LATEST NEWS
ಪ್ರಯಾಣಿಕರನ್ನು ಇಳಿಸಲು ರಸ್ತೆ ಮಧ್ಯೆ ನಿಲ್ಲಿಸಿದ್ದ ಎಕ್ಸ್‌ಪ್ರೆಸ್ ಬಸ್ ಅಡಿಗೆ ಬಿದ್ದ ಸವಾರ
Published
3 years agoon
By
Adminಮಂಗಳೂರು: ಖಾಸಗಿ ಬಸ್ಸೊಂದು ಪ್ರಯಾಣಿಕರನ್ನು ಹತ್ತಿಸಲು ರಸ್ತೆ ಮಧ್ಯ ನಿಲ್ಲಿಸಿದ ಪರಿಣಾಮ ಹಿಂಬದಿಯಿಂದ ವೇಗವಾಗಿ ಬಂದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಘಟನೆ ನಗರ ಎ.ಜೆ ಆಸ್ಪತ್ರೆಯ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಉಡುಪಿ ಕಡೆಯಿಂದ ಮಂಗಳೂರಿಗೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬರುತ್ತಿದ್ದ ಖಾಸಗಿ ಬಸ್ಸೊಂದು ಕುಂಟಿಕಾನದ ಎ.ಜೆ ಆಸ್ಪತ್ರೆ ಬಳಿ ಪ್ರಯಾಣಿಕರನ್ನು ಹತ್ತಿಸಲು ನಿಲುಗಡೆ ಮಾಡಿದ ಸಮಯ ಹಿಂಬದಿಯಿಂದ ಬಂದ ಆ್ಯಕ್ಟೀವಾ ಬಸ್ಸಿಗೆ ಡಿಕ್ಕಿ ಹೊಡೆದು ನೇರವಾಗಿ ಬಸ್ಸಿನ ಅಡಿಗೆ ನುಗ್ಗಿದ ಘಟನೆ ಇಂದು ನಡೆದಿದೆ.
ದ್ವಿಚಕ್ರ ವಾಹನ ಡಿಕ್ಕಿ ಆಗುವ ಸಂದರ್ಭ ಸವಾರ ಹೊರಗಡೆ ಬಿದ್ದ ಪರಿಣಾಮ ಪವಾಡ ಸದೃಶರಾಗಿ ಪಾರಾಗಿದ್ದಾರೆ.
ಡಿಕ್ಕಿ ರಭಸಕ್ಕೆ ಈತನ ಕಣ್ಣಿನ ಭಾಗಕ್ಕೆ ಗಾಯವಾಗಿದ್ದು ಈತ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸ್ಥಳಕ್ಕೆ ಕದ್ರಿ ಸಂಚಾರಿ ವಿಭಾಗದ ಪೋಲಿಸರು ಭೇಟಿ ನೀಡಿದ್ದಾರೆ.
LATEST NEWS
ಕಾಸರಗೋಡು: ಮನೆಗೆ ನುಗ್ಗಿ ಚಿನ್ನಾಭರಣ, ನಗದು ಕಳವು ಪ್ರಕರಣ: ಆರೋಪಿ ಅರೆಸ್ಟ್
Published
23 minutes agoon
29/11/2024By
NEWS DESK2ಕಾಸರಗೋಡು: ಮನೆಗೆ ನುಗ್ಗಿ ಎಂಟು ಪವನ್ ಚಿನ್ನಾಭರಣ ಹಾಗೂ 60 ಸಾವಿರ ರೂ. ನಗದು ಕಳವುಗೈದ ಘಟನೆಗೆ ಸಂಬಂಧಪಟ್ಟಂತೆ ಆರೋಪಿಯನ್ನು ವಿದ್ಯಾನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಮಧೂರು ಅರಂತೋಡಿನ ರೋಬರ್ಟ್ ರೋಡ್ರಿಗಸ್ (53) ಬಂಧಿತ ಆರೋಪಿ. ಮನೆಯವರು ಕೆಲಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಮನೆಯ ಹೊರಗಡೆ ಇರಿಸಿದ್ದ ಕೀಲಿ ಕೈ ಯನ್ನು ಬಳಸಿ ಬಾಗಿಲು ತೆರೆದು ಒಳನುಗ್ಗಿ ಈ ಕೃತ್ಯ ನಡೆಸಿದ್ದಾನೆ.
ಅರಂತೋಡಿನ ಫೆಲಿಕ್ಸ್ ಡಿಸೋಜ ರವರ ಮನೆಯಿಂದ ಕಳವು ಗೈಯಲಾಗಿತ್ತು. ತಿಂಗಳುಗಳ ಹಿಂದೆ ಕಳವು ನಡೆದಿತ್ತು. ಆದರೆ ದಿನಗಳ ಹಿಂದೆಯಷ್ಟೇ ಕೃತ್ಯ ನಡೆದಿರುವುದು ಮನೆಯವರ ಗಮನಕ್ಕೆ ಬಂದಿತ್ತು. ಕಪಾಟನ್ನು ತೆರೆದು ನೋಡಿದಾಗ ಚಿನ್ನಾಭರಣ ಹಾಗೂ ನಗದು ಕಳವು ಮಾಡಿರುವುದು ಕಂಡು ಬಂದಿದೆ.
ಸಂಶಯದ ಮೇರೆಗೆ ರೋಬರ್ಟ್ ನನ್ನು ಕಸ್ಟಡಿಗೆ ಪಡೆದು ವಿಚಾರಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ. ಕೆಲದಿನಗಳಿಂದ ರೋಬರ್ಟ್ ನ ಚಲನ ವಲನ ಸಂಶಯಕ್ಕೆ ಕಾರಣವಾಗಿತ್ತು. ಈ ಹಿನ್ನಲೆಯಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳವಿನ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ.
LATEST NEWS
ಬಜಪೆ: ಹೆಜ್ಜೇನು ಕಡಿತದಿಂದ ಗಂಭೀರ ಗಾಯಗೊಂಡಿದ್ದ ದಿನಪತ್ರಿಕೆ ವಿತರಕ ಮೃ*ತ್ಯು
Published
38 minutes agoon
29/11/2024By
NEWS DESK2ಬಜಪೆ: ಹೆಜ್ಜೇನು ಕಡಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ದಿನಪತ್ರಿಕೆ ವಿತರಕರೊಬ್ಬರು ಮಂಗಳೂರಿನ ಆಸ್ಪತ್ರೆಯಲ್ಲಿ ನ. 28ರಂದು ಕೊ*ನೆಯುಸಿರೆಳೆದಿದ್ದಾರೆ.
ಪೇಜಾವರ ಪಡ್ಡೋಡಿಯ ನಿವಾಸಿ, ದಿನಪತ್ರಿಕೆ ವಿತರಕ ಪುಷ್ಪಾರಾಜ ಶೆಟ್ಟಿ (45) ಮೃ*ತ ದುರ್ದೈವಿ.
ಪುಷ್ಪಾರಾಜ ಅವರು ಬಜಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕೆಂಜಾರು ತಾಂಗಡಿಯಲ್ಲಿ ನ. 27ರ ಬೆಳಗ್ಗೆ ನಡೆದುಕೊಂಡು ಹೋಗುತ್ತಿದ್ದಾಗ ಅವರ ಮೇಲೆ ಹೆಜ್ಜೇನಿನ ಹಿಂಡು ದಾಳಿ ನಡೆಸಿತ್ತು. ಇದರಿಂದಾಗಿ ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅವರು ಪೊರ್ಕೋಡಿ ಪರಿಸರದಲ್ಲಿ ಕಾಲ್ನಡಿಗೆಯಲ್ಲಿ ಹೋಗಿ ಮನೆಮನೆಗೆ ದಿನಪ್ರತಿಕೆಯನ್ನು ವಿತರಿಸುತ್ತಿದ್ದರು. ಪರಿಸರದಲ್ಲಿ ಬೊಗ್ಗು ಎಂದೇ ಚಿರಪರಿತರಾಗಿದ್ದ ಅವರು ತಮ್ಮ ಗಳಿಕೆಯಲ್ಲಿ ಸ್ವಾತಂತ್ರ್ಯೋತ್ಸವ ಸಂದರ್ಭ ಶಾಲಾ ಮಕ್ಕಳಿಗೆ ಸಿಹಿತಿಂಡಿ ವಿತರಿಸುತ್ತಿದ್ದರು. ಮೃ*ತರು ಅವಿವಾಹಿತರಾಗಿದ್ದು, ಮೂವರು ಸಹೋದರರು ಮತ್ತು ಸಹೋದರಿಯನ್ನು ಅಗ*ಲಿದ್ದಾರೆ.
LATEST NEWS
ಅಂಬುಲೆನ್ಸ್‌ನಲ್ಲಿ 16ರ ಬಾಲಕಿ ಮೇಲೆ ಗ್ಯಾಂಗ್ ರೇಪ್ – ಇಬ್ಬರು ಅರೆಸ್ಟ್
Published
52 minutes agoon
29/11/2024By
NEWS DESK2ಭೂಪಾಲ್: ಅಂಬುಲೆನ್ಸ್‌ನಲ್ಲಿ 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ದಾರುಣ ಘಟನೆ ಮಧ್ಯಪ್ರದೇಶದ ಮೌಗಂಜ್‌ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಒಟ್ಟು ನಾಲ್ವರು ಆರೋಪಿಗಳಿದ್ದು, ಆ ಪೈಕಿ ಇಬ್ಬರು ಆರೋಪಿಗಳಾದ ಮೌಗಂಜ್ ಜಿಲ್ಲೆಯ ನೈಗರ್ಹಿ ತಹಸಿಲ್‌ನ ನಿವಾಸಿಗಳಾದ ಅಂಬ್ಯುಲೆನ್ಸ್ ಚಾಲಕ ವಿರೇಂದ್ರ ಚತುರ್ವೇದಿ ಹಾಗೂ ಆತನ ಸ್ನೇಹಿತ ರಾಜೇಶ ಕೇವತ್‌ನನ್ನು ಬಂಧಿಸಿದ್ದಾರೆ.
ಮೌಗಂಜ್‌ನಿಂದ ಸುಮಾರು 30 ಕಿ.ಮೀ ದೂರದಲ್ಲಿರುವ ಹನುಮಾನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಮಧ್ಯಪ್ರದೇಶ ಸರ್ಕಾರವು ಪಿಪಿಪಿ ಮಾದರಿಯಲ್ಲಿ ಗ್ರಾಮೀಣ ಭಾಗದ ಮಹಿಳೆಯರು, ಮಕ್ಕಳು ಹಾಗೂ ಬಿಪಿಎಲ್ ಕುಟುಂಬಗಳ ಆರೋಗ್ಯ ರಕ್ಷಣೆಗಾಗಿ ಜನನಿ ಎಕ್ಸ್ಪ್ರೆಸ್ ಅಂಬುಲೆನ್ಸ್ ಸೌಲಭ್ಯ ಒದಗಿಸಿತ್ತು. ಈ 108 ಅಂಬುಲೆನ್ಸ್‌ನಲ್ಲೇ ಕೃತ್ಯ ನಡೆದಿದೆ.
ಮಾಹಿತಿ ಪ್ರಕಾರ, ಅಪ್ರಾಪ್ತೆಯು ತನ್ನ ಸಹೋದರಿ ಹಾಗೂ ಮಾವನೊಂದಿಗೆ ಅಂಬುಲೆನ್ಸ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಚಾಲಕ ಹಾಗೂ ಆತನ ಮೂವರು ಸಹಚರರು ಸಹ ಅಂಬುಲೆನ್ಸ್‌ನಲ್ಲಿದ್ದರು. ಮಾರ್ಗಮಧ್ಯೆ ನೀರು ತರಲೆಂದು ಬಾಲಕಿಯ ಸಹೋದರಿ ಹಾಗೂ ಆಕೆಯ ಮಾವ ಕೆಳಗಿಳಿದಿದ್ದಾರೆ. ಅವರಿಗಾಗಿ ಕಾಯದೇ ಅಂಬುಲೆನ್ಸ್‌ನ್ನೂ ಚಲಾಯಿಸಿಕೊಂಡು ಬಂದಿದ್ದು, ಚಾಲಕನ ಸ್ನೇಹಿತ ರಾಕೇಶ್ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.
ಆ ದಿನ ರಾತ್ರಿ ಆಕೆಯನ್ನು ವಾಹನದಲ್ಲಿಯೇ ಇರಿಸಿಕೊಂಡು ಮಾರನೇ ದಿನ ರಸ್ತೆಯ ಬದಿಯಲ್ಲಿ ಬಿಸಾಡಿ ಹೋಗಿದ್ದಾರೆ. ಬಳಿಕ ಅಪ್ರಾಪ್ತೆ ಮನೆ ತಲುಪಿದ್ದು, ನಡೆದ ವಿಷಯವನ್ನು ತಾಯಿಗೆ ತಿಳಿಸಿದ್ದಾಳೆ. ಇದ್ದರಿಂದ ಗಾಬರಿಯಾದ ತಾಯಿ ಮನೆಯ ಮರ್ಯಾದೆ ಪ್ರಶ್ನೆ ಎಂದು ದೂರು ದಾಖಲಿಸಿರಲಿಲ್ಲ.
ಬಳಿಕ ನ.25 ರಂದು ಸಂತ್ರಸ್ತೆ ಹಾಗೂ ತಾಯಿ ಪೊಲೀಸರಿಗೆ ಮಾಹಿತಿ ನೀಡಿದ್ದು, ನಾಲ್ವರ ವಿರುದ್ಧ ದೂರು ದಾಖಲಿಸಿದ್ದಾರೆ. ನ.27 ರಂದು ನಾಲ್ವರ ಪೈಕಿ ಇಬ್ಬರನ್ನು ಬಂಧಿಸಲಾಗಿದೆ. ಇನ್ನೂ ಈ ಕೃತ್ಯದಲ್ಲಿ ಸಂತ್ರಸ್ತೆಯ ಸಹೋದರಿ ಹಾಗೂ ಮಾವ ಭಾಗಿಯಾಗಿರುವುದಾಗಿ ತಿಳಿಸಿದ್ದು, ಅವರನ್ನು ಪತ್ತೆ ಹಚ್ಚುವ ಕಾರ್ಯ ನಡೆದಿದೆ ಎಂದು ತಿಳಿಸಿದ್ದಾರೆ.
ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಅತ್ಯಾಚಾರ ಎಸಗಿರುವುದಾಗಿ ದೃಢಪಟ್ಟಿದ್ದು, ಇನ್ನುಳಿದ ಇಬ್ಬರು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಆರೋಪಿಗಳ ವಿರುದ್ಧ ಪೋಕ್ಸೊ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
LATEST NEWS
ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು
ಕಾರ್ಕಳ: ದುರ್ಗಾ ಫಾಲ್ಸ್ಗೆ ಈಜುಲು ಹೋದ ಕಾಲೇಜು ವಿದ್ಯಾರ್ಥಿ ನೀರುಪಾಲು
ಜಾರ್ಖಂಡ್ ನ 14ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಹೇಮಂತ್ ಸೊರೆನ್
ಕ್ಯಾನ್ಸರ್ ವಾಸಿ ಬಗ್ಗೆ ಸಿಧು ಹೇಳಿಕೆಗೆ ಆಕ್ಷೇಪ..! 850 ಕೋಟಿ ಮಾನನಷ್ಟ ಕೋರಿ ನೋಟಿಸ್
ಉತ್ತರ ಪ್ರದೇಶ: ಮೂತ್ರ ವಿಸರ್ಜನೆಗೆ ತೆರಳಿದ್ದಾಗ ವಿದ್ಯುತ್ ವೈರ್ ತಗುಲಿ ವಿದ್ಯಾರ್ಥಿನಿ ಸಾವು
ಬೆಂ*ಕಿ ಹಚ್ಚಿ ಇಡೀ ಕುಟುಂಬದ ಸಾಮೂಹಿಕ ಹ*ತ್ಯೆಗೆ ಯತ್ನ
Trending
- Baindooru7 days ago
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
- BIG BOSS6 days ago
BBK11: ಕಿಚ್ಚನ ಪಂಚಾಯ್ತಿಯಲ್ಲಿ ರಜತ್ಗೆ ಫುಲ್ ಕ್ಲಾಸ್; ಹೊರ ಹೋಗೋಕೆ ಬಾಗಿಲು ಓಪನ್ ಇದೆ ಎಂದ ಬಾದ್ ಷಾ!
- Baindooru6 days ago
3ಕ್ಕೆ 3 ಸೋಲು.. ಮನೆಯಲ್ಲಿನ TV ಒಡೆದು ಹಾಕಿದ ಬಿಜೆಪಿ ನಿಷ್ಠಾವಂತ ಕಾರ್ಯಕರ್ತ
- Ancient Mangaluru2 days ago
ಮಂಗಳೂರಿನ ನರ್ಸಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ನೀ*ರುಪಾಲು