Connect with us

DAKSHINA KANNADA

ಮಂಗಳೂರು ವಿವಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಖಂಡಿಸಿ ಕ್ಯಾಂಪಸ್ ಫ್ರಂಟ್ ನಿಂದ ಯುನಿವರ್ಸಿಟಿ ಮಾರ್ಚ್

Published

on

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಪದವಿ ಕಲಿಕಾ ವ್ಯವಸ್ಥೆ ಜಾರಿಗೊಳಿಸುವ ತೀರ್ಮಾನವನ್ನು ಕುಲಪತಿಗಳು ಕೈಗೊಂಡಿದ್ದು ಇದನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ತೀವ್ರವಾಗಿ ಖಂಡಿಸಿ ಇದರ ವಿರುಧ್ದ ಮಂಗಳೂರು ಯುನಿವರ್ಸಿಟಿ ಮಾರ್ಚ್ ನಡೆಸಲು ತೀರ್ಮಾನಿಸಲಾಗಿದೆಯೆಂದು ಕ್ಯಾಂಪಸ್ ಫ್ರಂಟ್ ನಾಯಕರು ಪತ್ರಿಕಾಗೋಷ್ಠಿಯ ಮುಖಾಂತರ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕ್ಯಾಂಪಸ್ ಫ್ರಂಟ್ ಜಿಲ್ಲಾ ಮುಖಂಡರಾದ ರಿಯಾಝ್ ಅಂಕತ್ತಡ್ಕ ಇಡೀ ಶಿಕ್ಷಣ ಕ್ಷೇತ್ರವನ್ನೇ ಬದಲಾಯಿಸುವ ಈ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಲೋಕಸಭೆಯಲ್ಲಿ ಹಾಗೂ ವಿಧಾನಸಭೆಯಲ್ಲಿ ಚರ್ಚೆಯಾಗದೆ ತರಾತುರಿಯಲ್ಲಿ ಹಿಂಬದಿ ಬಾಗಿಲಿನ ಮುಖಾಂತರ ಜಾರಿಗೆ ತರಲಾಗಿದೆ.

ಇದು ಭಾರತದ ಒಕ್ಕೂಟ ವ್ಯವಸ್ಥೆಗೆ ಮಾರಕವಾದ ಸಂವಿಧಾನ ವಿರೋಧಿ ನೀತಿಯಾಗಿದ್ದು ಹಾಗೂ ಖಾಸಗೀಕರಣಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡುವ ಮತ್ತು ಮಧ್ಯಮ ಯುಗದ ಇತಿಹಾಸಗಳನ್ನು ಮರೆಮಾಚಿ, ಪ್ರಾಚೀನ ಸಂಸ್ಕೃತಿಯನ್ನು ಪ್ರತಿಬಿಂಬಿಸಿ ಕೇಸರಿಕರಣಕ್ಕೆ ಒತ್ತು ನೀಡುತ್ತಿರುವ ಈ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಒಪ್ಪಲು ಸಾಧ್ಯವಿಲ್ಲ.

ಇದೀಗ ವಿಶ್ವವಿದ್ಯಾನಿಲಯದಲ್ಲಿ ಪದವಿ ಕಲಿಕಾ ವ್ಯವಸ್ಥೆ ಈ ನೀತಿಯಡಿ ಜಾರಿ ಮಾಡಲು ಹೊರಟಿದ್ದು ಇದರಿಂದಾಗಿ ನಿರುದ್ಯೋಗದ ಪ್ರಮಾಣ ಇನ್ನೂ ಹೆಚ್ಚಾಗಲಿದೆ, ಒಂದು ವರ್ಷ ಪದವಿ ಕಲಿತು ಪ್ರಮಾಣಪತ್ರ ಪಡೆದು ವಿದ್ಯಾರ್ಥಿಯು ಕಾಲೇಜಿನಿಂದ ಹೊರನಡೆದರೆ ಉದ್ಯೋಗ ಕೊಡಿಸುವುದಾದರೂ ಯಾರು? ಇಂತಹ ಹಲವಾರು ಸಮಸ್ಯೆಗಳು ಇದರಿಂದ ಉದ್ಭವಿಸುತ್ತದೆ ಹಾಗೂ ಮೌಲ್ಯಯುತ ಶಿಕ್ಷಣ ಪಡೆಯುವಲ್ಲಿ ವಿದ್ಯಾರ್ಥಿಗಳು ವಂಚಿತರಾಗುತ್ತಾರೆ.

ಸಮಸ್ಯೆಗಳ ಗೋಪುರವಾದ ಹೊಸ ರಾಷ್ಟೀಯ ಶಿಕ್ಷಣ ನೀತಿಯನ್ನು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಜಾರಿ ಮಾಡಲು ಹೊರಟಿರುವ ನಿರ್ಧಾರವನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ದಿನಾಂಕ : 10-08-2021 ನಾಳೆ ಬೆಳಿಗ್ಗೆ 10:30 ಕ್ಕೆ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಮಾರ್ಚ್ ನಡೆಸಲು ತೀರ್ಮಾನಿಸಲಾಗಿದೆಯೆಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕ್ಯಾಂಪಸ್ ಫ್ರಂಟ್ ಜಿಲ್ಲಾ ಮುಖಂಡರಾದ ಸಿರಾಜ್ ಮಂಗಳೂರು, ಮಂಗಳೂರು ನಗರ ಜಿಲ್ಲಾಧ್ಯಕ್ಷ ಇನಾಯತ್ ಅಲಿ ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

DAKSHINA KANNADA

‘ನಾಟು ನಾಟು’ ರೀತಿಯ ಸಾಂಗ್‌..! ಕುತೂಹಲ ಮೂಡಿಸಿದ ‘ವಾರ್ 2’

Published

on

2019 ರಲ್ಲಿ ಸೂಪರ್ ಹಿಟ್ ಆಗಿದ್ದ ‘ವಾರ್’ ಸಿನೆಮಾದ ಸೆಕಂಡ್ ವರ್ಷನ್‌ ‘ವಾರ್ 2’ ತೆರೆ ಮೇಲೆ ಬರಲು ಭರದ ಸಿದ್ಧತೆ ನಡೆಸಿದೆ. ‘ವಾರ್’ ಸಿನೆಮಾದಲ್ಲಿ ‘ ಜೈ ಜೈ ಶಿವಶಂಕರ್’ ಹಾಡು ಸುಪರ್ ಹಿಟ್ ಆಗಿದ್ದು ಫ್ಯಾನ್ಸ್‌ಗಳು ಹಾಡಿಗೆ ಫಿದಾ ಆಗಿದ್ರು. ಟೈಗರ್ ಶ್ರಾಫ್ ಹಾಗೂ ಹೃತಿಕ್ ರೋಷನ್ ನಟನೆಯ ‘ವಾರ್’ ಸಿನೆಮಾ ಬಳಿಕ ಈಗ ‘ವಾರ್‌ 2’ ರೆಡಿ ಆಗ್ತಾ ಇದೆ. ಇದರಲ್ಲಿ ಹೃತಿಕ್ ರೋಷನ್ ಹಾಗೂ ಜ್ಯೂನಿಯರ್ ಎನ್‌ಟಿಆರ್ ಜೊತೆಯಾಗಿದ್ದಾರೆ.

ಅದ್ಧೂರಿಯಾಗಿ ನಿರ್ಮಾಣ ಆಗ್ತಾ ಇರೋ ‘ವಾರ್ 2’ ಸಿನೆಮಾಗೆ ದೊಡ್ಡ ಮಟ್ಟದಲ್ಲಿ ಹೂಡಿಕೆ ಮಾಡಲಾಗ್ತಾ ಇದೆ. ಯಶ್‌ ರಾಜ್ ಫಿಲಂಸ್‌ ಸಂಸ್ಥೆ ಈ ‘ವಾರ್ 2’ ಸಿನೆಮಾಗೆ ಬಂಡವಾಳ ಹಾಕುತ್ತಿದೆ. ‘ವಾರ್’ ಸಿನೆಮಾದಂತೆ ಈ ಸಿನೆಮಾದಲ್ಲೂ ವಿಶೇಷ ಹಾಡನ್ನ ಸಿನೆಮಾ ತಂಡ ಪ್ಲ್ಯಾನ್ ಮಾಡಿದೆ. ಜೂನಿಯರ್ ಎನ್‌ಟಿಆರ್ ಅವರ ಆಸ್ಕರ್ ಅವಾರ್ಡ್‌ ವಿನ್ ಆಗಿದ್ದ ‘ನಾಟು ನಾಟು” ಹಾಡಿನಂತೆ ಇರೋ ಹಾಡಿಗೆ ಹೃತಿಕ್ ಹಾಗೂ ಜ್ಯೂನಿಯರ್ ಎನ್‌ಟಿಆರ್‌ ಹೆಜ್ಜೆ ಹಾಕಲಿದ್ದಾರೆ ಎನ್ನಲಾಗಿದೆ. ‘ನಾಟು ನಾಟು’ ರೀತಿಯ ಹಾಡು ಹಾಗೂ ಡ್ಯಾನ್ಸ್‌ ‘ವಾರ್ 2’ ಸಿಎನಮಾದ ಹೈಲೈಟ್ ಆಗಲಿದೆ ಎಂದು ಬಾಲಿವುಡ್ ಹಂಗಾಮ ವರದಿ ಮಾಡಿದೆ.


ಈಗಾಗಲೇ ‘ವಾರ್ 2’ ಚಿತ್ರದ ಶೂಟಿಂಗ್ ಆರಂಭವಾಗಿದೆ. ಚಿತ್ರದ ಸೆಟ್​ ಫೋಟೋಗಳು ಕೂಡಾ ಲೀಕ್ ಆಗಿವೆ. ಅಯಾನ್ ಮುಖರ್ಜಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಆದಿತ್ಯ ಚೋಪ್ರಾ ಅವರು ದೊಡ್ಡ ಬಜೆಟ್​ನಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ‘ವಾರ್ 2’ ಚಿತ್ರದಲ್ಲಿ ಕಿಯಾರಾ ಅಡ್ವಾಣಿ ನಟಿಸುತ್ತಿದ್ದಾರೆ. ಈ ಸಿನಿಮಾ 2025ರಲ್ಲಿ ಆಗಸ್ಟ್ 14ರಂದು ರಿಲೀಸ್ ಆಗಲಿದೆ.

Continue Reading

DAKSHINA KANNADA

ಕಡಬ: ಬಿಳಿನೆಲೆ ಕಾಡಿನಲ್ಲಿ ಅಸ್ಥಿಪಂಜರ ಪತ್ತೆ ..!

Published

on

ಕಡಬ: ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿಯಿರುವ ಕಾಡಿನಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಬಗ್ಗೆ ಎ.19ರಂದು ವರದಿಯಾಗಿದೆ. ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದ ಪಕ್ಕದಲ್ಲಿ ಅಸ್ಥಿಪಂಜರ ದೊರಕಿದೆ.

ಅಸ್ಥಿಪಂಜರ

ಬಿಳಿನೆಲೆಯ ಚಂದ್ರಶೇಖರ್ ಎಂವರು ಕಾಡಿಗೆ ಸೌದೆ ತರಲು ಹೋಗಿದ್ದಾಗ ಕೊಳೆತ ವಾಸನೆ ಬಂದಿದೆ. ಈ ಬಗ್ಗೆ ಹುಡುಕಾಡಿದಾಗ ಮೃತ ವ್ಯಕ್ತಿಯ ಅಸ್ಥಿಪಂಜರ ಕಂಡುಬಂದಿದೆ. ದೂರದದಲ್ಲಿದ್ದ ಮರದ ಕೊಂಬೆಯಲ್ಲಿ ಬಟ್ಟೆಯೊಂದು ನೇತಾಡುವುದು ಕಂಡು ಬಂದಿದೆ.

Read More..;ಸೈಕಲ್ ರಿಪೇರಿ ವಿಚಾರಕ್ಕೆ ಜೀ*ವಾಂತ್ಯಗೊಳಿಸಿದ ಬಾಲಕ..!

ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಯುಡಿ ಆರ್‌:12/2024 ಕಲಂ:174(3),(iv) CrPC ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Continue Reading

DAKSHINA KANNADA

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್

Published

on

ಬಂಟ್ವಾಳ : ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಕಾರ್ಪೋರೇಟರ್‌ ಆಗಿ ಮೇಯರ್ ಆಗಿದ್ದ ಕವಿತಾ ಸನಿಲ್ ಇದೀಗ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಮುಂಚೂಣಿಯಲ್ಲಿದ್ದ ಕವಿತಾ ಸನಿಲ್‌ ವಿಧಾನ ಸಭಾ ಚುನಾವಣೆಯಲ್ಲೂ ಸಾಕಷ್ಟು ಪ್ರಚಾರ ಮಾಡಿದ್ರು. ಸಿಎಂ ಸಿದ್ದರಾಮಯ್ಯ ಅವರಿಗೂ ಉತ್ತಮ ಒಡನಾಟ ಇಟ್ಟುಕೊಂಡಿದ್ದ ಕವಿತಾ ಸನಿಲ್ ಸದ್ಯ ಪಕ್ಷದ ನಾಯಕರ ಬಗ್ಗೆ ಅಸಮಾಧಾನಗೊಂಡಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೂ ತನಗೆ ಸೂಕ್ತ ಸ್ಥಾನಮಾನ ನೀಡಿಲ್ಲ ಎಂದು ಪಕ್ಷ ಚಟುವಟಿಕೆಯಿಂದ ದೂರ ಉಳಿದಿದ್ದರು. ಯಾವುದಾದರು ಒಂದು ನಿಗಮ ಸಿಗಬಹುದು ಎಂಬ ಅವರ ನಿರೀಕ್ಷೆ ಹುಸಿಯಾದ ಹಿನ್ನಲೆಯಲ್ಲಿ ಇದೀಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬಂಟ್ವಾಳಕ್ಕೆ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಂದ ಬಿಜೆಪಿ ಬಾವುಟ ಪಡೆದು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಇದನ್ನೂ ಓದಿ : ಸೂಪರ್ ಹಿಟ್ ಚಿತ್ರ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್ ಡೇಟ್ ಫಿಕ್ಸ್!

Continue Reading

LATEST NEWS

Trending