Wednesday, May 18, 2022

ಮೂಡುಬಿದಿರೆ: ಕಾರು ಢಿಕ್ಕಿ- ಪಾದಾಚಾರಿ ಸ್ಥಳದಲ್ಲೇ ಮೃತ್ಯು

ಮೂಡುಬಿದಿರೆ: ಇಲ್ಲಿನ ಕಲ್ಲಮುಂಡ್ಕೂರು ಪೇಟೆಯ ರಸ್ತೆಯಲ್ಲಿ ಪಾದಾಚಾರಿಯೋರ್ವರು ಹೋಗುತ್ತಿದ್ದಾಗ ರಿಡ್ಸ್ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಪಾದಾಚಾರಿ ಮೃತಪಟ್ಟ ಘಟನೆ ನಿನ್ನೆ ರಾತ್ರಿ ವೇಳೆ ನಡೆದಿದೆ.


ಸಂಪಿಗೆಯ ಇಡ್ಡಬೆಟ್ಟು ನಿವಾಸಿ 53 ವರ್ಷದ ಹರೀಶ್ ಅಪಘಾತಕ್ಕೆ ಬಲಿಯಾದ ವ್ಯಕ್ತಿಯಾಗಿದ್ದಾರೆ.

ಹರೀಶ್ ಅವರು ಎಂದಿನಂತೆ ಸಂಜೆ ವೇಳೆ ಸಂಪಿಗೆಯಿಂದ ಕಲ್ಲಮುಂಡ್ಕೂರು ಪೇಟೆಗೆ ಹೋಗಿದ್ದು ನಂತರ ಹಿಂತಿರುಗಿ ನಡೆದುಕೊಂಡು ಬರುತ್ತಿದ್ದ ಸಂದರ್ಭದಲ್ಲಿ ರಿಟ್ಸ್ ಕಾರು ಢಿಕ್ಕಿ ಹೊಡೆದಿದೆ. ಈ ಸಂದರ್ಭ ನೆಲಕ್ಕೆ ಬಿದ್ದ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಢಿಕ್ಕಿ ಹೊಡೆದ ಕಾರು ಪರಾರಿಯಾಗಿದ್ದು, ಮೂಡುಬಿದಿರೆ ಪೊಲೀಸ್ ಉಪ ನಿರೀಕ್ಷಕ ಸುದೀಪ್ ಅವರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಬಂಟ್ವಾಳದಲ್ಲಿ ಬೈಕ್ ಕಳವು ಪ್ರಕರಣ: ಮೂವರು ಆರೋಪಿಗಳ ಬಂಧನ

ಬಂಟ್ವಾಳ: ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೊಲೀಸ್ ಠಾಣೆಯ ‌ಇನ್ಸ್‌ಪೆಕ್ಟರ್ ವಿವೇಕಾನಂದ ಅವರ ನೇತೃತ್ವದ ತಂಡ ಬಂಧಿಸಿದೆ.ಅಕ್ಬರ್, ಸಿದ್ದೀಕ್, ಸಮೀರ್ ಬಂಧಿತ ಆರೋಪಿಗಳು. ಇತ್ತೀಚೆಗೆ ಬಂಟ್ವಾಳ ನಗರ...

ಬಂಟ್ವಾಳ: ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿನಿ ಸಾವು

ಬಂಟ್ವಾಳ: 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದಾಗಿ ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಅಳಿಕೆ ಎಂಬಲ್ಲಿ ಇಂದು ನಡೆದಿದೆ.ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.ಮೃತಳನ್ನು ವಿಠಲ್ ಜೇಸೀಸ್ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ...

ಉಡುಪಿ: ಬೈಕ್ ಸ್ಕಿಡ್ ಆಗಿ ಹಿಂಬದಿ ಸವಾರೆ ದಾರುಣ ಸಾವು

ಉಡುಪಿ: ಬೈಕ್ ನಲ್ಲಿ ಹೋಗುವಾಗ ಬೈಕ್ ಸ್ಕಿಡ್ ಆಗಿ ಹಿಂಬದಿ ಸವಾರೆ ಮೃತಪಟ್ಟಂತಹ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೈಂದೂರಿನ ಕಾಲ್ತೋಡು ಗ್ರಾಮದ ಮುರೂರು ಎಂಬಲ್ಲಿ ನಡದಿದೆ.ಕಾಲ್ತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ...