Tuesday, October 19, 2021

ದ.ಕ ಜಿಲ್ಲಾ ಶಾಲಾ-ಕಾಲೇಜು ಆರಂಭದ ಬಗ್ಗೆ ಸಚಿವ ಸಂಪುಟದಲ್ಲಿ ತೀರ್ಮಾನ: ಸಚಿವ ಎಸ್‌.ಅಂಗಾರ

ಪುತ್ತೂರು: ಜಿಲ್ಲೆಯಲ್ಲಿ ಶಾಲಾ-ಕಾಲೇಜು ಆರಂಭದ ಬಗ್ಗೆ ತೀರ್ಮಾನವನ್ನು ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ದಕ್ಷಿಣ ಕನ್ನಡ ಕೋವಿಡ್‌ ಉಸ್ತುವಾರಿ, ಸಚಿವ ಎಸ್.ಅಂಗಾರ ಹೇಳಿದರು.


ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇರಳ ಗಡಿ ಜಿಲ್ಲೆಯಾದ ಕಾರಣ ಶಾಲೆ ಆರಂಭದ ಮುನ್ನ ಕೆಲವು ನಿರ್ಧಾರ ಕೈಗೊಳ್ಳಬೇಕಿದೆ.

ಕೇರಳ ಭಾಗದಲ್ಲಿ ಕೊರೊನಾ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಭೇಟಿಗೆ ಬಿಗಿ ಕ್ರಮ ಕೈಗೊಳ್ಳಲಾಗಿದೆ.

ಗಡಿ ಭಾಗದ ಎಲ್ಲಾ ಗ್ರಾಮಗಳಿಗೆ ಒಂದು ಎರಡನೇ ಕೋವಿಡ್ ಲಸಿಕೆ ನೀಡಲು ಕ್ರಮ ಕೊಳ್ಳಲಾಗಿದೆ. ಈಗಾಗಲೇ ಆದ್ಯತೆಯ ಮೇರೆಗೆ ಈ ಲಸಿಕೆ ನೀಡಲಾಗುವುದು ಎಂದರು.

ಕೋವಿಡ್ ಮೂರನೇ ಅಲೆ ಎದುರಿಸಲು ಜಿಲ್ಲಾಡಳಿತ ಸಿದ್ಧವಾಗಿದೆ. ಈಗಾಗಲೇ ವೆನ್ಲಾಕ್ ಆಸ್ಪತ್ರೆಯಲ್ಲಿ 130 ಬೆಡ್ ಗಳ ಐಸಿಯು ಕೆರ್ ಸಜ್ಜುಗೊಳಿಸಲಾಗಿದೆ.

ಜಿಲ್ಲೆಗೆ ಬೇಕಾದ ಕೋವಿಡ್ ನಿರ್ವಹಣಾ ಸಾಮಾಗ್ರಿಗಳನ್ನು ಜಿಲ್ಲೆಯಲ್ಲೇ ಖರೀದಿಸಲು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...