Connect with us

BANTWAL

ಕಲ್ಲಡ್ಕದ ರೋಡಿನ ಗುಂಡಿಗೆ ಬಿದ್ದು ಸೊಂಟ ಮುರಿದುಕೊಂಡ ಪ್ರಯಾಣಿಕ…!

Published

on

ಮಂಗಳೂರು: ಬಸ್ಸಲ್ಲಿ ಸಂಚರಿಸುವಾಗ ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಹೊಂಡಕ್ಕೆ ಬಿದ್ದು ಪ್ರಯಾಣಿಕನೊಬ್ಬ ಸೊಂಟ ಮುರಿದು, ಆಸ್ಪತ್ರೆಯಲ್ಲಿ ದಾಖಲಾದ ಘಟನೆ ಬೆಳಕಿಗೆ ಬಂದಿದೆ.


ಸುಳ್ಯ ತಾಲೂಕಿನ ಬೆಳ್ಳಾರೆಯ ವಿಜಯ ಕುಮಾರ್ ಎಂಬವರು ಸುಳ್ಯದಲ್ಲಿ ಮೊಬೈಲ್ ಅಂಗಡಿ ಇರಿಸಿಕೊಂಡಿದ್ದರು. ಕಾರ್ಯನಿಮಿತ್ತ ಮಂಗಳೂರಿಗೆ ಹೋಗಿ ವಾಪಾಸ್ ಬೆಳ್ಳಾರೆಗೆ ಕೆಎಸ್‌ಆರ್‌ಟಿಸಿ ಬಸ್‌ನ ಹಿಂದಿನ ಸೀಟಿನಲ್ಲಿ ಕುಳಿತು ಆಗಮಿಸುತ್ತಿದ್ದರು.

ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿ ಬಳಿ ರಸ್ತೆ ಅವ್ಯವಸ್ಥೆಯ ಕಾರಣ ಹಾಗೂ ರಸ್ತೆ ಗುಂಡಿಯಿಂದ ತುಂಬಿಹೋಗಿತ್ತು. ಆ ಗುಂಡಿಗೆ ಬಿದ್ದ ಪರಿಣಾಮ ವಿಜಯ್‌ ಕುಮಾರ್‌ ಸೊಂಟದ ಕೆಳಭಾಗದ ಸ್ಪರ್ಶಜ್ಞಾನ ಕಳೆದುಕೊಂಡಿದ್ದಾರೆ.

ತಕ್ಷಣವೇ ವಿಜಯ್ ಅವರನ್ನು ಚಾಲಕ ಸ್ಥಳೀಯ ಆಸ್ಪತ್ರೆಗೆ ಸಾಗಿಸಿದ್ದು, ಅಲ್ಲಿಂದ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಿಸಿ ಪ್ರಸ್ತುತ ವಿಜಯಕುಮಾರ್ ಅವರನ್ನು ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.


ವಿಜಯಕುಮಾರ್ ಅವರಿಗೆ ಬೆನ್ನುಹುರಿ ಹಾಗೂ ಕುತ್ತಿಗೆ ಸಮೀಪದ ಎಲುಬು ಜಖಂಗೊಂಡಿದೆ ಎಂದು ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ.
ಇನ್ನು ಈ ಬಗ್ಗೆ ಈಗಾಗಲೇ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ಕೂಡಲೇ ರಸ್ತೆಯನ್ನು ಈ ಸ್ಥಿತಿಗೆ ತಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧವೂ ಪ್ರಕರಣ ದಾಖಲಾಗಬೇಕು. ಇನ್ನು ಮುಂದಕ್ಕೆ ತನಗಾದ ಸ್ಥಿತಿ ಇನ್ನೊಬ್ಬರಿಗೆ ಆಗಬಾರದು.

ತನಗೆ ಈಗ ಸೊಂಟದಿಂದ ಕೆಳಗಡೆ ಸ್ವಾಧೀನ ಇಲ್ಲ. ಮುಂದಕ್ಕೆ ದುಡಿದು ನನ್ನ ಕುಟುಂಬವನ್ನು ಸಾಕಬಹುದು ಎಂಬ ಭರವಸೆಯೂ ಇಲ್ಲ. ಮುಂದಕ್ಕೆ ನನ್ನ ಮಕ್ಕಳು ಪತ್ನಿ ಸೇರಿದಂತೆ ನನ್ನ ಕುಟುಂಬದ ಸ್ಥಿತಿ ಏನು ಎಂದು ವಿಜಯಕುಮಾರ್ ಅವರು ಹೇಳುತ್ತಿದ್ದಾರೆ.

ಇತ್ತೀಚಿಗೆ ರಾಷ್ಟ್ರೀಯ ಹೆದ್ದಾರಿ 75ರ ಬಿಕರ್ನಕಟ್ಟೆ ಎಂಬಲ್ಲಿ ರಸ್ತೆಯಲ್ಲಿನ ಗುಂಡಿಯಲ್ಲಿ ನೀರು ತುಂಬಿರೋದು ಗಮನಿಸದೆ ಸ್ಕೂಟರ್ ನಿಯಂತ್ರಣ ಕಳೆದುಕೊಂಡು ಡಿವೈಡರ್ ಗೆ ಡಿಕ್ಕಿ ಹೊಡೆದು ಅತೀಶ್ ಎಂಬ ಯುವಕ ಮೃತಪಟ್ಟಿದ್ದ.

ಈ ಬಗ್ಗೆ ಅತೀಶ್ ಗೆಳೆಯ ಲಿಖಿತ್ ರೈ ಮಂಗಳೂರು ನಗರ ಪಾಲಿಕೆಯ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಗುಂಡಿ ಮುಚ್ಚಿಸುವಂತೆ ಏಕಾಂಗಿ ಪ್ರತಿಭಟನೆ ಮಾಡಿದ್ದ.

BANTWAL

ಗಂಡ ಹೆಂಡತಿಗೆ ನಾಲ್ವರಿಂದ ಹಲ್ಲೆ..!!

Published

on

ಬಂಟ್ವಾಳ; ಅಪಘಾತದ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ಮಾಡಿರುವ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಎ.15ರಂದು ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ ಹಲ್ಲೆಗೊಳಗಾದವರು. ಹಲ್ಲೆಗೊಳಗಾದವರು ಬಂಟ್ವಾಳ ನಗರ ಪೋಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಮಂಜುನಾಥ್ ಅವರು ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ಕಲ್ಲಡ್ಕ ಸಮೀಪದ ನರಹರಿ ಎಂಬಲ್ಲಿ ಇವರ ಕಾರಿಗೆ ಹರಿಯಾಣ ಮೂಲದ ಕಾರೊಂದ ಓವರ್ ಟೇಕ್ ಮಾಡುವ ಭರದಲ್ಲಿ ಡಿಕ್ಕಿಯಾಗಿದೆ. ಈ ಸಂದರ್ಭದಲ್ಲಿ ಕೈ ಸನ್ನೆಯ ಮೂಲಕ ಪ್ರಶ್ನಿಸಿದಕ್ಕೆ ಅಪಘಾತ ಎಸಗಿದ ಕಾರು ಮುಂದೆ ಹೋಗಿ ಕರಿಂಗಾಣ ಕ್ರಾಸ್ ಎಂಬಲ್ಲಿ ಅಡ್ಡವಾಗಿ ಇರಿಸಿ ಮಂಜುನಾಥ್ ಹಾಗೂ ಅವರ ಪತ್ನಿ ಪೂರ್ಣಿಮಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ಇದೇ ಸಂದರ್ಭದಲ್ಲಿ ಪೂರ್ಣಿಮಾ ಅವರ ಕುತ್ತಿಗೆಯಲ್ಲಿದ್ದ ಬಂಗಾರದ ಚೈನ್ ನಾಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಹಲ್ಲೆಯಿಂದ ಮಂಜುನಾಥ್ ಅವರ ಕಣ್ಣಿಗೆ ಏಟಾಗಿದ್ದು, ಅವರು ಬಂಟ್ವಾಳ ನಗರ ಪೋಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಘಟನೆ ನಡೆದ ಕೂಡಲೇ ಸಂಚಾರ ಪೊಲೀಸರು ಭೇಟಿ ನೀಡಿ ವಾಹನವನ್ನು ಹಾಗೂ ಸ್ಥಳದಲ್ಲಿದ್ದವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಟ್ವಾಳ ನಗರ ಪೊಲೀಸ್‌ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ ಅವರು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೆ ಭಜರಂಗದಳ, ವಿಶ್ವಹಿಂದೂಪರಿಷತ್ ಕಲ್ಲಡ್ಕ ಪ್ರಖಂಡ ಖಂಡನೆ ವ್ಯಕ್ತಪಡಿಸಿದ್ದಾರೆ.

Continue Reading

BANTWAL

ಹಿಂದೂ ಸಂಘಟನೆಯ ಮುಖಂಡನಿಗೆ ಸ್ನೇಹಿತನಿಂದಲೆ ಚೂ*ರಿ ಇರಿತ

Published

on

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತನೇ ಚೂ*ರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ಭಾನುವಾರ(ಎ.14) ರಾತ್ರಿ ನಡೆದಿದೆ.

ಹಿಂದೂ ಯುವಸೇನೆಯ ಮುಖಂಡ ಉದ್ಯಮಿಯಾಗಿರುವ ಪುಷ್ಪರಾಜ್ ಎಂಬವರಿಗೆ ಜಕ್ರಿಬೆಟ್ಟು ಎಂಬಲ್ಲಿ ಚೂ*ರಿ ಇರಿತವಾಗಿದೆ. ಇರಿತಕ್ಕೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ರಿಕ್ಷಾದಲ್ಲಿ ಜತೆಯಾಗಿ ತೆರಳುತ್ತಿದ್ದಾಗಲೇ ಸ್ನೇಹಿತ ರವಿ ಎಂಬಾತ ಚೂ*ರಿಯಿಂದ ಕುತ್ತಿಗೆಗೆ ಇರಿದಿದ್ದಾನೆ ಎಂದು ಹೇಳಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಪುಷ್ಪರಾಜ್ ರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆರೋಪಿ ರವಿ ಚೂ*ರಿ ಇರಿದು ಪರಾರಿಯಾಗಿದ್ದಾನೆ. ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ‌ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading

BANTWAL

ಬಂಟ್ವಾಳ: ಮಾರ್ಗ ನಡುವೆ ಹೊ*ತ್ತಿ ಉರಿದ ಡಸ್ಟರ್ ಕಾರ್

Published

on

ಬಂಟ್ವಾಳ: ಡಸ್ಟರ್ ಕಾರೊಂದು ಮಾರ್ಗದ ನಡುವೆ ಹೊ*ತ್ತಿ ಉರಿದ ಘಟನೆ ಬಂಟ್ವಾಳ – ಮೂಡುಬಿದಿರೆಯ ಕುದ್ಕೋಳಿ ಸಮೀಪ ಸೋಮವಾರ ಬೆಳಗ್ಗೆ ಸಂಭವಿಸಿದೆ.

ಕಾರಿನಲ್ಲಿ ಏಕಾಏಕಿ ಬೆಂ*ಕಿ ಕಾಣಿಸಿಕೊಂಡಿದ್ದು ಕಾರಿನಲ್ಲಿದ್ದವರು ಕಾರಿನಿಂದ ಕೆಳಗಿಳಿದಿದ್ದಾರೆ. ಬೆಂ*ಕಿ ಕಾಣಿಸಿಕೊಂಡಿದ್ದರಿಂದ ಸ್ಥಳೀಯರು ಮತ್ತು ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂ8ಕಿ ನಂದಿಸುವ ಕಾರ್ಯ ನಿರ್ವಹಿಸಿದರು. ಸುಮಾರು ಒಂದು ಗಂಟೆಯ ಕಾಲ ಬಂಟ್ವಾಳ-ಮೂಡಬಿದ್ರೆ ರೋಡ್ ಬ್ಲಾಕ್ ಆಗಿತ್ತು.

ಕಾರಿನ ಬ್ಯಾಟರಿ ಶಾರ್ಟ್‌ ಸಕ್ಯೂರ್ಟ್‌ನಿಂದಾಗಿ ಬೆಂ*ಕಿ ಕಾಣಿಸಿಕೊಂಡಿದೆ. ಕಾರಿನಲ್ಲಿ ಮಗು ಸೇರಿದಂತೆ ನಾಲ್ಕು ಮಂದಿ ಇದ್ದರು. ಆದರೆ ಯಾರಿಗೂ ಹಾನಿಯಾಗಲಿಲ್ಲ.

Continue Reading

LATEST NEWS

Trending