Saturday, November 26, 2022

ಕಾರ್ಕಳದಲ್ಲಿ ಕಣಿವೆಗೆ ಉರುಳಿದ ಕಾರು-ಕಾಲೇಜು ವಿದ್ಯಾರ್ಥಿ ಸಾವು: ಇಬ್ಬರು ಗಂಭೀರ

ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಣಿವೆಗೆ ಉರುಳಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಕಾರ್ಕಳ ತಾಲ್ಲೂಕಿನ ಬೋಳ ಕೆದಿಂಜೆ ಸಮೀಪದ ಮಂಜರಪಲ್ಕೆ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ.


ಕಾಪು ತಾಲ್ಲೂಕಿನ ಉಚ್ಚಿಲ ಮೂಲದ ವೈಷ್ಣವ್ ಮೃತ ವಿದ್ಯಾರ್ಥಿ. ಕಾರಿನಲ್ಲಿದ್ದ ಇಬ್ಬರು ಮಹಿಳೆಯರಿಗೂ ಗಂಭೀರ ಗಾಯಗಳಾಗಿವೆ.

ಇವರು ಬೆಂಗಳೂರಿನಿಂದ ಹಿಂತಿರುಗುವ ಸಂದರ್ಭ ಈ ಘಟನೆ ಸಂಭವಿಸಿದೆ.ಕಾರಿನಲ್ಲಿ ಇಬ್ಬರು ಮಕ್ಕಳು, ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು 7ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಬೆಳ್ತಂಗಡಿಯಲ್ಲಿ ರಸ್ತೆ ಅಪಘಾತಕ್ಕೆ ಕಾಲೇಜು ವಿದ್ಯಾರ್ಥಿ ಬಲಿ..! 2 ದಿನದಲ್ಲಿ ಇಬ್ಬರು ಬಲಿ..!

ಬೆಳ್ತಂಗಡಿ:  ಬೆಳ್ತಂಗಡಿಯಲ್ಲಿ 2 ದಿನದಲ್ಲಿ ಒಂದೇ ಕಾಲೇಜಿನ  ಇಬ್ಬರು ವಿದ್ಯಾರ್ಥಿಗಳು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಜೀವಕಳಕೊಂಡಿದ್ದಾರೆ. ಎಳೆ ವಯಸ್ಸಿನ ಮಕ್ಕಳಿಗೆ ದ್ವಿಚಕ್ರವಾಹನಗಳನ್ನು ಕೊಡುವ ಪೋಷಕರಿಗೆ ಎಚ್ಚರಿಕೆಯ ಕರೆ ಗಂಟೆಯಾಗಿದೆ.  ಮಡಂತ್ಯಾರು ಸೆಕ್ರೆಡ್ ಹಾರ್ಟ್...

ಮಂಗಳೂರು ಬಲ್ಮಠ ರಸ್ತೆಯಲ್ಲಿ ಕಾರ್ ಬೆಂಕಿಗಾಹುತಿ..!

ಮಂಗಳೂರು : ನಗರದ ಬಲ್ಮಠ ರಸ್ತೆ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದ ಕಾರೊಂದು ಬೆಂಕಿಗಾಹುತಿಯಾದ ಘಟನೆ ಇಂದು ಅಪರಾಹ್ನ ಸಂಭವಿಸಿದೆ.ಬಲ್ಮಠ ಜ್ಯೂಸ್ ಜಂಕ್ಷನ್ ಬಳಿ ಪಾರ್ಕ್ ಮಾಡಲಾಗಿದ್ದ ಫೋರ್ಡ್‌ ಕಂಪೆನಿ ಕಾರು ಬೆಂಕಿಗಾಹುತಿಯಾಗಿದೆ.ಕಾರಿನ ಇಂಜಿನ್...