ಉಪ್ಪಳ: ಕಾರು-ಬೈಕ್ ಢಿಕ್ಕಿಯಾಗಿ ವಿದ್ಯಾರ್ಥಿ ಮೃತಪಟ್ಟ ಘಟನೆ ನಡೆದಿದೆ.
ಮೃತನನ್ನು ಉಪ್ಪಳದ ಅಬೂಬಕ್ಕರ್ ಇಶಾನ್ (19) ಎಂದು ಗುರುತಿಸಲಾಗಿದೆ.
ಉಪ್ಪಳ ಹಿದಾಯತ್ ನಗರ ಶೇಖ್ ಅಹಮದ್ ರಸ್ತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ.
ಇಶಾನ್ ಪ್ರಯಾಣಿಸುತ್ತಿದ್ದ ಬೈಕ್ ಎದುರುಗಡೆಯಿಂದ ಬರುತ್ತಿದ್ದ ಮಾರುತಿ ಬ್ರೆಝಾ ಕಾರಿಗೆ ಡಿಕ್ಕಿ ಹೊಡೆದಿದೆ.
ಗಾಯಗೊಂಡ ವಿದ್ಯಾರ್ಥಿಯನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಕಳೆದ 12ನೇ ತರಗತಿಯ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದು, ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಗಲ್ಪಾಡಿ ತಾಲೂಕು ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ.