Saturday, November 27, 2021

ಪ್ರಯಾಣಿಕರನ್ನು ಇಳಿಸಲು ರಸ್ತೆ ಮಧ್ಯೆ ನಿಲ್ಲಿಸಿದ್ದ ಎಕ್ಸ್‌ಪ್ರೆಸ್‌ ಬಸ್‌ ಅಡಿಗೆ ಬಿದ್ದ ಸವಾರ

ಮಂಗಳೂರು: ಖಾಸಗಿ ಬಸ್ಸೊಂದು ಪ್ರಯಾಣಿಕರನ್ನು ಹತ್ತಿಸಲು ರಸ್ತೆ ಮಧ್ಯ ನಿಲ್ಲಿಸಿದ ಪರಿಣಾಮ ಹಿಂಬದಿಯಿಂದ ವೇಗವಾಗಿ ಬಂದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಘಟನೆ ನಗರ ಎ.ಜೆ ಆಸ್ಪತ್ರೆಯ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಉಡುಪಿ ಕಡೆಯಿಂದ ಮಂಗಳೂರಿಗೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬರುತ್ತಿದ್ದ ಖಾಸಗಿ ಬಸ್ಸೊಂದು ಕುಂಟಿಕಾನದ ಎ.ಜೆ ಆಸ್ಪತ್ರೆ ಬಳಿ ಪ್ರಯಾಣಿಕರನ್ನು ಹತ್ತಿಸಲು ನಿಲುಗಡೆ‌ ಮಾಡಿದ ಸಮಯ ಹಿಂಬದಿಯಿಂದ ಬಂದ ಆ್ಯಕ್ಟೀವಾ ಬಸ್ಸಿಗೆ ಡಿಕ್ಕಿ ಹೊಡೆದು ನೇರವಾಗಿ ಬಸ್ಸಿನ ಅಡಿಗೆ ನುಗ್ಗಿದ ಘಟನೆ ಇಂದು ನಡೆದಿದೆ.


ದ್ವಿಚಕ್ರ ವಾಹನ ಡಿಕ್ಕಿ ಆಗುವ ಸಂದರ್ಭ ಸವಾರ ಹೊರಗಡೆ ಬಿದ್ದ ಪರಿಣಾಮ ಪವಾಡ ಸದೃಶರಾಗಿ ಪಾರಾಗಿದ್ದಾರೆ.

ಡಿಕ್ಕಿ ರಭಸಕ್ಕೆ ಈತನ ಕಣ್ಣಿನ ಭಾಗಕ್ಕೆ ಗಾಯವಾಗಿದ್ದು ಈತ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸ್ಥಳಕ್ಕೆ ಕದ್ರಿ ಸಂಚಾರಿ ವಿಭಾಗದ ಪೋಲಿಸರು ಭೇಟಿ ನೀಡಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...