Friday, August 12, 2022

ಮರವಂತೆಯಲ್ಲಿ ಸಮುದ್ರಪಾಲಾದ ಕಾರು: ಓರ್ವ ಸ್ಪಾಟ್ ಡೆತ್-ಓರ್ವ ನಾಪತ್ತೆ

ಕುಂದಾಪುರ: ಚಲಿಸುತ್ತಿದ್ದ ಕಾರೊಂದು ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಸಮುದ್ರ ಪಾಲಾಗಿ ಕಾರಿನೊಳಗಿದ್ದ ನಾಲ್ವರ ಪೈಕಿ ಚಾಲಕ ಸಾವನ್ನಪ್ಪಿದ್ದು, ಓರ್ವ ನಾಪತ್ತೆಯಾಗಿ ಇಬ್ಬರು ಪ್ರಯಾಣಿಕರು ಗಾಯಾಳುಗಳಾಗಿ ಆಸ್ಪತ್ರೆಗೆ ಸೇರಿದಂತಹ ದಾರುಣ ಘಟನೆ ಉಡುಪಿ ಕುಂದಾಪರದ ಗಂಗೊಳ್ಳಿ ಠಾಣಾ ವ್ಯಾಪ್ತಿಯ ಮರವಂತೆ ಬೀಚ್ ನ ರಾಷ್ಟ್ರೀಯ ಹೆದ್ದಾರಿ 66 ರ ಬಳಿ ನಿನ್ನೆ ತಡರಾತ್ರಿ ನಡೆದಿದೆ.

ಘಟನೆಯಲ್ಲಿ ಇಲ್ಲಿನ ಬೀಜಾಡಿಯ ಗೋಳಿಬೆಟ್ಟು ನಿವಾಸಿ ವಿಲಾಸ್ ಮಾರ್ಬಲ್ ನ ಮಾಲಕ ರಮೇಶ್ ಆಚಾರ್ ನೇರಂಬಳ್ಳಿಯವರ ಪುತ್ರ ವಿರಾಜ್ ಆಚಾರ್ಯ (28) ಮೃತಪಟ್ಟ ಕಾರು ಚಾಲಕ.


ಸಹೋದರ ಸಂಬಂಧಿಗಳಾದ ಸಂದೇಶ್,ಕಾರ್ತಿಕ್ ಗಾಯಾಳಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಪೈಕಿ ರೋಶನ್‌ ಎಂಬವರು ನಾಪತ್ತೆಯಾಗಿದ್ದ ಪ್ರಯಾಣಿಕರಾಗಿದ್ದಾರೆ.

ಸ್ಥ ಳೀಯ ಮುಳುಗುತಜ್ಞ ದಿನೇಶ್ ಗಂಗೊಳ್ಳಿ ಮತ್ತವರ ತಂಡ, ಇಬ್ರಾಹಿಂ ಗಂಗೊಳ್ಳಿ‌, ಮತ್ತವರ ತಂಡ ಹಾಗೂ ಸ್ಥಳೀಯರ ನೆರವಿನಿಂದ ಪೊಲೀಸ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಇಂದು ಮುಂಜಾನೆಯಿಂದ ಮತ್ತೆ ಕಾರ್ಯಾಚರಣೆ ಆರಂಭಿಸಿ ಕಾರನ್ನು ಮೇಲಕ್ಕೆತಿದ್ದಾರೆ.

ಈ ವೇಳೆ ಸೀಟ್ ಬೆಲ್ಟ್ ಧರಿಸಿದ್ದ ಸ್ಥಿತಿಯಲ್ಲೇ ಚಾಲಕ ವಿರಾಜ್ ಅವರ ಮೃತದೇಹ ಪತ್ತೆಯಾಗಿದೆ‌.
ಕಾರಿನಲ್ಲಿದ್ದ ಇನ್ನೋರ್ವ ಪ್ರಯಾಣಿಕ ರೋಶನ್ ನಾಪತ್ತೆಯಾಗಿದ್ದು ಅವರ ಪತ್ತೆ ಕಾರ್ಯ ಮುಂದುವರೆದಿದ್ದು, ಸಮುದ್ರದಲ್ಲಿ ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗುತ್ತಿದೆ.

ತಡರಾತ್ರಿ ಕುಂದಾಪುರ ಕಡೆಯಿಂದ‌ ಬೈಂದೂರಿನತ್ತ ಚಲಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Hot Topics

ಸಮುದ್ರ ದಡದಲ್ಲಿ ತೇಲಿ ಬಂತು ರಾಶಿ ಮುರವ (ಗೊಬ್ರ) ಮೀನು

ಉತ್ತರ ಕನ್ನಡ: ಉತ್ತರಕನ್ನಡದ ಮಂಕಿ ಸಮುದ್ರ ದಡದಲ್ಲಿ ರಾಶಿ ಮುರವ (ಗೊಬ್ರ) ಮೀನುಗಳು ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿರುವ ದೃಶ್ಯ ಕಂಡುಬಂದಿದೆ.ಹೆಚ್ಚು ತೂಪಾನ್ ಆದಾಗ ನೀರು ಅತೀ ಹೆಚ್ಚು ಕೋಲ್ಡ್ ಆದಾಗ ಮೀನುಗಳು ಅರೆ...

‘ಕಾಡು ಕುದುರೆ ಓಡಿ ಬಂದಿತ್ತಾ’ ಖ್ಯಾತಿಯ ಸುಬ್ಬಣ್ಣ ಇನ್ನಿಲ್ಲ

ಬೆಂಗಳೂರು: ಖ್ಯಾತ ಹಾಡುಗಾರ, ವಕೀಲ ಶಿವಮೊಗ್ಗದ ಸುಬ್ಬಣ್ಣ ಅವರು ಅನಾರೋಗ್ಯದಿಂದ ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.ಅವರಿಗೆ 83 ವರ್ಷ ವಯಸ್ಸಾಗಿತ್ತು. 'ಕಾಡುಕುದುರೆ' ಚಿತ್ರದ ಹಾಡಿಗೆ ರಾಷ್ಟ್ರಪ್ರಶಸ್ತಿಯನ್ನೂ ಪಡೆದುಕೊಂಡಿದ್ದ ಅವರು, ವಕೀಲೆ ವೃತ್ತಿಯನ್ನೂ ಮಾಡುತ್ತಿದ್ದರು....

ಹರ್ ಘರ್ ತಿರಂಗಾ ಅಭಿಯಾನದಲ್ಲಿ ರಾಷ್ಟ್ರಧ್ವಜ ಸಂಹಿತೆ ಪಾಲಿಸಲು ದ.ಕ ಡಿಸಿ ಸೂಚನೆ

ಮಂಗಳೂರು: ಆಗಸ್ಟ್ 13 ರಿಂದ 15ರ ವರೆಗೆ ದೇಶದ ಪ್ರತೀ ಮನೆಯಲ್ಲೂ ರಾಷ್ಟ್ರ ಧ್ವಜವನ್ನು ಹಾರಿಸಿ ದೇಶಭಕ್ತಿ ಬಿಂಬಿಸುವ ಮೂಲಕ ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಗೊಳಿಸುವಂತೆ ಅಭಿಯಾನವನ್ನು ಹಮ್ಮಿಕೊಂಡಿದೆ.ಈ ಅಭಿಯಾನದ ಹಿನ್ನೆಲೆ ಸರ್ಕಾರಿ ಕಟ್ಟಡಗಳ...