Connect with us

    LATEST NEWS

    ಬ್ಯಾರಿ ಭಾಷೆಗೆ ಸಾವಿರಾರು ವರ್ಷದ ಇತಿಹಾಸ ಇದೆ: ರಹೀಮ್ ಉಚ್ಚಿಲ್

    Published

    on

    ಮಂಗಳೂರು: ಬ್ಯಾರಿ ಭಾಷೆಗೆ ಸಾವಿರಾರು ವರ್ಷದ ಇತಿಹಾಸ ಇದೆ ಎಂಬ ಸತ್ಯ ಬಪ್ಪ ಬ್ಯಾರಿಯ ಐತಿಹಾಸಿಕ ಚರಿತ್ರೆ, ಬಬ್ಬರ್ಯ ದೈವದ ಪಾಡ್ದನ, ಇಸ್ಲಾಮಿ ಚರಿತ್ರೆ ಹಾಗೂ ಶಾಸನಗಳಿಂದ ಸಾಬೀತಾಗಿದೆ.

    ಈ ಭಾಷೆಯ ಬೆಳವಣಿಗೆಗೆ ಅಕಾಡೆಮಿಯನ್ನು ನೀಡುವ ಮೂಲಕ ಎಲ್ಲಾ ಸರಕಾರಗಳು ಪ್ರಾಮಾಣಿಕವಾಗಿ ಸ್ಪಂದಿಸುತ್ತಿದೆ.

    ಪ್ರಸಕ್ತ ರಾಜ್ಯ ಸರಕಾರ ಅಕಾಡೆಮಿಗೆ ಕೋಟ್ಯಾಂತರ ರೂಪಾಯಿ ಮೌಲ್ಯದ ಉಚಿತ ನಿವೇಶನ ಮಂಜೂರು ಮಾಡಿ ಬ್ಯಾರಿ

    ಸಾಂಸ್ಕೃತಿಕ ಭವನ ನಿರ್ಮಾಣ ಮಾಡಲು ಆರು ಕೋಟಿ ಮಂಜೂರು ಮಾಡಿ ಈಗಾಗಲೇ ಮೂರು ಕೋಟಿ ಬಿಡುಗಡೆ ಮಾಡಿದೆ.

    ಇದನ್ನು ಬ್ಯಾರಿ ಭಾಷಿಕರು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಮ್ ಉಚ್ಚಿಲ್ ಹೇಳಿದ್ದಾರೆ.


    ಮಂಗಳೂರು ವಿಶ್ವವಿದ್ಯಾನಿಲಯದ ರವೀಂದ್ರ ಕಲಾಭವನದಲ್ಲಿ ರವಿವಾರ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಬ್ಯಾರಿ ಅಧ್ಯಯನ ಪೀಠ ಇದರ ಜಂಟಿ ಆಶ್ರಯದಲ್ಲಿ ನಡೆದ ಬ್ಯಾರಿ ಭಾಷಾ ದಿನಾಚರಣೆಯನ್ನು ತೆಂಗಿನ ಸಸಿಗೆ ನೀರೆರೆಯುವ ಮೂಲಕ ಸಾಂಕೇತಿಕವಾಗಿ ಉದ್ಘಾಟಿಸಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.


    ನೂತನ ಶಿಕ್ಷಣ ನೀತಿಯ ಅನ್ವಯದಂತೆ ವಿಶ್ವವಿದ್ಯಾನಿಲಯಗಳಲ್ಲಿ ಮುಂದಿನ ಶೈಕ್ಷಣಿಕ ಸಾಲಿನಲ್ಲಿ ದಫ್, ಒಪ್ಪಣೆ, ಕೋಲ್ಕಲಿ ಮುಂತಾದ ಕಲಾಪ್ರಕಾರಗಳು ಸರ್ಟಿಫಿಕೇಟ್ ಕೋರ್ಸ್ ಗಳಾಗಿ ಹೊರಹೊಮ್ಮಲಿದೆ.

    ಶಾಲೆ ಹಾಗೂ ಪದವಿ ಕಾಲೇಜು ಮಟ್ಟದಲ್ಲಿ ತೃತೀಯ ಐಚ್ಛಿಕ ಭಾಷೆಯಾಗಿ ಬ್ಯಾರಿ ಭಾಷೆ ಮೂಡಿ ಬರಲಿದ್ದು ಸಿದ್ದತೆಗಳು ಭರದಿಂದ ಸಾಗುತ್ತಿದೆ.

    ಬ್ಯಾರಿ ಭಾಷೆಯನ್ನು ಶೈಕ್ಷಣಿಕವಾಗಿ ಮುನ್ನಡೆಸಬೇಕಾದ ಜವಾಬ್ದಾರಿ ಪ್ರತಿಯೊಬ್ಬ ಬ್ಯಾರಿ ಭಾಷಿಕರದ್ದಾಗಿದೆ ಎಂದು ಹೇಳಿದರು.

    ಮೌಲಾನಾ ಅಬ್ದುಲ್ ಅಝೀಝ್ ದಾರಿಮಿ ಪ್ರಾರ್ಥನೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

    ಬ್ಯಾರಿ ಭಾಷಾ ದಿನಾಚರಣೆಯ ಕುರಿತು ಉಪನ್ಯಾಸ ನೀಡಿದ ಪತ್ರಕರ್ತ ಹಂಝ ಮಲಾರ್ ಮಾತನಾಡಿ,

    ಬ್ಯಾರಿ ಭಾಷೆಗೆ ಅಕಾಡೆಮಿ ದೊರಕಿದ ಅಕ್ಟೊಬರ್ 3 ರಂದು ವಿಶ್ವದಾದ್ಯಂತ ಇರುವ ಬ್ಯಾರಿ ಭಾಷಿಕರು ಈ ದಿನವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ.

    ಬ್ಯಾರಿ ಆಂದೋಲನದ ರೂವಾರಿಗಳನ್ನು, ಸಾಹಿತಿಗಳನ್ನೂ, ಕಲಾವಿದರನ್ನು ಗುರುತಿಸಿ ಬ್ಯಾರಿ ಅಕಾಡೆಮಿ ಪ್ರಶಸ್ತಿ ಪುರಸ್ಕಾರ ನೀಡುತ್ತಿರುವುದು ಸಂತಸದ ಸಂಗತಿಯಾಗಿದೆ‌.

    ಪುರಾತನ ಭಾಷೆಯಾದ ಬ್ಯಾರಿ ಭಾಷೆಗೆ ರಾಜ್ಯ ಭಾಷೆಯ ಸ್ಥಾನಮಾನ ಎಂಟನೇ ಪರಿಚ್ಛೇದಕ್ಕೆ ಸೇರಿಸುವ ಪ್ರಯತ್ನ ಸೇರಿದಂತೆ ಭಾಷೆಗೆ ನ್ಯಾಯ ಒದಗಿಸುವ ಎಲ್ಲಾ ಪ್ರಯತ್ನಗಳನ್ನು ಅಕಾಡೆಮಿ ಮಾಡಬೇಕೆಂದು ಹೇಳಿದರು‌.

    ಮುಖ್ಯ ಅತಿಥಿಗಳಾಗಿ ಬ್ಯಾರಿ ಅಧ್ಯಯನ ಪೀಠದ ಸದಸ್ಯ ಕೋಡಿಜಾಲ್ ಇಬ್ರಾಹಿಂ ಉಪಸ್ಥಿತರಿದ್ದರು.


    ಈ ಸಂದರ್ಭದಲ್ಲಿ ಬ್ಯಾರಿ ಆಂದೋಲನದ ಹಿರಿಯ ರೂವಾರಿಗಳಲ್ಲಿ ಒಬ್ಬರಾದ ಅಬ್ದುಲ್ ಖಾದರ್ ಬುಟ್ಟೋ ಫರಂಗಿಪೇಟೆ, ಹಿರಿಯ ಬ್ಯಾರಿ ಸಾಹಿತಿ ಟಿಎ ಆಲಿಯಬ್ಬ ಜೋಕಟ್ಟೆ, ಖ್ಯಾತ ಬ್ಯಾರಿ ಭಾಷಾ ಪ್ರವಚನಕಾರ, ಭಾಷಾ ತಜ್ಞ ಮೌಲಾನಾ ಅಬ್ದುಲ್ ಅಝೀಝ್ ದಾರಿಮಿ, ಖ್ಯಾತ ಬ್ಯಾರಿ ಗಾಯಕರಾದ ಶಮೀರ್ ಮುಲ್ಕಿ,

    ಅಶ್ರಫ್ ಸವಣೂರ್, ಸಮದ್ ಗಡಿಯಾರ, ಜಿಯಾ ಕಲ್ಲಡ್ಕ, ಖ್ಯಾತ ಬ್ಯಾರಿ ನಾಟಕ ಕಲಾವಿದ ಸತ್ತಾರ್ ಗೂಡಿನಬಳಿ, ಖ್ಯಾತ ಬ್ಯಾರಿ ಸಂಗೀತ ಸಾಹಿತಿಗಳಾದ ರಾಝ್ ಕಲಾಯಿ, ಇರ್ಫಾನ್ ಬಜಾಲ್ ಸೇರಿದಂತೆ ಹತ್ತು ಮಂದಿ ಬ್ಯಾರಿ ಸಾಧಕರನ್ನು ಸನ್ಮಾನಿಸಲಾಯಿತು.
    ಸಾರ್ವಜನಿಕ ಪ್ರಬಂಧ ವಾಚನ ಸ್ಪರ್ಧೆಯ ಪುರುಷರ ವಿಭಾಗದಲ್ಲಿ ಪ್ರಥಮ ಸ್ಥಾನ ಮುಹಮ್ಮದ್ ಸಲೀಂ, ದ್ವಿತೀಯ
    ಮುಹಮ್ಮದ್ ಸಾಹಿದ್ ಮೋಂಟುಗೋಳಿ ಹಾಗೂ ತೃತೀಯ ಸ್ಥಾನ ಪಡೆದ ಮುಹಮ್ಮದ್ ತೌಶೀಫ್ ರಿಗೆ ಬಹುಮಾನ ನೀಡಲಾಯಿತು.

    ಇನ್ನು ಇದೇ ಸ್ಪರ್ಧೆಯ ಮಹಿಳೆಯರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಶಾಹೀದಾ ಮಂಗಳೂರು, ದ್ವಿತೀಯ ಸ್ಥಾನ ಪಡೆದ ಹಫೀಝಾ ಫಾತಿಮಾ ಹಾಗೂ ತೃತೀಯ ಸ್ಥಾನ ಪಡೆದ ಖದೀಜಾ ಅಶ್ಯಮ್ ರಿಗೆ ಬಹುಮಾನ ನೀಡಲಾಯಿತು.

    ಇನ್ನು ಬ್ಯಾರಿ ಗಾಯನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಶಿಹಾಬುದ್ದೀನ್ ಕಕ್ಕಿಂಜೆ, ದ್ವಿತೀಯ ಸ್ಥಾನ ಪಡೆದ ತಾಜುದ್ದೀನ್ ಅಮ್ಮುಂಜೆ, ತೃತೀಯ ಸ್ಥಾನ ಪಡೆದ ಮುಹಮ್ಮದ್ ಹಫೀಲ್, ನಿಯ್ಯಾ ಬಂಟ್ವಾಳ ಇವರಿಗೆ ಬಹುಮಾನ ನೀಡಲಾಯಿತು.

    ಇದೇ ವೇಳೆ ಸಭಾಂಗಣದಲ್ಲಿ ನಡೆದ ಬ್ಯಾರಿ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಮುಸ್ತಫಾ,
    ದ್ವಿತೀಯ ಸ್ಥಾನವನ್ನು ಹಬೀಬ್ ರಹ್ಮಾನ್ ಹಾಗೂ
    ತೃತೀಯ ಸ್ಥಾನವನ್ನು ಪಡೆದ ಬಿಎ ಮುಹಮ್ಮದ್, ಮುಹಮ್ಮದ್ ಸೌರೀಜ್ ಇವರಿಗೆ ಬಹುಮಾನ ನೀಡಲಾಯಿತು.

    ಜೊತೆಗೆ ಪ್ರಬಂಧ ವಾಚನ, ಗಾಯನ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆಗಳಲ್ಲಿ ಭಾಗವಹಿಸಿದ ಎಲ್ಲಾ ಸ್ಪರ್ಧಿಗಳಿಗೂ ಸಮಾಧಾನಕಾರ ಬಹುಮಾನ ನೀಡುವ ಮೂಲಕ ಗೌರವಿಸಲಾಯಿತು. ಜಡ್ಜ್ ಗಳಾಗಿ ಅಬ್ದುಲ್ ಅಜೀಜ್ ಝುಹ್ರಿ‌ ಪುಣಚ,

    ಅಶೀರುದ್ದೀನ್ ಸಾರ್ತಬೈಲ್ ಕಾರ್ಯನಿರ್ವಹಿಸಿದರು.
    ಕಾರ್ಯಕ್ರಮದಲ್ಲಿ ಬ್ಯಾರಿ ಅಕಾಡೆಮಿ ಸದಸ್ಯರಾದ ಕಮರುದ್ದೀನ್ ಸಾಲ್ಮರ, ಸುರೇಖಾ, ಚಂಚಲಾಕ್ಷಿ ಹಾಗೂ ಅಹ್ಮದ್ ಬಾವಾ ಪಡೀಲ್,

    ಅಲಿಕುಞ ಪಾರೆ, ಹಸನಬ್ಬ, ಬಶೀರ್ ಬೈಕಂಪಾಡಿ, ಹುಸೇನ್ ಕಾಟಿಪಳ್ಳ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

    ಬ್ಯಾರಿ ಅಕಾಡೆಮಿಯ ರಿಜಿಸ್ಟ್ರಾರ್ ಪೂರ್ಣಿಮಾ ಸ್ವಾಗತಿಸಿದರು.

    ಮಂಗಳೂರು ವಿಶ್ವವಿದ್ಯಾನಿಲಯದ ಬ್ಯಾರಿ ಅಧ್ಯಯನ ಪೀಠದ ಸಂಯೋಜಕ ಡಾ. ಅಬೂಬಕ್ಕರ್ ಸಿದ್ದೀಕ್ ವಂದಿಸಿದರು.

    ಸದಸ್ಯ ಸಂಚಾಲಕ ಶಂಶೀರ್ ಬುಡೋಳಿ ಕಾರ್ಯಕ್ರಮ ನಿರೂಪಣೆ ಮಾಡಿದರು.

    DAKSHINA KANNADA

    ಬೆಂ*ಕಿಗೆ ಆಹುತಿಯಾದ ಹಡಗಿನಿಂದ ಅಪಾಯವಿಲ್ಲ, ಆತಂಕ ಬೇಡ : ಜಿಲ್ಲಾಧಿಕಾರಿ ಮುಲೈ ಮುಗಿಲನ್ ಸ್ಪಷ್ಟನೆ

    Published

    on

    ಮಂಗಳೂರು : ಮಂಗಳೂರು ಕರಾವಳಿಯ ಸಮುದ್ರದಲ್ಲಿ ಬೆಂ*ಕಿಗೆ ಆಹುತಿಯಾದ ವಿದೇಶಿ ಹಡಗಿನಿಂದ ಮಂಗಳೂರು ಕರಾವಳಿಗೆ ಯಾವುದೇ ಆತಂಕ ಇಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟ ಪಡಿಸಿದ್ದಾರೆ.

    ಜುಲೈ 19 ರಂದು ಗುಜರಾತ್‌ನಿಂದ ಕೊಲೊಂಬೋಕ್ಕೆ ತೆರಳುತ್ತಿದ್ದ ಸರಕು ಸಾಗಟದ ಹಡುಗು ಬೆಂ*ಕಿಗೆ ಆಹುತಿಯಾಗಿತ್ತು. ತಕ್ಷಣ ಕೋಸ್ಟ್‌ಗಾರ್ಡ್ ತಂಡ ನಿರಂತರ ನಲುವತ್ತು ಗಂಟೆ ಪ್ರಯತ್ನ ನಡೆಸಿ ಬೆಂಕಿ ನಂದಿಸುವ ಕೆಲಸವಾಗಿತ್ತು. ಬಳಿಕ ಹಡಗನ್ನು ಮಂಗಳೂರು ಕರಾವಳಿಯ 30 ನಾಟಿಕಲ್ ದೂರದಲ್ಲಿ ನಿಲ್ಲಿಸಲಾಗಿತ್ತು. ಇದರಿಂದ ತೈಲ ಸೋರಿಕೆ ಆಗುವ ಆತಂಕವನ್ನು ಹಲವರು ವ್ಯಕ್ತಪಡಿಸಿದ್ದರು.

    ಇದನ್ನೂ ಓದಿ : 5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    ಹಡಗು ಮುಳುಗಡೆಯಾಗುವ ಭೀತಿ ಇದ್ದು ಹಾಗಾದಲ್ಲಿ ಹಡಗಿನಲ್ಲಿರುವ ತೈಲ ಸೋರಿಕೆ ಆಗಬಹುದು ಎಂದು ಸುದ್ದಿಯಾಗಿತ್ತು. ಆದ್ರೆ, ಈ ವಿಚಾರವಾಗಿ ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು, ಅಂತಹ ಯಾವುದೇ ಅಪಾಯ ಇಲ್ಲ ಎಂದು ಹೇಳಿದ್ದಾರೆ. ಅಂತಹ ಅವ*ಘಡ ನಡೆದಲ್ಲಿ ಅದನ್ನು ಎದುರಿಸಲು ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಹಾಗೂ ಕೋಸ್ಟ್‌ಗಾರ್ಡ್‌ ಮತ್ತು ಕರಾವಳಿ ಕಾವಲು ಪಡೆ ಸನ್ನದ್ಧವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

    Continue Reading

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    Trending