Friday, March 24, 2023

ಕ್ಯಾಂಪ್ಕೋ ಸುವರ್ಣ ಸಂಭ್ರಮ : ಪುತ್ತೂರಿಗೆ ಕೇಂದ್ರ ಸಹಕಾರಿ ಸಚಿವ ಅಮಿತ್ ಶಾ ಭೇಟಿ..!

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದೆ. ಇದೇ ಸಂದರ್ಭ ಕರಾವಳಿಯ ಖ್ಯಾತ ಕ್ಯಾಂಪ್ಕೋ ಸಂಸ್ಥೆ ಸುವರ್ಣ ಸಂಭ್ರಮದಲ್ಲಿದೆ. ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾಗಿರುವ ಬಿಜೆಪಿ ಚುನಾವಣಾ ಚಾಣಕ್ಯ ಎಂದೇ ಖ್ಯಾತರಾಗಿರುವ ಅಮಿತ್​ ಶಾ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಪುತ್ತೂರು : ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದೆ. ಇದೇ ಸಂದರ್ಭ ಕರಾವಳಿಯ ಖ್ಯಾತ ಕ್ಯಾಂಪ್ಕೋ ಸಂಸ್ಥೆ ಸುವರ್ಣ ಸಂಭ್ರಮದಲ್ಲಿದೆ. ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾಗಿರುವ ಬಿಜೆಪಿ ಚುನಾವಣಾ ಚಾಣಕ್ಯ ಎಂದೇ ಖ್ಯಾತರಾಗಿರುವ ಅಮಿತ್​ ಶಾ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಹಿನ್ನೆಲೆಯಲ್ಲಿ ಪುತ್ತೂರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ಜೊತೆ ಶಾಸಕ ಸಂಜೀವ ಮಠಂದೂರು ಸಭೆ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಶಾಸಕ ಸಂಜೀವ ಮಠಂದೂರು ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಸಂಭ್ರಮ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಹಲವು ಸಚಿವರು ಆಗಮಿಸಲಿದ್ದಾರೆ.

ತೆಂಕಿಲದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಸುಮಾರು 1 ಲಕ್ಷದಷ್ಟು ಸಾರ್ವಜನಿಕರು ಸೇರುವ ನಿರೀಕ್ಷೆ ಇದೆ. ಪುತ್ತೂರು, ಸುಳ್ಯ, ಕಡಬ, ಬಂಟ್ವಾಳದಿಂದ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಲು ಬರುವಾಗ ಅವರ ವಾಹನದ ಪಾರ್ಕಿಂಗ್ ವ್ಯವಸ್ಥೆಯು ಆಗಬೇಕಾಗಿದೆ.

ಬಜ್ಪೆಯಿಂದ ಹೆಲಿಕಾಫ್ಟರ್‌ನಲ್ಲಿ ಪುತ್ತೂರಿಗೆ ಬರಲಿದ್ದು, ಇಲ್ಲಿಂದ ಹನುಮಗಿರಿಗೆ ಹೋಗುವ ಸಾಧ್ಯತೆ ಇರುವುದರಿಂದ ಕಾವು ಸಮೀಪವು ಹೆಲಿಕಾಪ್ಟರ್​​ ಲ್ಯಾಂಡಿಂಗ್​ಗೆ ವ್ಯವಸ್ಥೆ ಮಾಡಬೇಕು.

ಕಾನೂನು ಸುವ್ಯವಸ್ಥೆ, ಸಾರಿಗೆ ವ್ಯವಸ್ಥೆ, ಸಂಚಾರದಲ್ಲಿ ತೊಂದರೆ ಆಗದಂತೆ, ಸ್ವಚ್ಛತೆ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ತಾಲೂಕು ಆಡಳಿತ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಮಾತನಾಡಿದ ಡಿವೈಎಸ್ಪಿ ವೀರಯ್ಯ ಹಿರೇಮಠ್ ಕಾನೂನು ಸುವ್ಯವಸ್ಥೆ ಮತ್ತು ಸಂಚಾರದ ಬಗ್ಗೆ ಮಾಹಿತಿ ನೀಡಿದರು. ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಕ್ವಾಲ್ವಿನ್ ಸ್ವೀಕೆರಾ ರಸ್ತೆ ಸುರಕ್ಷತೆಯ ಕುರಿತು ಮಾಹಿತಿ ನೀಡಿದರು.

ಕ್ಯಾಂಪ್ಕೋದ ಸೀನಿಯರ್ ಮ್ಯಾನೇಜರ್ ಪ್ರೇಮ್ ಜಿ ಅವರು ವೇದಿಕೆಯ ಸಿದ್ಧತೆ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರಸಭೆ ಅಧ್ಯಕ್ಷ ಕೆ ಜೀವಂಧರ್ ಜೈನ್, ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಸಹಾಯಕ ಕಮೀಷನರ್ ಗಿರೀಶ್ ನಂದನ್, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Hot Topics