Wednesday, May 18, 2022

ವಿದ್ಯುತ್ ಕಂಬಕ್ಕೆ ಕಾರ್‌ ಡಿಕ್ಕಿ: ದಂಪತಿ ಸ್ಥಳದಲ್ಲೇ ಸಾವು

ತುಮಕೂರು: ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಕಾರ್ ಡಿಕ್ಕಿ ಹೊಡೆದು, ಕಾರಿನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕು ಮಾಯಸಂದ್ರ ಬಳಿಯ ಚಿಕ್ಕಪುರ ಗೇಟ್ ಬಳಿ ನಡೆದಿದೆ.

 

ಕುಟಂಬ ಸಮೇತ ತುರುವೇಕೆರೆಯ ಬೇಟೆರಾಯ ಸ್ವಾಮಿ ದೇವಸ್ಥಾನಕ್ಕೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಬಿ.ಎಸ್.ರವಿ(54), ಪತ್ನಿ ಜ್ಯೋತಿ(48) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.

ಮೃತ ಬಿ.ಎಸ್.ರವಿ ದಂಪತಿ ಬೆಂಗಳೂರು ಮೂಲದವರು ಎಂದು ತಿಳಿದು ಬಂದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ದಂಪತಿಯ ಮಗ ಹಾಗೂ ಮಗಳಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಈ ಸಂಬಂಧ ತುರುವೇಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Hot Topics

ರಾಜ್ಯ ಸರ್ಕಾರ ನಮ್ಮ ಅಧಿಕಾರ ಕಸಿದುಕೊಂಡಿದೆ: ಹೈಕೋರ್ಟ್‌ ಮುಂದೆ ಚುನಾವಣಾ ಆಯೋಗ ಅಳಲು

ಬೆಂಗಳೂರು: ರಾಜ್ಯದ ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯತ್‌ಗಳಿಗೆ ಚುನಾವಣೆ ನಡೆಸಲು ಸಾಧ್ಯವಾಗದ ರೀತಿಯಲ್ಲಿ ರಾಜ್ಯ ಸರ್ಕಾರ ನಮ್ಮ ಅಧಿಕಾರ ಕಸಿದುಕೊಂಡಿದೆ ಎಂದು ರಾಜ್ಯ ಚುನಾವಣಾ ಆಯೋಗವು ಹೈಕೋರ್ಟ್‌ ಮುಂದೆ ತನ್ನ ಅಸಹಾಯಕತೆ...

ವಿಟ್ಲ: ಭಾರೀ ಮಳೆಗೆ ರಸ್ತೆಗೆ ಬಿದ್ದ ವಿದ್ಯುತ್ ಕಂಬ-ಸಂಚಾರ ಸ್ಥಗಿತ

ವಿಟ್ಲ: ಸುರಿದ ಭಾರೀ ಗಾಳಿ ಮಳೆಯಿಂದಾಗಿ ವಿದ್ಯುತ್ ಕಂಬ ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾದ ಘಟನೆ ವಿಟ್ಲ- ಕಲ್ಲಡ್ಕ ರಸ್ತೆಯಲ್ಲಿ ನಡೆದಿದೆ.- ನಿನ್ನೆ ಸುರಿದ ಮಳೆಗೆ ಇಂದು ಮುಂಜಾನೆ...

ಉಡುಪಿ: ಬೈಕ್ ಸ್ಕಿಡ್ ಆಗಿ ಹಿಂಬದಿ ಸವಾರೆ ದಾರುಣ ಸಾವು

ಉಡುಪಿ: ಬೈಕ್ ನಲ್ಲಿ ಹೋಗುವಾಗ ಬೈಕ್ ಸ್ಕಿಡ್ ಆಗಿ ಹಿಂಬದಿ ಸವಾರೆ ಮೃತಪಟ್ಟಂತಹ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೈಂದೂರಿನ ಕಾಲ್ತೋಡು ಗ್ರಾಮದ ಮುರೂರು ಎಂಬಲ್ಲಿ ನಡದಿದೆ.ಕಾಲ್ತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ...