Connect with us

    LATEST NEWS

    ಹೈಸ್ಕೂಲ್ ವಿದ್ಯಾರ್ಥಿ ಚಲಾಯಿಸುತ್ತಿದ್ದ ಕಾರು ಅಪಘಾ*ತ; ಇಬ್ಬರು ಸಾ*ವು

    Published

    on

    ಮಂಗಳೂರು/ಗದಗ : ಹೈಸ್ಕೂಲ್‌ ವಿದ್ಯಾರ್ಥಿಯೊಬ್ಬ ಚಲಾಯಿಸುತ್ತಿದ್ದ ಕಾರು ಅಪ*ಘಾತವಾಗಿ ಇಬ್ಬರು ಸಾ*ವನ್ನಪ್ಪಿರುವ ಘಟನೆ ಗದಗದ ಹುಲಕೋಟಿ ರೂರಲ್‌ ಇಂಜಿನಿಯರಿಂಗ್‌ ಕಾಲೇಜ್‌ ಬಳಿ ನಡೆದಿದೆ. ಮಹಮ್ಮದ್ ಮುಜಾವರ್(‌೧೬), ಸಂಜೀವ್‌ ಗಿರಡ್ಡಿ(೧೬) ಮೃ*ತ ವಿದ್ಯಾರ್ಥಿಗಳು. ಆಶಿಸ್‌ ಗುಂಡುರ್(‌೧೬) ಸೇರಿದಂತೆ ಮತ್ತೋರ್ವ ವಿದ್ಯಾರ್ಥಿಗೆ ಗಂ*ಭೀರ ಗಾ*ಯಗಳಾಗಿವೆ.

    ಶಾಲಾ ವಾರ್ಷಿಕೋತ್ಸವ ಮುಗಿಸಿ ವಿದ್ಯಾರ್ಥಿಗಳು ಕಾರಿನಲ್ಲಿ ಹೊರಟಿದ್ದರು. ಅವರೆಲ್ಲಾ ೧೦ನೇ ತರಗತಿ ವಿದ್ಯಾರ್ಥಿಗಳಾಗಿದ್ದು, ಹುಲಕೋಟಿ ರಾಜೇಶ್ವರಿ ವಿದ್ಯಾನಿಕೇತನ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು.  ಅವರಲ್ಲೊಬ್ಬ ಕಾರು ಚಲಾಯಿಸುತ್ತಿದ್ದ. ಗ್ಯಾದರಿಂಗ್‌ ಡ್ಯಾನ್ಸ್‌ ಮುಗಿಸಿಕೊಂಡು ಜೋಶ್‌ನಲ್ಲಿ ವಿದ್ಯಾರ್ಥಿಗಳು ಹೊರಟಿದ್ದರು ಎನ್ನಲಾಗಿದೆ.

    ಇದನ್ನೂ ಓದಿ : 2ನೇ ಮದುವೆಗೆ ಸಜ್ಜಾದ ಬಿಗ್ ಬಾಸ್ ಮಾಜಿ ಸ್ಪರ್ಧಿ ವರ್ತೂರು ಸಂತೋಷ್; ಹುಡುಗಿ ಯಾರು ಗೊತ್ತಾ..?

    ಅತಿವೇಗದ ಚಾಲನೆಯಿಂದಾಗಿ ಕಾರು ಡಿವೈಡರ್‌ಗೆ ಡಿ*ಕ್ಕಿ ಹೊಡೆದು ಈ ದುರಂ*ತ ನಡೆಯಲು ಕಾರಣ ಎಂದು ತಿಳಿದುಬಂದಿದೆ. ಡಿ*ಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಗಾ*ಯಗೊಂಡಿರುವ ಓರ್ವ ವಿದ್ಯಾರ್ಥಿಯನ್ನುಗದಗ ಜಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೋರ್ವನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಗದಗ ಗ್ರಾಮೀಣ ಪೊಲೀಸರು ಭೇಟಿ ನೀಡಿ, ಪರೀಶೀಲಿಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಮಂಗಳೂರು : ಹಿರಿಯ ವಿದ್ಯಾರ್ಥಿಗಳ ಸಂಘದ ‘ದಶಮ ಸಂಭ್ರಮ’

    Published

    on

    ಮಂಗಳೂರು : ಹಿರಿಯ ವಿದ್ಯಾರ್ಥಿಗಳ ಸಂಘದ ‘ದಶಮ ಸಂಭ್ರಮ’ ಕಾರ್ಯಕ್ರಮವು ಡಾ. ಪಿ. ದಯಾನಂದ ಪೈ -ಪಿ.ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿಯಲ್ಲಿ ಜನವರಿ 3 ರಂದು ನಡೆದಿದೆ.

     

    ಹಿರಿಯ ವಿದ್ಯಾರ್ಥಿಗಳ ಸಂಘದ ದಶಮಾನೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳು ನಡೆದಿದ್ದು, ಲೋಗೋ ಅನಾವರಣ ಹಾಗೂ ಸ್ತಾತಕೋತ್ತರ ವಿದ್ಯಾರ್ಥಿಗಳಿಗೆ ನೆಟ್/ಕೆ.ಸೆಟ್ ಪರೀಕ್ಷೆಯ ಪೂರ್ವ ತಯಾರಿಯನ್ನು ಏರ್ಪಡಿಸಲಾಗಿತ್ತು.

    ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುಡಿಪು ಇಲ್ಲಿನ ಸಮಾಜ ಶಾಸ್ತ್ರ ವಿಭಾಗದ ಸಹ ಪ್ರಾದ್ಯಪಕ, ಮಂಗಳೂರು ವಿಶ್ವವಿದ್ಯಾನಿಲದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕರಾಗಿರುವ ಡಾ. ಶೇಷಪ್ಪ ಕೆ. ಲೋಗೋ ಅನವಾರಣಗೊಳಿಸುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶ್ರೀ ಗೋಕರ್ಣನಾಥೇಶ್ವರ ಕಾಲೇಜು ಗಾಂದಿನಗರ ಮಂಗಳೂರು ಇಲ್ಲಿನ ವಾಣಿಜ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಕರಾಗಿರುವ ಶ್ರೀ. ಯತೀನ್ ಸಂಪನ್ಮೂಲ ವ್ಯಕ್ತಿಯಾಗಿ ಹಾಜರಿದ್ದರು. ದಯಾನಂದ ಕಾಲೇಜಿನ ಪ್ರಾಂಶುಪಾಲರಾದ ಫ್ರೊ. ಜಯಕರ ಭಂಡಾರಿ ಎಂ. ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದರು.

    ಕಾಲೇಜಿನ ಐಕ್ಯೂಎಸಿಯ ಸಂಯೋಜಕ ದೇವಿಪ್ರಸಾದ್, ಸ್ತಾತಕೋತ್ತರ ವಿಭಾಗದ ಸಂಯೋಜಕ ಡಾ. ಲೋಕೇಶನಾಥ್, ಹಿರಿಯ ವಿದ್ಯಾರ್ಥಿಗಳ ಸಂಘದ ಸಂಯೋಜಕರಾಗಿರುವ ನಾಗರಾಜ್ ಎಂ. , ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಧೀರಜ್ ಕುಮಾರ್ ಹಾಗೂ ಹಿರಿಯ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ತುಷಾರ್ ಕೆ. ವೇದಿಯಲ್ಲಿ ಉಪಸ್ಥಿತರಿದ್ದರು.

    Continue Reading

    LATEST NEWS

    ಇಬ್ಬರು ಮಕ್ಕಳನ್ನು ಕೊಂ*ದು ನೇ*ಣಿಗೆ ಶರಣಾದ ದಂಪತಿ

    Published

    on

    ಬೆಂಗಳೂರು : ಇಬ್ಬರು ಮಕ್ಕಳನ್ನು ಕೊಂ*ದು ದಂಪತಿ ಆ*ತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಸದಾಶಿವ ನಗರದ ಆರ್.ಎಂ.ವಿ ಎರಡನೇ ಹಂತದ ಟೆಂಪಲ್ ರಸ್ತೆಯಲ್ಲಿ ನಡೆದಿದೆ. ಪತಿ ಅನೂಪ್‌ (38), ರಾಖಿ(35), ಅನುಪ್ರಿಯಾ (5) ವರ್ಷ ಮತ್ತು ಪ್ರಿಯಾಂಶ್ (2) ಮೃ*ತಪಟ್ಟವರು.

    ರಾತ್ರಿ(ಜ.5) ಇಬ್ಬರು ಮಕ್ಕಳನ್ನು ಹ*ತ್ಯೆ ಮಾಡಿದ ದಂಪತಿ ಬಳಿಕ ಮನೆಯಲ್ಲೇ ನೇ*ಣಿಗೆ ಶರಣಾಗಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಸದಾಶಿವ ನಗರ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

    ಕಾರಣ ಏನು?

    ಅನೂಪ್‌ ಉತ್ತರ ಪ್ರದೇಶ ಮೂಲದವರಾಗಿದ್ದು, ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್‌ ಕನ್ಸಲ್ಟೆಂಟ್‌ ಆಗಿ ಕೆಲಸ ಮಾಡುತ್ತಿದ್ದರು. ಮೊದ ಮಗು ಅನುಪ್ರಿಯಾಗೆ ಆರೋ*ಗ್ಯ ಸಮಸ್ಯೆ ಇತ್ತು. ಈ ವಿಚಾರಕ್ಕೆ ದಂಪತಿ ಬಹಳ ಬೇಸರದಲ್ಲಿದ್ದರು ಎನ್ನಲಾಗಿದೆ.

    ಮನೆಗೆ ಮೂರು ಜನ ಕೆಲಸಗಾರರನ್ನು ನೇಮಿಸಲಾಗಿತ್ತು. ಇಬ್ಬರು ಅಡುಗೆಗೆ ನಿಯೋಜನೆಗೊಂಡಿದ್ದರೆ, ಒಬ್ಬರು ಮಗು ನೋಡಿಕೊಳ್ಳಲು ಇದ್ದರು. ಇಂದು ಬೆಳಗ್ಗೆ 11 ಗಂಟೆಗೆ ಪಾಂಡಿಚೇರಿಗೆ ಹೋಗಲಿದ್ದೇವೆ. ಬೇಗ ಕೆಲಸಕ್ಕೆ ಬನ್ನಿ ಎಂದು ಕೆಲಸದವರಿಗೆ ಅನೂಪ್ ಹೇಳಿದ್ದರಂತೆ. ಹೀಗಾಗಿ ಇಂದು(ಜ.6) ಬೆಳಗ್ಗೆ ಕೆಲಸದವರು ಮನೆಗೆ ಬಂದಿದ್ದಾರೆ. ಈ ವೇಳೆ ಘಟನೆ ಬೆಳಕಿಗೆ ಬಂದಿದೆ. ಭಾನುವಾರವೂ ಪ್ಯಾಕಿಂಗ್ ಮಾಡಲು ಕೆಲಸದವರನ್ನು ಕರೆಸಿಕೊಂಡಿದ್ದರಂತೆ.

    ಇದನ್ನೂ ಓದಿ : ಬಾಯ್ ಫ್ರೆಂಡ್ ಗಾಗಿ ಹುಡುಗಿಯರಿಬ್ಬರ ಬೀದಿ ಜಗಳ

    ಮೊದಲ ಮಗು ವಿಶೇಷ ಚೇತನವಾಗಿದ್ದ ಕಾರಣ ದಂಪತಿ ಬಹಳ ಕುಗ್ಗಿ ಹೋಗಿದ್ದರು. ನಿನ್ನೆ ರಾತ್ರಿ 10 ಗಂಟೆಯವರೆಗೂ ದಂಪತಿ ಖುಷಿಯಾಗಿಯೇ ಇದ್ದರು ಎಂದು ಕೆಲಸದವರು ತಿಳಿಸಿರುವ ಬಗ್ಗೆ ವರದಿಯಾಗಿದೆ.

    Continue Reading

    LATEST NEWS

    ದೆಹಲಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಬಂಪರ್ ಗ್ಯಾರೆಂಟಿ !

    Published

    on

    ಮಂಗಳೂರು/ನವದೆಹಲಿ : ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಗ್ಯಾರೆಂಟಿ ಯೋಜನೆ ಘೋಷಿಸಿದೆ.

     

    ಕರ್ನಾಟಕದ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಪತ್ರಿಕಾಗೋಷ್ಠಿ ನಡೆಸಿ ಜನರಿಗೆ ನೀಡಲಿರುವ ಯೋಜನೆಯನ್ನು ಅನಾವರಣಗೊಳಿಸಿದರು.

    ಇದನ್ನೂ ಓದಿ: ಬಾಯ್ ಫ್ರೆಂಡ್ ಗಾಗಿ ಹುಡುಗಿಯರಿಬ್ಬರ ಬೀದಿ ಜಗಳ

    ಕರ್ನಾಟಕದಲ್ಲಿ ಕಾಂಗ್ರೆಸ್ ಗ್ಯಾರೆಂಟಿಗಳು ಪ್ರಗತಿಯಲ್ಲಿದ್ದು, ಈಗ ಈ ಯೋಜನೆಯು ದೆಹಲಿಯಲ್ಲೂ ವಿಸ್ತರಿಸಲಿದೆ.

    ಗ್ಯಾರೆಂಟಿ ಯೋಜನೆ ಕುರಿತು ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿರುವ ಡಿಕೆಶಿ, ‘ದೆಹಲಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ‘ಪ್ಯಾರಿ ದೀದಿ’ ಯೋಜನೆ ಜಾರಿ ಮಾಡಲಿದ್ದೇವೆ. ಇದರ ಅಡಿಯಲ್ಲಿ ಮಹಿಳೆಯರಿಗೆ ಪ್ರತಿ ತಿಂಗಳು 2,500 ರೂ. ನೀಡುತ್ತೇವೆ. ಪಕ್ಷ ಅಧಿಕಾರಕ್ಕೆ ಬಂದ ನಂತರ ಕರ್ನಾಟಕದಲ್ಲಿ ಮಾಡಿದ ಹಾಗೆಯೇ ಮೊದಲ ಸಚಿವ ಸಂಪುಟದ ಸಭೆಯಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗುವುದು’ ಎಂದರು.

     

    Continue Reading

    LATEST NEWS

    Trending