Friday, July 1, 2022

ಕಾರು ಅಪಘಾತ: ಆಸ್ಟ್ರೇಲಿಯಾ ತಂಡದ ಕ್ರಿಕೆಟ್ ದಿಗ್ಗಜ ಆಂಡ್ರ್ಯೂಸೈಮಂಡ್ಸ್ ಇನ್ನಿಲ್ಲ

ಸಿಡ್ನಿ: ಐಪಿಎಲ್‌‌ನಲ್ಲಿ ಆಟವಾಡಿದ್ದ ಆಸ್ಟ್ರೇಲಿಯಾ ತಂಡದ ಮಾಜಿ ಆಟಗಾರ,ಆಲ್ ರೌಂಡರ್ ಆಂಡ್ರ್ಯೂ ಸೈಮಂಡ್ಸ್ ಕಾರು ಅಪಘಾತದಿಂದಾಗಿ ಸಾವನ್ನಪ್ಪಿದ್ದಾರೆ.

ನಿನ್ನೆ ರಾತ್ರಿ ಆಯಂಡ್ರ್ಯೂ ಸೈಮಂಡ್ಸ್ ಕ್ವೀನ್ಸ್‌ಲ್ಯಾಂಡ್ ರಾಜ್ಯದ ಟೌನ್ಸ್‌ವಿಲ್ಲೆ ಹೊರವಲಯದಲ್ಲಿ ನಡೆದ ಕಾರು ಅಪಘಾತದಲ್ಲಿ ಇವರು ಮೃತಪಟ್ಟಿದ್ದಾರೆ.

ಆಸ್ಟ್ರೇಲಿಯನ್ ಕ್ರಿಕೆಟ್ ಕಂಡ ಅತ್ಯಂತ ನುರಿತ ಆಲ್-ರೌಂಡರ್‌ಗಳಲ್ಲಿ ಒಬ್ಬರಾಗಿದ್ದ ಸೈಮಂಡ್ಸ್ ಅವರು 2012ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ್ದರು.

2003 ಹಾಗೂ 2007ರ ವಿಶ್ವಕಪ್ ಗೆದ್ದ ತಂಡದ ಭಾಗವಾಗಿದ್ದ ಸೈಮಂಡ್ಸ್ ಸಾವಿಗೆ ಆಸ್ಟ್ರೇಲಿಯಾ ಸಂತಾಪ ಸೂಚಿಸಿದೆ.

ಇವರು ಸುಮಾರು 11 ವರ್ಷಗಳ ಕಾಲ ಕಾಂಗರೂ ನಾಡಿನ ಪರವಾಗಿ ಆಡಿದ್ದು, 26 ಟೆಸ್ಟ್, 198 ಏಕದಿನ ಮತ್ತು 14 ಟಿ20 ಪಂದ್ಯಗಳನ್ನಾಡಿದ್ದಾರೆ.

2008ರಿಂದ 2011ರವರೆಗೆ ಐಪಿಎಲ್ ನಲ್ಲಿ ಆಡಿರುವ ಸೈಮಂಡ್ಸ್ 39 ಪಂದ್ಯಗಳನ್ನಾಡಿದ್ದಾರೆ.

 

LEAVE A REPLY

Please enter your comment!
Please enter your name here

Hot Topics

ಮಹಿಳೆಯರ ಸ್ವಾವಲಂಬಿ ಬದುಕಿಗೆ ಭಾಷ್ಯ ಬರೆದ ಉಡುಪಿಯ ಸವಿತಾ ಶೇಟ್

ಉಡುಪಿ: ಮಹಿಳೆಯರಿಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಉಡುಪಿಯ ಮಹಿಳೆಯೊಬ್ಬರು ಪ್ರೇರಣೆಯಾಗಿದ್ದಾರೆ. ಉಡುಪಿಯ ಒಳಕಾಡು ನಿವಾಸಿ ಸವಿತಾ ಶೇಟ್ ಎಂಬವರೇ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸ್ಪೂರ್ತಿದಾಯಕರಾಗಿದ್ದಾರೆ.ಇವರ ಗಂಡ ಉದ್ಯಮಿಯಾಗಿದ್ದು ಹಾಗೂ ಮಗ ಶಿಕ್ಷಕರಾಗಿ ಕೆಲಸ...

ಮಂಗಳೂರಿನಲ್ಲಿ ಅಗ್ನಿವೀರ್ ಪ್ರವೇಶ ಪರೀಕ್ಷೆ: ಅವಿವಾಹಿತ ಪುರುಷರಿಂದ ಅರ್ಜಿ ಆಹ್ವಾನ

ಮಂಗಳೂರು: ಭಾರತೀಯ ವಾಯುಪಡೆಯಿಂದ ಅಗ್ನಿಪತ್ ಯೋಜನೆಯಡಿ ಅಗ್ನಿವೀರ್ ವಾಯು ಪ್ರವೇಶ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಅಭ್ಯರ್ಥಿಗಳು ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ಶೇ.50ರಷ್ಟು ಅಂಕ ಮತ್ತು...

ಉಡುಪಿ: ನೀರಿನಿಂದ ಮುಳುಗಡೆಯಾದ ಕೃಷಿಭೂಮಿ-ಅಪಾರ ಬೆಳೆ ನಷ್ಟ

ಉಡುಪಿ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮೂರು ನಾಲ್ಕು ದಿನಗಳಿಂದ ಗ್ರಾಮ ಜಲಾವೃತಗೊಂಡು ಕೃಷಿ ಭೂಮಿಗೆ ನೀರು ನುಗ್ಗಿ ನೂರಾರು ಎಕರೆ ಕೃಷಿಭೂಮಿ ನೀರಿನಲ್ಲಿ ಮುಳುಗಡೆಯಾದ ಘಟನೆ ಉಡುಪಿಯ ಬೈಂದೂರಿನ ನಾವುಂದದಲ್ಲಿ ನಡೆದಿದೆ.ರೈಲ್ವೆ ಮಾರ್ಗದ...