Saturday, November 26, 2022

ಶಬರಿಮಲೆ ಯಾತ್ರಾರ್ಥಿಗಳ ಬಸ್ ಪಲ್ಟಿ : 20 ಕ್ಕೂ ಹೆಚ್ಚು ಮಂದಿಗೆ ಗಾಯ..!

ಆಂಧ್ರಪ್ರದೇಶದಿಂದ ಶಬರಿಮಲೆ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಬಾಲಕ ಸೇರಿದಂತೆ 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಶನಿವಾರ ಜಿಲ್ಲೆಯ ಲಾಹಾ ಬಳಿ ನಡೆದಿದೆ.

ಪತ್ತನಂತಿಟ್ಟ: ಆಂಧ್ರಪ್ರದೇಶದಿಂದ ಶಬರಿಮಲೆ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಬಾಲಕ ಸೇರಿದಂತೆ 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಶನಿವಾರ ಜಿಲ್ಲೆಯ ಲಾಹಾ ಬಳಿ ನಡೆದಿದೆ.

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲ 44 ಯಾತ್ರಾರ್ಥಿಗಳನ್ನು ರಕ್ಷಿಸಿ ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ಜಿಲ್ಲಾಡಳಿತದ ಅಧಿಕಾರಿಗಳು ತಿಳಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡ 8 ವರ್ಷದ ಬಾಲಕ ಸೇರಿದಂತೆ ಮೂವರನ್ನು ಕೊಟ್ಟಾಯಂ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದ್ದು, 18 ಮಂದಿಯನ್ನು ಇಲ್ಲಿನ ಜನರಲ್ ಆಸ್ಪತ್ರೆಗೆ ಮತ್ತು ಉಳಿದವರನ್ನು ಸಮೀಪದ ಪೆರಿನಾಡು ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ, ಮೋಟಾರು ವಾಹನ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳೀಯರು ಜಂಟಿಯಾಗಿ ಕ್ಷಿಪ್ರ ರಕ್ಷಣಾ ಕಾರ್ಯಾಚರಣೆ ನಡೆಸಿದ್ದರಿಂದ ಅಪಘಾತದ ತೀವ್ರತೆ ಕಡಿಮೆಯಾಗಿದೆ.

ಸ್ಥಳಕ್ಕಾಗಮಿಸಿದ ಆರೋಗ್ಯ ಸಚಿವೆ ವೀಣಾ ಜಾರ್ಜ್, ರಕ್ಷಣಾ ಕಾರ್ಯಾಚರಣೆ ಹಾಗೂ ಯಾತ್ರಾರ್ಥಿಗಳ ಹೆಚ್ಚಿನ ಚಿಕಿತ್ಸೆಗೆ ವ್ಯವಸ್ಥೆ ಮಾಡಿದರು.

ಬಳಿಕ ಮಾತನಾಡಿದ ಅವರು, ಗಾಯಗೊಂಡ ಎಲ್ಲರಿಗೂ ಅಗತ್ಯ ಚಿಕಿತ್ಸೆ ನೀಡಲಾಗಿದೆ ಎಂದರು.

LEAVE A REPLY

Please enter your comment!
Please enter your name here

Hot Topics

ಬೆಳ್ತಂಗಡಿಯಲ್ಲಿ ರಸ್ತೆ ಅಪಘಾತಕ್ಕೆ ಕಾಲೇಜು ವಿದ್ಯಾರ್ಥಿ ಬಲಿ..! 2 ದಿನದಲ್ಲಿ ಇಬ್ಬರು ಬಲಿ..!

ಬೆಳ್ತಂಗಡಿ:  ಬೆಳ್ತಂಗಡಿಯಲ್ಲಿ 2 ದಿನದಲ್ಲಿ ಒಂದೇ ಕಾಲೇಜಿನ  ಇಬ್ಬರು ವಿದ್ಯಾರ್ಥಿಗಳು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಜೀವಕಳಕೊಂಡಿದ್ದಾರೆ. ಎಳೆ ವಯಸ್ಸಿನ ಮಕ್ಕಳಿಗೆ ದ್ವಿಚಕ್ರವಾಹನಗಳನ್ನು ಕೊಡುವ ಪೋಷಕರಿಗೆ ಎಚ್ಚರಿಕೆಯ ಕರೆ ಗಂಟೆಯಾಗಿದೆ.  ಮಡಂತ್ಯಾರು ಸೆಕ್ರೆಡ್ ಹಾರ್ಟ್...

ಮಂಗಳೂರು ಬಲ್ಮಠ ರಸ್ತೆಯಲ್ಲಿ ಕಾರ್ ಬೆಂಕಿಗಾಹುತಿ..!

ಮಂಗಳೂರು : ನಗರದ ಬಲ್ಮಠ ರಸ್ತೆ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದ ಕಾರೊಂದು ಬೆಂಕಿಗಾಹುತಿಯಾದ ಘಟನೆ ಇಂದು ಅಪರಾಹ್ನ ಸಂಭವಿಸಿದೆ.ಬಲ್ಮಠ ಜ್ಯೂಸ್ ಜಂಕ್ಷನ್ ಬಳಿ ಪಾರ್ಕ್ ಮಾಡಲಾಗಿದ್ದ ಫೋರ್ಡ್‌ ಕಂಪೆನಿ ಕಾರು ಬೆಂಕಿಗಾಹುತಿಯಾಗಿದೆ.ಕಾರಿನ ಇಂಜಿನ್...