Wednesday, December 1, 2021

ರಿಕ್ಷಾ, ಬಸ್‌ ಚಾಲಕರ ಆಕಸ್ಮಿಕ ಸಾವಿಗೆ 5 ಲಕ್ಷ ರೂ. ಪರಿಹಾರ: ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡನೆ

ಬೆಂಗಳೂರು: ಆಟೋ ರಿಕ್ಷಾ, ಬಸ್ ಚಾಲಕರು ಮತ್ತು ಕಾರ್ಮಿಕ ಇಲಾಖೆ ವ್ಯಾಪ್ತಿಯ ತಾಂತ್ರಿಕ ಸಿಬ್ಬಂದಿ ಆಕಸ್ಮಿಕವಾಗಿ ಸಾವನ್ನಪ್ಪಿದರೆ ಕಾರ್ಮಿಕ ಇಲಾಖೆಯಿಂದ ಐದು ಲಕ್ಷ ರು. ಪರಿಹಾರ ನೀಡುವ ಮಸೂದೆಯನ್ನು ಮುಂಬರುವ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್‌ ಹೇಳಿದ್ದಾರೆ.

ನಿನ್ನೆ ವಿಕಾಸಸೌಧದಲ್ಲಿ ಸುದ್ದಿಗಾರರ ಮಾತನಾಡಿದ ಅವರು, ಒಂದು ಕಾಲದಲ್ಲಿ ನಾನೂ ಚಾಲಕನಾಗಿ ಕೆಲಸ ಮಾಡಿದ್ದೇನೆ. ಕಾರ್ಮಿಕರ ಕಷ್ಟಗಳೇನು ಎಂಬುದು ನನಗೆ ಗೊತ್ತಿದೆ. ಹೀಗಾಗಿ ಕಾರ್ಮಿಕರು ಮೃತಪಟ್ಟರೆ ಐದು ಲಕ್ಷ ರು. ಪರಿಹಾರ ನೀಡುವ ಕಾರ್ಯಕ್ರಮವನ್ನು ರೂಪಿಸಲು ಮುಂದಾಗಿದ್ದೇನೆ. ಇಲಾಖೆಯಲ್ಲಿ ದೃಢ ಹೆಜ್ಜೆ ಸಂಕಲ್ಪ ಮಾಡಿರುವ ಕಾರಣ ಮಸೂದೆಯನ್ನು ಜಾರಿಗೊಳಿಸುವ ತೀರ್ಮಾನಕ್ಕೆ ಬರಲಾಗಿದೆ. ರೂಪರೇಷೆಗಳನ್ನು ಸಿದ್ಧಪಡಿಸಲಾಗಿದೆ ಎಂದರು.


ಇದರಿಂದ ಕಾರ್ಮಿಕವರ್ಗ ಬಹುದೊಡ್ಡ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು. ಕಾರ್ಮಿಕ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ನೀಡುವ ಸಹಾಯಧನವನ್ನು ದುಪ್ಪಟ್ಟು ಮಾಡಲಾಗಿದೆ. ಕಾರ್ಮಿಕರ ಹಿತವನ್ನು ಕಾಪಾಡುವುದು ನನ್ನ ಮೊದಲ ಆದ್ಯತೆ.

ಕಾರ್ಮಿಕ ಇಲಾಖೆಗೆ ಸಂಬಂಧಪಟ್ಟಂತ ಇನ್ನು ಮುಂದೆ ಜಾಗೃತಿ ಜಾಥಾವನ್ನು ನಡೆಸಲಾಗುವುದು. ವಲಸೆ ಕಾರ್ಮಿಕರಿಗೆ ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ವಸತಿ ಸಮುಚ್ಚಯ ಕಟ್ಟಲು ತೀರ್ಮಾನಿಸಲಾಗಿದೆ. ಅಲ್ಲದೆ, ಕಾರ್ಮಿಕರಿಗೆ ನೀಡುತ್ತಿರುವ ವಿವಿಧ ಸಹಾಯಧನವನ್ನು ದುಪಟ್ಟು ಮಾಡಲು ನಿರ್ಧರಿಸಲಾಗಿದೆ. ಕಾರ್ಮಿಕ ಇಲಾಖೆಯಲ್ಲಿ ವಿಜಿಲೆನ್ಸ್‌ ಸೆಲ್ ಮಾಡಲಾಗುತ್ತದೆ ಎಂದು ತಿಳಿಸಿದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...