Wednesday, June 29, 2022

ಕದ್ರಿ ಕಂಬ್ಳ ಜಂಕ್ಷನ್‌ ನಲ್ಲಿ ಭೀಕರ ರಸ್ತೆ ಅಪಘಾತ ಯುವತಿಯ ಮೈಮೇಲೆ ಹರಿದ ಕಾರು..! 

ಕದ್ರಿ ಕಂಬ್ಳ ಜಂಕ್ಷನ್‌ ನಲ್ಲಿ ಭೀಕರ ರಸ್ತೆ ಅಪಘಾತ ಯುವತಿಯ ಮೈಮೇಲೆ ಹರಿದ ಕಾರು..! 

ಮಂಗಳೂರು : ಇಂದು ಬೆಳಿಗ್ಗೆ ಮಂಗಳೂರು ನಗರದ ಕದ್ರಿಯಲ್ಲಿ ನಡೆದಿದ್ದ ರಸ್ತೆ ಅಪಘಾತವೊಂದರಲ್ಲಿ ಯುವತಿಯೊಬ್ಬಳು ಗಂಭೀರ ಗಾಯಗೊಂಡಿದ್ದಾಳೆ.

ನಗರದ ಕದ್ರಿ ಕಂಬಳ ಜಂಕ್ಷನ್‌ನಲ್ಲಿ ಇಂದು ಬೆಳಿಗ್ಗೆ ದ್ವಿಚಕ್ರ ವಾಹನ ಸವಾರೆಗೆ ವಿರುದ್ದ ಧಿಕ್ಕಿನಿಂದ  ಕಾರೊಂದು ಡಿಕ್ಕಿ ಹೊಡೆದಿದ್ದು, ಹೊಡೆದ ರಭಸಕ್ಕೆ ಯುವತಿ ರಸ್ತೆಗೆ ಬಿದ್ದಿದ್ದು, ಬಳಿಕ ಯುವತಿ ಮೇಲೆಯೇ ಹರಿದ ಕಾರು ಯುವತಿಯನ್ನು ಮಾರುದ್ದ ಎಳೆದೊಯ್ದಿದೆ.

ಗಾಯಗೊಂಡ ಯುವತಿಯನ್ನು ಪುತ್ತೂರಿನ ಕೆದಿಲ ನಿವಾಸಿ ವಾಣಿಶ್ರೀ ಭಟ್ (22) ಎಂದು ಗುರುತಿಸಲಾಗಿದ್ದು, ಸ್ಥಳೀಯರು ಮತ್ತು ಆ ಮಾರ್ಗವಾಗಿ ಬರುತ್ತಿದ್ದ ಪೊಲೀಸ್‌ ಸಿಬಂದಿಗಳು ಕಾರನ್ನು ಮೇಲಕ್ಕೆತ್ತಿ ಅಡಿಗೆ ಬಿದ್ದಿದ್ದ ಯುವತಿಯನ್ನು ಹೊರಗಡೆ ತೆಗೆದಿದ್ದಾರೆ.

ಯುವತಿಯ  ತಲೆಗೆ ಮತ್ತು ಪಕ್ಕೆಲುಬುಗಳಿಗೇ ತೀವ್ರ ಗಾಯಗಳಾಗಿದ್ದು, ಇದೇ ಮಾರ್ಗವಾಗಿ ಬರುತ್ತಿದ್ದ ಶಾಸಕ ಯು ಟಿ ಖಾದರ್ ಕೂಡಲೇ‌ ಗಂಭೀರ ಗಾಯಗೊಂಡ ಯುವತಿ ವಾಣಿಶ್ರೀಯನ್ನು ತಮ್ಮ ಕಾರಿನಲ್ಲಿ ಹಾಕಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆಯನ್ನು ತೋರಿಸಿದ್ದಾರೆ.

ಪ್ರಸ್ತು ಆಸಪತ್ರೆಯ ತೀವ್ರ ನಿಗಾದಲ್ಲಿರುವ ವಾಣಿಶ್ರೀ ಸ್ಥಿತಿ ಗಂಭೀರವಾಗಿದೆ. ಕದ್ರಿ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ವರ್ಷ ಕೂಡ ಇದೇ ಸ್ಥಳದಲ್ಲಿ ಮಹಿಳಾ ಅಧ್ಯಾಪಕಿಯೊಬ್ಬರು ದಾರುಣವಾಗಿ ಮೃತಪಟ್ಟಿದ್ದರು. ಅಲ್ಲದೇ ಈ ಸ್ಥಳದಲ್ಲಿ ಪ್ರತಿದಿನ ಅಪಘಾತಗಳು ನಡೆಯತ್ತಲೇ ಇದ್ದು ಅನೇಕರು ಗಾಯಗೊಂಡಿದ್ದಾರೆ.

ತುಂಬಾ ವಾಹನ ದಟ್ಟನೆ ಮತ್ತು ಮಿತಿ ಮೀರಿದ ವೇಗದ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ಇಲ್ಲಿ ಪ್ರತಿನಿತ್ಯ ಅಪಘಾತಗಳು ನಡೆಯುತ್ತಲೇ ಇವೆ.

ಈ ಹಿನ್ನೆಲೆಯಲ್ಲಿ ಇಲ್ಲೊಂದು ಶಾಶ್ವತ ಪರಿಹಾರ ಕ್ರಮವನ್ನು ಜರುಗಿಸಬೇಕೆಂದು ಸ್ಥಳೀಯರು ಪೊಲೀಸ್‌ ಇಲಾಖೆ, ಪಾಲಿಕೆ ಮತ್ತು ಜನಪ್ರತಿನಿಧಿಗಳಲ್ಲಿ ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಕೈ ನಾಯಕನ ವಿವಾದಾತ್ಮಕ ಹೇಳಿಕೆಗೆ VHP ಗರಂ: ಬೆಳ್ತಂಗಡಿಯಲ್ಲಿ ದೂರು ದಾಖಲು

ಬೆಳ್ತಂಗಡಿ: ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡನೊಬ್ಬ ವಿವಾದಾತ್ಮಕ ಹೇಳಿಕೆಯನ್ನು ನೀಡಿರುವುದನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್ ಭಜರಂಗದಳ ಬೆಳ್ತಂಗಡಿ ಠಾಣೆಗೆ ದೂರು ನೀಡಿದೆ.ಜೂನ್ 25ರಂದು ಕಾಂಗ್ರೆಸ್ ಪಕ್ಷದ ವಿವಿಧ ವಿಭಾಗಗಳ ಪದಾಧಿಕಾರಿಗಳು ಬೆಳ್ತಂಗಡಿಯಲ್ಲಿ ಪತ್ರಿಕಾಗೋಷ್ಠಿಯನ್ನು...

‘ಸ್ವಾತಿಮುತ್ತು’ ಖ್ಯಾತಿಯ ನಟಿ ಮೀನಾ ಪತಿ ನಿಧನ

ಬೆಂಗಳೂರು: ಬಹುಭಾಷಾ ತಾರೆ , ಸ್ವಾತಿಮುತ್ತು ಖ್ಯಾತಿಯ ನಟಿ ಮೀನಾ ಅವರ ಗಂಡ ವಿದ್ಯಾಸಾಗರ್ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ನಿಧನರಾಗಿದ್ದಾರೆ.ಸಾಫ್ಟ್‌ವೇರ್‌ ಇಂಜಿನಿಯರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದ ವಿದ್ಯಾಸಾಗರ್ ಅವರು ತೀವ್ರ ಶ್ವಾಸಕೋಶದ...

ವಿಟ್ಲ ಬದನಾಜೆಯ ಬಸ್ ನಿಲ್ದಾಣದಲ್ಲಿ ರಕ್ತ – ತಲೆಯ ಒಳಭಾಗದ ತುಂಡುಗಳ ಪತ್ತೆ : ಆತಂಕದಲ್ಲಿ ಜನತೆ..!

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ದ ವಿಟ್ಲ ಬದನಾಜೆಯ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ರಕ್ತ ಮತ್ತು ತಲೆಯ ಒಳಭಾಗದ ತುಣುಕುಗಳು ಪತ್ತೆಯಾಗಿವೆ,ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ದ ವಿಟ್ಲ ಬದನಾಜೆಯ...