Wednesday, May 18, 2022

ವಿಟ್ಲ: ಕಂದಕಕ್ಕೆ ಬಿದ್ದ ಕಾರು-ಮೂವರಿಗೆ ಗಾಯ

ವಿಟ್ಲ: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ರಸ್ತೆ ಬದಿಯ ಮನೆಯಂಗಳಕ್ಕೆ ಉರುಳಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಕನ್ಯಾನ ಗ್ರಾಮದ ಪಂಜಾಜೆ ಎಂಬಲ್ಲಿ ನಿನ್ನೆ ನಡೆದಿದೆ.


ಮಂಚಿಯಿಂದ ಕನ್ಯಾನಕ್ಕೆ ಕುಡ್ತಮುಗೇರು ಕುಳಾಲು ಕನ್ಯಾನ ಮಾರ್ಗದಲ್ಲಿ ಆಗಮಿಸುತ್ತಿದ್ದ ಕಾರು ಕನ್ಯಾನ ಗ್ರಾಮದ ಪಂಜಾಜೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ,

ರಾಧಾಕೃಷ್ಣ ಕನ್ಯಾನ ಅವರ ಮನೆಯಂಗಳಕ್ಕೆ ಬಿದ್ದಿದ್ದು, ಮೂವರು ಪ್ರಯಾಣಿಕರಿಗೆ ಗಾಯಗಳಾಗಿವೆ.
ಸುಮಾರು ಹತ್ತು ಅಡಿ ಆಳಕ್ಕೆ ಕಾರು ಬಿದ್ದಿದೆ.

ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಪಕ್ಕದಲ್ಲೇ ಬಾವಿಯಿದ್ದು ಸ್ವಲ್ಪದರಲ್ಲೇ ಭಾರೀ ಅಪಘಾತ ತಪ್ಪಿಹೋಗಿದೆ.

LEAVE A REPLY

Please enter your comment!
Please enter your name here

Hot Topics

ಉಡುಪಿ: ಬೈಕ್ ಸ್ಕಿಡ್ ಆಗಿ ಹಿಂಬದಿ ಸವಾರೆ ದಾರುಣ ಸಾವು

ಉಡುಪಿ: ಬೈಕ್ ನಲ್ಲಿ ಹೋಗುವಾಗ ಬೈಕ್ ಸ್ಕಿಡ್ ಆಗಿ ಹಿಂಬದಿ ಸವಾರೆ ಮೃತಪಟ್ಟಂತಹ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೈಂದೂರಿನ ಕಾಲ್ತೋಡು ಗ್ರಾಮದ ಮುರೂರು ಎಂಬಲ್ಲಿ ನಡದಿದೆ.ಕಾಲ್ತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ...

ಕಿನ್ನಿಗೋಳಿ: ಗಾಳಿಮಳೆಗೆ ರಸ್ತೆಗೆ ಉರುಳಿದ ಮರ

ಕಿನ್ನಿಗೋಳಿ: ಮುಂಜಾನೆಯಿಂದಲೇ ಸುರಿಯುತ್ತಿರುವ ಧಾರಾಕಾರ ಗಾಳಿ ಮಳೆಯಿಂದಾಗಿ ಮರವೊಂದು ರಸ್ತೆಗೆ ಅಡ್ಡವಾಗಿ ಉರುಳಿದ ಘಟನೆ ಕಿನ್ನಿಗೋಳಿಯ ಐಕಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಏಳಿಂಜೆ ಮುತ್ತಾಯಕೆರೆಯ ಬಳಿ ನಡೆದಿದೆ.ಬೆಳ್ಳಂಬೆಳಗ್ಗೆ ನಡೆದ ಘಟನೆಯಿಂದಾಗಿ ಮರವು ವಿದ್ಯುತ್...

ಬಂಟ್ವಾಳ: ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿನಿ ಸಾವು

ಬಂಟ್ವಾಳ: 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದಾಗಿ ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಅಳಿಕೆ ಎಂಬಲ್ಲಿ ಇಂದು ನಡೆದಿದೆ.ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.ಮೃತಳನ್ನು ವಿಠಲ್ ಜೇಸೀಸ್ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ...