ವಿಜಯವಾಡ: ಕಾರೊಂದು ಮೋರಿಗೆ ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತಪಟ್ಟು ಓರ್ವ ಗಂಭೀರ ಗಾಯಗೊಂಡ ಘಟನೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ವಿಜಯವಾಡ-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯ ಗೌರವರಂ ಗ್ರಾಮದ ಬಳಿ ನಡೆದಿದೆ.
ನಾಗಾರ್ಜುನ ಸಾಗರ್ ಎಡದಂಡೆ ಕಾಲುವೆಯ ಮೇಲಿನ ಸೇತುವೆಯ ಮೇಲೆ ಚಾಲಕನ ನಿಯಂತ್ರಣ ತಪ್ಪಿ ಕಾರು ಮೋರಿಗೆ ಡಿಕ್ಕಿ ಹೊಡೆದಿದೆ.
ಅಪಘಾತದ ರಭಸಕ್ಕೆ ಮಹಿಳೆಯರು ಸ್ಥಳದಲ್ಲಿಯೇ ಮೃತಪಟ್ಟರೆ, ಉಳಿದ ಗಾಯಗೊಂಡವರನ್ನು ಜಗ್ಗಯ್ಯಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಸ್ಪತ್ರೆಯಲ್ಲಿ ಆರು ತಿಂಗಳ ಮಗು ಮತ್ತು ಓರ್ವ ಪುರುಷ ಮೃತಪಟ್ಟಿದ್ದಾರೆ.
ಸಮಾರಂಭವೊಂದಕ್ಕೆ ಪಶ್ಚಿಮ ಗೋದಾವರಿ ಜಿಲ್ಲೆಯ ಜಂಗಾರೆಡ್ಡಿ ಗುಡೆಂಗೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.