LATEST NEWS
ಬೈಂದೂರು: ಸಿಮೆಂಟ್ ಲಾರಿ ಪ*ಲ್ಟಿ; ಚಾಲಕ ಸಾ*ವು
LATEST NEWS
ಹೆರಿಗೆ ನೋವು ಬಂದರೂ ರಜೆ ಇಲ್ಲ; ಗರ್ಭದಲ್ಲೇ ಮಗು ಸಾ*ವು !!
ಭುವನೇಶ್ವರ: ಕಚೇರಿಯಲ್ಲಿ ಕೆಲಸ ಮಾಡುವಾಗಲೇ ಹೆರಿಗೆ ನೋವು ಬಂದರೂ ರಜೆ ನಿರಾಕರಿಸಿದ ಕಾರಣಕ್ಕೆ ಮಹಿಳೆಯೊಬ್ಬಳು ತನ್ನ ಮಗುವನ್ನು ಗರ್ಭದಲ್ಲಿಯೇ ಕಳೆದುಕೊಂಡಿದ್ದಾಳೆ. ಈ ಬಗ್ಗೆ ಸ್ವತಃ ಆಕೆಯೇ ಮಾಧ್ಯಮ ಎದುರು ಹೇಳಿಕೊಂಡಿದ್ದಾರೆ. 26 ವರ್ಷದ ಮಹಿಳೆ ಒಡಿಶಾ ಸರ್ಕಾರಿ ಉದ್ಯೋಗಿಯಾಗಿದ್ದು, ಕೇಂದ್ರಪಾರ ಜಿಲ್ಲೆಯ ತಮ್ಮ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಅವಧಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಆದರೆ, ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ (ಸಿಡಿಪಿಒ)ರಜೆ ನೀಡದ ಕಾರಣಕ್ಕೆ ತನ್ನ ಮಗುವನ್ನು ಗರ್ಭದಲ್ಲಿಯೇ ಕಳೆದುಕೊಂಡಿದ್ದೇನೆ ಎಂದಿದ್ದಾರೆ. ಅಕ್ಟೋಬರ್ 25 ರಂದು ಈ ಘಟನೆ ಸಂಭವಿಸಿದೆ ಆದರೆ ಮಂಗಳವಾರ ಮಹಿಳೆ ವರ್ಷಾ ಪ್ರಿಯದರ್ಶಿನಿ ತನ್ನ ಕಥೆಯನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡಾಗ ಬೆಳಕಿಗೆ ಬಂದಿದೆ.
ಜಿಲ್ಲೆಯ ದೇರಾಬಿಶ್ ಬ್ಲಾಕ್‌ನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉದ್ಯೋಗಿ ವರ್ಷಾ ಅವರು ತಮ್ಮ ಏಳನೇ ತಿಂಗಳ ಗರ್ಭಾವಸ್ಥೆಯಲ್ಲಿದ್ದರು. ಅಕ್ಟೋಬರ್ 25 ರಂದು ಕಚೇರಿಯಲ್ಲಿ ಕೆಲಸ ಮಾಡುವ ಸಮಯದಲ್ಲಿಯೇ ತಮಗೆ ತೀವ್ರತರವಾದ ಹೆರಿಗೆ ನೋವು ಬಂದಿತ್ತು ಎಂದು ಹೇಳಿದ್ದಾರೆ. ಈ ಹಂತದಲ್ಲಿ ತಮ್ಮನ್ನು ಆಸ್ಪತ್ರೆಗೆ ಕರೆದೊಯ್ಯುವಂತೆ ಸಿಡಿಪಿಒ ಸ್ನೇಹಲತಾ ಸಾಹೂ ಮತ್ತು ಇತರ ಅಧಿಕಾರಿಗಳಿಗೆ ಮನವಿ ಮಾಡಿದರೂ ಅವರು ತಮ್ಮ ಮನವಿಯನ್ನು ನಿರ್ಲಕ್ಷ್ಯ ಮಾಡಿದರು ಎಂದು ಆರೋಪಿಸಿದ್ದಾರೆ. ಸ್ನೇಹಲತಾ ತಮ್ಮನ್ನು ಹೀನಾಯವಾಗಿ ನಡೆಸಿಕೊಂಡಿದ್ದಾರೆ ಎಂದು ವರ್ಷಾ ಹೇಳಿದ್ದಾರೆ.
ವಿನಂತಿ ಮಾಡಿದರೂ ಅವರು ತಮ್ಮ ಮನವಿಯನ್ನು ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಿದರು. ಸ್ನೇಹಲತಾ ತನ್ನನ್ನು ಹೀನಾಯವಾಗಿ ನಡೆಸಿಕೊಂಡಿದ್ದಾಳೆ ಎಂದು ಬಾರ್ಷಾ ಹೇಳಿಕೊಂಡಿದ್ದಾರೆ.ಬಳಿಕ ಬರ್ಷಾಳ ಸಂಬಂಧಿಕರು ಆಕೆಯನ್ನು ಕೇಂದ್ರಪಾರಾದಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದು, ಅಲ್ಟ್ರಾಸೌಂಡ್ ಪರೀಕ್ಷೆಯಲ್ಲಿ ಆಕೆಯ ಮಗು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.
ಸಿಡಿಪಿಒ ಅವರ “ಮಾನಸಿಕ ಕಿರುಕುಳ ಮತ್ತು ಸಂಪೂರ್ಣ ನಿರ್ಲಕ್ಷ್ಯ” ತನ್ನ ಮಗುವಿನ ಸಾವಿಗೆ ಕಾರಣವಾಗಿದೆ, ಸ್ನೇಹಲತಾ ಸಾಹೂ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಜಿಲ್ಲಾಧಿಕಾರಿಗೆ ಲಿಖಿತ ದೂರು ದಾಖಲು ಮಾಡಿದ್ದಾರೆ.
ಕೇಂದ್ರಪಾರ ಹೆಚ್ಚುವರಿ ಜಿಲ್ಲಾಧಿಕಾರಿ (ಎಡಿಎಂ) ನಿಲು ಮಹಾಪಾತ್ರ, ”ದೂರು ಸ್ವೀಕರಿಸಿದ ನಂತರ, ಈ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಜಿಲ್ಲಾಡಳಿತವು ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ (ಡಿಎಸ್‌ಡಬ್ಲ್ಯುಒ) ಅವರಿಗೆ ಸೂಚಿಸಿದೆ, ವರದಿ ಬಂದ ನಂತರ ನಾವು ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ. ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಉಪಮುಖ್ಯಮಂತ್ರಿ ಪ್ರವತಿ ಪರಿದಾ ಅವರು ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ಕೇಂದ್ರಪಾರಾ ಕಲೆಕ್ಟರ್‌ನೊಂದಿಗೆ ಘಟನೆಯ ಬಗ್ಗೆ ಚರ್ಚಿಸಿದ್ದಾರೆ ಮತ್ತು ತಕ್ಷಣ ವಿವರವಾದ ತನಿಖೆ ನಡೆಸಿ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ ಎಂದು ಹೇಳಿದರು.
ಆರೋಪದ ಕುರಿತು ಪ್ರತಿಕ್ರಿಯಿಸಿದ ಸಿಡಿಪಿಒ, ವರ್ಷಾಳ ಕಷ್ಟದ ಬಗ್ಗೆ ತನಗೆ ತಿಳಿದಿರಲಿಲ್ಲ. ಆಕೆಗೆ ಹೆರಿಗೆ ನೋವು ಬಂದಿದ್ದು ಗೊತ್ತಾಗಲಿಲ್ಲ ಎಂದಿದ್ದಾರೆ.ಈ ಕುರಿತು ತನಿಖೆ ನಡೆಸಲು ಸಮಿತಿಯೊಂದನ್ನು ರಚಿಸಲಾಗುವುದು, ಅದರ ನಂತರ ನಾವು ನಮ್ಮ ವರದಿಯನ್ನು ಸಲ್ಲಿಸುತ್ತೇವೆ ಎಂದು ಕೇಂದ್ರಪಾರದ ಡಿಎಸ್‌ಡಬ್ಲ್ಯೂಒ ಮನೋರಮಾ ಸ್ವೈನ್ ತಿಳಿಸಿದ್ದಾರೆ.
LATEST NEWS
ಹಾಸನಾಂಬೆ ದರ್ಶನಕ್ಕೆ ಹೊರಟಿದ್ದ ದಂಪತಿಯ ಕಾರು ಕೆರೆಗೆ ಪಲ್ಟಿ – ಪತ್ನಿ ಸಾ*ವು
ಚಿಕ್ಕಮಗಳೂರು: ಹಾಸನಾಂಬೆ ದೇವಿ ದರ್ಶನಕ್ಕೆ ಹೊರಟ್ಟಿದ್ದ ದಂಪತಿಯ ಕಾರು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಪಲ್ಟಿಯಾಗಿ ಪತ್ನಿ ಸಾ*ವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದಲ್ಲಿ ನಡೆದಿದೆ.
ಮೃ*ತ ಮಹಿಳೆಯನ್ನು ಚಿಕ್ಕಮಗಳೂರು ತಾಲೂಕಿನ ಗವನಹಳ್ಳಿ ಗ್ರಾಮದ ನಿವಾಸಿ ವನಿತಾ (38) ಗುರುತಿಸಲಾಗಿದೆ. ಪತ್ನಿ ವನಿತಾ ಅಪಘಾತದಲ್ಲಿ ಸಾ*ವನ್ನಪ್ಪಿದ್ದು, ಪತಿ ಮಂಜು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಂದು (ಅ.30) ಬೆಳಗಿನ ಜಾವ ನಾಲ್ಕು ಗಂಟೆಗೆ ಚಿಕ್ಕಮಗಳೂರಿನಿಂದ ಹಾಸನದ ಹಾಸನಾಂಬೆ ದೇವಿ ದರ್ಶನಕ್ಕೆ ಹೊರಟಿದ್ದ ಮಂಜು-ವನಿತಾ ದಂಪತಿಯ ಕಾರು ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಪಲ್ಟಿಯಾಗಿದೆ.
ಕೂಡಲೇ ಗ್ರಾಮಸ್ಥರು ಇಬ್ಬರನ್ನು ಬದುಕಿಸಲು ಹರಸಾಹಸಪಟ್ಟಿದ್ದಾರೆ. ಬೆಳಗಿನ ಜಾವದ ಕತ್ತಲಲ್ಲು ಕೂಡ ಕಲ್ಕೆರೆ ಗ್ರಾಮಸ್ಥರು ಕೆರೆಗೆ ಇಳಿದು ಕಾರಿಗೆ ಹಗ್ಗ ಕಟ್ಟಿ ಎಳೆದಿದ್ದಾರೆ. ಕಾರಿನ ಚಾಲಕ ಮಂಜು ಪ್ರಾಣಾಪಾಯದಿಂದ ಪಾರಾಗಿದ್ದು, ಮಂಜು ಪತ್ನಿ ವನಿತಾ ಸಾ*ವನ್ನಪ್ಪಿದ್ದಾರೆ. ಕಾರಿನಿಂದ ಮಹಿಳೆಯನ್ನು ಹೊರತಂತ ಗ್ರಾಮಸ್ಥರು ಅವರನ್ನ ಬದುಕಿಸಲು ತೀವ್ರ ಹರಸಾಹಸಪಟ್ಟಿದ್ದಾರೆ. ಎದೆ ಬಡಿದು, ಬಾಯಿಗೆ ಉಸಿರು ನೀಡಿ, ಕೈಕಾಲು ಉಜ್ಜಿ ಜೀವ ಉಳಿಸಲು ಪ್ರಯತ್ನಿಸಿದ್ದಾರೆ. ಆದರೆ, ಕಾರು ಕೆರೆಯಲ್ಲಿ ಮುಳುಗಿ ನೀರು ಕುಡಿದಿದ್ದ ವನಿತಾ ಉಸಿರುಗಟ್ಡಿ ಸಾವನ್ನಪ್ಪಿದ್ದಾರೆ. ಬೇಲೂರು ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.
LATEST NEWS
ಮಂಗಳೂರು: ಪಿಲಿಕುಳ ನಿಸರ್ಗಧಾಮದಲ್ಲಿ ಹೊತ್ತಿ ಉರಿದ 2 ‘ಬಗ್ಗಿ’ ಇಲೆಕ್ಟ್ರಿಕ್ ವಾಹನಗಳು
ಮಂಗಳೂರು: ಪಿಲಿಕುಳ ನಿಸರ್ಗಧಾಮದ ಟಿಕೆಟ್ ಕೌಂಟರ್ ಬಳಿ ಅಗ್ನಿ ಅವಘಡ ಸಂಭವಿಸಿ, ಎರಡು ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿಯಾದ ಘಟನೆ ಬುಧವಾರ ಮುಂಜಾನೆ ನಡೆದಿದೆ.
ಇಲ್ಲಿನ ವರ್ಕ್ ಶಾಪ್ ನಲ್ಲಿ ಚಾರ್ಜ್ ಗೆ ಹಾಕಿದ್ದ ಒಂದು ಎಲೆಕ್ಟ್ರಿಕ್ ವಾಹನದಲ್ಲಿ ಸ್ಪಾರ್ಕ್ ಉಂಟಾಗಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಒಟ್ಟು ಎರಡು ವಾಹನಗಳು ಸಂಪೂರ್ಣ ಭಸ್ಮವಾಗಿದೆ. ಪಾರ್ಕಿಂಗ್ ಸ್ಥಳದಲ್ಲಿ ಹತ್ತಕ್ಕೂ ಅಧಿಕ ಬಗ್ಗಿ ಎಲೆಕ್ಟ್ರಿಕ್ ವಾಹನಗಳಿದ್ದವು ಎನ್ನಲಾಗಿದೆ. ಆದರೆ ಅದೃಷ್ಟವಶಾತ್ ಭಾರೀ ದೊಡ್ಡ ಅನಾಹುತ ತಪ್ಪಿದಂತಾಗಿದೆ.
ಇನ್ನು ಎರಡು ವಾಹನಗಳು ಹೊತ್ತಿ ಉರಿಯುತ್ತಿದ್ದರೂ ಕದ್ರಿ ಅಗ್ನಿ ಶಾಮಕ ದಳ ಕ್ಲಪ್ತ ಸಮಯಕ್ಕೆ ಸ್ಥಳಕ್ಕೆ ಆಗಮಿಸಿರಲಿಲ್ಲ ಎಂಬ ಆರೋಪ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಪಿಲಿಕುಳದ ಸಿಬ್ಬಂದಿಗಳೇ ಸೇರಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ. ಅಂತಿಮವಾಗಿ ಅರ್ಧ ಗಂಟೆ ಬಳಿಕ ಕದ್ರಿ ಅಗ್ನಿ ಶಾಮಕ ದಳ ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸಿದೆ. ಅಲ್ಲದೆ ಘಟನಾ ಸ್ಥಳಕ್ಕೆ ಕಾವೂರು ಠಾಣಾ, ಮಂಗಳೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- BIG BOSS3 days ago
BBK 11 : ಸೃಜನ್ ಲೊಕೇಶ್ ಜೊತೆ ಬಂದ ಹೊಸ ಕಾರಲ್ಲಿ ಹೊರ ಹೊಗೋದು ಯಾರು ಗೊತ್ತಾ ??
- BIG BOSS6 days ago
ಕಲರ್ಸ್ ಶೋಗೆ ಮರಳಿದ ಲಾಯರ್ ಜಗದೀಶ್; ಫ್ಯಾನ್ಸ್ಗೆ ಗುಡ್ ನ್ಯೂಸ್
- FILM6 days ago
ತುಳು ಚಿತ್ರರಂಗಕ್ಕೆ ಕಾಲಿಟ್ಟ ಗಣೇಶ್ ಪತ್ನಿ ಶಿಲ್ಪಾ ಗಣೇಶ್
- LATEST NEWS2 days ago
ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ ʼಡಿಜಿಟಲ್ ಕಾಂಡೋಮ್ʼ !! ಬಳಕೆ ಹೇಗೆ ?