Connect with us

    DAKSHINA KANNADA

    ಪುತ್ತೂರಿನ ಉದ್ಯಮಿ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಮೃತ್ಯು..!

    Published

    on

    ಪುತ್ತೂರಿನ ವ್ಯಕ್ತಿಯೊಬ್ಬರು ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

    ಸೌದಿ ಅರೇಬಿಯಾ:ಪುತ್ತೂರಿನ ವ್ಯಕ್ತಿಯೊಬ್ಬರು ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮೇ 27ರಂದು ನಡೆದಿದೆ.

    ಪರ್ಲಡ್ಕ‌ ನಿವಾಸಿ‌ ಅಬ್ದಲ್ಲಾ ಹಾಜಿ ಅವರ ಪುತ್ರ ಹಾರಿಸ್ ದರ್ಬೆ( 43) ಮೃತ ದುರ್ದೈವಿಯಾಗಿದ್ದಾರೆ.

    ಹಾರಿಸ್ ಹಲವು ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದರು.

    ಪ್ರಸ್ತುತ ಸೌದಿ ಅರೇಬಿಯಾದ ಜುಬೈಲ್ ನಲ್ಲಿ ಉದ್ಯಮಿಯಾಗಿದ್ದರು.

    ಹಲವಾರು ಸಂಘಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದ ಹಾರಿಸ್ ಅವರು ಸಮಾಜ ಸೇವಕರಾಗಿ ಕೂಡ ಕೆಲಸ ಮಾಡುತ್ತಿದ್ದರು.

    ಕುಂಬ್ರದ ಕರ್ನಾಟಕ ಇಸ್ಲಾಮಿಕ್ ಅಕಾಡಮಿ ಇದರ ಸೌದಿ ವಿಭಾಗದಲ್ಲಿ ಸಕ್ರಿಯ ನೇತೃತ್ವ ವಹಿಸಿದ್ದರು ಎನ್ನಲಾಗಿದೆ.

    ಜುಬೈಲ್ ನಲ್ಲಿ ಮೃತಪಟ್ಟಿದ್ದ ಹಾರಿಸ್ ನ ಸುದ್ದಿ ತಿಳಿದ ಕುಟುಂಬಸ್ಥರಲ್ಲಿ ಅಕ್ರಂದನ ಮುಗಿಲೇರಿದೆ.

    ಮೃತರು ತಂದೆ- ತಾಯಿ,ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ.

    Click to comment

    Leave a Reply

    Your email address will not be published. Required fields are marked *

    BIG BOSS

    ಕೊಣಾಜೆ: 3 ವರ್ಷದ ಬಾಲೆಗೆ ಕಿ*ರುಕುಳ ನೀಡಿದ 70ರ ಅಜ್ಜ ಅರೆಸ್ಟ್

    Published

    on

    ಕೊಣಾಜೆ: ಬಾಲಕಿಗೆ ಕಿ*ರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಪ್ಪತ್ತರ ಹರೆಯದ ವೃದ್ಧನನ್ನು ಪೊಲೀಸರು ಬಂಧಿಸಿ,‌ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ಆರೋಪಿಯನ್ನು ಅಬ್ದುಲ್ಲಾ (70) ಎಂದು ಗುರುತಿಸಲಾಗಿದೆ.

    ಉಳ್ಳಾಲ ತಾಲೂಕು ಬಾಳೆಪುಣಿ ಗ್ರಾಮದಲ್ಲಿ ಘಟನೆ ನಡೆದಿದೆ. 3 ವರ್ಷದ ಬಾಲಕಿ ಆಟವಾಡುತ್ತಿದ್ದಾಗ ಆರೋಪಿ ಲೈಂ*ಗಿಕ ಕಿ*ರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ. ಬಾಲಕಿಯ ಅಸ್ವಸ್ಥತೆಯನ್ನು ಗಮನಿಸಿದ ತಾಯಿ ವೈದ್ಯಕೀಯ ತಪಾಸಣೆ ನಡೆಸಿದ್ದು ಬಳಿಕ ಕೊಣಾಜೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

    ಈ ಬಗ್ಗೆ ಕೊಣಾಜೆ ಪೊಲೀಸರು ಆರೋಪಿ ವಿರುದ್ಧ ಪೋ*ಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

    Continue Reading

    BIG BOSS

    ಮಂಗಳೂರು: ಮುಂಜಾನೆಯೇ ಸರಣಿ ಅ*ಪಘಾತ; ವಿದ್ಯಾರ್ಥಿಗಳಿದ್ದ ಬಸ್ ಪ*ಲ್ಟಿ

    Published

    on

    ಮಂಗಳೂರು: ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಬೆಳ್ಳಂಬೆಳಗ್ಗೆ ಸರಣಿ ಅ*ಪಘಾತ ಸಂಭವಿಸಿದೆ. ಕುಂದಾಪುರ ಪ್ರವಾಸಕ್ಕೆ ತೆರಳಿ ಹಿಂದಿರುಗುತ್ತಿದ್ದ ಬೆಂಗಳೂರು ಕಾಲೇಜು ವಿದ್ಯಾರ್ಥಿಗಳಿದ್ದ ಖಾಸಗಿ ಟೂರಿಸ್ಟ್ ಬಸ್ ಉರುಳಿ ಬಿದ್ದಿದೆ.

    ಇಂದು (ನ.23) ಬೆಳಗಿನ ಜಾವ ಕಾರೊಂದು ಹಿಂದಿನಿಂದ ಬಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿ*ಕ್ಕಿ ಹೊಡೆದಿದೆ. ನಂತರ, ಬೆಂಗಳೂರು ಕಾಲೇಜು ವಿದ್ಯಾರ್ಥಿಗಳಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ಗೆ ಗು*ದ್ದಿದೆ.

    ಟೂರಿಸ್ಟ್ ಬಸ್ ರಸ್ತೆಗೆ ಉರುಳಿದ್ದು, ವಿದ್ಯಾರ್ಥಿಗಳು ಗಾ*ಯಗೊಂಡಿದ್ದಾರೆ. ಗಾ*ಯಾಳುಗಳನ್ನು ನೆಲ್ಯಾಡಿ ಮತ್ತು ಕಡಬದ ಖಾಸಗಿ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಉಪ್ಪಿನಂಗಡಿ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

    Continue Reading

    DAKSHINA KANNADA

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    LATEST NEWS

    Trending