DAKSHINA KANNADA
ಸಿ.ಜಿ.ಹೆಚ್.ಎಸ್. ವೆಲ್ ನೆಸ್ ಸೆಂಟರ್ ಪ್ರಾರಂಭಕ್ಕೆ ಆರೋಗ್ಯಮತ್ತು ಕುಟುಂಬ ಕಲ್ಯಾಣ ಸಚಿವರಿಗೆ ನಳಿನ್ ಮನವಿ
ಮಂಗಳೂರಿನಲ್ಲಿ ಸಿ.ಜಿ.ಹೆಚ್.ಎಸ್. ವೆಲ್ ನೆಸ್ ಸೆಂಟರ್ ಪ್ರಾರಂಭಿಸುವಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಮನವಿ ಮಾಡಿದ್ದಾರೆ.
ಮಂಗಳೂರು: ಮಂಗಳೂರಿನಲ್ಲಿ ಸಿ.ಜಿ.ಹೆಚ್.ಎಸ್. ವೆಲ್ ನೆಸ್ ಸೆಂಟರ್ ಪ್ರಾರಂಭಿಸುವಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಮನವಿ ಮಾಡಿದ್ದಾರೆ.
ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ರವರು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮಾನ್ ಸುಖ್ ಮಾಂಡವೀಯರವರನ್ನು ದೆಹಲಿಯಲ್ಲಿ ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಗೆ ಸಿ.ಜಿ.ಹೆಚ್.ಎಸ್. ವೆಲ್ ನೆಸ್ ಸೆಂಟರ್ ನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು.
ದಕ್ಷಿಣ ಕನ್ನಡ ಹಾಗೂ ನೆರೆಯ ಜಿಲ್ಲೆಯಲ್ಲಿ ಸುಮಾರು 29000 ಮಂದಿ ಕೇಂದ್ರ ಸರ್ಕಾರಿ ನೌಕರರು, ಅವರ ಅವಲಂಬಿತರು ಹಾಗೂ ಪಿಂಚಣಿದಾರರು ಇದ್ದು, ಮಂಗಳೂರಿನಲ್ಲಿ ಸಿ.ಜಿ.ಹೆಚ್.ಎಸ್. ಕೇಂದ್ರವನ್ನು ಸ್ಥಾಪಿಸುವ ಮೂಲಕ ಅವರಿಗೆ ಅನುಕೂಲ ಮಾಡಿಕೊಡಬೇಕೆಂದು ಮಾನ್ಯ ಸಚಿವರಲ್ಲಿ ವಿನಂತಿಸಿದ್ದಾರೆ.
ಇದಕ್ಕೆ ಸ್ಪಂದಿಸಿದ ಮಾನ್ಯ ಸಚಿವರು ಈ ಕುರಿತು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂಬ ಭರವಸೆಯನ್ನು ನೀಡಿದ್ದಾರೆ ಎಂದು ಸಂಸದರು ತಿಳಿಸಿದ್ದಾರೆ.
DAKSHINA KANNADA
ಮಾದಕ ವಸ್ತು ಎಂಡಿಎಂಎ ಮಾರಾಟಕ್ಕೆ ಯತ್ನ-ಇಬ್ಬರು ಅರೆಸ್ಟ್..!
ಉಳ್ಳಾಲ: ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಯನ್ನು ಮಾರಾಟ ನಡೆಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಹೊರವಲಯದ ಉಳ್ಳಾಲ ಸಮೀಪದ ಸಿಗ್ರೌಂಡ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಸ್ತಿಕಟ್ಟೆ ಆಝಾದನಗರದ ಫಝಲ್ ಮತ್ತು ಮುಕ್ಕಚ್ಚೇರಿ ಕಡಪ್ಪುರ ದ ಸಮೀರ್ ಎಂಬವರನ್ನು ಬಂಧಿಸಲಾಗಿದೆ.
ಈ ಇಬ್ಬರು ಉಳ್ಳಾಲ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ 14ಗ್ರಾಂ ಎಂಡಿಎಂಎ ಮಾರಾಟ ಮಾಡಲು ಯತ್ನಿಸುವ ಸಂದರ್ಭ ಮಾಹಿತಿ ಪಡೆದ ಉಳ್ಳಾಲ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಆರೋಪಿಗಳನ್ನು ಬಂಧಿಸಿ, 14 ಗ್ರಾಂ ಎಂಡಿಎಂಎ ಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕಳೆದ ಎರಡು ದಿನಗಳ ಹಿಂದಷ್ಟೇ ದೇರಳಕಟ್ಟೆ ಯೆನೆಪೋಯ ಆಸ್ಪತ್ರೆ ಬಳಿಯಿಂದ ಓರ್ವ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದರು.
ಕಾರ್ಯಾಚರಣೆಯಲ್ಲಿ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ, ಪಿಎಸ್ಐ ಶೀತಲ್ ಹಾಗೂ ಸಿಬ್ಬಂದಿಗಳಾದ ರಂಜಿತ್, ಅಕ್ಬರ್, ಅಶೋಕ್, ಮಂಜು, ವೆಂಕಟೇಶ್ ಭಾಗವಹಿಸಿದ್ದರು.
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.
DAKSHINA KANNADA
ಮನೆಯ ಯಜಮಾನನ್ನು ಕಟ್ಟಿ ಹಾಕಿ ನಗ, ನಗದು ದರೋಡೆ- 6 ಜನ ಬಂಧನ..!
ಪುತ್ತೂರು: ಮನೆ ಬಾಗಿಲು ಮುರಿದು ಮನೆಯೊಳಗೆ ನುಗ್ಗಿದ ದರೋಡೆಕೋರರ ತಂಡವೊಂದು ಮನೆ ಮಂದಿಯನ್ನು ಕಟ್ಟಿ ಹಾಕಿ ನಗ-ನಗದು ದರೋಡೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಡಗನ್ನೂರು ಗ್ರಾಮಪಂಚಾಯತ್ ವ್ಯಾಪ್ತಿಯ ಕುದ್ಕಾಡಿ ಎಂಬಲ್ಲಿ ಸೆ. 7ರಂದು ನಡೆದಿದ್ದು, ಇದೀಗ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಸುಧೀರ್ ಪೆರುವಾಯಿ, ಕೇರಳದ ಕಾಸರಗೋಡು ಜಿಲ್ಲೆಯ ನಿವಾಸಿಗಳಾದ ಪಚ್ಚಂಬಳ ರವಿ, ಕಿರಣ್, ವಸಂತ, ಫಸಲ್, ನಿಝಾರ್ ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ಕ್ರಿಮಿನಲ್ ಹಿನ್ನಲೆಯುಳ್ಳ ಆರೋಪಿಗಳಾಗಿದ್ದಾರೆ.
ಪಚ್ಚಂಬಳ ರವಿಯು ಮಂಗಳೂರಿನ ತಾಲೂಕು ಪಂಚಾಯತ್ ಅಧ್ಯಕ್ಷ ಜಬ್ಬಾರ್ ಹತ್ಯೆಯ ಆರೋಪಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಎದುರಿಸುತ್ತಿದ್ದ ಆರೋಪಿಯಾಗಿದ್ದಾನೆ.
ಪೆರೋಲ್ ಮೂಲಕ ಜೈಲಿನಿಂದ ಹೊರಗೆ ಬಂದು ಕಳ್ಳವು ಕೃತ್ಯ ನಡೆಸಿದ್ದಾನೆ.
ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಕಾರು, ಚಿನ್ನ ವಶಕ್ಕೆ ಪಡೆದುಕೊಳ್ಳಲಾಗಿದ್ದು, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಡಗನ್ನೂರು ಗ್ರಾಮಪಂಚಾಯತ್ ನ ಮಾಜಿ ಸದಸ್ಯರಾಗಿರುವ ಗುರುಪ್ರಸಾದ್ ರೈ ಯವರ ಮನೆಯಲ್ಲಿ ಈ ದರೋಡೆ ಕೃತ್ಯ ನಡೆದಿತ್ತು.
ನಸುಕಿನ ಜಾವ ಸುಮಾರು 2 ಗಂಟೆಗೆ ಮನೆಯ ಮುಂದಿನ ಬಾಗಿಲ ಮೂಲಕ ಮನೆಯೊಳಗೆ ನುಗ್ಗಿದ ಸುಮಾರು 8 ಜನರಿದ್ದ ಮುಸುಕುಧಾರಿಗಳ ತಂಡ ಗುರುಪ್ರಸಾದ್ ಅವರನ್ನು ಕಟ್ಟಿ ಹಾಕಿ, ಕುತ್ತಿಗೆಗೆ ಚಾಕು ಹಿಡಿದು ಕಪಾಟಿನಲ್ಲಿದ್ದ ಸುಮಾರು 40 ಸಾವಿರ ರೂಪಾಯಿ ಮತ್ತು ಸುಮಾರು 15 ಪವನ್ ನಷ್ಟು ಚಿನ್ನವನ್ನು ದರೋಡೆ ಮಾಡಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ ವಿಶೇಷ ತಂಡ ರಚಿಸಿ ತನಿಖೆಗೆ ಆದೇಶಿಸಿದ್ದರು.
DAKSHINA KANNADA
ಲೈಂಗಿಕವಾಗಿ ಬಳಸಿಕೊಂಡು ಬ್ಲಾಕ್ ಮೇಲ್ ಮಾಡಿದ ಭಟ್- ಪ್ರಕರಣ ದಾಖಲು..!
ಪುತ್ತೂರು: ಬಣ್ಣದ ಮಾತುಗಳಿಂದ ವಿಶ್ವಾಸಗಳಿಸಿ ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡು ಪುತ್ತೂರಿನ ವ್ಯಕ್ತಿಯೊಬ್ಬ ಕೊನೆಗೆ ಮಹಿಳೆಯನ್ನೇ ಬ್ಲಾಕ್ ಮೇಲ್ ಮಾಡಿ ಹಣ ಕೀಳಲು ಯತ್ನಿಸಿದ ಬಗ್ಗೆ ಕಾರವಾರ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ.
ಪುತ್ತೂರಿನ ಆರ್ಲಪದವು ಮೂಲದ ಪ್ರಶಾಂತ ಭಟ್ ಮಾಣಿಲ ಪ್ರಕರಣದ ಆರೋಪಿ.
ದೂರು ನೀಡಿದ ಮಹಿಳೆಯು ಸಂಗೀತದಲ್ಲಿ ಆಸಕ್ತಿ ಇದ್ದು, ಕ್ಲಬ್ ಹೌಸ್ ಆ್ಯಪ್ ನಲ್ಲಿ ಹಾಡುತ್ತಿದ್ದಳು.
2020 ರಲ್ಲಿ ಆ್ಯಪ್ ಮೂಲಕವೇ ಆರೋಪಿಯ ಪರಿಚಯವಾಗಿದೆ. ಪರಿಚಯ ಸ್ನೇಹಕ್ಕೆ ತಿರುಗಿ ಕ್ರಮೇಣ ಪರಸ್ಪರ ಇಷ್ಟಪಟ್ಟಿದ್ದಾರೆ.
2023 ರ ಜನವರಿ ತಿಂಗಳಲ್ಲಿ ಆರೋಪಿಯು ಮಹಿಳೆಯನ್ನು ಭೇಟಿಯಾಗಲು ಬಂದು ಖಾಸಗಿ ಲಾಡ್ಜ್ ಒಂದರಲ್ಲಿ ರೂಂ ಮಾಡಿದ್ದಾನೆ.
ಅಲ್ಲಿ ಮಹಿಳೆಯ ಮೇಲೆ ಆರೋಪಿಯು ಲೈಂಗಿಕ ಹಲ್ಲೆ ನಡೆಸಿದ್ದಾನೆ.
ಅಲ್ಲದೇ ಅದೇ ಲಾಡ್ಜಿನಲ್ಲಿ ಘಟನೆಯು ಮತ್ತೊಮ್ಮೆ ನಡೆದಿದೆ ಎಂದು ಮಹಿಳೆಯು ದೂರಿನಲ್ಲಿ ದಾಖಲಿಸಿದ್ದಾರೆ.
ಈ ವೇಳೆ ಆರೋಪಿಯು ಮಹಿಳೆಯೊಂದಿಗಿರುವ ಖಾಸಗಿ ಕ್ಷಣಗಳ ಫೋಟೋ ಕ್ಲಿಕ್ಕಿಸಿಕೊಂಡಿದ್ದಾನೆ.
ಜತೆಗೆ ವಿಡಿಯೋ ಕಾಲ್ ಮಾಡಿ ಅಲ್ಲಿಯೂ ನಗ್ನ ದೃಶ್ಯಗಳನ್ನು ಸೆರೆ ಹಿಡಿದಿದ್ದಾನೆ ಎಂದು ದೂರಲಾಗಿದೆ.
ಆರೋಪಿಯು ಮಹಿಳೆಯಿಂದ ಹಣಕ್ಕೂ ಬೇಡಿಕೆ ಇಟ್ಟಿದ್ದು, ಮಹಿಳೆಯು ಒಮ್ಮೆ 25 ಸಾವಿರ ಹಣ ನೀಡಿದ್ದಾಳೆ.
ಬಳಿಕ ಆರೋಪಿಯು ಖಾಸಗಿ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿ ಬೆದರಿಕೆ ನೀಡಿ ಏಳು ಲಕ್ಷ ರೂಪಾಯಿಗಳಿಗೆ ಬೇಡಿಕೆ ಇಟ್ಟಿದ್ದಾನೆ.
ಅಲ್ಲದೇ ಮಹಿಳೆಯ ತಾಯಿ ಹಾಗು ಸ್ನೇಹಿತರಿಗೂ ಖಾಸಗಿ ಕ್ಷಣಗಳ ಚಿತ್ರಗಳನ್ನು ಕಳುಹಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಕಾರವಾರದ ಮಹಿಳಾ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
- FILM7 days ago
Film: ಹಂದಿ ಮಾಂಸ ಸೇವಿಸಿದ ಟಿಕ್ಟಾಕ್ ಸ್ಟಾರ್ಗೆ 2 ವರ್ಷ ಜೈಲು ಶಿಕ್ಷೆ..!
- bangalore6 days ago
ಹುಡುಗಿ ಚೇಂಜ್ ಆದ್ರೂ ಡ್ರೆಸ್ ಚೇಂಜ್ ಆಗಿಲ್ಲ ಅಲ್ವಾ ಶೆಟ್ರೇ?
- bengaluru5 days ago
ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ..!
- DAKSHINA KANNADA5 days ago
ಮುಂದಿನ ವರ್ಷದಿಂದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ 3 ಬೋರ್ಡ್ ಎಕ್ಸಾಮ್- ಮಧು ಬಂಗಾರಪ್ಪ