Wednesday, May 18, 2022

ವಿಟ್ಲ: ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಕಾರು ಢಿಕ್ಕಿ-ಜಖಂ

ಬಂಟ್ವಾಳ: ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಢಿಕ್ಕಿ ಹೊಡೆದ ಘಟನೆ ವಿಟ್ಲ-ಪುತ್ತೂರು ರಸ್ತೆಯ ಅಳಕೆಮಜಲಿನಲ್ಲಿ ಇಂದು ಸಂಜೆ ನಡೆದಿದೆ. ಘಟನೆಯಲ್ಲಿ ಹಲವು ವಾಹನಗಳು ಜಖಂ ಆಗಿದೆ.


ವಿಟ್ಲ ಕಡೆಯಿಂದ ಪುತ್ತೂರು ಕಡೆ ತೆರಳುತ್ತಿದ್ದ ಶಿಫ್ಟ್ ಕಾರೊಂದು ಅಳಕೆಮಜಲು ತಲುಪುವ ಹೊತ್ತಿಗೆ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಲ್ಲಿಸಿದ್ದ ಇನೋವಾ ಕಾರು, ಬೈಕ್, ಸ್ಕೂಟರ್‌ಗೆ ಡಿಕ್ಕಿ ಹೊಡೆದ ಘಟನೆ ಸಂಭವಿಸಿದೆ.


ಘಟನೆಯಿಂದ ಶಿಫ್ಟ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಗಾಯಗಳಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅವರನ್ನು ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಅಪಘಾತದ ತೀವ್ರತೆಗೆ ಸ್ವಿಫ್ಟ್ ಕಾರ್ ನ ಏರ್ ಬ್ಯಾಗ್ ಓಪನ್ ಆಗಿದ್ದು,  ಜಖಂಗೊಂಡಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಛೀ ಅಸಹ್ಯ: ಮಂಗಳೂರಿನಲ್ಲಿ ಗುದನಾಳದಲ್ಲಿಟ್ಟು ಸಾಗಿಸುತ್ತಿದ್ದ ಚಿನ್ನ ವಶಕ್ಕೆ

ಮಂಗಳೂರು: ಬೈಂದೂರಿನ ಪ್ರಯಾಣಿಕನೋರ್ವ ಬಹರೈನ್‌ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಸೋಮವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ.ಪ್ರಯಾಣಿಕನೋರ್ವ 736 ಗ್ರಾಂ ಚಿನ್ನವನ್ನು ಗುದನಾಳದಲ್ಲಿಟ್ಟು ಸಾಗಿಸುತ್ತಿದ್ದ ವೇಳೆ ಅಧಿಕಾರಿಗಳು ಪತ್ತೆ...

SSLC ಪಠ್ಯಪುಸ್ತಕದಲ್ಲಿ ನಾರಾಯಣ ಗುರುಗಳ ಪಾಠಕ್ಕೆ ಕತ್ತರಿ: ಬಿಲ್ಲವ ಸಮುದಾಯದ ಆಕ್ರೋಶ

ಮಂಗಳೂರು: ಎಸ್ಎಸ್‌ಎಲ್‌ಸಿ ಶಾಲಾ ಪಠ್ಯದಲ್ಲಿ ಆರೆಸ್ಸೆಸ್‌ ಸಂಸ್ಥಾಪಕ ಕೆಬಿ ಹೆಡ್ಗೆವಾರ್ ಭಾಷಣ ಸೇರಿಸಿರುವ ವಿವಾದ ಹಸಿಯಾಗಿರುವಾಗಲೇ ಈ ಮಧ್ಯೆ ದಕ್ಷಿಣ ಭಾರತದ ಆದರ್ಶವಾಗಳು ಹಾಗೂ ಸಮಾಜ ಸುಧಾರಕರಾದ ನಾರಾಯಣ ಗುರುಗಳ ಪಠ್ಯಕ್ಕೆ ಕೊಕ್‌...

ಬಂಟ್ವಾಳ: ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿನಿ ಸಾವು

ಬಂಟ್ವಾಳ: 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದಾಗಿ ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಅಳಿಕೆ ಎಂಬಲ್ಲಿ ಇಂದು ನಡೆದಿದೆ.ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.ಮೃತಳನ್ನು ವಿಠಲ್ ಜೇಸೀಸ್ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ...