Wednesday, October 5, 2022

ಕಾಪು: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಯೊಳಕ್ಕೆ ನುಗ್ಗಿದ ಕಾರು

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಲ್ಲಿದ್ದ ಅಂಗಡಿಗೆ ನುಗ್ಗಿದ ಘಟನೆ ಉಡುಪಿಯ ಕಾಪು ಠಾಣಾ ವ್ಯಾಪ್ತಿಯ ಮಲ್ಲಾರು ಸ್ವಾಗತ ನಗರದ ಬಳಿ ಇಂದು ಬೆಳಗ್ಗೆ ನಡೆದಿದೆ.


ಶಿರ್ವ ಕಡೆಯಿಂದ ಕಾಪುವಿನತ್ತ ತೆರಳುತ್ತಿದ್ದ ಕುಂದಾಪುರದ ವ್ಯಕ್ತಿಯೊಬ್ಬರಿಗೆ ಸೇರಿದ ಕಾರು ಮಲ್ಲಾರು ಸ್ವಾಗತ ನಗರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದೆ.

ಇದರಿಂದ ಅಂಗಡಿಯ ಒಂದು ಪಾರ್ಶ್ವದ ಗೋಡೆ ನೆಲಕ್ಕುರುಳಿದೆ. ಈ ವೇಳೆ ಅಂಗಡಿಯಲ್ಲಿದ್ದ ಮಾಲಕ ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ.


ಢಿಕ್ಕಿಯಾದ ರಭಸಕ್ಕೆ ಕಾರು ಕೂಡಾ ಜಖಂಗೊಂಡಿದೆ.
ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

Breaking: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನ..!

ನವದೆಹಲಿ: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ (Cheetah Helicopter) ಪತನಗೊಂಡು ಪೈಲಟ್ (Pilot) ಹುತಾತ್ಮರಾಗಿರುವ ಘಟನೆ ಅರುಣಾಚಲ ಪ್ರದೇಶದಲ್ಲಿ (Arunachal Pradesh) ನಡೆದಿದೆ.ತವಾಂಗ್ ಬಳಿಯ ಪ್ರದೇಶದಲ್ಲಿ ಹಾರಾಟ ನಡೆಸುತ್ತಿದ್ದ ಸೇನಾ ವಾಯುಯಾನ ಚೀತಾ...

ಉಡುಪಿಯಲ್ಲಿ ಬೋನಿಗೆ ಬಿದ್ದ ಚಿರತೆ: ಮತ್ತೆ ಕಾಡಿಗೆ ಬಿಟ್ಟ ಅರಣ್ಯ ಸಿಬ್ಬಂದಿ

ಉಡುಪಿ: ಜಿಲ್ಲೆಯ ಮಟಪಾಡಿ ಗ್ರಾಮದಲ್ಲಿ ಊರಿನ ಜನರು ಅರಣ್ಯ ಇಲಾಖೆ ಮೂಲಕ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ.ಮಟಪಾಡಿ ಗ್ರಾಮದಲ್ಲಿ ಬಹಳಷ್ಟು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿದ್ದರಿಂದ ಗ್ರಾಮಸ್ಥರು ಅರಣ್ಯ ಇಲಾಖೆ ಮೂಲಕ ಬೋನನ್ನು...

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿಯ ಸನ್ನಿಧಿಯಲ್ಲಿ ವಿಜಯದಶಮಿ ಪ್ರಯುಕ್ತ ಮಕ್ಕಳಿಗೆ ಅಕ್ಷರಾಭ್ಯಾಸ..!

ವರದಿ : ನಿಶಾಂತ್ ಕಿಲೆಂಜೂರುಕಿನ್ನಿಗೋಳಿ : ಇತಿಹಾಸ ಪ್ರಸಿದ್ದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಜಯದಶಮಿ ಪ್ರಯುಕ್ತ ಮಕ್ಕಳಿಗೆ ಅಕ್ಷರಾಬ್ಯಾಸ ನಡೆಯಿತು.ದುರ್ಗೆಯ ನನ್ನಿಧಿಯಲ್ಲಿ ಅಕ್ಷಾರಭ್ಯಾಸ ಪ್ರಾಂಭಿಸಿದರೆ ಒಳ್ಳೆಯದು ಎನ್ನುವ ನಂಬಿಗೆ ಇದೆ, ಆ...