Connect with us

    DAKSHINA KANNADA

    ಮಸ್ಕತ್ ನಲ್ಲಿ ತುಳುನಾಡನ್ನು ಮರುಸೃಷ್ಠಿಸಿದ ಬಂಟ್ಸ್ ಓಮಾನ್ ಸಾಂಸ್ಕೃತಿಕ ಸಂಘ

    Published

    on

    ಮಂಗಳೂರು/ಮಸ್ಕತ್ : ಬಂಟ್ಸ್ ಓಮಾನ್ ಸಾಂಸ್ಕೃತಿಕ ಸಂಘದ (BOSS)ನೆರಳಲ್ಲಿ “ಸಾಂಸ್ಕೃತಿಕ ಸಮ್ಮಿಲನ ” ಕೆಸರು ಗದ್ದೆ ಗೋಲ್ಡ್ ಫೀಲ್ಡ್ (KGF) –  ಗ್ರಾಮೀಣ ಕ್ರೀಡೋತ್ಸವ ಶುಕ್ರವಾರ(ಅ.25) ಮಸ್ಕತ್ ನ ಬರ್ಕ ಗುತ್ತಿನ ಅಗೋಳಿ ಮಂಜಣ್ಣ ಅಂಗಣದಲ್ಲಿ ಜರಗಿತು. ತುಳುನಾಡಿನ ಬಂಟರ ಸಂಸ್ಕೃತಿ, ನಂಬಿಕೆ,ಆಚರಣೆಗಳ, ನಡವಳಿಕೆಗಳ ನೆನಪಿನ ಮೆಲುಕು ಹಾಕಲು “ತುಳುನಾಡಿನ ಪ್ರತಿಕೃತಿ ” ಸೃಷ್ಟಿಸಲಾಗಿತ್ತು.

    ಮಸ್ಕತ್ ಹೊರವಲಯದಲ್ಲಿ ರುವ  ಉದ್ಯಮಿ ಅಶ್ವಿನಿ ದರಂಸಿ ಭಾಯ್ ಅವರ ಫಾರ್ಮ್ ಹೌಸ್ ನಲ್ಲಿ ದಿವಾಕರ ಶೆಟ್ಟಿ ಮಲ್ಲಾರ್ ಅವರ ಪರಿಕಲ್ಪನೆ ಯಲ್ಲಿ “ಬರ್ಕ ಗುತ್ತು ಮನೆ “, ಸಾವಿರ ಮಂದಿ ಕುಳಿತು ಕೊಳ್ಳ ಬಹುದಾದ “ಬಂಟರ ಭವನ”  ನಿರ್ಮಿಸಲಾಗಿತ್ತು.

    ಗುತ್ತಿನ ಪಡಸಾಲೆ, ರಾಟೆ ಅಳವಡಿಸಿದ ಬಾವಿ, ಸಿರಿ ತುಪ್ಪೆ – ಭತ್ತದ ಕಣಜ, ಪಡಿ ಮಂಚ, ಭತ್ತ ಕುಟ್ಟುವ ಬಾರ ಕಲದಲ್ಲಿರಿಸಿದ ಒನಕೆಗಳು, ಮಡಲು ತಟ್ಟಿಯ ಹಳ್ಳಿಯ ಬಚ್ಚಲು ಮನೆ,ಉತ್ತು ಹದಗೊಳಿಸಿದ ಸುಮಾರು 60 ಮೀಟರ್ ಉದ್ದದ ಕೆಸರು ನೀರು ತುಂಬಿದ ವಿಶಾಲವಾದ ಕಂಬಳ ಗದ್ದೆ, ಸೆಗಣಿ ಸಾರಿಸಿದ ವಿಸ್ತರವಾದ ಅಂಗಳ, ತೆಂಗಿನ ಸೋಗೆ ಹೆಣೆದು ಮಾಡಿದ ವಿಶಾಲವಾದ ಚಪ್ಪರ(ಶಾಮಿಯಾನದ ಬಳಕೆ ಮಾಡಲಿಲ್ಲ ), ಏಕ ಕಾಲದಲ್ಲಿ 200 ಮಂದಿ ಕುಳಿತು ಊಟ ಮಾಡುವ ವ್ಯವಸ್ಥೆಯ ಭೋಜನ ಶಾಲೆ, ಖರ್ಜೂರದ ಮರಕ್ಕೆ ಎಳನೀರು ಗೊಂಚಲುಗಳನ್ನು  ಕಸಿಕಟ್ಟಿ ಅಳವಡಿಸಿದ ಶೇಂದಿ ಮೂರ್ತೆಯ ಮಡಿಕೆ, ಸಂತೆಯ ಗದ್ದೆಯಲ್ಲಿ ಎಲೆ ಮಡಲು ಕಟ್ಟಿ ನಿರ್ಮಿಸಿದ ಗೂಡಂಗಡಿಗಳನ್ನು ಸಮ್ಮಿಲನ ಕ್ಕಾಗಿ ಅಣಿಗೊಳಿಸ ಲಾಗಿತ್ತು.

    ಕೊಡೆತ್ತೂರಿನಿಂದ ತರಿಸಿದ್ದ ಭತ್ತದ ತೆನೆಗಳನ್ನು ಗುತ್ತಿನ ಯಜಮಾನ ಶಶಿಧರ ಶೆಟ್ಟಿ ಮಲ್ಲಾರ್ ಅವರು ತುಳಸಿ ಕಟ್ಟೆಯ ಬಳಿಯಿಂದ ಹೊತ್ತುಕೊಂಡು ಪರಿವಾರದೊಂದಿಗೆ ಗುತ್ತಿನ ಚಾವಡಿ ಪ್ರವೇಶಿಸಿದರು. ದೀಪ ಬೆಳಗಿಸಿ, ಪ್ರಾರ್ಥನೆ ಮಾಡಿ  ಕೊರಲ್ ಪರ್ಬ (ಕದಿರು ಹಬ್ಬ) ಆಚರಿಸಲಾಯಿತು.

    ಬೆಳಗ್ಗಿನ ಉಪಹಾರಕ್ಕೆ ತುಳುನಾಡಿನ ಸಾಂಪ್ರದಾಯಿಕ  ಪದೆಂಗಿ , ಸಜ್ಜಿಗೆ ಬಜಿಲ್, ಮೂಡೆ ಚಟ್ನಿ, ಶೀರ. ಮತ್ತು ಗೂಡoಗಡಿಗಳಲ್ಲಿ ನಿರಂತರವಾಗಿ ಎಳನೀರು, ಬಚ್ಚಗಾoಯಿ, ಕಬ್ಬಿನ ರಸ, ಮಜ್ಜಿಗೆ, ಪಾನಕ, ಚರುoಬುರಿ, ಬಾಳೆ ಹಣ್ಣು,ಐಸ್ ಕ್ಯಾಂಡಿ, ಸಬಿ ತಿಂಡಿ ಗಳ ವಿತರಣೆ ಮಾಡಲಾಗಿತ್ತು. ಸಂಜೆ ಮೊಟ್ಟೆ ಆಮ್ಲೆಟ್, ಪೋಡಿ, ಗೋಳಿಬಜೆಯ ವ್ಯವಸ್ಥೆ ಇತ್ತು. ಬಂಟ ಪರಿವಾರದವರೇ ಸಿದ್ದ ಪಡಿಸಿದ ಶುಚಿ ರುಚಿಯಾದ ತುಳುನಾಡಿನ ಕೋಳಿ ತಮ್ಮನ ದ ಊಟವನ್ನು  ಬಾಳೆಎಲೆಯಲ್ಲಿ ಬಡಿಸಲಾಯಿತು.

    ಮಸ್ಕತ್ ನ ಬರ್ಕಗುತ್ತು ಕಂಬಳ :

    ಶಿಬಿರಗಳಲ್ಲಿ ಕೋಣ ಗಳನ್ನು ಸಜ್ಜು ಗೊಳಿಸಿ ಕೊಂಬು, ಡೋಲು ವಾದ್ಯ, ಕೀಲು ಕುದುರೆ, ಗೊಂಬೆ ಕುಣಿತ ದೊಂದಿಗೆ ಬರ್ಕ ಗುತ್ತಿನ ಅಂಗಳಕ್ಕೆ ಉತ್ಸಾಹ ದಿಂದ ಆಗಮಿಸುವ ನೊಗ ಕಟ್ಟಿದ ಓಟದ ಕೋಣಗಳ ಅಬ್ಬರ,ಯಜಮಾನ ಪರಿವಾರ ವನ್ನು ಬರ್ಕ ಗುತ್ತಿನ ಏಳು ಪ್ರಮುಖರು ಜೋಡು ಬೊಂಡ ಕೊಟ್ಟು ಸ್ವಾಗತ ನೀಡಿ ಬರಮಾಡಿ ಕೊಳ್ಳುವ, ಕೋಣಗಳು ಸಾಲಾಗಿ ಗದ್ದೆಗೆ ಇಳಿಯುವ, ಗಂತಿನಲ್ಲಿ ಪುoಡಾಟ ಮಾಡುವ, ಕೋಣಗಳನ್ನು ಓಡಿಸುವ ದೃಶ್ಯ ಗಳು ರಂಜನೀಯವಾಗಿತ್ತು.

    ಕೋಣಗಳ ಪ್ರತಿಕೃತಿಗಳನ್ನು ರಚಿಸಿ, ಅದರೊಳಗೆ ಸೇರಿ ನಿಜ ಕೋಣಗಳ ಹಾವಭಾವಗಳನ್ನು ಪ್ರದರ್ಶನ ಮಾಡುವಾಗ ಸಾಂಪ್ರದಾಯಿಕ ಕಂಬಳದ ಉಡುಗೆ ಉಟ್ಟು, ಮುಂಡಾಸು ಕಟ್ಟಿ, ಬೆತ್ತ ಹಿಡಿದು ಅಣಕು ಕಂಬಳ ದೃಶ್ಯ ನಿರ್ಮಿಸಿ ಸಂಭ್ರಮಿಸುವ ಬಳಗದ ಸದಸ್ಯರ ಉತ್ಸಾಹವು ಮಸ್ಕತ್ ನಲ್ಲಿ ತುಳುನಾಡಿನ ಕಂಬಳದ ಮರು ಸೃಷ್ಟಿ ಮಾಡುವಲ್ಲಿ ಯಶಸ್ವಿಯಾಯಿತು.

    1. ಕಾಪು ಮಲ್ಲಾರ್ ಸಹೋದರರ ಮಾಲಕತ್ವದ, ಕಿನ್ನಿಗೋಳಿ ಮುಕ್ಕಮನೆಯ ಚೆನ್ನೆ ಮತ್ತು ಪಾಂಡು ಕೋಣಗಳು.
    2. ಗೋಬ್ರ ಗುತ್ತು ಸುರೇಂದ್ರ ಶೆಟ್ಟಿ ಮತ್ತು ರುವಿ ಗುತ್ತು ಜಯರಾಜ್ ಶೆಟ್ಟಿ ಯವರ ಚಾಂಪಿಯನ್ ದೋಣಿ ಮತ್ತು ರಾಕೆಟ್ ಬೊಲ್ಲೇ ಕೋಣಗಳು.
    3. ಸೋಹರ್ ಗುತ್ತಿನವರ ಬರ್ಗಿ ಮತ್ತು ಲಕ್ಕಿ ಕೋಣಗಳು.
    4. ಮಸ್ಕತ್ ಗುತ್ತು ಕಿಶನ್ ಶೆಟ್ಟಿ ಕಿನ್ನಿಗೋಳಿಯವರ ಕಾಲೆ ಮತ್ತು ದೂಜೆ ಕೋಣಗಳು
    5. ಅಭಿಮನ್ಯು ಗೆಳೆಯರ ಬಳಗ ಮಸ್ಕತ್ ರವರ ಕರಿಯೆ ಮತ್ತು ತಾಟೆ ಕೋಣಗಳು

    ಒಟ್ಟು ಐದು ಜೊತೆ ಕೋಣಗಳು ಭಾಗವಹಿಸಿದ್ದವು. ಗದ್ದೆ ಹುಣಿಯಲ್ಲಿ ಐಸಿರದ ಜೋಕುಲು (ಚಿಯರ್ ಗರ್ಲ್ಸ್ ) ಹುಲ್ಲು ಸೂಡಿ ಹಿಡಿದು ನಲಿದು ಹುರಿದುಂಬಿಸಿದರು.

    ಕೆಸರು ಗದ್ದೆಯಲ್ಲಿ ಗ್ರಾಮೀಣ ಕ್ರೀಡೋತ್ಸವ :

    ಬಂಗಾರದ ನರ್ತೆ ಹೆಕ್ಕುವ ನಿಧಿ ಶೋಧ, ಹಗ್ಗ ಜಗ್ಗಾಟ, ಕೈಚೆಂಡು, ಮೊಸರು ಕುಡಿಕೆ ಗೋಪುರ ರಚನೆ, ಬೊಂಡ ಗುಂಡು ಎಸೆತ, ಕೆಸರು ಗದ್ದೆ ಓಟ, ಮಕ್ಕಳಾಟದಲ್ಲಿ ನೂರಾರು ಮಕ್ಕಳು, ಮಹಿಳೆಯರು, ಯುವಕರು, ಹಿರಿಯರು ಪಾಲ್ಗೊಂಡು ಸಂಭ್ರಮಿಸಿದರು. ಬಾಳ್ ಕಟ್ಟದೆ, ಜೂಜು ಇಲ್ಲದ ಕೋಳಿ ಅಂಕದಲ್ಲಿ ಹತ್ತಾರು ಕಟ್ಟದ ಹುಂಜಗಳ ಕೋಳಿ ಕಾಳಗ ನಡೆಸಲಾಯಿತು.

    ಕೆಸರು ಗದ್ದೆಯಲ್ಲಿ ಜಾನಪದ ಕುಣಿತ, ಗುತ್ತಿನ ಅಂಗಳದಲ್ಲಿ ಕಂಗಿಲು ಕುಣಿತ, ನೃತ್ಯ ಭಜನೆ ನಡೆಯಿತು. ಗೂಡು ದೀಪ ಸ್ಪರ್ಧೆ ಯಲ್ಲಿ ಸಾಂಪ್ರದಾಯಿಕ ಹಾಗೂ ಆಧುನಿಕ ಗೂಡುದೀಪ ಗಳು ಇದ್ದವು. ರಂಗೋಲಿ, ಮಡಲು ಹೆಣೆಯುವ, ಭತ್ತ ಕುಟ್ಟುವ ಸ್ಪರ್ಧೆಗಳು ನಡೆದವು.

    ಇದನ್ನೂ ಓದಿ : ಪುಡಿ ರಾಜಕಾರಣಿ ಎಂದಿದ್ದ ಹರಿಪ್ರಸಾದ್ ಗೆ ತಿರುಗೇಟು ನೀಡಿದ ಪೇಜಾವರ ಶ್ರೀ

    ಕದ್ರಿ ನವನೀತ ಶೆಟ್ಟಿ ಅವರು ವಿಶೇಷ ಅತಿಥಿಯಾಗಿ ಆಗಮಿಸಿ, ನಿರಂತರ 16 ಗಂಟೆಗಳ ಕಾಲ ಕಾರ್ಯಕ್ರಮ ನಿರ್ವಹಣೆ ಮಾಡಿದರು. ಸರೋಜ ಶಶಿಧರ ಶೆಟ್ಟಿ ಮಲ್ಲಾರ್, ಸುಧೀರಾ ದಿವಾಕರ್ ಶೆಟ್ಟಿ ಮಲ್ಲಾರ್, ಶೈನಾ ಗಣೇಶ್ ಶೆಟ್ಟಿ, ವಾಣಿಶ್ರೀ ನಾಗೇಶ್ ಶೆಟ್ಟಿ,ಶ್ರೇಯ ಮನೋಜ್ ಜಯರಾಮ್ ಶೆಟ್ಟಿ, ಅನುಷಾ ಶಿಶಿರ್ ರೈ, ಸುರಕ್ಷಾ ಹರ್ಷಿತ್ ರೈ ದಂಪತಿ ತಂಡವು ಸಾವಿರಾರು ಬಂಟರನ್ನು ಒಂದೇ ಸೂರಿನಡಿಯಲ್ಲಿ ಸೇರಿಸಿ ಈ ಚಾರಿತ್ರಿಕ ಸಮ್ಮೇಳನ ನಡೆಯಿತು.

    DAKSHINA KANNADA

    ಅತ್ಯಂತ ಉದ್ದದ ಮಾನವ ಸರಪಳಿ: ದ.ಕ.ಜಿಲ್ಲೆಗೆ ದ್ವಿತೀಯ ಸ್ಥಾನ

    Published

    on

    ಮಂಗಳೂರು: ಅಂತಾರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆಯ ಅಂಗವಾಗಿ ಸೆ.15ರಂದು ಬೀದರ್‌ನಿಂದ ಚಾಮರಾಜ ನಗರದವರೆಗೆ ರಾಜ್ಯ ಸರ್ಕಾರ ಹಮ್ಮಿಕೊಂಡಿದ್ದ ಮಾನವ ಸರಪಳಿ ನಿರ್ಮಾಣ ಹಾಗೂ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಜಿಲ್ಲೆಗಳಿಗೆ ಒಟ್ಟು ಐದು ವಿಭಾಗಗಳಲ್ಲಿ ತಲಾ 3 ಪ್ರಶಸ್ತಿಗಳನ್ನು ನೀಡಲು ನಿರ್ಧರಿಸಲಾಗಿತ್ತು. ಈ ವಿಭಾಗಗಳ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯು ಅತ್ಯಂತ ಉದ್ದದ ಮಾನವ ಸರಪಳಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದೆ.

    ನ.26ರಂದು ಬೆಳಗ್ಗೆ 11ಕ್ಕೆ ಬೆಂಗಳೂರಿನ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಲಿರುವ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಅವರಿಂದ ದ.ಕ.ಜಿಲ್ಲಾಧಿಕಾರಿ ಮುಲೈ ಮುಗಿಲನ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

    Continue Reading

    BIG BOSS

    ಉಪಚುನಾವಣೆಯಲ್ಲಿ ಗೆಲುವು; ಪಟಾಕಿ ಸಿಡಿಸಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ

    Published

    on

    ಮಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು, ಮಲ್ಲಿಕಟ್ಟೆಯಲ್ಲಿರುವ ಕಚೇರಿಯೆದುರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

    ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಜಮೀರ್ ಅಹಮದ್ ಖಾನ್ ಪರ ಘೋಷಣೆ ಕೂ

    ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಪೂಜಾರಿ ಮಾತನಾಡಿ, ‘ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶವು ರಾಜ್ಯ ಸರ್ಕಾರದ ಜನಪರ ಕಾರ್ಯಕ್ರಮಗಳಿಗೆ ಹಿಡಿದ ಕನ್ನಡಿಯಾಗಿದೆ. ಕಾಂಗ್ರೆಸ್ ಕಾರ್ಯಕರ್ತರಿಗೆ ಗೆಲುವಿನ ನಿರೀಕ್ಷೆ ಇತ್ತು. ಆದರೆ, ಚುನಾವಣೋತ್ತರ ಸಮೀಕ್ಷೆಗಳು ಹೇಳಿದ್ದ ಫಲಿತಾಂಶ ತಲೆಕೆಳಗಾಗಿದೆ’ ಎಂದರು.

    ‘ಇಬ್ಬರು ಮಾಜಿ ಮುಖ್ಯಮಂತ್ರಿಗಳ ಪುತ್ರರು ಚುನಾವಣೆಯಲ್ಲಿ ಸೋತಿದ್ದಾರೆ‌. ಇದು ರಾಜ್ಯದ ಜನರು ಕಾಂಗ್ರೆಸ್ ಮೇಲೆ ಇಟ್ಟಿರುವ ವಿಶ್ವಾಸ ಮತ್ತು ಬಿಜೆಪಿ ಮೈತ್ರಿಕೂಟದ ಬಗೆಗಿರುವ ಅಪನಂಬಿಕೆಗೆ ಸಾಕ್ಷಿಯಾಗಿದೆ. ಇನ್ನಾದರೂ ಬಿಜೆಪಿ ಜಾತಿ, ಧರ್ಮಗಳ ನಡುವೆ ದ್ವೇಷ ಬಿತ್ತುವ ಕೆಲಸ ಬಿಟ್ಟು, ಅಭಿವೃದ್ಧಿ ಬಗ್ಗೆ ಯೋಚಿಸಲಿ’ ಎಂದು ಹೇಳಿದರು

    Continue Reading

    DAKSHINA KANNADA

    ಪಿಲಿಕುಳ ಕಂಬಳಕ್ಕೆ ಪ್ರಾಣಿಪ್ರಿಯರ ವಿರೋಧ !

    Published

    on

    ಮಂಗಳೂರು: ಕಂಬಳ ಕರಾವಳಿ ಕರ್ನಾಟಕದ ಜನಪದ ಕ್ರೀಡೆ. ಈ ಹಿಂದೆ ನಿಷೇಧಕ್ಕೆ ಒಳಪಟ್ಟರೂ ನಂತರ ಕಂಬಳ ನಡೆಸುವುದಕ್ಕೆ ಅನುಮತಿ ಸಿಕ್ಕಿತ್ತು. ಆದರೆ ಈಗ ಸರ್ಕಾರಿ ಪ್ರಾಯೋಜಿತ ಮೊದಲ ಕಂಬಳಕ್ಕೆ ಪ್ರಾಣಿ ಪ್ರಿಯರ ವಿರೋಧ ವ್ಯಕ್ತವಾಗಿದೆ. ಇದರ ನಡುವೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

    ಕಳೆದ ಹತ್ತು ವರ್ಷಗಳಿಂದ ನಿಂತು ಹೋಗಿದ್ದ ಪಿಲಿಕುಳದ ಸರ್ಕಾರಿ ಕಂಬಳ ಈ ಬಾರಿ ಮತ್ತೆ ಆಯೋಜಿಸಲು ಜಿಲ್ಲಾಡಳಿತ ಮುಂದಾಗಿದೆ. ಹೀಗಾಗಿ ಪಿಲಿಕುಳದ ಗುತ್ತಿನ ಮನೆಯ ಮುಂದೆ ಕಂಬಳ ಕರೆ ನಿರ್ಮಾಣ ಮಾಡಿ ಕಂಬಳದ ದಿನಾಂಕ ಕೂಡಾ ಘೋಷಣೆ ಮಾಡಿತ್ತು. ನವೆಂಬರ್ 9 ರಂದು ನಿಗದಿಯಾಗಿದ್ದ ಈ ಕಂಬಳ, ಪಂಚಾಯತ್ ಉಪಚುನಾವಣೆಯ ನೀತಿ ಸಂಹಿತೆ ಕಾರಣದಿಂದ ಮುಂದೂಡಲಾಗಿತ್ತು.

    ಇದನ್ನೂ ಓದಿ: 30 ವರ್ಷಕ್ಕೆ ಮದುವೆಯಾಗುವ ಯೋಚನೆ ಮಾಡಿದ್ರೆ ಇದನ್ನು ಓದಲೇ ಬೇಕು !!
    ಈ ನಡುವೆ ಪೆಟಾದವರು ಬೆಂಗಳೂರು ಕಂಬಳ ಹಾಗೂ ಪಿಲಿಕುಳ ಕಂಬಳದ ಆಯೋಜನೆಯ ಬಗ್ಗೆ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಬೆಂಗಳೂರು ಕಂಬಳ ಇನ್ನೂ ದಿನ ನಿಗದಿಯಾಗದೇ ಇದ್ದರೂ ಕಂಬಳ ನಡೆಸಲು ಅನುಮತಿ ನೀಡಬಾರದೆಂದು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಪೆಟಾ ಸಲ್ಲಿಸಿದ ಈ ಅರ್ಜಿಗೆ ಬೆಂಗಳೂರು ಕಂಬಳ ಆಯೋಜಿಸಿದ್ದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಕೀಲರ ಮೂಲಕ ವಾದ ಮಂಡಿಸಿದ್ದಾರೆ. ಆದ್ರೇ ಪಿಲಿಕುಳದ ಸರ್ಕಾರಿ ಕಂಬಳದ ವಿಚಾರವಾಗಿ ಯಾವುದೇ ಅರ್ಜಿ ಹೈಕೋರ್ಟ್‌ಗೆ ಸಲ್ಲಿಕೆಯಾಗಿಲ್ಲ.
    ಹೀಗಾಗಿ ಪಿಲಿಕುಳ ಕಂಬಳ ನಡೆಯುತ್ತದೆಯೋ ಇಲ್ಲವೋ ಎಂಬ ಅನುಮಾನ ಕಾಡಿದೆ. ಮಂಗಳೂರು ನಗರದಲ್ಲಿ ಕಂಬಳ ನಡೆಯದೇ ಇದ್ದ ಸಂದರ್ಭದಲ್ಲಿ ಪಿಲಿಕುಳದಲ್ಲಿ ಸರ್ಕಾರದ ವತಿಯಿಂದ ಕಂಬಳ ಆರಂಭಿಸಲಾಗಿತ್ತು. ಕಾರಣಾಂತರಗಳಿಂದ ನಿಂತು ಹೋಗಿದ್ದ ಕಂಬಳ ಮತ್ತೆ ಆರಂಭವಾದ ಕಾರಣ ಕಂಬಳ ಪ್ರೇಮಿಗಳು ಸಂತಸಗೊಂಡಿದ್ದರು. ಆದ್ರೆ ಇದೀಗ ಪೆಟಾ ಪಿಲಿಕುಳ ಕಂಬಳಕ್ಕೆ ಅಪಸ್ವರ ಎತ್ತಿದ್ದು, ಇಲ್ಲಿ ನಡೆಯುವ ಗದ್ದಲದಿಂದ ಪಿಲಿಕುಳದ ಪ್ರಾಣಿ ಸಂಗ್ರಹಾಲಯದಲ್ಲಿ ಇರುವ ಪ್ರಾಣಿಗಳಿಗೆ ತೊಂದರೆ ಆಗಲಿದೆ ಎಂಬ ವಾದವನ್ನು ನ್ಯಾಯಾಲಯದ ಮುಂದೆ ಇಟ್ಟಿದೆ.

     

    Continue Reading

    LATEST NEWS

    Trending