Friday, August 19, 2022

ಮಳೆಗೆ ರಸ್ತೆ ಕಾಣದೇ ಡಿವೈಡರ್‌ಗೆ ಹೊಡೆದ ಕಾರು: ಮೂವರು ಸ್ಪಾಟ್‌ ಡೆತ್‌-ಇಬ್ಬರು ಗಂಭೀರ

ಬೆಂಗಳೂರು: ಭಾರೀ ಮಳೆಯ ನಡುವೆ ಬೆಂಗಳೂರಿನ ಏರ್​ಪೋರ್ಟ್​ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ವ್ಯಕ್ತಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಏರ್​ಪೋರ್ಟ್​ ರಸ್ತೆಯ ಬೆಟ್ಟಹಲಸೂರು ಕ್ರಾಸ್​ ಬಳಿ ಅಪಘಾತ ಸಂಭವಿಸಿದ್ದು, ಎರಡು ಕಾರುಗಳ‌ ಮಧ್ಯೆ ಅಪಘಾತ ಸಂಭವಿಸಿದೆ.

ದೇವನಹಳ್ಳಿ ಕಡೆಯಿಂದ ಬೆಂಗಳೂರಿಗೆ ಬರುತ್ತಿದ್ದ ಕಾರು ಬೆಟ್ಟಹಲಸೂರು ಬಳಿಯ ಫ್ಲೈ ಓವರ್ ಮೇಲೆ ಡಿವೈಡರ್​​ಗೆ ಡಿಕ್ಕಿಯಾಗಿದೆ.

ಆ ಬಳಿಕ ಎದುರಿಗೆ ಬರುತ್ತಿದ್ದ ಮತ್ತೊಂದು ಕಾರಿನ ಮೇಲೆ ಹಾರಿ ಬಿದ್ದಿದೆ. ಪರಿಣಾಮ ಸ್ವಿಪ್ಟ್​ ಕಾರಿನಲ್ಲಿದ್ದ ಮೂವರು ಕಾರಿನಲ್ಲೇ ಅಪ್ಪಚ್ಚಿಯಾಗಿದ್ದಾರೆ.

ಕಾರಿನ ಅವಶೇಷಗಳಡಿ ಮೃತದೇಹಗಳು ಸಿಲುಕಿದ್ದು, ಅವುಗಳನ್ನು ಹೊರ ತೆಗೆಯುತ್ತಿರುವ ಕಾರ್ಯ ನಡೆದಿದೆ. ಘಟನಾ ಸ್ಥಳಕ್ಕೆ ಚಿಕ್ಕಜಾಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಕಾರಿನಲ್ಲಿದ್ದ ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. ಮಳೆ ಹಿನ್ನೆಲೆಯಲ್ಲಿ ರಸ್ತೆ ಕಾಣದೆ ಡಿವೈಡರ್​​ಗೆ ಕಾರು ಡಿಕ್ಕಿಯಾಗಿದ್ದು, ಬಳಿಕ ಎದುರಿಗೆ ಬರುತ್ತಿದ್ದ ಕಾರಿಗೆ ಡಿಕ್ಕಿಯಾಗಿದೆ.

ಘಟನೆ ಕುರಿತಂತೆ ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Hot Topics

ಸಿದ್ದರಾಮಯ್ಯಗೆ ಮೊಟ್ಟೆ ಎಸೆತ ಪ್ರಕರಣ: 9 ಮಂದಿಯ ಬಂಧನ

ಕುಶಾಲನಗರ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಕೋಳಿ ಮೊಟ್ಟೆ ಎಸೆದ ಘಟನೆ ಕುರಿತು ವಶಕ್ಕೆ ತೆಗೆದುಕೊಳ್ಳಲಾದ 9 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿರುವ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು...

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದನ್ನು ಖಂಡಿಸಿ ಆ.26 ರಂದು ಮಡಿಕೇರಿ ಎಸ್‌ಪಿ ಕಚೇರಿಗೆ ಮುತ್ತಿಗೆ

ಬೆಂಗಳೂರು: ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಮಡಿಕೇರಿ ಭೇಟಿ ವೇಳೆ ಮೊಟ್ಟೆ ಎಸೆದ ಪ್ರಕರಣವನ್ನು ಕಾಂಗ್ರೆಸ್‌ ಖಂಡಿಸಿದ್ದು, ಆ.26 ರಂದು ಎಸ್‌ಪಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್‌ ಕಾರ್ಯಕರ್ತರು ನಿರ್ಧರಿಸಿದ್ದಾರೆ.ಈ...

ದೆಹಲಿ ಉಪ ಮುಖ್ಯಮಂತ್ರಿ ಮನೆ ಮೇಲೆ CBI ದಾಳಿ: ಶೋಧ ಕಾರ್ಯ

ನವದೆಹಲಿ: ದೆಹಲಿ ಉಪ ಮುಖ್ಯಮಂತ್ರಿ ಮನೀಶ್​ ಸಿಸೊಡಿಯಾ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಸ್ಥಳಗಳ ಮೇಲೆ ಸಿಬಿಐ ಇಂದು ಬೆಳಗ್ಗೆ ದಾಳಿ ಮಾಡಿದ್ದು, ಶೋಧ ಕಾರ್ಯ ಮುಂದುವರಿಸಿದೆ. ದೆಹಲಿಯ ಅಬಕಾರಿ ನೀತಿಯಲ್ಲಿ ಅಕ್ರಮ ನಡೆದಿರುವ...