Wednesday, October 5, 2022

ಕಾರು ಡೋರ್ ಲಾಕ್​ ​ಆಗಿ ಉಸಿರು ಗಟ್ಟಿ ಮೂರು ಕಂದಮ್ಮಗಳ ದಾರುಣ ಸಾವು

ತಿರುನೆಲ್ವೇಲಿ: ಕಾರಿನೊಳಗೆ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಡೋರ್ ಲಾಕ್​ ​ಆಗಿ ಓರ್ವ ಬಾಲಕಿ ಸೇರಿ ಮೂವರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯಲ್ಲಿ ನಡೆದಿದೆ.


ಪನಂಗುಡಿ ಸಮೀಪದ ಲೆಪ್ಪಾಯಿ ಅಪಾರ್ಟ್‌ಮೆಂಟ್‌ ಬಳಿ ಈ ದುರ್ಘಟನೆ ಜರುಗಿದೆ. ನಿತೀಶ್ (5), ನಿತೀಶಾ (7) ಹಾಗೂ ಕಬಿಶಾಂತ್(4) ಎಂಬುವವರೇ ಮೃತ ಮಕ್ಕಳು ಎಂದು ಗುರುತಿಸಲಾಗಿದೆ.
ಮೃತ ನಿತೀಶ್ ಹಾಗೂ ನಿತೀಶಾ ನಾಗರಾಜ ಎಂಬುವರ ಮಕ್ಕಳಾಗಿದ್ದಾರೆ.

ಕಬಿಶಾಂತ್ ಸುಧಾಕರ್ ಎಂಬುವರ ಮಗನಾಗಿದ್ದಾನೆ. ನಾಗರಾಜನ ಸಹೋದರ ಮಣಿಕಂದನ್​​ಗೆ ಸೇರಿದ ಕಾರಿನಲ್ಲಿ ಈ ಮಕ್ಕಳು ಆಟವಾಡುತ್ತಿದ್ದರು.

ಆದರೆ, ಇದ್ದಕ್ಕಿದ್ದಂತೆ ಕಾರಿನ ಡೋರ್ ಲಾಕ್ ಆಗಿದ್ದರಿಂದ ಮಕ್ಕಳು ಉಸಿರಾಟದ ಸಮಸ್ಯೆ ಎದುರಿಸಿ ಕಾರಿನ ಡೋರ್​ ತೆರೆಯಲು ಸಾಧ್ಯವಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಘಟನೆಯ ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ

LEAVE A REPLY

Please enter your comment!
Please enter your name here

Hot Topics

‘ಮಂಗಳೂರು ದಸರಾ’ ವೈಭವದ ಶೋಭಾಯಾತ್ರೆಗೆ ಕ್ಷಣಗಣನೆ ಆರಂಭ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶರನ್ನವರಾತ್ರಿ ಅಂಗವಾಗಿ ಕಳೆದ 9 ದಿನಗಳಿಂದ ಪೂಜಿಸಲ್ಪಟ್ಟ ಶಾರದೆ ಹಾಗೂ ನವ ದುರ್ಗೆಯರ ವೈಭವದ ಶೋಭಾ ಯಾತ್ರೆ ಇಂದು ಸಂಜೆ ನಡೆಯಲಿದೆ.ಸಂಜೆ 4 ಗಂಟೆಗೆ ಶಾರದಾ...

ಎಲ್‌ಇಡಿ ಟಿ.ವಿ ಬ್ಲಾಸ್ಟ್‌..! : ಬಾಲಕ ಸಾವು-ಮನೆ ಗೋಡೆ ಕುಸಿತ

ಲಕ್ನೋ: ಎಲ್‌ಇಡಿ ಟಿ.ವಿ ಸ್ಪೋಟಗೊಂಡ ಪರಿಣಾಮ ಬಾಲಕನೊಬ್ಬ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.ಮೃತ ಬಾಲಕನನ್ನು ಓಮೇಂದ್ರ (16) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಟಿವಿ ನೋಡುತ್ತಿದ್ದ ಸಂದರ್ಭ ಎಲ್ ಐಡಿ ಟಿವಿ...

ಮಂಗಳೂರು: ಹೆಲಿಕಾಪ್ಟರ್‌ನಲ್ಲಿ ವೈಷ್ಣೋದೇವಿ ಮಂದಿರಕ್ಕೆ ಕರೆದೊಯ್ಯುವುದಾಗಿ 38 ಸಾವಿರ ರೂ. ವಂಚನೆ

ಮಂಗಳೂರು: ವೈಷ್ಣೋದೇವಿ ಮಂದಿರ ಯಾತ್ರೆಗೆ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡುತ್ತೇನೆಂದು ನಂಬಿಸಿ ಮಂಗಳೂರು ಮೂಲದ ವ್ಯಕ್ತಿಯೊಬ್ಬರಿಗೆ ರೂ.38 ಸಾವಿರ ವಂಚನೆಗೈದ ಬಗ್ಗೆ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಂಚನೆಗೊಳಗಾದ ವ್ಯಕ್ತಿ ಬೆಂಗಳೂರಿನಲ್ಲಿ IT consultant...