Home ಪ್ರಮುಖ ಸುದ್ದಿ ಕೊರೊನಾ ಕರಿಛಾಯೆ: ದೇಶಾದ್ಯಂತ ಟೋಲ್ ಪ್ಲಾಜಾಗಳಲ್ಲಿ ಶುಲ್ಕ ಸಂಗ್ರಹ ರದ್ದು

ಕೊರೊನಾ ಕರಿಛಾಯೆ: ದೇಶಾದ್ಯಂತ ಟೋಲ್ ಪ್ಲಾಜಾಗಳಲ್ಲಿ ಶುಲ್ಕ ಸಂಗ್ರಹ ರದ್ದು

ಕೊರೊನಾ ಕರಿಛಾಯೆ: ದೇಶಾದ್ಯಂತ ಟೋಲ್ ಪ್ಲಾಜಾಗಳಲ್ಲಿ ಶುಲ್ಕ ಸಂಗ್ರಹ ರದ್ದು

ನವದೆಹಲಿ: ದೇಶದ ಎಲ್ಲಾ ಟೋಲ್‌ ಪ್ಲಾಜಾಗಳಲ್ಲಿ ಶುಲ್ಕ ಸಂಗ್ರಹಣೆಯನ್ನು ಬುಧವಾರ (ಮಾರ್ಚ್ 25) ರಾತ್ರಿಯಿಂದಲೇ ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ರದ್ದು ಮಾಡಿದೆ.

ಕೊರೊನಾ ವೈರಸ್‌ ಭೀತಿ ಇರುವ ಈ ಸಂದರ್ಭದಲ್ಲಿ ಅಗತ್ಯ ಸೇವೆಗಳು ತುರ್ತಾಗಿ ಲಭ್ಯವಾಗಬೇಕೆಂಬ ಉದ್ದೇಶಕ್ಕೆ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ, ಕೋವಿಡ್‌ 19 ಹಿನ್ನೆಲೆಯಲ್ಲಿ ದೇಶದ ಟೋಲ್‌ ಪ್ಲಾಜಾಗಳಲ್ಲಿ ಟೋಲ್‌ ಸಂಗ್ರಹವನ್ನು ತಾತ್ಕಾಲಿಕವಾಗಿ ಸರ್ಕಾರ ನಿರ್ಬಂಧಿಸಿದೆ ಎಂದು ತಿಳಿಸಿದ್ದಾರೆ.

ತುರ್ತು ಸೇವೆಗಳಿರುವ ತೊಡಕು ನಿವಾರಿಸಲಷ್ಟೇ ಈ ನಿರ್ಧಾರ ಕೈಗೊಂಡಿಲ್ಲ. ಬದಲಿಗೆ ಸಮಯ ಉಳಿಸುವ ಸಲುವಾಗಿಯೂ ಈ ತೀರ್ಮಾನ ಮಾಡಲಾಗಿದೆ ಎಂದು ಗಡ್ಕರಿ ಹೇಳಿದ್ದಾರೆ.

ರಸ್ತೆಗಳ ನಿರ್ವಹಣೆ ಮತ್ತು ಹೆದ್ದಾರಿ ತುರ್ತು ಸೇವೆಗಳು ಎಂದಿನಂತೇ ಲಭ್ಯವಾಗಲಿವೆ ಎಂಬುದನ್ನೂ ಅವರು ಸ್ಪಷ್ಟಪಡಿಸಿದ್ದಾರೆ.

- Advertisment -

RECENT NEWS

ಕೇರಳ-ಕರ್ನಾಟಕ ಬಾರ್ಡರ್ ಸಮಸ್ಯೆ ಪರಿಹಾರಕ್ಕೆ ಪತ್ರದ ಮೂಲಕ ದೇವೇಗೌಡ ಮನವಿ

ಕೇರಳ-ಕರ್ನಾಟಕ ಬಾರ್ಡರ್ ಸಮಸ್ಯೆ ಪರಿಹಾರಕ್ಕೆ ಪತ್ರದ ಮೂಲಕ ದೇವೇಗೌಡ ಮನವಿ ಮಂಗಳೂರು: ಸದ್ಯ ಕೊರೊನಾ ವೈರಸ್ ಹಿನ್ನಲೆ ಕೇರಳ ಹಾಗೂ ಕರ್ನಾಟಕ ಗಡಿ ಸಮಸ್ಯೆ ತಾರಕಕ್ಕೇರಿದ್ದು, ಇದೀಗ ಈ ಸಮಸ್ಯೆ ಪರಿಹರಿಸಲು ಮಾಜಿ ಪ್ರಧಾನಿ...

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ ಮಂಗಳೂರು: ಎಮ್ ರ್ ಜಿ ಗ್ರೂಪ್ ನ ಆಡಳಿತ ನಿರ್ದೇಶಕ ಕೊರಂಗ್ರಪಾಡಿ ಪ್ರಕಾಶ್ ಶೆಟ್ಟಿ ಅವರ ಉದಾರ ದಾನವಾಗಿ...

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..!

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..! ಮಂಗಳೂರು : ಇಂದು ಐದು ವರ್ಷದ ಬಾಲಕನೊಬ್ಬ ಸಿಎಂ ಪರಿಹಾರ ನಿಧಿಗೆ ತನ್ನ ಪಾಕೆಟ್ ಮನಿಯನ್ನೇ ದೇಣಿಗೆ ನೀಡಿ...

ದೆಹಲಿ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್

ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್ ಬೀದರ್: ಬೀದರ್‌ನಲ್ಲಿ 11 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ 11 ಮಂದಿಯೂ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರಾಗಿದ್ದಾರೆ. ಬೀದರ್‌ನಿಂದ ದೆಹಲಿಗೆ ತೆರಳಿದ್ದ...