Monday, July 4, 2022

ಬಂಟ್ವಾಳ: ಎರಡು ಕಾರುಗಳ ನಡುವೆ ಪರಸ್ಪರ ಡಿಕ್ಕಿ-ನಾಲ್ವರಿಗೆ ಗಂಭೀರ ಗಾಯ

ಬಂಟ್ವಾಳ: ಎರಡು ಕಾರುಗಳ ನಡುವೆ ಪರಸ್ಪರ ಡಿಕ್ಕಿಯಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳದ ಮೆಲ್ಕಾರ್ ಟ್ರಾಫಿಕ್ ಪೋಲಿಸ್ ಠಾಣಾ ವ್ಯಾಪ್ತಿಯ ದಾಸಕೋಡಿ ಎಂಬಲ್ಲಿ ನಡೆದಿದೆ.


ಘಟನೆಯಲ್ಲಿ ಬಂಟ್ವಾಳ ನಿವಾಸಿಗಳಾದ ವಿಡಿಯೋಗ್ರಾಫರ್ ಸುಕುಮಾರ್ ಬಂಟ್ವಾಳ, ಪೈಂಟರ್ ವಿಠಲ, ಚಾಲಕ ಪುನೀತ್ ಹಾಗೂ ನಿತೀಶ್ ಗಾಯಗೊಂಡವರಾಗಿದ್ದಾರೆ.

ಮಾಣಿ ಕಡೆಯಿಂದ ಬರುತ್ತಿದ್ದ ಓಮ್ನಿ ಕಾರಿಗೆ ಬಂಟ್ವಾಳ ಕಡೆಯಿಂದ ಅತೀ ವೇಗದಿಂದ ಬರುತ್ತಿದ್ದ ಬ್ರೀಝಾ ಕಾರು ಡಿಕ್ಕಿ ಹೊಡೆದಿದೆ‌. ಇದರ ಪರಿಣಾಮವಾಗಿ ಓಮ್ನಿಯಲ್ಲಿದ್ದ ನಾಲ್ವರಿಗೆ ಗಂಭೀರವಾಗಿ ಗಾಯವಾಗಿದೆ.

ದಾಸಕೋಡಿ ಎಂಬಲ್ಲಿ ಬ್ರೀಝಾ ಕಾರು ಚಾಲಕನ ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದೆ ಎಂದು ದೂರಿದ್ದಾರೆ. ಘಟನೆ ನಡೆದ ಬಳಿಕ ಕೆಲ ಹೊತ್ತು ಟ್ರಾಫಿಕ್ ಸಮಸ್ಯೆ ಕೂಡ ಉಂಟಾಗಿತ್ತು‌.

ಘಟನಾ ಸ್ಥಳಕ್ಕೆ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗಾಯಗೊಂಡ ನಾಲ್ವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here

Hot Topics

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ನೀರುಪಾಲು-ಓರ್ವನ ರಕ್ಷಣೆ

ಬಂಟ್ವಾಳ: ನದಿಯಲ್ಲಿ ಈಜಲು ತೆರಳಿದ್ದ ಐವರು ಬಾಲಕರಲ್ಲಿ ಇಬ್ಬರು ನೀರು ಪಾಲಾಗಿದ್ದು, ಓರ್ವನನ್ನು ಸ್ಥಳೀಯರು ರಕ್ಷಣೆ ಮಾಡಿದರೆ, ಮತ್ತೋರ್ವ ಬಾಲಕ ನಾಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಳ್ಳಾಲ ತಾಲೂಕಿನ ಸಜಿಪಪಡು...

“ಪೀ ಬನ್ನಗ ಬಿತ್ತಿಲ್‌ ನಾಡುನ ಪರಿಸ್ಥಿತಿ” ಮಳೆ ಅವಾಂತರದ ಬಗ್ಗೆ ಮಾಜಿ ಶಾಸಕ ಲೋಬೊ ವ್ಯಂಗ್ಯ

ಮಂಗಳೂರು: ಕಳೆದ ಒಂದು ವಾರದಿಂದ ಮಂಗಳೂರು ನಗರದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ನಗರದಾದ್ಯಂತ ಅವ್ಯವಸ್ಥೆ ಉಂಟಾಗಿದೆ. ಮಳೆ ಪ್ರಾರಂಭವಾಗುವ ಮೊದಲು ಪೂರ್ವ ತಯಾರಿ ಮಾಡದಿದ್ದರೆ ಇಂದಿನ ಅವಾಂತರಕ್ಕೆ ಕಾರಣವಾಗುತ್ತದೆ.ಇದು ಪೀ ಬನ್ನಗ ಬಿತ್ತಿಲ್‌...

ಭಾರೀ ಮಳೆ ಹಿನ್ನೆಲೆ: ಮಡಿಕೇರಿ- ಮಂಗಳೂರು ಹೆದ್ದಾರಿ ಮಧ್ಯೆ ಮಣ್ಣು ಕುಸಿತ

ಸುಳ್ಯ: ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆ ಮಡಿಕೇರಿ- ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯ ತಾಳತ್ತಮನೆ ಸಮೀಪ ರಸ್ತೆಗೆ ಮಣ್ಣು ಕುಸಿದಿದೆ.ಸದ್ಯ ಸಣ್ಣ ಪ್ರಮಾಣದ ಮಣ್ಣು ಕುಸಿದದ್ದರಿಂದ ಒಂದು ಕಡೆಯ...