Connect with us

BELTHANGADY

ಉಜಿರೆ ಉದ್ಯಮಿ ಮಗನ ಅಪಹರಣ : 17 ಕೋಟಿ ರೂ.ಗೆ ಬೇಡಿಕೆ ಇಟ್ಟ ದುಷ್ಕರ್ಮಿಗಳು..!

Published

on

ಉಜಿರೆ ಉದ್ಯಮಿ ಮಗನ ಅಪಹರಣ : 17 ಕೋಟಿ ರೂ.ಗೆ ಬೇಡಿಕೆ ಇಟ್ಟ ದುಷ್ಕರ್ಮಿಗಳು..!

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಅಪ್ರಾಪ್ತ ಬಾಲಕನ ಅಪರಣವಾಗಿದೆ. ತಾಲೂಕಿನ ಉಜಿರೆ ಜನಾರ್ಧನ ಸ್ವಾಮಿ ದೇವಸ್ಥಾನದ ರಥಬೀದಿಯ ಅಶ್ವತ್ಥ ಕಟ್ಟೆ ಸಮೀಪದ ನಿವಾಸಿ ಉದ್ಯಮಿ ಬಿಜೋಯ್ ಎಂಬವರ ಪುತ್ರ 8 ವರ್ಷದ ಅನುಭವ್ ದುಷ್ಕರ್ಮಿಗಳಿಂದ ಅಪಹರಣಕ್ಕೊಳಗಾದ ಬಾಲಕನಾಗಿದ್ದಾನೆ.

ನಿನ್ನೆ ಸಂಜೆ‌ ಬಿಳಿ ಇಂಡಿಕಾ ಕಾರಿನಲ್ಲಿ ಬಂದ 3-4 ಮಂದಿಯ ಅಪರಿಚಿತ‌ ತಂಡ ಮನೆಯ ಬಳಿಯಿಂದ ಅಪಹರಣ ಮಾಡಿದ್ದು, 17 ಕೋಟಿ‌ ರೂ. ನೀಡುವಂತೆ ಬೇಡಿಕೆಯನ್ನು ಇರಿಸಿದ್ದಾರೆ ಎಂದು ಬಾಲಕನ ಅಜ್ಜ ಎ.ಕೆ. ಶಿವನ್ ಅವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಅಜ್ಜ ಹಾಗೂ ಮೊಮ್ಮಗ ರಥ ಬೀದಿ ಕಡೆಯಿಂದ ಮನೆಗೆ ಹೋಗುತ್ತಿದ್ದರು. ಮೊಮ್ಮಗ ಅಜ್ಜನಿಂದ ಮುಂದಿದ್ದು ಮನೆಯ ಗೇಟು ಬಳಿ ತಲುಪುತ್ತಿದ್ದಂತೆ ಅಲ್ಲಿಯೆ ನಿಂತಿದ್ದ ಬಿಳಿ ಬಣ್ಣದ ಇಂಡಿಕಾ ಕಾರಿನಿಂದ ಇಬ್ಬರು ಅಪರಿಚಿತರು ಇಳಿದು ಬಾಲಕನನ್ನು ಬಲವಂತದಿಂದ ಕಾರಿನಲ್ಲಿ ಕುಳ್ಳಿರಿಸಿದ್ದಾರೆ. ಶಿವನ್ ಓಡಿ ಬಂದು‌ ಕಾರಿನ ಬಾಗಿಲು ತೆಗೆಯಲು ಪ್ರಯತ್ನಿಸುವ ವೇಳೆಗೆ ಕಾರನ್ನು ಚಲಾಯಿಸಿಕೊಂಡು ಹೋಗಿದ್ದಾರೆ.
ಬಳಿಕ ಶಿವನ್ ಅವರ ಸೊಸೆಗೆ ಅಪಹರಣಕಾರರು ಫೋನಾಯಿಸಿ, ಮಗನ ಬಿಡುಗಡೆಗೆ 100 ಬಿಟ್ ಕಾಯಿನ್ ಅಂದರೆ 17 ಕೋಟಿ ರೂ ಬೇಡಿಕೆ ಇಟ್ಟಿದ್ದಾರೆ ಶಿವನ್ ಅವರು ದೂರಿನಲ್ಲಿ ತಿಳಿಸಿದ್ದಾರೆ.
ಬೆಳ್ತಂಗಡಿ ಠಾಣೆಗೆ ಬಾಲಕನ ಅಜ್ಜ ಶಿವನ್ ದೂರು ನೀಡಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.


News Update:

ಬಾಲಕ ಅಪರಹರಣ ಪ್ರಕರಣವನ್ನು ಗಂಭೀರವಾಗಿ ತಗೊಂಡಿರುವ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ಎರಡು ತಂಡಗಳು ಶೋಧ ಕಾರ್ಯದಲ್ಲಿ ತೊಡಗಿದ್ದಾರೆ. ಹಳದಿ ಯಲ್ಲೋ ಪ್ಲೇಟ್ ನಂಬರ್ ನ ಇಂಡಿಕಾ ಕಾರ್ ನಲ್ಲಿ ಬಂದ ದುಷ್ಕರ್ಮಿಗಳು ಕಿಡ್ನಾಪ್ ಮಾಡಿರುವ ಬಗ್ಗೆ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. 

ಚಾರ್ಮಾಡಿ ಅರಣ್ಯ ಪ್ರದೇಶದಲ್ಲಿ ಕಿಡ್ನಾಪರ್ಸ್ ಇರುವ ಶಂಕೆ ವ್ಯಕ್ತವಾಗಿದ್ದು ಶೋಧ ಕಾರ್ಯ ತೀವ್ರ ಗೊಳಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಈ ಶೋಧ ಕಾರ್ಯ ನಡೆಯುತ್ತಿದೆ.

ಬೆಳ್ತಂಗಡಿ ತಾಲೂಕಿನಿಂದ ಹೊರ ಹೋಗುವ ದಾರಿಗಳಲ್ಲಿ ನಾಕಾಬಂದಿ ಮಾಡಲಾಗಿದೆ. ಜೊತೆಗೆ ಚಾರ್ಮಾಡಿ, ಕೊಟ್ಟಿಗೆಹಾರ ಪ್ರದೇಶದಲ್ಲೂ ಪೊಲೀಸರು ನಾಕ ಬಂಧಿ ಮಾಡಿದ್ದು , ಗಡಿ ಜಿಲ್ಲೆ ಗಳ ಪೊಲೀಸರಿಗೂ ಮಾಹಿತಿ ನೀಡಿ ಕಟ್ಟೆಚ್ಚರ ವಹಿಸಲಾಗುತ್ತಿದೆ.

ಅಪಹರಣಕ್ಕೊಳಗಾದ ಬಾಲಕ ಅನುಭವ್ ತಂದೆ ಉಜಿರೆ ರಥಬೀದಿ ನಿವಾಸ್ ಬಿಜೋಯ್ ಉದ್ಯಮಿಯಾಗಿದ್ದು ಉಜಿರೆಯಲ್ಲಿ ಹಾರ್ಡ್ ವೇರ್ ಮಳಿಗೆಯನ್ನು ಹೊಂದಿದ್ದಾರೆ.

ನಿನ್ನೆ ಸಂಜೆ 6.15 ಗಂಟೆಗೆ ಘಟನೆಯಾಗಿದೆ.ಬಾಲಕ ಅನುಭವ್, ಆತನ ಅಜ್ಜ ಶಿವಣ್ಣ ನ ಜೊತೆಗಿದ್ದ. ಒಮ್ಮೇಲೇ ಬಿಳಿ ಬಣ್ಣದ ಕಾರು ಬಂತು. ಶಿವಣ್ಣ ನನ್ನು ದೂಡಿ ಅನುಭವ್ ನನ್ನು ತಂಡ ಕಿಡ್ನಾಪ್ ಮಾಡಿದೆ.

ಈ ಸಂಧರ್ಭ ಮೈದಾನದಲ್ಲಿ50 ಕ್ಕೂ ಹೆಚ್ಚು ಮಂದಿ ಇದ್ರು. ಸ್ಪೀಡಾಗಿ ಕಾರು ಚಲಾಯಿಸಿಕೊಂಡು ಪರಾರಿಯಾಗಿದ್ದಾರೆ.

ಬಾಲಕ ಅನುಭವ್ ಪ್ರತಿದಿನ ಮೈದಾನಕ್ಕೆ ಅಜ್ಜನ ಜೊತೆ ಬರುತ್ತಿದ್ದ. ಈ ಘಟನೆಯಾಗುತ್ತದೆ ಅಂತಾ ಯಾರೂ ಭಾವಿಸಿರಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

 

Click to comment

Leave a Reply

Your email address will not be published. Required fields are marked *

BELTHANGADY

ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

Published

on

ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್‌ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.

chitha

ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?

ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Continue Reading

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

BELTHANGADY

ಬೆಳ್ತಂಗಡಿ: ಕೆರೆಗೆ ಬಿದ್ದು ಕಾಡುಕೋಣ ಸಾ*ವು.. ಸಾರ್ವಜನಿಕರಿಂದ ಅಂತ್ಯಸಂಸ್ಕಾರ

Published

on

ಬೆಳ್ತಂಗಡಿ: ಇಲ್ಲಿನ ಬೆಳಾಲು ಗ್ರಾಮಕ್ಕೆ ಸಂಬಂಧಪಟ್ಟಂತೆ ಕೊಯ್ಯೂರು ರಸ್ತೆಯ ಬದ್ಯಾರು ಎಂಬಲ್ಲಿ ಹೆಚ್ ಪದ್ಮ‌ಗೌಡ ಎಂಬವರ ತೋಟದ ಕೆರೆಯಲ್ಲಿ ಬೃಹತ್ ಗಾತ್ರದ ಕಾಡುಕೋಣದ ಮೃತ*ದೇಹ ಪತ್ತೆಯಾಗಿದೆ.

bison

ಮುಂದೆ ನೋಡಿ..; ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಕೆಎಸ್ ಈಶ್ವರಪ್ಪ ಬಿಜೆಪಿ ಪಕ್ಷದಿಂದ ಉಚ್ಛಾಟನೆ..!

ಈ ಕೆರೆಗೆ ಸುತ್ತ ಕಾಂಕ್ರೀಟ್ ರಿಂಗ್ ಅಳವಡಿಸಿದ್ದು ನೀರು ಕುಡಿಯಲು ಬಂದ ಕಾಡುಕೋಣ ಮೂರ್ನಾಲ್ಕು ದಿನಗಳ ಹಿಂದೆಯೇ ಬಿದ್ದು ಸಾವನ್ನಪ್ಪಿರುವ ಸಾಧ್ಯತೆ ಇದೆ. ಹೆಚ್ಚೂ ಕಮ್ಮಿ 10 ಕ್ವಿಂಟಾಲ್ ತೂಕ ಹೊಂದಿರಬಹುದೆಂದು ಅಂದಾಜಿಸಲಾಗಿದ್ದು, ಕೊಳೆತು ವಾಸನೆ ಬೀರುತ್ತಿತ್ತು. ಶೌರ್ಯ ವಿಪತ್ತು ತಂಡಕ್ಕೆ ಬಂದ ಮಾಹಿತಿಯಂತೆ ಉಜಿರೆ- ಬೆಳಾಲು ಘಟಕದ ಸಂಯೋಜಕ ಸುಲೈಮಾನ್ ಬೆಳಾಲು, ಮುಳುಗು ಪರಿಣತ ಹರೀಶ ಕೂಡುಗೆ, ಮುಹಮ್ಮದ್ ಶರೀಫ್ ಬೆಳಾಲು, ಅವಿನಾಶ್ ಭಿಡೆ ಅರಸಿಮನಕ್ಕಿ, ರವೀಂದ್ರ ಉಜಿರೆ, ಸುರೇಂದ್ರ ಉಜಿರೆ, ಅನಿಲ್ ಚಾರ್ಮಾಡಿ, ಶೌರ್ಯ ಘಟಕದ ಮಾಸ್ಟರ್ ಪ್ರಕಾಶ್ ಧರ್ಮಸ್ಥಳ, ನಳಿನ್ ಕುಮಾರ್ ಧರ್ಮಸ್ಥಳ ಮೊದಲಾದವರು ಸಾರ್ವಜನಿಕರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿ ಕಾಡುಕೋಣದ ಕಳೇಬರವನ್ನು ಮೇಲೆತ್ತಿದ್ದಾರೆ. ಬಳಿಕ ಪಶುವೈದ್ಯಾಧಿಕಾರಿ ಮರಣೋತ್ತರ ಪರೀಕ್ಷೆ ಪ್ರಕ್ರೀಯೆ ನಡೆಸಿದ್ದು, ತೋಟದಲ್ಲೇ ಹೊಂಡ ತೋಡಿ ಅಂತ್ಯಸಂಸ್ಕಾರ ನಡೆಸಲಾಗಿದೆ.

Continue Reading

LATEST NEWS

Trending