Connect with us

LATEST NEWS

ಸಂ*ಭೋಗದ ಸಮಯ ಹೃ*ದಯಾಘಾತ ಉಂಟಾಗುತ್ತದೆಯೇ? ಇಲ್ಲಿದೆ ಸಂಪೂರ್ಣ ಮಾಹಿತಿ…

Published

on

ಮುಂಬೈ : ಇತ್ತೀಚಿಗೆ ಪ್ರಚಲಿತವಾದ ಸುದ್ದಿಯೊಂದು ಜನರನ್ನು ಬೆಚ್ಚಿ ಬೀಳಿಸುವಂತಾಗಿದೆ.  ಸಂ*ಭೋಗದಲ್ಲಿ ತೊಡಗಿದ್ದ ವೇಳೆ ವ್ಯಕ್ತಿಯೊಬ್ಬರು ಹೃ*ದಯಾಘಾತದಿಂದ ಮೃ*ತಪಟ್ಟ ಘಟನೆ ಮುಂಬೈನಲ್ಲಿ ವರದಿಯಾಗಿತ್ತು. ಈ ಘಟನೆ ಹಿನ್ನಲೆ, ಲೈಂ*ಗಿಕ ಕ್ರಿಯೆ ನಡೆಸಿದರೆ ಹೃ*ದಯಾಘಾತ ಉಂಟಾಗಬಹುದೇ ಎಂದು ಜನರು ಬೀತಿಗೊಳಗಾಗುತ್ತಿದ್ದಾರೆ.

ಹಾಗಾಗಿ, ಆರೋಗ್ಯ ತಜ್ಞರ ಅಭಿಪ್ರಾಯವನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ. ಲೈಂ*ಗಿಕ ಕ್ರಿಯೆಯಲ್ಲಿ ತೊಡಗಿರುವಾಗ ಹೃ*ದಯಾಘಾತವಾಗುವ ಸಾಧ್ಯತೆಗಳು ಹೆಚ್ಚು ಇರುವುದೇ? ಇಲ್ಲವೇ? ಯಾಕಾಗಿ ಸಂಭವಿಸುತ್ತದೆ? ಎಂಬ ಎಲ್ಲ ಮಾಹಿತಿ ಇಲ್ಲಿವೆ.

ಸೆ*ಕ್ಸ್ ಮಾಡುವಾಗ ಹೃದಯಾಘಾತ ಉಂಟಾಗಬಹುದೇ ?

ಸೆ*ಕ್ಸ್ ಮಾಡುವಾಗ ಹೃ*ದಯಾಘಾತ ಸಂಭವಿಸುವ ಸಾಧ್ಯತೆಗಳಿವೆ. ದೇಹವು ಹೆಚ್ಚು ಕ್ರಿಯಾಶೀಲವಾಗಿದ್ದಾಗ, ಹೃ*ದಯಾಘಾತದ ಸಾಧ್ಯತೆಗಳು ಹೆಚ್ಚಾಗಿರುತ್ತವೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಲೈಂ*ಗಿಕ ಸಂಬಂಧಗಳು ಅಥವಾ ಲೈಂ*ಗಿಕ ಚಟುವಟಿಕೆಗಳು ವಾಸ್ತವವಾಗಿ ಒಂದು ರೀತಿಯ ವ್ಯಾಯಾಮ. ಲೈಂ*ಗಿಕತೆಯನ್ನು ಹೊಂದಿದ ಸಂದರ್ಭ ಏರೋಬಿಕ್ಸ್, ಓಟ, ಮೆಟ್ಟಿಲುಗಳನ್ನು ಹತ್ತುವುದು ಅಥವಾ ಈಜುವುದು ಮುಂತಾದ ವ್ಯಾಯಾಮವನ್ನು ಮಾಡುತ್ತಿರುವುದಾಗಿ ಪರಿಗಣಿಸಬಹುದು. ಅಂತಹ ಪರಿಸ್ಥಿತಿಯಲ್ಲಿ, ದೇಹವು ಹೆಚ್ಚು ಸಕ್ರಿಯವಾದಾಗ, ಹೃ*ದಯಾಘಾತದ ಸಾಧ್ಯತೆಯು ಹೆಚ್ಚಾಗುತ್ತದೆ.

ಹೃ*ದಯಾಘಾತ ಸಂಭವಿಸಬಹುದಾದ ವ್ಯಕ್ತಿಯ ಲಕ್ಷಣಗಳು :

ಹೃ*ದ್ರೋಗ ಇರುವವರಿಗೆ ಲೈಂ*ಗಿಕ ಸಂಭೋಗದ ಸಮಯದಲ್ಲಿ ಹೃ*ದಯಾಘಾತದ ಅಪಾಯ ಹೆಚ್ಚು. ಹೃ*ದಯ ಶಸ್ತ್ರಚಿಕಿತ್ಸೆಗೆ ಒಳಗಾದ ಜನರು ಲೈಂ*ಗಿಕ ಕ್ರಿಯೆಯಲ್ಲಿ ತೊಡಗಿರುವಾಗ ಹೃ*ದಯಾಘಾತದ ಅಪಾಯ ಹೆಚ್ಚಾಗಿರುತ್ತದೆ.

ವಾಸ್ತವವಾಗಿ, ಹೃ*ದಯ ಸಂಬಂಧಿ ಕಾ*ಯಿಲೆಗಳಿಂದಾಗಿ, ಹೃ*ದಯದ ಕಾರ್ಯನಿರ್ವಹಣೆಗೆ ಪರಿಣಾಮ ಬೀರುತ್ತದೆ. ಅಂತಹ ಪರಿಸ್ಥಿತಿ, ಲೈಂ*ಗಿಕ ಸಕ್ರೀಯರಾಗಿದ್ದರೆ ಹೃದಯ ಬಡಿತ ಹೆಚ್ಚಾಗುತ್ತದೆ. ಲೈಂ*ಗಿಕತೆಯು ಒಂದು ರೀತಿಯ ದೈಹಿಕ ಚಟುವಟಿಕೆಯಾಗಿದೆ ಮತ್ತು ಅದರ ಸಮಯದಲ್ಲಿ, ಹೆಚ್ಚಿದ ರಕ್ತ ಪರಿಚಲನೆಯಿಂದಾಗಿ, ಹೃದಯ ಬಡಿತ ಹೆಚ್ಚಾಗುತ್ತದೆ, ಅತಿಯಾದ ಬೆವರುವಿಕೆ, ಉಸಿರಾಟದ ತೊಂದರೆ ಮತ್ತು ಆಯಾಸವನ್ನು ಅನುಭವಿಸಲಾಗುವುದು. ಹಾಗಾಗಿ ಬಹಳ ಜಾಗರೂಕತೆಯಿಂದ ಲೈಂ*ಗಿಕ ಕ್ರಿಯೆಯಲ್ಲಿ ತೊಡಗಿಸಿಕೊಳ್ಳಬೇಕು.

LATEST NEWS

ಬಂಟ್ವಾಳ: ಬ್ಯಾಂಕ್‌ಗೆ ಹೋಗಿ ಹಣ ಪಡೆದು ಮನೆಗೆ ಬಂದ ವ್ಯಕ್ತಿ ಕಾಣೆ; ದೂರು ದಾಖಲು

Published

on

ಬಂಟ್ವಾಳ: ಬ್ಯಾಂಕ್‌ಗೆ ಹೋಗಿ ಹಣ ಪಡೆದುಕೊಂಡು ಮನೆಗೆ ಬಂದ ವ್ಯಕ್ತಿಯೋರ್ವರು ವಿಚಿತ್ರವಾಗಿ ಕಾಣೆಯಾದ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಜೀಪಮುನ್ನೂರು ಗ್ರಾಮದ ನಾಗವಳಚ್ಚಿಲ್ ನಿವಾಸಿಯಾಗಿರುವ ಉಗ್ಗಪ್ಪ (70) ಎಂಬವರು ಕಾಣೆಯಾದ ವ್ಯಕ್ತಿ.

ಪಾಣೆಮಂಗಳೂರು ಯೂನಿಯನ್ ಬ್ಯಾಂಕ್‌ಗೆ ಹೋಗಿ ವೃದ್ಧಾಪ್ಯ ವೇತನ ಪಡೆದುಕೊಂಡು ವಾಪಸ್ಸು ಮನೆಗೆ ಬಂದವರು ತನ್ನ ಸೊಸೆಗೆ ಮೊಬೈಲ್ ನಲ್ಲಿ ಕರೆ ಮಾಡಿ ಏನು ವಿಷಯವನ್ನು ತಿಳಿಸಿದಂತೆ ಕರೆಯನ್ನು ಕಟ್ ಮಾಡಿದ್ದಾರೆ. ನಂತರ ಸೊಸೆ ತಿರುಗಿ ಪೋನ್ ಮಾಡಿದಾಗ ಪೋನ್ ರಿಸೀವ್ ಮಾಡಿರಲಿಲ್ಲ.

ಉಗ್ಗಪ್ಪ ಪೂಜಾರಿ ಅವರು ಮೊಬೈಲ್ ನ್ನು ಮನೆಯಲ್ಲಿಯೇ ಬಿಟ್ಟು ಮನೆಯಿಂದ ಹೋಗಿರುವ ವಿಚಾರ ಬಳಿಕ ಗಮನಕ್ಕೆ ಬಂದಿದೆ. ನಂತರ ಇವರ ಮಗ ಅನಿಲ್ ಕುಮಾರ್ ಅವರು ಎಲ್ಲೆಡೆ ಹುಡುಕಾಟ ಮಾಡಿದರೂ ಪತ್ತೆಯಾಗದ ಹಿನ್ನೆಲೆ ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.

Continue Reading

LATEST NEWS

ಹೆರಿಗೆ ಬಳಿಕ ಯೋ*ನಿಯೊಳಗೆ ಬಾಕಿಯಾದ ಸೂಜಿ; 20 ವರ್ಷಗಳ ಬಳಿಕ ಗೊತ್ತಾಯ್ತು ನರ್ಸ್ ಎಡವಟ್ಟು!

Published

on

ಮಂಗಳೂರು/ಥೈಲ್ಯಾಂಡ್‌ : ಹೆರಿಗೆಯ ಸಮಯದಲ್ಲಿ ನರ್ಸ್‌ವೊಬ್ಬಳು ಮಹಿಳೆಯೋರ್ವಳ ಯೋ*ನಿಯಲ್ಲಿ ಶಸ್ತ್ರಚಿಕಿತ್ಸಾ ಸೂಜಿಯನ್ನು ಬಿಟ್ಟಿದ್ದು, ಸುಮಾರು ಎರಡು ದಶಕಗಳ ನಿರಂತರ ನೋವಿನಿಂದ ಬಳಲುತ್ತಿದ್ದ ಇದೀಗ ನೋವು ಹೆಚ್ಚಾದ ಕಾರಣ ಎಕ್ಸರೇ ತೆಗೆದಾಗ ಸೂಜಿ ಇರುವುದು ಪತ್ತೆಯಾಗಿರುವ ಘಟನೆ ಥೈಲ್ಯಾಂಡ್‌ನಲ್ಲಿ ನಡೆದಿದೆ.

ಕಳೆದ ವರ್ಷದವರೆಗೂ ಸೂಜಿ ಯೋ*ನಿಯೊಳಗೆ ಇರುವುದರ ಕುರಿತು ಮಹಿಳೆಗೆ ಯಾವುದೇ ಕಲ್ಪನೆಯೂ ಇರಲಿಲ್ಲ. ಹೊಟ್ಟೆ ನೋವು ಕಾಣಿಸಿಕೊಂಡ ಕಾರಣ ಸರ್ಕಾರಿ ಆಸ್ಪತ್ರೆಯಲ್ಲಿ ಎಕ್ಸ್-ರೇ ಮಾಡಿದಾಗ ಆಕೆಯ ಖಾ*ಸಗಿ ಭಾಗದಲ್ಲಿ ಸೂಜಿ ಇರುವುದು ಕಂಡು ಬಂದಿದೆ. ಹೆರಿಗೆ ಸಮಯದಲ್ಲಿ 36 ವರ್ಷದ ಮಹಿಳೆ ಥಾಯ್ಲೆಡ್‌ನ ನಾರಾಥಿವಾಟ್‌ ಪ್ರಾಂತ್ಯದ ನಿವಾಸಿ ಪಾವೆನ್‌ ಫೌಂಡೇಶನ್‌ ಫಾರ್‌ ಚಿಲ್ಡ್ರನ್‌ ಆಂಡ್‌ ವುಮೆನ್‌ ಬಳಿ ಈ ಮಹಿಳೆ ಸಹಾಯವನ್ನು ಕೇಳಿದಾಗ ಈ ಮಾಹಿತಿ ಹೊರಬಿದ್ದಿದೆ.

’18 ವರ್ಷಗಳ ಹಿಂದೆ ಹೆರಿಗೆ ನೋವಿನ ಕಾರಣ ಅಪರೇಷನ್‌ಗೆ ಒಳಗಾಗಿದ್ದ ಮಹಿಳೆ, ಮಗು ಜನಿಸಿದ ಮೇಲೆ ಹೊಲಿಗೆ ಹಾಕುವ ವೇಳೆ ನರ್ಸ್‌ ಸೂಜಿಯನ್ನು ಯೋ*ನಿಯೆಲ್ಲಿಯೇ ಬಿಟ್ಟಿದ್ದಳು. ನಂತರ ವೈದ್ಯರು ತಮ್ಮ ಬೆರಳುಗಳ ಮೂಲಕ ಸೂಜಿಯನ್ನು ಹೊರತೆಗೆಯುವ ಪ್ರಯತ್ನ ಪಟ್ಟರೂ ಅದು ಹೊರಬಂದಿರಲಿಲ್ಲ. ಆಮೇಲೆ ಅತಿಯಾದ ರಕ್ತಸ್ರಾವ ಉಂಟಾಗಿ, ಸೂಜಿಯು ಯೋ*ನಿಯೊಳಗೆ ಉಳಿದಿದ್ದು, ವೈದ್ಯರು ತಮ್ಮ ಕೆಲಸ ಅಲ್ಲಿಗೇ ಮುಗಿಸಿದರು’ ಎಂದು ಮಹಿಳೆ ನೆನಪು ಮಾಡಿ ಹೇಳಿದ್ದಾರೆ.

ಅಂದಿನಿಂದ ಇಲ್ಲಿಯವರೆಗೆ ಮಹಿಳೆಗೆ ಆಗಾಗ ತೀವ್ರವಾದ ಕೆಳಹೊಟ್ಟೆ ನೋವು ಉಂಟಾಗುತ್ತಿತ್ತು. ಇದೀಗ ಸೂಜಿಯನ್ನು ಹೊರತೆಗೆಯಲು ಮಹಿಳೆಗೆ ಇನ್ನೊಂದು ಸರ್ಜರಿ ಮಾಡಬೇಕು. ಆದರೆ ದೇಹದಲ್ಲಿ ಸೂಜಿ ಅತ್ತಿತ್ತ ಹೋಗುತ್ತಿದ್ದ ಕಾರಣ ಸರ್ಜರಿ ವಿಳಂಬವಾಗಿದೆ ಎನ್ನಲಾಗಿದೆ.

ಮಹಿಳೆ ತಿಂಗಳಿಗೆ ನಾಲ್ಕು ಬಾರಿ ಆಸ್ಪತ್ರೆಗೆ ಹೋಗಬೇಕಾಗುತ್ತದೆ. ವೈದ್ಯಕೀಯ ವಿಮೆಯು ಆಕೆಯ ಹೆಚ್ಚಿನ ಚಿಕಿತ್ಸೆಯನ್ನು ಒಳಗೊಂಡಿರುತ್ತದೆಯಾದರೂ, ಸಾರಿಗೆ ವೆಚ್ಚಗಳು ಆರ್ಥಕವಾಗಿ ಆಕೆಯ ಮೇಲೆ ಹೊರೆಯಾಗಿದೆ. ಇನ್ನು ಸೂಜಿಯನ್ನು ಯಾವಾಗ ಹೊರತೆಗೆಯಲಾಗುತ್ತದೆ ಎನ್ನುವುದು ಇನ್ನು ಕೂಡಾ ನಿಶ್ಚಯವಾಗಿಲ್ಲ. ಈ ಕುರಿತು ಆಸ್ಪತ್ರೆ ಯಾವುದೇ ಪ್ರತಿಕ್ರಿಯೆಯೂ ನೀಡದ ಕಾರಣ, ಕಾನೂನು ಕ್ರಮ, ಪರಿಹಾರವೇನಾದರೂ ದೊರಕುತ್ತದೆಯೇ ಎಂಬುವುದೂ ತಿಳಿಯದೆ ಕುಟುಂಬ ಕಂಗಲಾಗಿದೆ.

Continue Reading

LATEST NEWS

ಪುತ್ತೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ವಸ್ತ್ರ, ಸಂಹಿತೆ ಜಾರಿ

Published

on

ಮಂಗಳೂರು: ಪುತ್ತೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ವಸ್ತ್ರ, ಸಂಹಿತೆ ಜಾರಿಗೊಳಿಸಲಾಗಿದೆ. ದೇವಸ್ಥಾನಕ್ಕೆ ಬರುವ ಭಕ್ತರು ವಸ್ತ್ರ ಸಂಹಿತೆ ಪಾಲಿಸುವಂತೆ ಪ್ರವೇಶ ದ್ವಾರದ ಬಳಿ ಸೂಚನಾ ಫಲಕ ಅಳವಡಿಸಲಾಗಿದೆ.

ದೇವರ ದರ್ಶನಕ್ಕೆ ಬರುವಾಗ ಸ್ವಚ್ಛ, ಶುಭ್ರ ಮತ್ತು ಸಭ್ಯ ಉಡುಪುಗಳನ್ನು ಧರಿಸಿ ಬರುವಂತೆ ಸೂಚಿಸಲಾಗಿದೆ. ಪುರುಷರು ಪ್ಯಾಂಟ್- ಅಂಗಿ ಅಥವಾ ಲುಂಗಿ – ಅಂಗಿ, ಮಹಿಳೆಯರು ಸೀರೆ ಅಥವಾ ಚೂಡಿದಾರ್ ಧರಿಸಿ ದೇವರ ದರ್ಶನ ಪಡೆಯುವಂತೆ ತಿಳಿಸಲಾಗಿದೆ.

ದೇವಸ್ಥಾನಕ್ಕೆ ಬರುವಾಗ ಭಕ್ತರು ಧರಿಸಬಹುದಾದ ವಸ್ತ್ರಗಳ ಮಾದರಿಯನ್ನು ಚಿತ್ರದ ಮೂಲಕ ಸೂಚನಾ ಫಲಕದಲ್ಲಿ ಹಾಕಲಾಗಿದೆ. ಅನೇಕ ವರ್ಷಗಳಿಂದ ಭಕ್ತರು ಮತ್ತು ಹಿಂದೂ ಪರ ಸಂಘಟನೆಗಳು ವಸ್ತ್ರ ಸಂಹಿತೆ ಜಾರಿಗೆ ಒತ್ತಾಯಿಸಿದ್ದವು. ಈ ಹಿನ್ನೆಲೆಯಲ್ಲಿ ದೇವಾಲಯ ವ್ಯವಸ್ಥಾಪನಾ ಸಮಿತಿಯವರು ವಸ್ತ್ರ ಸಂಹಿತೆ ಪಾಲಿಸುವಂತೆ ಸೂಚನಾ ಫಲಕ ಅಳವಡಿಸಿದ್ದಾರೆ.

Continue Reading

LATEST NEWS

Trending

Exit mobile version