DAKSHINA KANNADA
5 ಗ್ಯಾರಂಟಿಗಳ ಜಾರಿಗೆ ಸಚಿವ ಸಂಪುಟ ಒಪ್ಪಿಗೆ – ಪ್ರಸಕ್ತ ಹಣಕಾಸು ವರ್ಷದಲ್ಲಿ ಅನುಷ್ಠಾನ : ಸಿಎಂ ಸಿದ್ದರಾಮಯ್ಯ..!
ಕಾಂಗ್ರೆಸ್ ಪಕ್ಷ ಚುನಾವಣೆಗೂ ಮುನ್ನಾ ಜನತೆಗೆ ನೀಡಲಾಗಿದ್ದ ಎಲ್ಲಾ ಗ್ಯಾರಂಟಿ ಭರವಸೆಗಳನ್ನು ಪ್ರಸಕ್ತ ಹಣಕಾಸು ವರ್ಷದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರು: ಕಾಂಗ್ರೆಸ್ ಪಕ್ಷ ಚುನಾವಣೆಗೂ ಮುನ್ನಾ ಜನತೆಗೆ ನೀಡಲಾಗಿದ್ದ ಎಲ್ಲಾ ಗ್ಯಾರಂಟಿ ಭರವಸೆಗಳನ್ನು ಪ್ರಸಕ್ತ ಹಣಕಾಸು ವರ್ಷದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆ ನಂತರ ಸುದ್ದಿಗಾರರೊಂದಿಗೆ ಸುಧೀರ್ಘವಾಗಿ ಮುಖ್ಯಮಂತ್ರಿ ಮಾತನಾಡಿದರು.
ಮೊದಲ ಗ್ಯಾರಂಟಿಯಾಗಿ ಗೃಹ ಜ್ಯೋತಿ : ಗೃಹ ಜ್ಯೋತಿ ಯೋಜನೆಯನ್ನು ಜುಲೈ 1 ರಿಂದ ಜಾರಿ ಮಾಡಲಾಗುವುದು. 12 ತಿಂಗಳ ಸರಾಸರಿ ಆಧರಿಸಿ, ಅದಕ್ಕೆ ಶೇಕಡಾ 10 ರಷ್ಟು ಸೇರಿಸಿ, ಸಂಪೂರ್ಣ ಶುಲ್ಕ ವಿನಾಯಿತಿ ನೀಡಲಾಗಿತ್ತದೆ, ಈ ಹಿಂದಿನ ಹಳೇ ವಿದ್ಯುತ್ ಬಾಕಿಯನ್ನು ಗ್ರಾಹಕರೇ ಪಾವತಿಸಬೇಕು.ಜುಲೈ ತಿಂಗಳ ವಿದ್ಯುತ್ ಬಳಕೆಗೆ ಆಗಸ್ಟ್ ನಿಂದ ಅನ್ವಯವಾಗಲಿದೆ. ಬಾಡಿಗೆದಾರರಿಗೂ ಈ ಯೋಜನೆ ಅನ್ವಯವಾಗಲಿದೆ ಎಂದರು. ಯಾವುದೇ ಜಾತಿ, ಧರ್ಮಗಳ ತಾರತಮ್ಯ ಇಲ್ಲದೆ ಗ್ಯಾರಂಟಿ ಯೋಜನೆ ಜಾರಿ ಎಂದರು.
ಎರಡನೇ ಯೋಜನೆ ‘ಗೃಹಲಕ್ಷ್ಮಿ’ : ಗೃಹಲಕ್ಷ್ಮೀ ಯೋಜನೆಯನ್ನು ಆಗಸ್ಟ್ 15 ರಂದು ಅನುಷ್ಠಾನಕ್ಕೆ ತರಲಾಗುವುದು, ಈ ಯೋಜನೆಯಡಿ ಬಿಪಿಎಲ್ , ಎಪಿಎಲ್ ಖಾತೆದಾರರ ಮನೆ ಯಜಮಾನಿ ಖಾತೆಗೆ ಹಣ ಮಾಡಲಾಗುವುದು, ಸಾಮಾಜಿಕ ಭದ್ರತೆ ಪಿಂಚಣಿದಾರರಿಗೂ ಈ ಯೋಜನೆ ಅನ್ವಯವಾಗಲಿದೆ ಯೋಜನೆ ಫಲಾನುಭವಿಗಳು ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ವಿವರ ಸಲ್ಲಿಸಬೇಕು, ಜೂನ್ 15 ರಿಂದ ಜುಲೈ 15ರೊಳಗೆ ಅರ್ಜಿ ಸಲ್ಲಿಸಬೇಕು ಎಂದರು.
3ನೇ ಗ್ಯಾರಂಟಿ ‘ಅನ್ನಭಾಗ್ಯ’ : ಅನ್ನ ಭಾಗ್ಯ ಯೋಜನೆಯಡಿ ಜುಲೈ 1 ರಿಂದ ಎಲ್ಲಾ ಬಿಪಿಎಲ್ ಕಾರ್ಡ್ ದಾರರು ಮತ್ತು ಅಂತ್ಯೋದಯ ಫಲಾನುಭವಿಗಳಿಗೆ ತಲಾ 10 ಕೆಜಿ ಅಕ್ಕಿ ನೀಡಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.
4ನೇ ಗ್ಯಾರಂಟಿ ಶಕ್ತಿ: ವಿದ್ಯಾರ್ಥಿನಿಯರು ಸೇರಿದಂತೆ ರಾಜ್ಯದಲ್ಲಿನ ಎಲ್ಲಾ ಮಹಿಳೆಯರು ಕೆಎಸ್ ಆರ್ ಟಿಸಿ ಹಾಗೂ ಬಿಎಂಟಿಸಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಶಕ್ತಿ ಯೋಜನೆಗೆ ಈ ತಿಂಗಳು 11 ನೇ ತಾರೀಖು ಚಾಲನೆ ನೀಡಲಾಗುವುದು, ಬೆಂಗಳೂರಿನಿಂದ ತಿರುಪತಿ, ಬೆಂಗಳೂರಿನಿಂದ ಹೈದರಾಬಾದ್‌ಗೆ ಅವಕಾಶ ವಿಲ್ಲ. ಎಸಿ ಮತ್ತು ಲಕ್ಸುರಿ ಬಸ್ ಹೊರತುಪಡಿಸಿ ಸಾಮಾನ್ಯ ಬಸ್ ಗಳಿಗೆ ಮಾತ್ರ ಅನ್ವಯವಾಗಲಿದೆ. ಕೆಎಸ್ ಆರ್ ಟಿ ಸಿ ಬಸ್ ನಲ್ಲಿ ಶೇ.50 ರಷ್ಟು ಸೀಟು ಪುರುಷರಿಗೆ ಮೀಸಲು, ಐರಾವತ, ರಾಜಹಂಸ ಸೇರಿ ಎಲ್ಲ ರೀತಿಯ ಲಕ್ಸ್ಯೂರಿ, ಎಸಿ ಮತ್ತು ನಾನ್ ಎಸಿ ಸ್ಲೀಪರ್ ಬಸ್ ಗಳಿಗೆ ಇದು ಅನ್ವಯವಾಗಲ್ಲ ಎಂದು ಮುಖ್ಯಮಂತ್ರಿ ತಿಳಿಸಿದರು. ಉಚಿತ ಬಸ್ ಪ್ರಯಾಣದ ಸವಲತ್ತನ್ನು ತೃತೀಯ ಲಿಂಗಿಗಳಿಗೂ ಒದಗಿಸಲಾಗಿದೆ.
5ನೇ ಗ್ಯಾರಂಟಿ ಯುವನಿಧಿ: 2022-23ರಲ್ಲಿ ಪಾಸ್ ಆದ ಪದವೀಧರ ನಿರುದ್ಯೋಗಿಗಳಿಗೆ ನೋಂದಣಿಯಾದ 24 ತಿಂಗಳ ವರಗೆ ಪ್ರತಿ ತಿಂಗಳಿಗೆ 3,000 ಮತ್ತು ಡಿಪ್ಲೋಮಾ ಮಾಡಿದವರಿಗೆ 1, 1500 ಗೌರವ ಧನ ನೀಡಲಾಗುವುದು ಎಂದ ಮುಖ್ಯಮಂತ್ರಿ ತಿಳಿಸಿದರು. ವೃತ್ತಿಪರ ಶಿಕ್ಷಣ ಸೇರಿದಂತೆ ಎಲ್ಲಾ ಪದವೀಧರ ನಿರುದ್ಯೋಗಿಗಳಿಗೆ ಇದು ಅನ್ವಯವಾಗಲಿದೆ. ತೃತೀಯ ಲಿಂಗಿಗಳಿಗೂ ಕೂಡಾ ಈ ಯೋಜನೆ ಅನ್ವಯ ನಿರುದ್ಯೋಗ ಭತ್ಯೆ ನೀಡಲಾಗುವುದು, ಇದಕ್ಕಾಗಿ ಅರ್ಜಿ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸ್ಪಷ್ಪಪಡಿಸಿದರು.
DAKSHINA KANNADA
ಮೇಯರ್ ಫೋನ್ ಇನ್ : ಮಂಗಳೂರು ನಗರದ 8 ಕಡೆ ಬಸ್ ಬೇ ನಿರ್ಮಾಣ- ಸುಧೀರ್ ಶೆಟ್ಟಿ
ಮಂಗಳೂರು: ಮಂಗಳೂರು ನಗರ ವ್ಯಾಪ್ತಿಯಲ್ಲಿ ಒಟ್ಟು 53 ಪ್ರದೇಶಗಳಲ್ಲಿ ಬಸ್ಸು ತಂಗುದಾಣ ನಿರ್ಮಿಸಲು ಮಂಗಳೂರು ಪೊಲೀಸ್ ಕಮಿಷನರ್ ಪ್ರಸ್ತಾವನೆ ಸಲ್ಲಿಸಿದ್ದು, ಪ್ರಸ್ತುತ 8 ಪ್ರದೇಶಗಳಲ್ಲಿ ಬಸ್ ಬೇ ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ತಿಳಿಸಿದ್ದಾರೆ.
ಮೇಯರ್ ಕಚೇರಿಯಲ್ಲಿ ಶನಿವಾರ ನಡೆದ ಮೇಯರ್ ಫೋನ್ ಇನ್ ಕಾರ್ಯಕ್ರಮದಲ್ಲಿ ಸುದ್ದಿಗಾರರ ಜೊತೆ ಅವರು ಮಾತನಾಡಿದರು.
ಮೊದಲ ಹಂತದಲ್ಲಿ ನಾಗರಿಕರಿಂದ ಹೆಚ್ಚು ಬೇಡಿಕೆ ಇರುವ ಬಿಜೈ ಕೆಎಸ್ಸಾರ್ಟಿಸಿ ಬಸ್ಸು ನಿಲ್ದಾಣ ಸಮೀಪ, ಲೇಡಿಹಿಲ್, ಕಂಕನಾಡಿ ಜಂಕ್ಷನ್, ಬಂಟ್ಸ್ ಹಾಸ್ಟೇಲ್ ಸೇರಿದಂತೆ ಒಟ್ಟು 8 ಕಡೆಗಳಲ್ಲಿ ಬಸ್ ಬೇ ನಿರ್ಮಿಸಲಾಗುವುದು.
ಬಳಿಕ ಹಂತ ಹಂತವಾಗಿ ಉಳಿದೆಡೆ ಬಸ್ ಬೇ ನಿರ್ಮಿಸಲಾಗುವುದು ಎಂದರು. ನಗರದಲ್ಲಿ 53 ಬಸ್ಸು ತಂಗುದಾಣಕ್ಕೆ ಪೊಲೀಸರು ಪ್ರಸ್ತಾವನೆ ಸಲ್ಲಿಸಿದ್ದರೂ ಅಧಿಕಾರಿಗಳುಮಾತ್ರ ಕಡತದಲ್ಲೇ ಬಾಕಿ ಇರಿಸಿದ್ದು, ಮನಪಾ ಆಡಳಿತದ ಸಭೆಗೆ ಹಾಜರುಪಡಿಸದಿರುವುದು ಗಮನಕ್ಕೆ ಬಂತು.
ಕೂಡಲೇ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ ಪ್ರಸ್ತಾವನೆಯನ್ನು ಮುಂದಿನ ಸಭೆಗೆ ಹಾಜರುಪಡಿಸುವಂತೆ ಸೂಚನೆ ನೀಡಿದರು.
ಬೀದಿ ಬದಿ ವ್ಯಾಪಾರಸ್ಥರು ನಗರದ ಅನೇಕ ಕಡೆಗಳಲ್ಲಿ ರಸ್ತೆ ಹಾಗೂ ಫುಟ್ಪಾತ್ ಅತಿಕ್ರಮಣ ನಡೆಸಿದ್ದಾರೆ.
ಅಗಲಗೊಂಡರಸ್ತೆಯಲ್ಲಿ ವಾಹನಗಳನ್ನು ಪಾರ್ಕ್ ಮಾಡಲಾಗುತ್ತಿದೆ.
ಈ ಬಗ್ಗೆ ಪಾಲಿಕೆ ಕ್ರಮ ವಹಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದರು.
bengaluru
ಬೆಂಗಳೂರಿನಲ್ಲಿ ಮೊತ್ತ ಮೊದಲ ಬಾರಿಗೆ ನಡೆಯುವ ಕಂಬಳಕ್ಕೆ ಡೇಟ್ ಫಿಕ್ಸ್-ಅಶೋಕ್ ಕುಮಾರ್ ರೈ
ಮಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಪ್ರಥಮ ಬಾರಿಗೆ ಹೊನಲು ಬೆಳಕಿನ ಕರಾವಳಿಯ ಜಾನಪದ ಕ್ರೀಡೆ ಕಂಬಳ ನ. 25 ಮತ್ತು 26ರಂದು ನಡೆಯಲಿದೆ ಎಂದು ಬೆಂಗಳೂರು ಕಂಬಳ ಸಮಿತಿಯ ಸಂಘಟಕ ಹಾಗೂ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ.
ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು ರಾಜ್ಯದ ಮುಖ್ಯಮಂತ್ರಿ, ಉಪಮುಖ್ಯ ಮಂತ್ರಿ ಸೇರಿದಂತೆ ರಜನಿಕಾಂತ್, ಐಶ್ವರ್ಯ ರೈ ಸೇರಿದಂತೆ ಸಿನಿಮಾ ಕ್ಷೇತ್ರದ ನಟ ನಟಿಯರು ಭಾಗವಹಿಸಲಿದ್ದಾರೆ.
ಪ್ರಥಮ ಬಾರಿಗೆ ಬೆಂಗಳೂರಿನಲ್ಲಿ ನಡೆಯುವ ಈ ಕಂಬಳ ಕೂಟದಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಸೇರಿದಂತೆ ವಿವಿಧ ಜಿಲ್ಲೆಗಳ ಸುಮಾರು 130 ಜೊತೆ ಕೋಣಗಳು ಅದರ ಮಾಲಕರು ಭಾಗವಹಿಸಲಿದ್ದಾರೆ ಎಂದರು.
ಇದರ ಜೊತೆ 125 ಸ್ಟಾಲ್ ಗಳಲ್ಲಿ ಕರಾವಳಿಯ ತಿಂಡಿ ತಿನಿಸುಗಳು ಗ್ರಾಹಕರಿಗೆ ದೊರೆಯಲಿದೆ.
ಸುಮಾರು 7 ರಿಂದ 8 ಲಕ್ಷ ಜನರು ಇದನ್ನು ವೀಕ್ಷಿಸುವ ನಿರೀಕ್ಷೆ ಇದೆ ಎಂದು ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಉಡುಪಿ, ದಕ್ಷಿಣ ಕನ್ನಡ ಕಂಬಳ ಸಮಿತಿಯ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಕಂಬಳ ಸಮಿತಿ ಪದಾಧಿಕಾರಿಗಳಾದ ರೋಹಿತ್ ಹೆಗ್ಡೆ, ಬಾರ್ಕೂರು ಶಾಂತರಾಮ ಶೆಟ್ಟಿ, ಲೋಕೇಶ್ ಶೆಟ್ಟಿ, ಚಂದ್ರಹಾಸ ಸನಿಲ್, ಮುರಳಂಧರ ರೈ, ವಿಜಯಕುಮಾರ್ ಜೈನ್ ಉಪಸ್ಥಿತರಿದ್ದರು.
DAKSHINA KANNADA
ಕರಾವಳಿ ಉತ್ಸವ ಮೈದಾನದಲ್ಲಿ ಪ್ರಥಮ ಬಾರಿಗೆ ಅಂತರ್ಜಲ ಸುರಂಗ ಮಾರ್ಗ ಮೀನುಗಳ ಪ್ರದರ್ಶನ
ಮಂಗಳೂರು: ದಕ್ಷಿಣ ಭಾರತದಾದ್ಯಂತ ಕಳೆದ ನಾಲ್ಕು ದಶಕಗಳಿಂದ ಗ್ರಾಹಕರ ಮೇಳಗಳನ್ನು ಸಂಘಟಿಸುವಲ್ಲಿ ಧ್ರುವತಾರೆಯಾಗಿ ಗುರುತಿಸಿಕೊಂಡಿರುವ ಎನ್‌ಸಿಎಫ್ ಸಂಘಟಿಸಲ್ಪಡುತ್ತಿರುವ ರಾಷ್ಟ್ರೀಯ ಗ್ರಾಹಕ ಮೇಳವನ್ನು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ ವೇದವ್ಯಾಸ ಕಾಮತ್ ಅವರು ಉದ್ಘಾಟಿಸಿದರು.
ಬಳಿಕ ರಾಷ್ಟ್ರೀಯ ಗ್ರಾಹಕರ ಮೇಳದ ಅಂಗವಾನಿ ನಿರ್ಮಿಸಲ್ಪಟ್ಟಿರುವ ಅಂತರ್ಜಲ ಸುರಂಗ ಮಾರ್ಗ ಮೀನುಗಳ ಪ್ರದರ್ಶನವನ್ನು ಶಾಸಕ ವೇದವ್ಯಾಸ್ ಕಾಮತ್ ಉದ್ಘಾಟಿಸಿದರು.
ಈ ಅಂತರ್ಜಲ ಸುರಂಗವು ಹಲವು ಪ್ರಬೇದದ ಮೀನುಗಳೊಂದಿಗೆ ಸುಂದರ ಮತ್ಸ್ಯ ಲೋಕವನ್ನು ಸೃಷ್ಟಿಸಿ ಮಂಗಳೂರಿನ ಜನತೆಗೆ ರಸದೌತಣವನ್ನು ನೀಡಲು ಸಜ್ಜಾಗಿವೆ.
ಅಲ್ಲದೆ, ರೊಬೊಟಿಕ್ ಅನಿಮಲ್ ಶೋದಲ್ಲಿ ದೈತ್ಯಾಕಾರದ ವನಮೃಗಗಳು ಹಾಗೂ ಅವುಗಳ ಘರ್ಜನೆ ದಟ್ಟಾರಣ್ಯದಲ್ಲಿ ವಿಹರಿಸಿದ ಅನುಭವವನ್ನು ನೀಡಲಿದೆ.
ಈ ಮೊದಲು ಮಂಗಳೂರಿಗೆ ಸೋವಲ್ಡ್, ಅಕ್ವಾ ಶೋ, ಬರ್ಡ್ ಶೋ, ತಾಜ್‌ಮಹಲ್‌ನಂತಹ ವಿನೂತನ ರೀತಿಯ ಮೆಗಾ ಶೋಗಳನ್ನು ನೀಡಿರುವ ಈ ಸಂಸ್ಥೆ ಪ್ರತಿ ಬಾರಿಯೂ ಹೊಚ್ಚ ಹೊಸ ಶೋಗಳನ್ನು ನೀಡುತ್ತಾ ಬಂದಿದೆ.
ಈ ರಾಷ್ಟ್ರೀಯ ಗ್ರಾಹಕರ ಮೇಳವು ಸಂಪೂರ್ಣ ಕುಟುಂಬಕ್ಕಾಗಿ ಪಿಂಗ್ ಮತ್ತು ಮನರಂಜನಾ ಮೇಳವಾಗಿರುತ್ತದೆ.
ರಾಷ್ಟ್ರೀಯ ಗ್ರಾಹಕರ ಮೇಳವು ವ್ಯಾಪಾರ ಮಳಿಗೆಗಳೊಂದಿಗೆ, ವಿಶೇಷ ಮತ್ತು ಅತ್ಯಧಿಕ ರಿಯಾಯಿತಿ ದರದಲ್ಲಿ ಗ್ರಾಹಕರನ್ನು ಆಕರ್ಷಿಸಲಿದೆ.
ಗೃಹ ಬಳಕೆ ಉತ್ಪನ್ನಗಳು, ಅಡುಗೆ ಮನೆ ಉತ್ಪನ್ನಗಳು, ಕೈಮಗ್ಗದ ಉತ್ಪನ್ನಗಳು, ಕರುಶಲ, ಉತ್ಪನ್ನಗಳು, ಡ್ರೆಸ್ ಮೆಟೀರಿಯಲ್ ಫ್ಯಾರನ್ ಪಾದರಕ್ಷೆಗಳು, ಆಟಿಕೆಗಳು, ಆಹಾರೋತ್ಪನ್ನಗಳು ಮತ್ತು ಇನ್ನೂ ಹಲವಾರು ಉತ್ಪನ್ನಗಳು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಲಭ್ಯವಾಗಲಿದೆ.
ಮನೋರಂಜನಾ ವಿಭಾಗದಲ್ಲಿ ಟೋರಾ ಟೋರಾ, ಡ್ಯಾಶಿಂಗ್ ಕಾರ್, ಜಾಯಿಂಟ್ ಸ್ಟೀಲ್, ಡ್ರಾಗನ್ ಟೇನ್, ಮೆದ್ರಿ ಕೊಲಂಬಸ್, 30 ಶೋಸ್, ಸೇರಿ ಹೌಸ್, ಏ ಶಾಟ್, ಸ್ಟೇಸ್ ಜೆಟ್, ಇತ್ಯಾದಿಗಳು ಇವೆ.
ಮನೋರಂಜನೆಗೆ ಸಂಜೆ 4ರಿಂದ 9ರವರೆಗೆ ಮನೋರಂಜನೆಗೆ ಕರಾವಳಿ ಉತ್ಸವ ಮೈದಾನದಲ್ಲಿ ಅವಕಾಶವಿರುತ್ತದೆ.
ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಸುದೀರ್ ಶೆಟ್ಟಿ ಕಣ್ಣೂರು ಮತ್ತು ಎನ್‌ಸಿಎಫ್ ವತಿಯಿಂದ ಚೈತನ್ಯ ಹಾಗೂ ವಿಜಯ ಕುಮಾರ್ ಮತ್ತು ನಿಸರ್ಗ ಪಬ್ಲಿಸಿಟಿಯ ಮಂಜುನಾಥ್ ಉಪಸ್ಥಿತರಿದ್ದರು.
- bengaluru7 days ago
ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ..!
- DAKSHINA KANNADA6 days ago
2ನೇ ಮದುವೆಯಾದ ಕಿರುತೆರೆ ನಟಿ ಜ್ಯೋತಿ ರೈ …!
- DAKSHINA KANNADA7 days ago
ಮಂಗಳೂರಿನ ಆಟೋಮ್ಯಾಟ್ರಿಕ್ಸ್ ಶೋ ರೂಮ್ ನಲ್ಲಿ ಟಾಟಾ ನೆಕ್ಸಾನ್, ಇ.ವಿ ಬಿಡುಗಡೆ
- LATEST NEWS6 days ago
ವಾರವಿಡೀ ಕಾಡಿನಲ್ಲಿ ಸಿಲುಕಿದ್ದ ಯುವಕ- ಮನೆಗೆ ವಾಪಸ್ ಆಗುವಂತೆ ರಕ್ಷಣೆ ಮಾಡಿದ ಸಾಕುನಾಯಿ..!