ಅಮೇರಿಕಾದಲ್ಲಿ ನಿಲ್ಲದ ಕಾಡ್ಗಿಚ್ಚು : 15 ಮಂದಿ ಸಾವು.! ಕೆಂಪೇರಿದ ಬಾನು..!
ಕ್ಯಾಲಿಫೋರ್ನಿಯಾ : ಅಮೆರಿಕದಲ್ಲಿ ಕಾಡ್ಗಿಚ್ಚಿನ ಆರ್ಭಟ ತೀವ್ರಗೊಂಡಿದೆ. ಅಮೆರಿಕದ ಪಶ್ಚಿಮ ಕರಾವಳಿಯ ಮೂರು ರಾಜ್ಯಗಳು ಕಾಡ್ಗಿಚ್ಚು ಬಾಧಿತವಾಗಿವೆ.
ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದ್ದರೂ ಯಾವುದೇ ಪ್ರಗತಿ ಕಾಣ್ತಾ ಇಲ್ಲ. ಅದರಲ್ಲೂ ಓರೆಗನ್ ರಾಜ್ಯದಲ್ಲಿ ಕಾಡ್ಗಿಚ್ಚಿನ ಹಾವಳಿಗೆ ಜನಜೀವನ ಅಸ್ತವ್ಯಸ್ತವಾಗಿದ್ದು, ಈಗಾಗಲೇ 16 ಮಂದಿ ಬಲಿಯಾಗಿದ್ದಾರೆ.
ಸರಿಸುಮಾರು 5 ಲಕ್ಷ ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ಈ ಭಾಗದಲ್ಲಿ ಬಿಸಿ ಗಾಳಿ, ಧೂಳು ಹಾಗೂ ಹೊಗೆ ಉಸಿರುಗಟ್ಟಿಸುವ ವಾತಾವರಣಕ್ಕೆ ಕಾರಣವಾಗಿದೆ.
ಕೇವಲ ಓರೆಗನ್ ರಾಜ್ಯ ಮಾತ್ರವಲ್ಲ ಪಕ್ಕದ ವಾಷಿಂಗ್ಟನ್ ಹಾಗೂ ಕ್ಯಾಲಿಫೋರ್ನಿಯಾ ರಾಜ್ಯಗಳಲ್ಲೂ ಕಾಡ್ಗಿಚ್ಚು ಹರಡಿದೆ. ಧೂಳೂ ಮತ್ತು ಕಾಡ್ಗಿಚ್ಚಿನಿಂದ ಬಾನೆಲ್ಲ ಕೆಂಪಾಗಿದೆ. ಕೆಲವೆಡೆ ಸಂಪೂರ್ಣ ಪಟ್ಟಣಗಳೇ ಅಗ್ನಿಗಾಹುತಿಯಾಗಿವೆ.
ಕ್ಯಾಲಿಫೋರ್ನಿಯಾ ರಾಜ್ಯವೊಂದರಲ್ಲೇ 10 ಮಂದಿ ಕಾಡ್ಗಿಚ್ಚಿಗೆ ಬಲಿಯಾಗಿದ್ದಾರೆ. ಕ್ಯಾಲಿಫೋರ್ನಿಯಾದಲ್ಲಿ ಹೊಗೆಯಿಂದಾಗಿ ಆಕಾಶ ಕಿತ್ತಳೆ ಬಣ್ಣಕ್ಕೆ ತಿರುಗಿದೆ.
ಈವರೆಗೆ 4.4 ದಶಲಕ್ಷ ಎಕರೆ ಅರಣ್ಯ ಪ್ರದೇಶ ಅಗ್ನಿಗೆ ಆಹುತಿಯಾಗಿದೆ. ಅರಣ್ಯದ ನಡುವೆ ಹಾದು ಹೋಗಿದ್ದ ಗ್ಯಾಸ್ ಪೈಪ್ ಲೈನ್‌ಗಳೂ ಕಾಡ್ಗಿಚ್ಚಿನಿಂದಾಗಿ ಹೊತ್ತಿ ಉರಿದಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ESCAPING THE FLAMES: Motorists forced to flee fast-moving wildfire in California's Sierra National Forest.
ಪುತ್ತೂರು : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೋಲಾರ ಜಿಲ್ಲೆಯ ಕೆಜಿಎಫ್ ಪ್ರೌಢ ಶಾಲೆಯಲ್ಲಿ ಜ. 8 ಮತ್ತು 9 ರಂದು ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರು ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ತಂಡದಲ್ಲಿ ಆದ್ಯ ಕೆ, ಶಾನ್ವಿ ಪ್ರೀಷ್ಮ, ಫಾತಿಮಾತ್ ಮುನವರ, ಫಾತಿಮಾತ್ ಝುಲ್ಫ, ನಿರೀಕ್ಷಾ H ಶೆಟ್ಟಿ, ಸ್ನಿಗ್ಧ, ಆಯಿಷಾತ್ ಹಿಬಾ ಉತ್ತಮ ಪ್ರದರ್ಶನವನ್ನು ನೀಡಿ ಗೆಲುವಿಗೆ ಕಾರಣೀಭೂತರಾದರು. ಹಿಬಾ ಉತ್ತಮ ಆಟಗಾರ್ತಿಯಾಗಿ ವೈಯಕ್ತಿಕ ಪ್ರಶಸ್ತಿಯನ್ನು ಪಡೆದುಕೊಂಡರು.
ತಂಡಕ್ಕೆ ದೈಹಿಕ ಶಿಕ್ಷಕರಾದ ನಿರಂಜನ್ ಹಾಗೂ ಅಕ್ಷಯ್ ತರಬೇತಿಯನ್ನು ನೀಡಿದ್ದಾರೆ. ತಂಡದ ವ್ಯವಸ್ಥಾಪಕಿಯಾಗಿ ಅನಿತಾಸಿಯ ಗೋನ್ಸಲ್ವಸ್ ಇವರು ತಂಡವನ್ನು ಮುನ್ನಡೆಸಿದರು ಎಂಬುದಾಗಿ ಶಾಲಾ ಮುಖ್ಯ ಶಿಕ್ಷಕಿ ಭಗಿಣಿ ಸೆಲಿನ್ ಪೇತ್ರ ಮಾಹಿತಿ ನೀಡಿದ್ದಾರೆ.
ಮಂಗಳೂರು/ಗದಗ : ಶಿರಹಟ್ಟಿ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿಯ ಕಾರು ಚಾಲಕ ನೇ*ಣಿಗೆ ಶರಣಾಗಿದ್ದಾರೆ. ಸುನಿಲ್ ಲಮಾಣಿ(25) ಆತ್ಮಹ*ತ್ಯೆ ಮಾಡಿಕೊಂಡವರು. ಸುನಿಲ್ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಮಲ್ಲಾಡ್ ಕಾಲೋನಿಯಲ್ಲಿ ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಆತ್ಮಹ*ತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಸುನೀಲ್ ಲಮಾಣಿ ಆತ್ಮಹ*ತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಶಾಸಕ ಚಂದ್ರು ಲಮಾಣಿ ಇತ್ತೀಚೆಗೆ ಖರೀದಿಸಿದ್ದ ಮನೆಯಲ್ಲಿ ಸುನೀಲ್ ಆತ್ಮಹ*ತ್ಯೆ ಮಾಡಿಕೊಂಡಿದ್ದು, ಆತ ಚಂದ್ರು ಅವರ ಸಂಬಂಧಿ ಎಂದು ತಿಳಿದುಬಂದಿದೆ . ಮನೆ ಕಟ್ಟುವ ವಿಚಾರದಲ್ಲಿ ಸಹೋದರರ ನಡುವೆ ಕಲಹ ಉಂಟಾಗಿತ್ತು ಎನ್ನಲಾಗಿದೆ. ಇದೇ ವಿಚಾರವಾಗಿ ಸುನಿಲ್ ಆತ್ಮಹ*ತ್ಯೆ ಮಾಡಿಕೊಂಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.
ನೀವು ಚಿಕ್ಕವರಾಗಿರಲಿ ಅಥವಾ ವಯಸ್ಸಾದವರಾಗಿರಲಿ ಸಿಹಿತಿಂಡಿ ಸೇವಿಸಿದ ನಂತರ ಹಲ್ಲುಗಳನ್ನ ಸ್ವಚ್ಛಗೊಳಿಸುವಲ್ಲಿನ ಅಜಾಗರೂಕತೆಯು ಹಲ್ಲುಗಳಿಗೆ ಸೋಂಕು ತಗುಲಿಸಬಹುದು. ಇದು ಇಡೀ ಹಲ್ಲನ್ನು ಹಾನಿಗೊಳಿಸುತ್ತದೆ. ಅಂತಹ ಸಂದರ್ಭಗಳಲ್ಲಿ, ಜನರು ದಂತವೈದ್ಯರ ಬಳಿಗೆ ಹೋಗುತ್ತಾರೆ ಮತ್ತು ಆಗಾಗ್ಗೆ ಹಲ್ಲುಗಳನ್ನ ಕೀಳಬೇಕಾಗುತ್ತದೆ. ಯಾಕಂದ್ರೆ, ಇದು ಇತರ ಹಲ್ಲುಗಳಿಗೆ ಹಾನಿ ಮಾಡುವ ಅಪಾಯವನ್ನ ಹೆಚ್ಚಿಸುತ್ತದೆ.
ಇಂದಿಗೂ ಸಹ ನಾವು ನಮ್ಮ ಹಿರಿಯರ ಹಳೆಯ ಪರಿಹಾರಗಳನ್ನ ಅನುಸರಿಸುವ ಮೂಲಕ ಹಲ್ಲಿನ ಹುಳುಗಳನ್ನ ತೊಡೆದು ಹಾಕಬಹುದು. ಇಂದು ನಾನು ನಿಮಗೆ ಅಂತಹ ಮನೆಮದ್ದನ್ನ ಹೇಳಲಿದ್ದೇನೆ, ಅದನ್ನು ಬಳಸಿಕೊಂಡು ನೀವು ದಂತವೈದ್ಯರ ಬಳಿಗೆ ಹೋಗದೆ ಹಲ್ಲಿನ ಹುಳುಗಳನ್ನ ತೊಡೆದು ಹಾಕಬಹುದು.
ಚಾಕೊಲೇಟ್ ತಿನ್ನುವುದರಿಂದ ಮಕ್ಕಳ ಹಲ್ಲುಗಳು ಹಾನಿಗೊಳಗಾಗುತ್ತವೆ. ಆಹಾರ ಅಥವಾ ಸಿಹಿತಿಂಡಿಗಳನ್ನು ಸೇವಿಸಿದ ನಂತರ ನಾವು ತೊಳೆಯುವುದಿಲ್ಲ. 10 ರಿಂದ 12 ವರ್ಷ ವಯಸ್ಸಿನಲ್ಲಿ, ಕುಳಿಗಳಿಂದಾಗಿ ಮಕ್ಕಳ ಹಲ್ಲುಗಳು ಕ್ಷೀಣಿಸಲು ಪ್ರಾರಂಭಿಸುತ್ತವೆ.
ಇದನ್ನು ತಡೆಗಟ್ಟಲು ಸುಲಭ ಮಾರ್ಗವಿದೆ. ಯಾರಿಗಾದರೂ ಹಲ್ಲಿನಲ್ಲಿ ಕುಳಿ ಇದ್ದರೆ, ನೀವು ಅದನ್ನು ಮನೆಯಲ್ಲಿಯೇ ತೆಗೆದುಹಾಕಬಹುದು. ಮೊದಲಿಗೆ, ಈರುಳ್ಳಿ ಬೀಜಗಳನ್ನ ಮಾರುಕಟ್ಟೆಯಿಂದ ತರಬೇಕು. ನಂತರ ಬೆಂಕಿಯನ್ನ ಹೊತ್ತಿಸಿ ಕೆಂಡದ ಮೇಲೆ ಈರುಳ್ಳಿ ಬೀಜಗಳನ್ನ ಹಾಕಿ ಬಂದ ಹೊಗೆಯನ್ನ ಬಾಯಿಯಲ್ಲಿ ಶೇಖರಿಸಿ ನಂತ್ರ ಮುಚ್ಚಿ. ಈ ಪ್ರಕ್ರಿಯೆಯನ್ನ ಎರಡರಿಂದ ಮೂರು ಬಾರಿ ಮಾಡಿ. ಈಗ ನಿಮ್ಮ ಬಾಯಿಯಲ್ಲಿ ನೀರು ಹಾಕಿಕೊಂಡು ಮುಕ್ಕಳಿಸಿ ಆ ಬಟ್ಟಲಿನಲ್ಲಿ ಉಗುಳಿ. ಈಗ ಆ ಬಟ್ಟಲಿನಲ್ಲಿರುವ ನೀರಿನಲ್ಲಿ ಎಲ್ಲಾ ಹುಳುಗಳು ಗೋಚರಿಸುತ್ತವೆ.