Thursday, August 11, 2022

ಮಂಗಳೂರು : ಕಾವೂರು ಉದ್ಯಮಿಯೋರ್ವರ ಬರ್ಬರ ಕೊಲೆ..!

ಮಂಗಳೂರು : ಕಾವೂರು ಉದ್ಯಮಿಯೋರ್ವರ ಬರ್ಬರ ಕೊಲೆ..!

ಮಂಗಳೂರು : ಮಂಗಳೂರು ನಗರದಲ್ಲಿ ಉದ್ಯಮಿಯೋರ್ವರ ಹೆಣ ಉರುಳಿದೆ.

ಸ್ಥಳೀಯವಾಗಿ ಫಾರ್ಮ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ಕೇರಳ ಮೂಲದ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಚೂರಿಯಿಂದ ಹಾಡಹಗಲೇ ಇರಿದು ಹತ್ಯೆ ಮಾಡಿದ ಘಟನೆ ನಗರದ ಕಾವೂರಿನಲ್ಲಿ ಇಂದು ನಡೆದಿದೆ.

ಕಾವೂರು ಮಲ್ಲಿ ಲೇಔಟ್ ನಿವಾಸಿ ಸುರೇಂದ್ರನ್  ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ.

ಮೂಲತಃ ಕೇರಳದವರಾದ ಸುರೇಂದ್ರನ್ ಅವರು ಹಲವು ವರ್ಷಗಳಿಂದ ಕಾವೂರು ಮಲ್ಲಿ ಲೇಔಟ್‌ನಲ್ಲೇ ಸ್ವಂತ ಮನೆ ಮಾಡಿ ತನ್ನ ಪತ್ನಿ ಜತೆ ವಾಸಿಸುತ್ತಿದ್ದರು ಮಂಗಳವಾರ ಸುರೇಂದ್ರನ್ ಹೊರಗಡೆ ಹೋಗಿದ್ದರೆ, ಅವರ ಪತ್ನಿ ಫಾರ್ಮ್ ಉದ್ಯಮ ವ್ಯವಹಾರ ನೋಡಿಕೊಳ್ಳಲು ತೆರಳಿದ್ದರು.

ಮಧ್ಯಾಹ್ನ 1 ಗಂಟೆ ವೇಳೆಗೆ ಸುರೇಂದ್ರನ್ ಅವರು ಮನೆಗೆ ಮರಳಿ ಬಂದಿದ್ದು, ಆ ಬಳಿಕ ದುಷ್ಕರ್ಮಿಗಳು ಕೊಲೆ ಕೃತ್ಯವೆಸಗಿದ್ದಾರೆ ಎಂದು ತಿಳಿದುಬಂದಿದೆ.

ಸುರೇಂದ್ರನ್ ಕೊಲೆಗೆ ಸ್ಪಷ್ಟ ಕಾರಣವೇನೆಂದು ತಿಳಿದು ಬಂದಿಲ್ಲ.ಈ  ಕುರಿತು ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಅಮೃತ ಮಹೋತ್ಸವ ಜನಮಾನಸದಲ್ಲಿ ಚಿರಸ್ಥಾಯಿಯಾಗಿ ಉಳಿಯಬೇಕು-ಶಾಸಕ ಪೂಂಜಾ

ಬೆಳ್ತಂಗಡಿ: ಸ್ವಾತಂತ್ರ್ಯದ ಅಮೃತಮಹೋತ್ಸವ ದಿನಾಚರಣೆ ಪ್ರಯುಕ್ತ ದಕ್ಷಿಣ ಕನ್ನಡ ಜಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಇಂದು ಗುರುವಾಯನಕೆರೆ ನವಶಕ್ತಿ ಸಭಾಭವನದಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿದರು.ಈ ವೇಳೆ ಮಾಧ್ಯಗಳನ್ನು ಉದ್ದೇಶಿಸಿ ಮಾತನಾಡಿದ...

ಸ್ಥಳೀಯರೇ ಪ್ರವೀಣ್‌ನನ್ನು ಹತ್ಯೆಗೈದಿದ್ದು, ಆರೋಪಿಗಳಿಗೆ ಎಸ್‌ಡಿಪಿಐ ಲಿಂಕ್‌ ಎಂದ ಎಡಿಜಿಪಿ

ಮಂಗಳೂರು: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಇವರೆಲ್ಲರೂ ಸ್ಥಳೀಯರೇ ಆಗಿದ್ದಾರೆ ಎಂದು ಎಡಿಜಿಪಿ ಅಲೋಕ್‌ ಕುಮಾರ್‌ ತಿಳಿಸಿದ್ದಾರೆ.ಈ ಬಗ್ಗೆ ಮಂಗಳೂರಿನ ಎಸ್‌ಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ...

ತೊಕ್ಕೊಟ್ಟು ಕಾಪಿಕಾಡಿನಲ್ಲಿ ಬೈಕಿಗೆ ಕಾರು ಡಿಕ್ಕಿ : ಸವಾರರಿಗೆ ಗಾಯ – ಕಾರು ಕಮರಿಗೆ ..!

ಉಳ್ಳಾಲ : ರಾಷ್ಟ್ರೀಯ ಹೆದ್ದಾರಿ66ರ ತೊಕ್ಕೊಟ್ಟು ಕಾಪಿಕಾಡ್ ಬಳಿ ವಿರುದ್ಧ ದಿಕ್ಕಿನಲ್ಲಿ ಬಂದ ಬೈಕ್‍ಗೆ ಕಾರು ಡಿಕ್ಕಿ ಯಾಗಿ ಬೈಕ್ ಸವಾರರಿಬ್ಬರು ಗಾಯಗೊಂಡ ಘಟನೆ ಬುಧವಾರ ಸಂಜೆ ನಡೆದಿದ್ದು ಕಾರು ಮತ್ತು ಬೈಕ್...