲಿ ಮುಳುಗಿದ್ದಾರೆ.

Continue Reading

DAKSHINA KANNADA

ಮಂಗಳೂರು : ಹಿರಿಯ ವಿದ್ಯಾರ್ಥಿಗಳ ಸಂಘದ ‘ದಶಮ ಸಂಭ್ರಮ’

Published

on

ಮಂಗಳೂರು : ಹಿರಿಯ ವಿದ್ಯಾರ್ಥಿಗಳ ಸಂಘದ ‘ದಶಮ ಸಂಭ್ರಮ’ ಕಾರ್ಯಕ್ರಮವು ಡಾ. ಪಿ. ದಯಾನಂದ ಪೈ -ಪಿ.ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿಯಲ್ಲಿ ಜನವರಿ 3 ರಂದು ನಡೆದಿದೆ.

ಹಿರಿಯ ವಿದ್ಯಾರ್ಥಿಗಳ ಸಂಘದ ದಶಮಾನೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳು ನಡೆದಿದ್ದು, ಲೋಗೋ ಅನಾವರಣ ಹಾಗೂ ಸ್ತಾತಕೋತ್ತರ ವಿದ್ಯಾರ್ಥಿಗಳಿಗೆ ನೆಟ್/ಕೆ.ಸೆಟ್ ಪರೀಕ್ಷೆಯ ಪೂರ್ವ ತಯಾರಿಯನ್ನು ಏರ್ಪಡಿಸಲಾಗಿತ್ತು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುಡಿಪು ಇಲ್ಲಿನ ಸಮಾಜ ಶಾಸ್ತ್ರ ವಿಭಾಗದ ಸಹ ಪ್ರಾದ್ಯಪಕ, ಮಂಗಳೂರು ವಿಶ್ವವಿದ್ಯಾನಿಲದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕರಾಗಿರುವ ಡಾ. ಶೇಷಪ್ಪ ಕೆ. ಲೋಗೋ ಅನವಾರಣಗೊಳಿಸುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶ್ರೀ ಗೋಕರ್ಣನಾಥೇಶ್ವರ ಕಾಲೇಜು ಗಾಂದಿನಗರ ಮಂಗಳೂರು ಇಲ್ಲಿನ ವಾಣಿಜ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಕರಾಗಿರುವ ಶ್ರೀ. ಯತೀನ್ ಸಂಪನ್ಮೂಲ ವ್ಯಕ್ತಿಯಾಗಿ ಹಾಜರಿದ್ದರು. ದಯಾನಂದ ಕಾಲೇಜಿನ ಪ್ರಾಂಶುಪಾಲರಾದ ಫ್ರೊ. ಜಯಕರ ಭಂಡಾರಿ ಎಂ. ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದರು.

 

ಕಾಲೇಜಿನ ಐಕ್ಯೂಎಸಿಯ ಸಂಯೋಜಕ ದೇವಿಪ್ರಸಾದ್, ಸ್ತಾತಕೋತ್ತರ ವಿಭಾಗದ ಸಂಯೋಜಕ ಡಾ. ಲೋಕೇಶನಾಥ್, ಹಿರಿಯ ವಿದ್ಯಾರ್ಥಿಗಳ ಸಂಘದ ಸಂಯೋಜಕರಾಗಿರುವ ನಾಗರಾಜ್ ಎಂ. , ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಧೀರಜ್ ಕುಮಾರ್ ಹಾಗೂ ಹಿರಿಯ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ತುಷಾರ್ ಕೆ. ವೇದಿಯಲ್ಲಿ ಉಪಸ್ಥಿತರಿದ್ದರು.

Continue Reading

LATEST NEWS

ಇಬ್ಬರು ಮಕ್ಕಳನ್ನು ಕೊಂ*ದು ನೇ*ಣಿಗೆ ಶರಣಾದ ದಂಪತಿ

Published

on

ಬೆಂಗಳೂರು : ಇಬ್ಬರು ಮಕ್ಕಳನ್ನು ಕೊಂ*ದು ದಂಪತಿ ಆ*ತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಸದಾಶಿವ ನಗರದ ಆರ್.ಎಂ.ವಿ ಎರಡನೇ ಹಂತದ ಟೆಂಪಲ್ ರಸ್ತೆಯಲ್ಲಿ ನಡೆದಿದೆ. ಪತಿ ಅನೂಪ್‌ (38), ರಾಖಿ(35), ಅನುಪ್ರಿಯಾ (5) ವರ್ಷ ಮತ್ತು ಪ್ರಿಯಾಂಶ್ (2) ಮೃ*ತಪಟ್ಟವರು.

ರಾತ್ರಿ(ಜ.5) ಇಬ್ಬರು ಮಕ್ಕಳನ್ನು ಹ*ತ್ಯೆ ಮಾಡಿದ ದಂಪತಿ ಬಳಿಕ ಮನೆಯಲ್ಲೇ ನೇ*ಣಿಗೆ ಶರಣಾಗಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಸದಾಶಿವ ನಗರ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

ಕಾರಣ ಏನು?

ಅನೂಪ್‌ ಉತ್ತರ ಪ್ರದೇಶ ಮೂಲದವರಾಗಿದ್ದು, ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್‌ ಕನ್ಸಲ್ಟೆಂಟ್‌ ಆಗಿ ಕೆಲಸ ಮಾಡುತ್ತಿದ್ದರು. ಮೊದ ಮಗು ಅನುಪ್ರಿಯಾಗೆ ಆರೋ*ಗ್ಯ ಸಮಸ್ಯೆ ಇತ್ತು. ಈ ವಿಚಾರಕ್ಕೆ ದಂಪತಿ ಬಹಳ ಬೇಸರದಲ್ಲಿದ್ದರು ಎನ್ನಲಾಗಿದೆ.

ಮನೆಗೆ ಮೂರು ಜನ ಕೆಲಸಗಾರರನ್ನು ನೇಮಿಸಲಾಗಿತ್ತು. ಇಬ್ಬರು ಅಡುಗೆಗೆ ನಿಯೋಜನೆಗೊಂಡಿದ್ದರೆ, ಒಬ್ಬರು ಮಗು ನೋಡಿಕೊಳ್ಳಲು ಇದ್ದರು. ಇಂದು ಬೆಳಗ್ಗೆ 11 ಗಂಟೆಗೆ ಪಾಂಡಿಚೇರಿಗೆ ಹೋಗಲಿದ್ದೇವೆ. ಬೇಗ ಕೆಲಸಕ್ಕೆ ಬನ್ನಿ ಎಂದು ಕೆಲಸದವರಿಗೆ ಅನೂಪ್ ಹೇಳಿದ್ದರಂತೆ. ಹೀಗಾಗಿ ಇಂದು(ಜ.6) ಬೆಳಗ್ಗೆ ಕೆಲಸದವರು ಮನೆಗೆ ಬಂದಿದ್ದಾರೆ. ಈ ವೇಳೆ ಘಟನೆ ಬೆಳಕಿಗೆ ಬಂದಿದೆ. ಭಾನುವಾರವೂ ಪ್ಯಾಕಿಂಗ್ ಮಾಡಲು ಕೆಲಸದವರನ್ನು ಕರೆಸಿಕೊಂಡಿದ್ದರಂತೆ.

ಇದನ್ನೂ ಓದಿ : ಬಾಯ್ ಫ್ರೆಂಡ್ ಗಾಗಿ ಹುಡುಗಿಯರಿಬ್ಬರ ಬೀದಿ ಜಗಳ

ಮೊದಲ ಮಗು ವಿಶೇಷ ಚೇತನವಾಗಿದ್ದ ಕಾರಣ ದಂಪತಿ ಬಹಳ ಕುಗ್ಗಿ ಹೋಗಿದ್ದರು. ನಿನ್ನೆ ರಾತ್ರಿ 10 ಗಂಟೆಯವರೆಗೂ ದಂಪತಿ ಖುಷಿಯಾಗಿಯೇ ಇದ್ದರು ಎಂದು ಕೆಲಸದವರು ತಿಳಿಸಿರುವ ಬಗ್ಗೆ ವರದಿಯಾಗಿದೆ.

Continue Reading

LATEST NEWS

Trending

Exit mobile version