ಉಡುಪಿ: ಬ್ರಹ್ಮಾವರ ಹೇರೂರು ಸೇತುವೆ ಮೇಲೆ ಗುಂಡಿ ತಪ್ಪಿಸಲು ಹೋಗಿ ಕಂಟೈನರ್ ಲಾರಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ಕು ಮಂದಿ ಗಾಯಗೊಂಡಿರುವ ಘಟನೆ ಇಂದು ನಡೆದಿದೆ.
ಇಂದು ಬೆಳಗ್ಗೆ 7.14ರ ಸುಮಾರಿಗೆ ಅಪಘಾತ ಸಂಭವಿಸಿದೆ. ಮಂಗಳೂರಿನಿಂದ ಕುಂದಾಪುರಕ್ಕೆ ಕಾರಿನಲ್ಲಿ ನಾಲ್ಕು ಮಂದಿ ಪ್ರಯಾಣಿಸುತ್ತಿದ್ದರು. ಶೂಟಿಂಗ್ ಹಿನ್ನೆಲೆ ಕುಂದಾಪುರಕ್ಕೆ ಪ್ರಯಾಣಿಸುತ್ತಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.