Connect with us

DAKSHINA KANNADA

ಸಿ.ಟಿ ರವಿಯೂ ದೇಶದ್ರೋಹಿ ಎಂದ ರಮಾನಾಥ ರೈ

Published

on

ಮಂಗಳೂರು: ನೆಹರೂ ಬಗ್ಗೆ ಹಗುರವಾಗಿ ಮಾತನಾಡಿದ ಶಾಸಕ ಸಿ.ಟಿ ರವಿಯೂ ದೇಶದ್ರೋಹಿ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿಕೆ ನೀಡಿದ್ದಾರೆ.


ಇಂದು ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್‌ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸ್ವಾತಂತ್ರ್ಯೋತ್ಸವವನ್ನು ರಾಷ್ಟ್ರಾದ್ಯಂತ ಮಾಡಿ ದೇಶಕ್ಕಾಗಿ ಹೋರಾಟ ಮಾಡಿದ ದೇಶಪ್ರೇಮಿಗಳನ್ನು ನಾವು ಸ್ಮರಿಸಿಕೊಂಡಿದ್ದೇವೆ.

ಈ ಸಂದರ್ಭದಲ್ಲಿ ಕೆಲವು ಬಿಜೆಪಿ ನಾಯಕರು ಸ್ವಾತಂತ್ರ್ಯ ಹೋರಾಟಗಾರರನ್ನು ಅಪಮಾನ ಮಾಡುವ ಹೇಳಿಕೆಗಳನ್ನು ನೀಡುತ್ತಿರುವುದು ಖೇದಕರವಾಗಿದೆ ಎಂದು ಮಾಜಿ ಸಚಿವ ಬಿ ರಮಾನಾಥ ರೈ ಹೇಳಿದ್ದಾರೆ.
ಬಿಜೆಪಿ ನಾಯಕ ಸಿಟಿ ರವಿ ಅವರು ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ನೆಹರೂ ಅವರ ಬಗ್ಗೆ ಅತ್ಯಂತ ಕೀಳಾಗಿ ಮಾತನಾಡಿದ್ದಾರೆ.

ಅವರ ಇಡೀ ಕುಟುಂಬವೇ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಕುಟುಂಬವಾಗಿದೆ ಎಂದರು.

ಸಿಟಿ ರವಿ ತಲೆಯಲ್ಲಿ ತಾನೊಬ್ಬ ದೊಡ್ಡ ಪ್ರಧಾನ ಕಾರ್ಯದರ್ಶಿ ಎನ್ನುವ ವಿಚಾರ ಹೊಕ್ಕಿದೆ. ಸ್ವಾತಂತ್ರ್ಯಕ್ಕಾಗಿ ಜೈಲು ಕಂಡ, ಪಂಡಿತ್‌ ಜವಾಹರಲಾಲ್‌ ನೆಹರೂ ಬಗ್ಗೆ ಅಪಪ್ರಚಾರವನ್ನು ಬಿಜೆಪಿಯವರೇ ಮಾಡುತ್ತಿರುವುದು ದೊಡ್ಡ ಅಪಮಾನವಾಗಿದೆ ಎಂದರು.

ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಮಾಡಿರುವುದು ದೊಡ್ಡ ಅವಹೇಳನವಾಗಿದೆ ಎಂದರು.

ನಾವು ಪಂಚವಾರ್ಷಿಕ ಯೋಜನೆಗಳನ್ನು ಜಾರಿಗೆ ತಂದು ಸಾಕಷ್ಟು ಅಭಿವೃದ್ಧಿ ಕಾರ್ಯಗಳಿಗೆ ಬುನಾದಿ ಹಾಕಿದವರು ಅವರು. ಸಿಟಿ ರವಿ, ಈಶ್ವರಪ್ಪ ಹೇಳುತ್ತಿರುವ ಹೇಳಿಕೆಗೆ ಬಿಜೆಪಿ ಪಕ್ಷವೇ ಹೊಣೆಯಾಗಿದೆ ಎಂದು ರೈ ಹರಿಹಾಯ್ದರು.

ಇಂದಿರಾ ಕ್ಯಾಂಟೀನ್‌ ಹೆಸರು ಬದಲಾವಣೆಗೆ ಹೊರಟಿದ್ದಾರೆ ಇವರು. ಅವರು ದೇಶದ ಸುಭದ್ರತೆಗಾಗಿ ಹೋರಾಡಿ, ಪ್ರಾಣ ಕೊಟ್ಟವರು.

ಇಂದಿಗಾ ಗಾಂಧಿ ಭೂಮಸೂದೆ ಕಾನೂನು, ಜೀತಪದ್ಧತಿ ರದ್ದತಿ, ಬಡವರಿಗೆ ಮನೆ ಕಟ್ಟಿಕೊಡುವ 20 ಅಂಶಗಳ ಆರ್ಥಿಕ ಕಾರ್ಯಕ್ರಮವನ್ನು ತಂದವರು ಇಂದಿರ ಗಾಂಧಿ.

ಅವರ ಯೋಜನೆಗಳ ಅತ್ಯಂತ ಹೆಚ್ಚು ಲಾಭ ಪಡೆದವರು ದುರ್ಬಲವರ್ಗದವರು ದಕ್ಷಿಣ ಕನ್ನಡ ಜಿಲ್ಲೆಯವರು ಎಂದರು.

DAKSHINA KANNADA

ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀ*ರ

Published

on

ಮಂಗಳೂರು: ಬೈಕಂಪಾಡಿ ಹೋಟೆಲ್ ಶ್ರೀ ದ್ವಾರದ ಬಳಿ ಲಾರಿಗಳೆರಡರ ನಡುವೆ ಅಪಘಾತ ಸಂಭವಿಸಿ ಲಾರಿ ಚಾಲಕ ಗಂಭಿರ ಗಾಯಗೊಂಡ ಘಟನೆ ನಡೆದಿದೆ. ಒಂದು ಲಾರಿಯೊಂದು ಗ್ರಾನೈಟ್ ಅಂಗಡಿಯೊಳಗೆ ನುಗ್ಗಿದ್ದು, ಅಪಾರ ಮೌಲ್ಯದ ಗ್ರಾನೈಟ್‌ ಹಾನಿಗೊಂಡಿದೆ.

ಮುಂದೆ ಓದಿ..; ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!

accident

ಲಾರಿ ಸಾಗಾಟ ಮಾಡುತ್ತಿದ್ದ ಲಾರಿ ಅಪಘಾತದಿಂದ ನಜ್ಜುಗುಜ್ಜಾಗಿದೆ. ಇನ್ನು ಇದೇ ಭಾಗದಲ್ಲಿ ನಿತ್ಯವೂ ಮಹಿಳೆಯರು ಮೀನ ಮಾರಾಟ ಮಾಡುತ್ತಿದ್ದರು. ಅದೃಷ್ಟವಶಾತ್ ಇದೀಗ ಭಾರೀ ಅನಾಹುತ ತಪ್ಪಿದೆ.

 

Continue Reading

DAKSHINA KANNADA

ದೊಡ್ಡವರ ಜಗಳದಲ್ಲಿ ಇಹಲೋಕ ತಜ್ಯಿಸಿದ 3 ರ ಕಂದಮ್ಮ…

Published

on

ಮಂಗಳೂರು (ಬೆಳಗಾವಿ): ಅದು ಎರಡು ಕುಟುಂಬಗಳ ನಡುವೆ ನಡೆದಿರೋ ಜಗಳ . ಆದ್ರೆ ಆ ಜಗಳಕ್ಕೆ ಏನೂ ಅರಿಯದ ಮೂರು ವರ್ಷದ ಪುಟ್ಟ ಮಗು ಬಲಿಯಾಗಿದೆ. ಪಾಪಿಯೊಬ್ಬ ಮಗುವಿನ ಎದೆಗೆ ಕಾಲಿಟ್ಟು ಮಗುವಿನ ಉಸಿರು ನಿಲ್ಲಿಸಿದ್ದಾನೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಎಂಬ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ದೊಡ್ಡವರ ಜಗಳದಲ್ಲಿ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಎಂಬ ಮೂರು ವರ್ಷದ ಮಗು ಹತವಾಗಿದೆ. ಜೋತಿಭಾ ತುಕಾರಾಮ ಬಾಬಬರ ಎಂಬಾತ ಮಗುವಿನ ಜೀವಕ್ಕೆ ಕುತ್ತು ತಂದ ಆರೋಪಿಯಾಗಿದ್ದಾನೆ.
ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಜಗಳ ತಾರಕ್ಕೇರಿದಾಗ ಸಿಟ್ಟಿನಲ್ಲಿ ಜೋತಿಬಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ನಿಂತಿದ್ದಾನೆ. ಈ ವೇಳೆ ಮಗುವನ್ನು ಆತನ ಕಾಲಿನ ಅಡಿಯಿಂದ ತೆಗೆಯಲು ಮಗುವಿನ ತಾಯಿ ಯತ್ನಿಸಿದ್ದಾಳೆ . ಆ ವೇಳಗೆ ಇನ್ನಷ್ಟು ಗಟ್ಟಿಯಾಗಿ ಕಾಲಿನಿಂದ ಮಗುವಿನ ಎದೆಗೆ ಕಾಲಿನಿಂದ ಒತ್ತಿದ ಕಾರಣ ಮಗು ಉಸಿರು ನಿಲ್ಲಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವಿನ ದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.

Continue Reading

DAKSHINA KANNADA

ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!

Published

on

ನ್ಯೂಯಾರ್ಕ್‌ : ಅಮೇರಿಕಾದಲ್ಲಿ ನಡೆದ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ಮಹಿಳೆಯರು ಇಹಲೋಕ ತ್ಯಜಿಸಿದ್ದಾರೆ. ಕೌಂಟಿಯ ಹೆದ್ದಾರಿಯ ಸೇತುವೆಯೊಂದರ ಮೇಲೆ ವೇಗವಾಗಿ ಕಾರು ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಉತ್ತರದ ಕಡೆಗೆ ಕಾರು ಪ್ರಯಾಣಿಸುತ್ತಿದ್ದು, ಎಲ್ಲಾ ಲೇನ್‌ಗಳನ್ನು ದಾಟಿ, ಹಂಪ್‌ ಮೇಲೆ ವೇಗವಾಗಿ ಏರಿತ್ತು. ಈ ಕಾರಣದಿಂದ ಕನಿಷ್ಟ 20 ಅಡಿಗಳಷ್ಟು ಮೇಲಕ್ಕೆ ಹಾರಿ ಸೇತುವೆಯ ಮುಂದೆ ಇದ್ದ ಮರಗಳಿಗೆ ಕಾರು ಅಪ್ಪಳಿಸಿದೆ. ಗುಜಾರಾತ್ ಮೂಲದ ಮೂವರು ಮಹಿಳೆಯರು ಈ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಗುಜರಾತ್‌ನ ಆನಂದ್ ಜಿಲ್ಲೆಯ ರೇಖಾಬೆನ್‌ ಪಟೇಲ್ , ಸಂಗೀತಾಬೆನ್ ಪಟೇಲ್ ಹಾಗೂ ಮನೀಶಾಬೆನ್ ಪಟೇಲ್‌ ಅವರು ಇಹಲೋಕ ತ್ಯಜಿಸಿದವರಾಗಿದ್ದಾರೆ.

 

ಕಾರು ನಿಗದಿಪಡಿಸಿದ ವೇಗದ ಮಿತಿಗಿಂತ ಹೆಚ್ಚು ವೇಗದಲ್ಲಿತ್ತು ಎಂದು ಅಲ್ಲಿನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಪಘಾತದ ಪ್ರಮಾಣ ಎಷ್ಟಿತ್ತು ಮತ್ತು ಕಾರು ಎಷ್ಟು ಎತ್ತರಕ್ಕೆ ಹಾರಿತ್ತು ಅನ್ನೋದಿಕ್ಕೆ ಮರದ ಮೇಲಿರುವ ಕಾರಿನ ಅವಶೇಷಗಳು ಸಾಕ್ಷಿ ಎಂದು ಅವರು ಹೇಳಿದ್ದಾರೆ. ಮರದ ಮೇಲೆ ಬಿದ್ದ ಕಾರು ಛಿದ್ರಗೊಂಡು ಕಾರಿನ ಅವಶೇಷಗಳು ಚೆಲ್ಲಾಪಿಲ್ಲಿಯಾಗಿತ್ತು.


ದಕ್ಷಿಣ ಕೆರೊಲಿನಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಕ್ಷಣ ಸ್ಥಳಕ್ಕೆ ರಕ್ಷಣಾ ತಂಡಗಳು, ಪೊಲೀಸರು ಆಗಮಿಸಿದ್ದಾರೆ. ಅಪಘಾತದಲ್ಲಿ ಓರ್ವ ಬದುಕಿ ಉಳಿದಿದ್ದು, ಆತನ ಸ್ಥಿತಿ ಗಂಭೀರವಾಗಿದ್ದು ಈಗಲೇ ಏನೂ ಹೇಳಲು ಆಗದ ಪರಿಸ್ಥಿತಿಯಲ್ಲಿದ್ದಾನೆ. ವಾಹನ ಅಪಘಾತವಾದ ತಕ್ಷಣ ಅದರಲ್ಲಿದ್ದ ತಾಂತ್ರಿಕ ವ್ಯವಸ್ಥೆಯ ಕಾರಣ ತಕ್ಷಣ ಕುಟುಂಬ ಸದಸ್ಯರಿಗೆ ಅಲರ್ಟ್‌ ಮೆಸೆಜ್ ರವಾನೆಯಾಗಿತ್ತು. ಹೀಗಾಗಿ ತಕ್ಷಣ ಕುಟುಂಬಸ್ಥರು ಕೂಡಾ ತಕ್ಷಣ ಸ್ಥಳಕ್ಕೆ ಆಗಮಿಸಿದ್ದಾರೆ.

Continue Reading

LATEST NEWS

Trending