Connect with us

    LATEST NEWS

    ಕಾವೂರಿನಲ್ಲಿ ಹರಿಯಿತು ಮತ್ತೆ ರಕ್ತದೋಕುಳಿ :ಹಾಡ ಹಗಲೇ ನಡೆಯಿತು ಸುರೇಂದ್ರನ್ ಕೊಲೆ

    Published

    on

    ಕಾವೂರಿನಲ್ಲಿ ಹರಿಯಿತು ಮತ್ತೆ ರಕ್ತದೋಕುಳಿ:ಹಾಡ ಹಗಲೇ ನಡೆಯಿತು ಸುರೇಂದ್ರನ್ ಕೊಲೆ

    ಮಂಗಳೂರಿನಲ್ಲಿ ಮತ್ತೆ ಹರಿಯಿತು ರಕ್ತದೋಕುಳಿ :ಹಾಡ ಹಗಲೇ ನಡೆಯಿತು ಸುರೇಂದ್ರನ್ ಕೊಲೆ ಕಾವೂರಿನಲ್ಲಿ ಮಡುಗಟ್ಟಿದೆ ಆತಂಕದ ಛಾಯೆ  ಮಂಗಳೂರು: ಕೊರೊನಾ ಸಂದರ್ಭ ಮೌನವಾಗಿದ್ದ ಮಂಗಳೂರಲ್ಲಿ ರಕ್ತದೋಕುಳಿ ಹರಿಯುತ್ತಿದೆ. ರೌಡಿ  ಶೀಟರ್ ಗಳ ಅಟ್ಟಹಾಸ ಎಲ್ಲೆ ಮೀರುತ್ತಿದೆ  ಸರಣಿ ಕೊಲೆಗಳು ನಡೆಯುತ್ತಿವೆ. ಕಳೆದ ಹಲವು ವರ್ಷಗಳಿಂದೆ ಕಾವೂರಿನಲ್ಲಿ ನೆಲೆಸಿದ್ದ ಕೇರಳ ಮೂಲದ ಉದ್ಯಮಿ ಸುರೇಂದ್ರನ್ ಎನ್ನುವವರನ್ನು ದುಷ್ಕರ್ಮಿಗಳು ಕೊಲೆಗೈದಿರುವ ಘಟನೆ ನಿನ್ನೆ ಸಂಜೆ ಕಾವೂರಿನಲ್ಲಿ ನಡೆದಿದ್ದು ಸ್ಥಳೀಯರು ಘಟನೆಯಿಂದ ಬೆಚ್ಚಿ ಬಿದ್ದಿದ್ದಾರೆ .

    ಕೇರಳ ಮೂಲದ ಉದ್ಯಮಿಯೋರ್ವರನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಂದಿರುವ ಘಟನೆ ಮಂಗಳೂರಿನ ಕಾವೂರಿನಲ್ಲಿ ನಡೆದಿದೆ. ಕಾವೂರು ಮಲ್ಲಿ ಲೇಔಟ್ ನಿವಾಸಿ (63)ಸುರೇಂದ್ರನ್ ಕೊಲೆಯಾದ ದುರ್ದೈವಿ ಎಂದು ತಿಳಿದು ಬಂದಿದೆ. ಈತ ವ್ಯವಹಾರದ ಸಲುವಾಗಿ ಮಂಗಳೂರಿನಲ್ಲಿ ಹಲವು ವರ್ಷಗಳಿಂದ ನೆಲೆಸಿದ್ದು ಕಾವೂರಿನಲ್ಲಿ ಸ್ವಂತ ಸೂರಿನಲ್ಲಿ ಪತ್ನಿ ಜೊತೆ ವಾಸ್ತವ್ಯವಿದ್ದರು ಎನ್ನಲಾಗಿದೆ. ಸುರೇಂದ್ರನ್  ಪದವಿನಂಗಡಿಯಲ್ಲಿನ ಲ್ಯಾಬ್ ಒಂದರಲ್ಲಿ ಸೇಲ್ಸ್ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದ್ದು, ಪತ್ನಿ ಉದ್ಯಮ ವ್ಯವಹಾರದ ಹಿನ್ನೆಲೆ ತೆರಳಿದ್ದರು . ಸಂಜೆ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಮಧ್ಯಾಹ್ನ ಕೃತ್ಯ ನಡೆದಿರುವ ಶಂಕೆಯಿದೆ. ಕೃತ್ಯದ ಮಾಹಿತಿ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ

     

     

    Click to comment

    Leave a Reply

    Your email address will not be published. Required fields are marked *

    LATEST NEWS

    ದೇವರನ್ನು ರಾಜಕೀಯದಿಂದ ದೂರವಿಡಿ ; ಸುಪ್ರೀಂ ಕೋರ್ಟ್ ಸೂಚನೆ..!

    Published

    on

    ನವ ದೆಹಲಿ : ತಿರುಪತಿ ಲಡ್ಡು ವಿವಾದದಲ್ಲಿ ಆಂಧ್ರ ಸಿಎಂ ಚಂದ್ರಬಾಬು ನಾಯ್ಡುಗೆ ಸುಪ್ರೀಂ ಕೋರ್ಟ್‌ ಚಾಟಿ ಬೀಸಿದೆ. ದೇವರನ್ನು ರಾಜಕೀಯದಿಂದ ಹೊರಗೆ ಇಡಿ ಎಂದು ಕೋರ್ಟ್‌ ಹೇಳಿದೆ. ಕನಿಷ್ಟ ಪಕ್ಷ ದೇವರುಗಳನ್ನು ರಾಜಕೀಯದಿಂದ ದೂರ ಇಡಬೇಕು ಎಂದು ಹೇಳಿರುವ ಸುಪ್ರೀಂ ಕೋರ್ಟ್‌, ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗಿದೆ ಎಂದು ಸಿಎಂ ಚಂದ್ರಬಾಬು ನಾಯ್ಡು ಅವರ ಹೇಳಿಕೆಯನ್ನೇ ಪ್ರಶ್ನೆ ಮಾಡಿದೆ. ಸಿಎಂ ಮಾಡಿರುವ ಆರೋಪಕ್ಕೆ ಸಾಕ್ಷಿ ಒದಗಿಸುವಂತೆ ಕೋರ್ಟ್‌ ಸೂಚನೆ ನೀಡಿದೆ. ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಕೆ.ವಿ ವಿಶ್ವನಾಥನ್‌ ಅವರ ಪೀಠವು ಸಿಎಂ ಚಂದ್ರಬಾಬು ನಾಯ್ಡು ಅವರು ನೀಡಿದ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದೆ.

    ಸಾಂವಿಧಾನಕವಾಗಿ ಉನ್ನತ ಹುದ್ದೆಯಲ್ಲಿ ಇರುವ ವ್ಯಕ್ತಿಯಾಗಿ ಈ ರೀತಿ ಕೋಟ್ಯಾಂತರ ಜನರ ಭಾವನೆ ಮೇಲೆ ಪರಿಣಾಮ ಬೀರುವ ಹೇಳಿಕೆ ನೀಡಬಾರದು ಎಂದು ಪೀಠ ಹೇಳಿದೆ. ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗಿದೆ ಎಂಬ ವಿಚಾರವಾಗಿ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಲು ಕೋರಿ ಸಲ್ಲಿಸಿದ ಅರ್ಜಿಗಳನ್ನು ಪೀಠವು ವಿಚಾರಣೆ ನಡೆಸುತ್ತಿದೆ. ಈ ಸಂದರ್ಭದಲ್ಲಿ ದೇವರನ್ನು ರಾಜಕೀಯದಿಂದ ದೂರ ಇಡಬೇಕು ಎಂದು ನಿರೀಕ್ಷಿಸುವುದಾಗಿ ಪೀಠ ಆಂಧ್ರ ಸಿಎಂ ಚಂದ್ರಬಾಬು ನಾಯ್ಡುಗೆ ಚಾಟಿ ಬೀಸಿದೆ. ಮುಂದಿನ ವಿಚಾರಣೆಯನ್ನು ಅಕ್ಟೋಬರ್ 3 ಕ್ಕೆ ಮುಂದೂಡಲಾಗಿದೆ.

    Continue Reading

    LATEST NEWS

    ಬಾವಿಯ ಕಾಂಪೌಂಡ್‌ ಸ್ವಚ್ಛಗೊಳಿಸುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾ*ವು

    Published

    on

    ಮಂಗಳೂರು: ಬಾವಿಯ ಕಾಂಪೌಂಡ್‌ ಸ್ವಚ್ಛಗೊಳಿಸುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾ*ವನ್ನಪ್ಪಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೋಟೆಕಾರುನಲ್ಲಿ ಸ್ಥಳ ಕಾಳಿಕಾಂಬ ದೇವಸ್ಥಾನದ ಬಳಿಯ ನೆತ್ತಿಲ ಎಂಬಲ್ಲಿ ನಡೆದಿದೆ.

    ನವೀನ್ ಬೆಳ್ಳಾಡ(48) ಮೃತ ವ್ಯಕ್ತಿ. ನವೀನ್ ಅವರು ಭಾನುವಾರ ಸಂಜೆ ಮನೆಯ ಹಿಂಭಾಗದ ಬಾವಿಯ ಕಾಂಪೌಂಡ್ ಸ್ವಚ್ಛಗೊಳಿಸುತ್ತಿದ್ದರು. ಈ ವೇಳೆ ಆಯ ತಪ್ಪಿ ಬಾವಿಗೆ ಬಿದ್ದು ಮೃ*ತಪಟ್ಟಿದ್ದಾರೆ. ಮನೆಯೊಳಗೆ ನವೀನ್ ಕಾಣದಾಗ ಪತ್ನಿ ಮತ್ತು ಮಕ್ಕಳು ಹುಡುಕಾಡಿ ಬಾವಿಯ ಬಳಿ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ.

    ಸ್ಥಳೀಯರು ಸೇರಿ ನವೀನ್ ರನ್ನು ಬಾವಿಯಿಂದ ಮೇಲಕ್ಕೆತ್ತಿದ್ದು ಅದಾಗಲೇ ಅವರು ಮೃ*ತಪಟ್ಟಿದ್ದರು ಎನ್ನಲಾಗಿದೆ. ಸೆಂಟ್ರಿಗ್ ಕೆಲಸ ಮಾಡುತ್ತಿದ್ದ ನವೀನ್ ಅವರಿಗೆ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಪುತ್ರಿ ಮತ್ತು ನಾಲ್ಕನೇ ತರಗತಿ ಓದುತ್ತಿರುವ ಪುತ್ರನಿದ್ದಾನೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

    Continue Reading

    DAKSHINA KANNADA

    ಕಾರ್ಕಳದಲ್ಲಿ ಭೀಕರ ಅಪಘಾತ; ತಂದೆ ಸಹಿತ ಮೂರು ಮಕ್ಕಳ ದುರ್ಮರಣ

    Published

    on

    ಕಾರ್ಕಳ : ಕಾರ್ಕಳ – ಧರ್ಮಸ್ಥಳ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಇಂದು (ಸೆ.30) ಭೀಕರ ಅಪಘಾತ ಸಂಭವಿಸಿದೆ. ಮಿನಿ ಲಾರಿ ಮತ್ತು ಬೈಕ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.


    ವೇಣೂರಿನಿಂದ ನಲ್ಲೂರು ಕಡೆಗೆ ಬರುತ್ತಿದ್ದ ಬೈಕ್‌ಗೆ ಕಾರ್ಕಳದಿಂದ ಗುರುವಾಯನಕೆರೆಯತ್ತ ಸಾಗುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ.
    ಬೈಕ್ನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳಿದ್ದರು. ತಂದೆ ಸುರೇಶ್ ಆಚಾರ್ಯ (36), ಮಕ್ಕಳಾದ ಸಮಿಕ್ಷಾ (7) ಸುಶ್ಮಿತಾ (5) ಸುಶಾಂತ್ (2) ಮೃತಪಟ್ಟವರು. ತಾಯಿ ಮೀನಾಕ್ಷಿ (32) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    LATEST NEWS

    Trending