Thursday, March 4, 2021

ಬಾಗಲಕೋಟೆಯಲ್ಲಿ ಎರಡು ಬೈಕ್ ಗೆ ಕಾರು ಡಿಕ್ಕಿ: ನಾಲ್ವರ ಸಾವು..!

ಬಾಗಲಕೋಟೆಯಲ್ಲಿ ಎರಡು ಬೈಕ್ ಗೆ ಕಾರು ಡಿಕ್ಕಿ: ನಾಲ್ವರ ಸಾವು..!

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಅಲಗೂರು ಗ್ರಾಮದ ಬಳಿ ನಡೆದ ಸರಣಿ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.

ಎರಡು ಬೈಕ್ ಮತ್ತು ಕಾರ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಒಂದು ಬೈಕ್ ಗೆ ಡಿಕ್ಕಿ ಹೊಡೆದ ಕಾರ್ ನೂರು ಮೀಟರ್ ದೂರದಲ್ಲಿದ್ದ ಮತ್ತೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ.

ವಿಜಯಪುರ ಜಿಲ್ಲೆ ಬಬಲೇಶ್ವರ ತಾಲ್ಲೂಕಿನ ಹೊಕ್ಕುಂಡಿ ಗ್ರಾಮದ ಹನುಮಂತ(38), ಅಮೋಘ(26), ಬಾಗಲಕೋಟೆ ಜಿಲ್ಲೆ ರಬಕವಿ -ಬನಹಟ್ಟಿ ತಾಲ್ಲೂಕಿನ ಚಿಮ್ಮಡ ಗ್ರಾಮದ ಮಹಾದೇವ(32) ಹಾಗೂ ಅವರ ತಾಯಿ ಯಮನವ್ವ(58) ಮೃತಪಟ್ಟವರೆಂದು ಹೇಳಲಾಗಿದೆ. ಜಮಖಂಡಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...