Connect with us

    DAKSHINA KANNADA

    ದಕ್ಷಿಣ ಕನ್ನಡ ಸಂಸದ ಬ್ರಿಜೇಶ್‌ ಚೌಟ ಕಾರ್ಯಾಲಯ ಉದ್ಘಾಟನೆ

    Published

    on

    ಮಂಗಳೂರು: ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ಕಚೇರಿಯ ಉದ್ಘಾಟನೆ ಇಂದು ನೆರವೇರಿತು. ದ.ಕ. ಜಿಲ್ಲಾಧಿಕಾರಿ ಕಚೇರಿ ಕಟ್ಟಡ ಸಂಕೀರ್ಣದಲ್ಲಿ ಆರಂಭಿಸಲಾಗಿರುವ ಈ ಕಾರ್ಯಾಲಯವನ್ನು ಭಾರತ ಮಾತೆಯ ಭಾವಚಿತ್ರದ ಎದುರು ದೀಪ ಬೆಳಗಿಸಿ ಆರೆಸ್ಸೆಸ್‌ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್‌ ಅವರು ಉದ್ಘಾಟಿಸಿದರು.

    ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ ಡಿ. ಕಾಮತ್‌, ಡಾ. ಭರತ್‌ ಶೆಟ್ಟಿ, ರಾಜೇಶ್‌ ನಾಯಕ್‌ ಉಳಿಪಾಡಿ, ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌, ಮೇಯರ್ ಸುಧೀರ್‌  ಶೆಟ್ಟಿ, ಉಪಮೇಯರ್‌ ಸುನಿತಾ, ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ಕ್ಯಾ. ಗಣೇಶ್‌ ಕಾರ್ಣಿಕ್‌, ಕೆ. ಮೋನಪ್ಪ ಭಂಡಾರಿ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಮುಖಂಡ ನಿತಿನ್‌ ಕುಮಾರ್‌, ಮಾಜಿ ಮೇಯರ್‌ ಪ್ರೇಮಾನಂದ ಶೆಟ್ಟಿ, ದಿವಾಕರ ಪಾಂಡೇಶ್ವರ ಮುಂತಾದವರು ಉಪಸ್ಥಿತರಿದ್ದು ಶುಭ ಹಾರೈಸಿದರು.

    ಬಳಿಕ ಡಾ. ಕಲ್ಲಡ್ಕ ಪ್ರಭಾಕರ ಭಟ್‌ ಮಾತನಾಡಿ, ಹಿಂದುತ್ವದ ನಾಡಿನಿಂದ ದೇವರ ಮತ್ತು ಜನರ ಆಶೀರ್ವಾದದಿಂದ ಓರ್ವ ಯೋಧ ಸಂಸತ್ತಿಗೆ ಹೋಗಿದ್ದಾರೆ. ಅವರು ಈ ಕ್ಷೇತ್ರದ ಅಭಿವೃದ್ಧಿಗಾಗಿ ಮತ್ತು ಎಲ್ಲರ ಸಮಸ್ಯೆಗಳನ್ನು ಕೇಳಿ ಯೋಧನ ಹಾಗೆ ಪ್ರಾಮಾಣಿಕವಾಗಿ, ತನ್ನನ್ನು ತಾನು ಸಮರ್ಪಿಸಿಕೊಂಡು ಕೆಲಸ ಮಾಡುತ್ತಾರೆ ಎಂಬ ವಿಶ್ವಾಸವಿದೆ. ಅವರಿಗೆ ಶುಭ ಕೋರುತ್ತೇನೆ ಎಂದರು.  ಬೃಜೇಶ್‌ ಚೌಟ ಅವರನ್ನು ಪೀಠದಲ್ಲಿ ಕೂತು ಕೊಳ್ಳಿಸಿದ ಡಾ. ಕಲ್ಲಡ್ಕ ಪ್ರಭಾಕರ ಭಟ್‌, ಇದು ಕುಳಿತುಕೊಳ್ಳಲು ಇರುವ ಆಸನವಲ್ಲ. ಎಲ್ಲರ ಸಮಸ್ಯೆಗಳನ್ನು ಕೇಳಿ ಅದಕ್ಕೆ ಸ್ಪಂದಿಸಲು ಒಂದು ಜಾಗ ಬೇಕು. ಅದಕ್ಕಾಗಿ ಅವರನ್ನು ಕೂತುಕೊಳ್ಳಿಸಿದ್ದೇವೆ ಎಂದರು.

    ಕ್ಯಾ. ಬ್ರಿಜೇಶ್‌ ಚೌಟ ಮಾತನಾಡಿ ಹಿಂದುತ್ವದ ಧ್ವನಿಯಾಗಿ, ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ದುಡಿಯುತ್ತೇನೆ. ಎಲ್ಲರ ಸಹಕಾರದಿಂದ ಮುಂದುವರಿಯುತ್ತೇನೆ. ಈ ಕಚೇರಿಯು ಜಿಲ್ಲೆಯ ಎಲ್ಲ ಜನರ ಸಮಸ್ಯೆಗಳಿಗೆ ಉತ್ತರ ನೀಡುವ ಕೇಂದ್ರವಾಗಲಿ. ಇಲ್ಲಿ ಸಮಾಜದ ಕಟ್ಟ ಕಡೆಯ ಜನರಿಗೆ ನ್ಯಾಯ ಒದಗಿಸುವ ಕೆಲಸ ಆಗಲಿ ಎಂದರು. ಸತೀಶ್‌ ಕುಂಪಲ ಅವರು ಮಾತನಾಡಿ ಬೃಜೇಶ್  ಚೌಟ ಅವರ ಕಚೇರಿಯು ಎಲ್ಲಾ ಜನರ ನೋವು ನಲಿವುಗಳಿಗೆ ಸ್ಪಂದನೆ ನೀಡುವ ಕೇಂದ್ರವಾಗಲಿ. ಇದಕ್ಕೆ ಎಲ್ಲರ  ಸಹಕಾರವೂ ಬೇಕು ಎಂದರು.

    DAKSHINA KANNADA

    ಬ್ರೇಕ್ ಫೇಲ್ ಆಗಿ ದ್ವಿಚಕ್ರ ವಾಹನಕ್ಕೆ ಲಾರಿ ಡಿ*ಕ್ಕಿ; ಓರ್ವ ಸಾ*ವು

    Published

    on

    ಮಂಗಳೂರು/ಆನೇಕಲ್ ದ್ವಿಚಕ್ರ ವಾಹನಕ್ಕೆ ಲಾರಿ ಡಿ*ಕ್ಕಿ ಹೊಡೆದು, ಸವಾರ ಸ್ಥಳದಲ್ಲಿಯೇ ಮೃ*ತಪಟ್ಟಿರುವ ಘಟನೆ ತಮಿಳುನಾಡು ಗಡಿ ಪ್ರದೇಶವಾದ ಹೊಸೂರು ಸಮೀಪದ ಸೂಳಗಿರಿ ಬಳಿ ನಡೆದಿದೆ. ಆನೇಕಲ್ ತಾಲೂಕಿನ ರಾಚಮಾನಹಳ್ಳಿಯ ನಿವಾಸಿ ಅರ್ಚಕ ಶ್ರೀನಿವಾಸ್ ಮೃ*ತ‌ ದುರ್ದೈವಿ.

    ದೇವಾಲಯದ ಅರ್ಚಕರಾಗಿದ್ದ ಶ್ರೀನಿವಾಸ್, ಪೂಜೆಯ ನಿಮಿತ್ತ ಬೈಕ್‌ ಮೂಲಕ ಆನೇಕಲ್‌ನಿಂದ ಹೋಗುತ್ತಿದ್ದರು. ಈ ವೇಳೆ ತಮಿಳುನಾಡಿನ ಲಾರಿಯೊಂದರ ಬ್ರೇಕ್ ಫೇಲ್ ಆಗಿ ಹೆದ್ದಾರಿಯಿಂದ ಡಿವೈಡರ್ ದಾಟಿಕೊಂಡು ಬಂದು ಸರ್ವಿಸ್ ರಸ್ತೆಯಲ್ಲಿ ಹೋಗುತ್ತಿದ್ದ ಶ್ರೀನಿವಾಸ್ ಅವರ ವಾಹನಕ್ಕೆ ಡಿ*ಕ್ಕಿ ಹೊಡೆದಿದೆ. ಪರಿಣಾಮ ಶ್ರೀನಿವಾಸ್ ಸ್ಥಳದಲ್ಲಿಯೇ ಮೃ*ತಪಟ್ಟರೆ, ರಾಘವೇಂದ್ರ ಎಂಬುವವರಿಗೆ ಗಂಭೀರ ಗಾ*ಯವಾಗಿದೆ.

    ಇದನ್ನೂ ಓದಿ : ಖಾಸಗಿ ಬಾಹ್ಯಾಕಾಶ ನಡಿಗೆ ಯಶಸ್ವಿ; ಸುರಕ್ಷಿತವಾಗಿ ಭೂಮಿಗೆ ಮರಳಿದ ಗಗನಯಾತ್ರಿಗಳು

    ಅಪಘಾ*ತದ ರಭಸಕ್ಕೆ ಬೈಕ್‌ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಸೂಳಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮ*ರಣೋತ್ತರ ಪರೀಕ್ಷೆಗಾಗಿ ಮೃ*ತದೇಹವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.

    Continue Reading

    DAKSHINA KANNADA

    ಬಿಜೆಪಿ ಹೈಕಮಾಂಡಿಂದ ಭರ್ಜರಿ ಗಿಫ್ಟ್ ; ನಳೀನ್ ಕುಮಾರ್ ಕಟೀಲ್ ಸುತ್ತಾಟ ಮತ್ತೆ ಆರಂಭ !

    Published

    on

    ಮಂಗಳೂರು: ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ದ.ಕ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಅವರು ಎಂಪಿ ಚುನಾವಣೆಯಲ್ಲಿ ಟಿಕೆಟ್ ಸಿಗದೆ ವಂಚಿತರಾದ ಬಳಿಕ ಅಷ್ಟಾಗಿ ರಾಜಕೀಯ ವಿಚಾರದಲ್ಲಿ ಪ್ರಚಲಿತದಲ್ಲಿರಲಿಲ್ಲ. ಆದರೆ ಇದಿಗ ಕಟೀಲ್ ಮತ್ತೆ ಸುದ್ದಿಯಲ್ಲಿದ್ದಾರೆ.


    ನಳೀನ್ ಕುಮಾರ್‌ಗೆ ಗುಡ್ ನ್ಯೂಸ್;
    ಬಿಜೆಪಿಯು ನಳೀನ್ ಕುಮಾರ್ ಕಟೀಲ್ ಅವರನ್ನು ಒಡಿಶಾ ರಾಜ್ಯದ ಬಿಜೆಪಿ ಸದಸ್ಯತ್ವ ಅಭಿಯಾನದ ಉಸ್ತುವಾರಿಯಾಗಿ ನಿಯೋಜನೆ ಮಾಡಿ ಆದೇಶ ಹೊರಡಿಸಿದೆ. ಅಂದಹಾಗೆ ಒಡಿಶಾದಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಸದಸ್ಯತ್ವದ ಗುರಿಯನ್ನು ನೀಡಿದ್ದು, ಕೇಂದ್ರ ನಾಯಕತ್ವ ನಳಿನ್ ಕುಮಾ‌ರ್ ಕಟೀಲ್‌ಗೆ ಈ ಜವಾಬ್ದಾರಿ ನೀಡಿದೆ ಎಂದು ಮೂಲಗಳು ತಿಳಿಸಿವೆ.
    ಈ ಹಿನ್ನೆಲೆಯಲ್ಲಿ ನಳಿನ್ ಕುಮಾರ್ ಕಟೀಲ್ ಅವರು ಸೆ.17ರಂದು ಒಡಿಶಾಗೆ ತೆರಳಲಿದ್ದು, ಅಲ್ಲಿ ಒಂದು ವಾರ ಕಾಲ ಸದಸ್ಯತ್ವ ಅಭಿಯಾನದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

     

    Continue Reading

    DAKSHINA KANNADA

    ಮಂಗಳೂರಿನ ಕಾಟಿಪಳ್ಳದಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ

    Published

    on

    ಸುರತ್ಕಲ್ : ಮಂಗಳೂರು ಹೊರವಲಯದ ಸುರತ್ಕಲ್ ಕಾಟಿಪಳ್ಳ 3ನೆ ಬ್ಲಾಕ್‌ ನಲ್ಲಿರುವ ಬದ್ರಿಯಾ ಜುಮಾ ಮಸೀದಿಗೆ ದು*ಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಭಾನುವಾರ(ಸೆ.15) ರಾತ್ರಿ 11ರ ಸುಮಾರಿಗೆ ಈ ಘಟನೆ ನಡೆದಿದೆ.

    ಎರಡು ಬೈಕ್‌ ಗಳಲ್ಲಿ ಬಂದ ನಾಲ್ಕು ಮಂದಿ ದು*ಷ್ಕರ್ಮಿಗಳು ಮಸೀದಿಗೆ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಮಸೀದಿಯ ಕಿಟಕಿಗಳಿಗೆ ಹಾನಿಯಾಗಿದೆ.

    ಸುರತ್ಕಲ್‌ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಮಸೀದಿಯ ಸಿಸಿಟಿವಿ ಸೇರಿದಂತೆ ಸಮೀಪದ ಸಿಸಿಟಿವಿ ಫೂಟೇಜ್‌ ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.

    ಇಂದು(ಸೆ.16) ಈದ್ ಮಿಲಾದ್  ಹಬ್ಬ. ಹಾಗಾಗಿ ಸುರತ್ಕಲ್ ಸೇರಿದಂತೆ ಮಂಗಳೂರು ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

    Continue Reading

    LATEST NEWS

    Trending