ರಾಯಚೂರು ಮರಕ್ಕೆ ಕಾರು ಡಿಕ್ಕಿ- ಕಾರು ಸಮೇತ ಸಜೀವ ದಹನವಾದ ವ್ಯಕ್ತಿ..
ರಾಯಚೂರು: ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಜಿಲ್ಲೆಯ ಸಿರವಾರ ನಿಲೋಗಲ್-ಕಲಮಲಾ ಗ್ರಾಮದಲ್ಲಿ ನಡೆದಿದೆ.
ಸಿರತಾಲೂಕಿನವಾರ ಕಡೆಯಿಂದ ರಾಯಚೂರಿಗೆ ತೆರಳುತ್ತಿದ್ದ ಕಾರು ಮಾರ್ಗ ಮಧ್ಯೆ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ.
ಬಳಿಕ ಬೆಂಕಿ ಹೊತ್ತಿಕೊಂಡು ಒಳಗಿದ್ದ ವ್ಯಕ್ತಿ ಸಜೀವ ದಹನವಾಗಿದ್ದಾನೆ ಎಂದು ಹೇಳಲಾಗುತ್ತಿದೆ.
ಕಾರು ಹಾಗೂ ವ್ಯಕ್ತಿ ಯಾರು ಎನ್ನುವುದು ತಿಳಿದುಬಂದಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದು, ರಾಯಚೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.