Thursday, April 22, 2021

ಎಸ್ಐ ಆಗಿ ಭಡ್ತಿ ಪಡೆಯಬೇಕಿದ್ದ ದಿನವೇ ಹೆಡ್ ಕಾನ್ಸ್ಟೇಬಲ್ ಸಿದ್ದರಾಮಪ್ಪ ದಾರುಣ ಸಾವು..!

ಎಸ್ಐ ಆಗಿ ಭಡ್ತಿ ಪಡೆಯಬೇಕಿದ್ದ ದಿನವೇ ಹೆಡ್ ಕಾನ್ಸ್ಟೇಬಲ್ ಸಿದ್ದರಾಮಪ್ಪ ದಾರುಣ ಸಾವು..!

ಚಿಕ್ಕಮಗಳೂರು: ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಪೊಲೀಸ್ ಹೆಡ್​ಕಾನ್ಸ್​ಟೆಬಲ್​ವೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಗ್ರಾಮದ ಬಳಿ ನಿನ್ನೆ ರಾತ್ರಿ ಸಂಭವಿಸಿದೆ.

48 ವರ್ಷದ ಸಿದ್ದರಾಮಪ್ಪ ಮೃತ ದುರ್ದೈವಿ. ಇಂದು ಅವರು ಎಎಸ್​ಐ ಆಗಿ ಬಡ್ತಿ ಪಡೆಯಬೇಕಿತ್ತು. ಕಡೂರು ತಾಲೂಕಿನ ಸಖರಾಯಪಟ್ಟಣ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿದ್ದರಾಮಪ್ಪ ಚಿಕ್ಕಮಗಳೂರು ನಗರದಲ್ಲಿ ವಾಸವಿದ್ದರು.

ನಿನ್ನೆ ಕರ್ತವ್ಯ ಮುಗಿಸಿ, ಚಿಕ್ಕಮಗಳೂರು ನಗರಕ್ಕೆ ಹಿಂದಿರುಗುವಾಗ ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಬಳಿ ಕಾರು-ಬೈಕ್ ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಮೂಲತಃ ಅಜ್ಜಂಪುರ ತಾಲೂಕಿನ ತಮ್ಮಟದಹಳ್ಳಿ ನಿವಾಸಿಯಾದ ಸಿದ್ದರಾಮಪ್ಪ 25 ವರ್ಷಗಳ ಕಾಲ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದು ಇಂದು ಎ.ಎಸ್.ಐ ಆಗಿ ಬಡ್ತಿ ಪಡೆಯುತ್ತಿದ್ದರು.

ಪ್ರಮೋಷನ್ ಸಿಕ್ಕ ಖುಷಿಯಲ್ಲಿ ಎ.ಎಸ್.ಐ ಸಮವಸ್ತ್ರ ಕೂಡ ಸಿದ್ದ ಮಾಡಿಕೊಂಡಿದ್ದ ಸಿದ್ದರಾಮಪ್ಪ ಕರ್ತವ್ಯ ಮುಗಿಸಿ ಖುಷಿಯಿಂದ ಮನೆಗೆ ಬರುವಾಗ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಸಾವನಪ್ಪಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...