Connect with us

    LATEST NEWS

    ಕಾರು ಡಿ*ಕ್ಕಿ; ಪಾದಚಾರಿ ಸಾ*ವು

    Published

    on

    ಗಂಗೊಳ್ಳಿ: ಕಾರೊಂದು ಹಿಂದಿನಿಂದ ಡಿಕ್ಕಿಯಾಗಿ ಪಾದಚಾರಿ ಗಂಭೀರ ಗಾ*ಯಗೊಂಡು ಸಾವನ್ನಪ್ಪಿದ ಘಟನೆ ಗುರುವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ 66ರ ತ್ರಾಸಿಯ ಬೀಚ್‌ ಬಳಿ ಸಂಭವಿಸಿದೆ.

    ತ್ರಾಸಿಯ ಕುಪ್ಪ ಮೊಗವೀರ (80) ಮೃ*ತ ವ್ಯಕ್ತಿ ಎಂದು ಗುರುತಿಸಲಾಗಿದೆ.

    ಅವರು ಮನೆಯಿಂದ ತ್ರಾಸಿಯ ಪೇಟೆಗೆ ಹೋಗಿ ವಾಪಸು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದುಕೊಂಡು ಬರುತ್ತಿರುವಾಗ ತ್ರಾಸಿ ಗ್ರಾಮದ ಹೊಸಪೇಟೆ ಎನ್ನುವಲ್ಲಿ ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಸಂಚರಿಸುತ್ತಿದ್ದ ಮಹಾರಾಷ್ಟ್ರ ನೋಂದಣಿಯ ಕಾರು ವೇಗವಾಗಿ ಬಂದು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಕುಪ್ಪ ಮೊಗವೀರ ಅವರನ್ನು ಇಬ್ರಾಹಿಂ ಗಂಗೊಳ್ಳಿ ಅವರು ಆ್ಯಂಬುಲೆನ್ಸ್‌ ಮೂಲಕ ಕುಂದಾಪುರದ ಸರಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು, ಅದಾಗಲೇ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.

    ಘಟನಾ ಸ್ಥಳಕ್ಕೆ ಗಂಗೊಳ್ಳಿ ಎಸ್‌ಐ ಹರೀಶ್‌ ಆರ್‌ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು. ಅಪಘಾತದ ಕುರಿತಂತೆ ಮಹಾರಾಷ್ಟ್ರ ಮೂಲದ ಕಾರು ಚಾಲಕನ ವಿರುದ್ಧ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ದೀಪಾವಳಿಗೆ ಬಿಗ್ ಶಾಕ್; ವಾಣಿಜ್ಯ ಬಳಕೆಯ ಸಿಲಿಂಡರ್ ದರ ಏರಿಕೆ

    Published

    on

    ಮಂಗಳೂರು/ನವದೆಹಲಿ : ದೀಪಾವಳಿ ಸಂಭ್ರಮದಲ್ಲಿರುವವರಿಗೆ ಕೇಂದ್ರ ಸರ್ಕಾರ ಬಿಗ್‌ ಶಾಕ್‌ ನೀಡಿದೆ. ವಾಣಿಜ್ಯ ಬಳಕೆಯ 19 ಕೆ.ಜಿ. ತೂಕದ ಸಿಲಿಂಡರ್‌ ದರವನ್ನು 62 ರೂಪಾಯಿ ಏರಿಕೆ ಮಾಡಿದೆ. ಸದ್ಯ ದೆಹಲಿಯಲ್ಲಿ ಸಿಲಿಂಡರ್‌ ದರ 1,802 ರೂಪಾಯಿ ಆಗಿದೆ.

    5 ಕೆ.ಜಿ. ಫ್ರೀ ಟ್ರೇಡ್ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ 15 ರೂಪಾಯಿ ಹೆಚ್ಚಿಸಲಾಗಿದೆ. 14.2 ಕೆ.ಜಿ. ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಸದ್ಯ ವಾಣಿಜ್ಯ ಬಳಕೆಯ ಸಿಲಿಂಡರ್‌ ದರಗಳನ್ನು ಮಾತ್ರವೇ ಹೆಚ್ಚಿಸಲಾಗಿದ್ದು, ಗೃಹ ಬಳಕೆ ಸಿಲಿಂಡರ್‌ಗಳ ದರ ಏರಿಕೆಯಾಗಿಲ್ಲ.

    ಇಂದಿನಿಂದ ಜಾರಿ :

    ವಾಣಿಜ್ಯ ಬಳಕೆ ಸಿಲಿಂಡರ್‌ಗಳ ಪರಿಷ್ಕೃತ ದರವು ಇಂದಿನಿಂದಲೇ ದೇಶದಲ್ಲಿ ಜಾರಿಯಾಗಲಿದೆ. ದೆಹಲಿ, ಮುಂಬೈ, ಕಲ್ಕತ್ತಾ, ಚೆನ್ನೈ ನಗರಗಳಲ್ಲಿ ಇಂದಿನಿಂದಲೇ ಈ ಪರಿಷ್ಕೃತ ದರ ಇರಲಿದೆ. ಕಳೆದ ಮೂರು ತಿಂಗಳಿನಿಂದಲೂ ವಾಣಿಜ್ಯ ಬಳಕೆ ಸಿಲಿಂಡರ್‌ ದರವು ಏರುತ್ತಲೇ ಇದೆ. ಸೆಪ್ಟೆಂಬರ್‌ ಹಾಗೂ ಅಕ್ಟೋಬರ್‌ ತಿಂಗಳ ಮೊದಲ ದಿನದಂದೇ ದರ ಏರಿದ್ದವು.

    ಇದೀಗ ನವೆಂಬರ್‌ ತಿಂಗಳ ಮೊದಲ ದಿನವೂ ದರ ಏರಿಕೆ ಕಂಡಿದೆ. ಇನ್ನು ಜಾಗತಿಕ ಮಾರುಕಟ್ಟೆಯಲ್ಲಿ ಇಂಧನ ದರ ಹೆಚ್ಚಳ, ವಿದೇಶಿ ವಿನಿಮಯ ದರಕ್ಕೆ ಅನುಗುಣವಾಗಿ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಪ್ರತಿ ತಿಂಗಳು ದರ ಪರಿಷ್ಕರಣೆ ಮಾಡುತ್ತವೆ. ಅದರಂತೆ ಈ ತಿಂಗಳು ಕೂಡ ಸಿಲಿಂಡರ್‌ ದರ ಏರಿಕೆಯಾಗಿದೆ.

    ಇದನ್ನೂ ಓದಿ :  ಸುರತ್ಕಲ್: ಹೃದಯಾಘಾ*ತದಿಂದ ಯುವಕ ಮೃ*ತ್ಯು

    ಬೆಂಗಳೂರಿನಲ್ಲಿ ದರ ಎಷ್ಟು?

    ಸದ್ಯ ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ 19 ಕೆ.ಜಿ. ತೂಕದ ಸಿಲಿಂಡರ್‌ ದರ 1,879 ರೂಪಾಯಿ ಇದೆ. 47 ಕೆ.ಜಿ. ತೂಕದ ವಾಣಿಜ್ಯ ಸಿಲಿಂಡರ್ ದರ 4,695 ರೂಪಾಯಿ ಎನ್ನಲಾಗಿದೆ. ಗೃಹ ಬಳಕೆಯ ಸಿಲಿಂಡರ್ ದರದಲ್ಲಿ ಇಲ್ಲಿಯೂ ಯಾವುದೇ ಬದಲಾವಣೆ ಇಲ್ಲ. ರಾಜ್ಯದಲ್ಲಿ ಗೃಹಬಳಕೆಯ 14.2 ಕೆ.ಜಿ ತೂಕದ ಸಿಲಿಂಡರ್ ದರ 805 ರೂಪಾಯಿ ಇದ್ದರೆ, 5 ಕೆ.ಜಿ ತೂಕದ ಸಿಲಿಂಡರ್ ದರ 300 ರೂಪಾಯಿಯಷ್ಟಿದೆ.

    Continue Reading

    LATEST NEWS

    ಕುಂದಾಪುರ: ಸಮುದ್ರ ತೀರದಲ್ಲಿ ಪತ್ತೆಯಾಗುತ್ತಿದೆ ಜಾನುವಾರುಗಳ ಕಳೇಬರ

    Published

    on

    ಕುಂದಾಪುರ: ಸುಮಾರು ಮೂರು ಜಾನುವಾರುಗಳ ಕಳೇಬರ ಪತ್ತೆಯಾಗಿದ ಘಟನೆ ಗಂಗೊಳ್ಳಿ ಗ್ರಾಮದ ಲೈಟ್‌ಹೌಸ್‌ ಕಡಲ ತೀರದಲ್ಲಿ ಬುಧವಾರ ಸಂಜೆ ನಡೆದಿದ್ದು, ಅಕ್ರಮ ಗೋಹತ್ಯೆ ಶಂಕೆ ವ್ಯಕ್ತವಾಗಿದೆ.

    ಗೋಣಿ ಚೀಲದಲ್ಲಿ ತುಂಬಿದ ಸ್ಥಿತಿಯಲ್ಲಿ ಜಾನುವಾರು ಕಳೇಬರ ಪತ್ತೆಯಾಗಿದೆ, ಕಡಲ ತೀರದ ವಿವಿದೆಡೆ ಜಾನುವಾರು ರುಂಡ ಪತ್ತೆಯಾಗಿದೆ. ಇದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ಗಂಗೊಳ್ಳಿಯಲ್ಲಿ ಅಕ್ರಮ ಗೋಹತ್ಯೆ ನಡೆಯುತ್ತಿದೆ ಎಂಬುದು ಸ್ಪಷ್ಟವಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

    ಕಡಲ ತೀರದಲ್ಲಿ ಜಾನುವಾರು ಕಳೇಬರ ಪತ್ತೆಯಾಗುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಗಂಗೊಳ್ಳಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು, ಹಿಂದೂಗಳ ಧಾರ್ಮಿಕ ಹಬ್ಬಗಳ ಸಂದರ್ಭ ಇಂತಹ ಕೃತ್ಯಗಳನ್ನು ನಡೆಸಿ ಹಿಂದೂಗಳ ಭಾವನೆಗಳನ್ನು ಕೆರಳಿಸುವ ಕೆಲಸ ನಡೆಯುತ್ತಿದೆ.

    ಅಕ್ರಮವಾಗಿ ಗೋವುಗಳನ್ನು ಹತ್ಯೆ ಮಾಡಿ ಅದರ ಕಳೇಬರಗಳನ್ನು ಕಡಲಿಗೆ ಎಸೆದು ವಿಕೃತಿ ಮೆರೆಯುತ್ತಿರುವ ಆರೋಪಿಗಳನ್ನು ಪತ್ತೆ ಹಚ್ಚಿ ಕಠಿನ ಕಾನೂನು ಕ್ರಮ ಜರಗಿಸುವಂತೆ ಮನವಿ ಮಾಡಿದ್ದಾರೆ. ಈ ಹಿಂದೆಯೇ ಹಲವು ಬಾರಿ ಮನವಿ ಮಾಡಿದ್ದರೂ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈ ಪ್ರಕರಣದ ಆರೋಪಿಗಳನ್ನು ಕೂಡಲೇ ಪತ್ತೆ ಹಚ್ಚಿ ಕಾನೂನು ಕ್ರಮ ಜರಗಿಸುವಂತೆ ಹಿಂದೂ ಜಾಗರಣ ವೇದಿಕೆ ಆಗ್ರಹಿಸಿದೆ.
    ಕಳೆದ ನಾಲ್ಕೈದು ತಿಂಗಳಿನಲ್ಲಿ ಗಂಗೊಳ್ಳಿ ಗ್ರಾಮದ ಕಡಲ ತೀರದಲ್ಲಿ ಕಂಡು ಬಂದಿರುವ ಮೂರನೇ ಪ್ರಕರಣ ಇದಾಗಿದೆ. ಸ್ಥಳಕ್ಕೆ ಗಂಗೊಳ್ಳಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ತನಿಖೆ ನಡೆಸುತ್ತಿದ್ದಾರೆ.

    Continue Reading

    LATEST NEWS

    ಬೆಂಗಳೂರಿನಲ್ಲಿ `ಪಟಾಕಿ’ ಸಿಡಿದು 29 ಮಂದಿಗೆ ಗಾಯ : ಮಿಂಟೊ ಆಸ್ಪತ್ರೆಗೆ ದಾಖಲು!

    Published

    on

    ಬೆಂಗಳೂರು: ಬೆಂಗಳೂರಿನಲ್ಲಿ ಸಾಲು ಸಾಲು ಪಟಾಕಿ ಅವಘಡಗಳು ಸಂಭವಿಸಿದ್ದು, ನಿನ್ನೆ ರಾತ್ರಿಯಿಂದ ಪಟಾಕಿ ಅವಘಢದಿಂದ ಗಾಯಗೊಂಡವರ ಸಂಖ್ಯೆ 29 ಕ್ಕೆ ಏರಿಕೆಯಾಗಿದೆ.

    ಪಟಾಕಿ ಹಚ್ಚಲು ಹೋಗಿ ಮಕ್ಕಳು ಸೇರಿದಂತೆ 29 ಮಂದಿ ಗಾಯಗೊಂಡಿದ್ದು, ಕಣ್ಣು ಸೇರಿ ದೇಹದ ಹಲವು ಭಾಗಗಳಿಗೆ ಗಾಯಗಳಾಗಿದೆ. ಗಾಯಗೊಂಡವರಿಗೆ ಮಿಂಟೋ ಸೇರಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿದೆ.

    ಬೆಂಗಳೂರು ನಗರದಲ್ಲಿ ಪಟಾಕಿ ಸಿಡಿದು ಈವರೆಗೆ 29 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪಟಾಕಿ ಸಿಡಿಸುವಾಗ ಹಾಗೂ ಬೇರೆಯವರು ಪಟಾಕಿ ಸಿಡಿಸುವುದನ್ನು ಸಮೀಪದಲ್ಲಿ ನಿಂತು ಹಲವರ ಕಣ್ಣಿಗೆ ಗಾಯಗಳಾಗಿವೆ. ಗಾಯಗೊಂಡ ಮೂವರು ಮಕ್ಕಳ ನಾರಾಯಣ ನೇತ್ರಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಮಿಂಟೋ ಆಸ್ಪತ್ರೆಯಲ್ಲಿ 5 ವರ್ಷದ ಬಾಲಕ ಮತ್ತು 18 ವರ್ಷದ ಯುವಕ ಸೇರಿ ಇಬ್ಬರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದಂತೆ 3 ವರ್ಷದ ಹೆಣ್ಣು ಮಗುವಿನ ಕಣ್ಣಿಗೆ ತಾಗಿ ಕಾರ್ನಿಯಾಗೆ ಹಾನಿಯಾಗಿದೆ ಎನ್ನಲಾಗಿದೆ.

    Continue Reading

    LATEST NEWS

    Trending